ಸುಮಾರು ನಾಲ್ಕು ಲಕ್ಷ ಪುಸ್ತಕಗಳನ್ನೂ, ನಾಣ್ಯ ಸಂಗ್ರಹ, ಅಂಚೆ ಚೀಟಿಗಳ ಸಂಗ್ರಹ, ಲಗ್ನಪತ್ರಿಕೆಗಳ ಸಂಗ್ರಹವನ್ನೂ ತನ್ನ ಒಡಲಿನಲ್ಲಿರಿಸಿಕೊಂಡಿರುವ ಮಂಡ್ಯದ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯಲ್ಲಿರುವ ಪುಸ್ತಕದ ಮನೆಯನ್ನು ಸಾರ್ವಜನಿಕರಿಗಾಗಿ, ಗ್ರಾಮೀಣ ಪ್ರದೇಶದ ಪುಸ್ತಕ ಪ್ರಿಯರಿಗಾಗಿ ನೀಡಿರುವ "ಎಂ. ಅಂಕೇಗೌಡ"ರು ಸಾಮಾನ್ಯರಲ್ಲಿ ಅಸಾಮಾನ್ಯರು.[೧] ಅಂಕೇಗೌಡರು ಪಾಂಡವಪುರ ತಾಲ್ಲೂಕಿನ ಚಿನಕುರಳಿಯಲ್ಲಿ ಹುಟ್ಟಿದರು. ಮೈಸೂರು ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಕಂಡಕ್ಟರ್ ಆಗಿ ಕೆಲಸಕ್ಕೆ ಸೇರಿದ ಅಂಕೇಗೌಡರು ಸಂಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ಬಿ.ಎ. ಪದವಿ ಪಡೆದರು. ನಂತರ ಅಂಚೆ ಮತ್ತು ತೆರಪಿನ ಮೂಲಕ ಕನ್ನಡ ಎಂ.ಎ. ಪದವಿ ಪಡೆದರು. ಸಕ್ಕರೆ ಕಾರ್ಖಾನೆಯಲ್ಲಿ ವೇಳಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಅಂಕೇಗೌಡರು ತಮ್ಮ ಸಂಬಳದ ಬಹುಭಾಗವನ್ನು ಪುಸ್ತಕ ಕೊಳ್ಳಲು ಬಳಸಿದ್ದಾರೆ. ಪುಸ್ತಕ ಸಂಗ್ರಹಕ್ಕಾಗಿ ನಿವೇಶನವನ್ನು ಮಾರಿದ್ದಾರೆ. ಉದ್ಯಮಿ ಹರಿ ಕೋಡೆ ಅವರು ಪುಸ್ತಕಗಳನ್ನು ಇಡಲು ಪಾಂಡವಪುರದ ವಿಶ್ವೇಶ್ವರನಗರ ಬಡಾವಣೆಯಲ್ಲಿ ಒಂದು ಕಟ್ಟಡವನ್ನು ನಿರ್ಮಿಸಿಕೊಟ್ಟಿದ್ದಾರೆ. ಅಂಕೇಗೌಡರ ಪುಸ್ತಕದ ಮನೆ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ದಾಖಲೆಗೆ ಸೇರಿದೆ.

ಪ್ರಶಸ್ತಿಗಳು ಬದಲಾಯಿಸಿ

  • ೨೦೧೪ರ ರಾಜ್ಯೋತ್ಸವ ಪ್ರಶಸ್ತಿ
  • ಕನ್ನಡ ಪುಸ್ತಕ ಪ್ರಾಧಿಕಾರ ನೀಡುವ ಸಾಹಿತ್ಯ ಪರಿಚಾರಕ ಪ್ರಶಸ್ತಿ
  • ೨೦೧೮ರಲ್ಲಿ ನಡೆದ ಪಾಂಡವಪುರ ತಾಲ್ಲೂಕು ೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.

ಉಲ್ಲೇಖಗಳು ಬದಲಾಯಿಸಿ

  1. [೧][ಶಾಶ್ವತವಾಗಿ ಮಡಿದ ಕೊಂಡಿ], ಪುಸ್ತಕ ಲೋಕದಲ್ಲೊಂದು ಸುತ್ತು..., ಪ್ರಜಾವಾಣಿ TUESDAY, 2 APRIL, 2013

ಹೊರಕೊಂಡಿಗಳು ಬದಲಾಯಿಸಿ

"https://kn.wikipedia.org/w/index.php?title=ಅಂಕೇಗೌಡ&oldid=1169203" ಇಂದ ಪಡೆಯಲ್ಪಟ್ಟಿದೆ