ಬಸವಣ್ಣನವರು ಸಾಮಾಜಿಕವಾಗಿ ಕ್ರಾಂತಿಕಾರಕ ಬದಲಾವಣೆ ತಂದು 'ಅನುಭವ ಮಂಟಪ'ವನ್ನು ಸ್ಥಾಪಿಸಿದರು. ಅನುಭವ ಮಂಟಪ ೧೨ನೇ ಶತಮಾನದಲ್ಲಿ ಎಲ್ಲಾ ಧರ್ಮದ ಶರಣರು, ಕವಿಗಳು ಮತ್ತು ತತ್ವಜ್ಞಾನಿಗಳು ಸೇರುತ್ತಿದ್ದ ಒಂದು ಸಾಮಾಜಿಕ-ಧಾರ್ಮಿಕ ಸಂಸತ್ತು. ಇದರಲ್ಲಿ ಎಲ್ಲಾ ಜಾತಿಯ ಎಲ್ಲಾ ವೃತ್ತಿಯ ಸಾಮಾನ್ಯ ಜನರು ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಚರ್ಚಿಸುತ್ತಿದ್ದರು ಹಾಗೂ ತಮ್ಮ ಅನುಭವವನ್ನು ಎಲ್ಲರೊಂದಿಗೆ ಹಂಚಿಕೊಳ್ಳುತ್ತಿದ್ದರು. ಅನುಭವ ಮಂಟಪದ ಪ್ರಥಮ ಅಧ್ಯಕ್ಷರಾಗಿದ್ದವರು ಅಲ್ಲಮ ಪ್ರಭುಗಳು. ಅಕ್ಕಮಹಾದೇವಿ ಅನುಭವ ಮಂಟಪಕ್ಕೆ ಬಂದಾಗ ಅಲ್ಲಮ ಪ್ರಭು ಅವಳ ಜೊತೆ ಸಂವಾದ ನಡೆಸಿದರು, ಮೊಳಿಗೆ ಮಾರಯ್ಯ ಕಾಶ್ಮೀರದ ಮಹಾರಾಜ ಅವರು ಕಲ್ಯಾಣದ ಅನುಭವ ಮಂಟಪದ ಸಮಾನತೆ ಮತ್ತು ಧಾರ್ಮಿಕ ಆಚರಣೆಗಳನ್ನು ಕಂಡು ಮನಸೋತು ಕಲ್ಯಾಣದಲ್ಲಿಯ ಕಟ್ಟಿಗೆ ಮಾರುವ ಕಾಯಕ ಕೈಗೊಂಡರು. ವಿವಿಧ ಜಾತಿ, ಕಾಯಕದವರು ಅನುಭವ ಮಂಟಪದ ಸದಸ್ಯರಾಗಿದ್ದರು. ಒಮ್ಮೆ ಅನುಭವ ಮಂಟಪದಲ್ಲಿ ಚರ್ಚೆ ನಡೆಯುತ್ತಿರುವಾಗ ಮಹಾದೇವಿಯ ಆಗಮನವಾಗುತ್ತದೆ ಆಗ ಮಡಿವಾಳ ಮಾಚಿದೇವರು ಎದ್ದು ನಿಂತು ಬುದ್ಡಿ ಉಡುತಡಿಯ ಮಹಾದೇವಿಯವರು ಆಗಮಿಸುತ್ತಿದ್ದಾರೆ ಎಂದು ಹೇಳುತ್ತಾರೆ.[೧][೨][೩]


ಬಾಹ್ಯ ಕೊಂಡಿಗಳುಸಂಪಾದಿಸಿ

ಉಲ್ಲೇಖಗಳುಸಂಪಾದಿಸಿ

  1. "ಅನುಭವ ಮಂಟಪ". www.prajavani.net. Retrieved 24 September 2017.
  2. "ಅನುಭವ ಮಂಟಪ ಮಹಾವಿಶ್ವವಿದ್ಯಾನಿಲಯವಿದ್ದಂತೆ:". sanjevani.com. Retrieved 24 September 2017.
  3. "Anubhava Mantapa' site eludes researchers". www.thehindu.com. Retrieved 24 September 2017.