ಅಮರಗೋಳ ಗ್ರಾಮವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನಲ್ಲಿದೆ.

ಅಮರಗೋಳ
ಅಮರಗೋಳ
village
Population
 (೨೦೧೨)
 • Total೧೫೦೦

ಭೌಗೋಳಿಕ

ಬದಲಾಯಿಸಿ

ಗ್ರಾಮವು ಭೌಗೋಳಿಕವಾಗಿ ೧೬* ೩೨' ೧೦"x ಉತ್ತರ ಅಕ್ಷಾಂಶ ಮತ್ತು ೭೫* ೩೧' ೧೯" ಪೂರ್ವ ರೇಖಾಂಶದಲ್ಲಿ ಬರುತ್ತದೆ.

ಹವಾಮಾನ

ಬದಲಾಯಿಸಿ
  • ಬೆಸಿಗೆ-ಚಳಿಗಾಲದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ ೪೨.೭ ಡಿಗ್ರಿವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ ೯.೫ ಡಿಗ್ರಿ ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ.
  • ಬೇಸಿಗೆಕಾಲ - ೩೫°C-೪೨°C ಡಿಗ್ರಿ ಸೆಲ್ಸಿಯಸ್
  • ಚಳಿಗಾಲ ಮತ್ತು
  • ಮಳೆಗಾಲ - ೧೮°C-೨೮°C ಡಿಗ್ರಿ ಸೆಲ್ಸಿಯಸ್.
  • ಮಳೆ - ಪ್ರತಿ ವರ್ಷ ಮಳೆ ೩೦೦ - ೬೦೦ಮಿಮಿ ಗಳಸ್ಟು ಆಗಿರುತ್ತದೆ.
  • ಗಾಳಿ -ಗಾಳಿ ವೇಗ ೧೮.೨ ಕಿಮಿ/ಗಂ (ಜೂನ), ೧೯.೬ ಕಿಮಿ/ಗಂ (ಜುಲೈ)ಹಾಗೂ ೧೭.೫ ಕಿಮಿ/ಗಂ (ಅಗಸ್ಟ್) ಇರುತ್ತದೆ.

ಜನಸಂಖ್ಯೆ

ಬದಲಾಯಿಸಿ

ಸಾಂಸ್ಕೃತಿಕ

ಬದಲಾಯಿಸಿ

ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ,ಮೆಕ್ಕೆ ಜೋಳ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಜೋಳದ ರೊಟ್ಟಿ,, ಸೇಂಗಾ ಚಟ್ನಿ,, ಎಣ್ಣಿ ಬದನೆಯಕಾಯಿ ಪಲ್ಯ,, ಕೆನೆಮೊಸರು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ.

ಕಲೆ ಮತ್ತು ಸಂಸ್ಕೃತಿ

ಬದಲಾಯಿಸಿ
 
ಉತ್ತರ ಕರ್ನಾಟಕದ ಊಟ

ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ.ಮಹಿಳೆಯರು ಇಲಕಲ್ಲ ಸೀರೆ ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ.

ಗ್ರಾಮದಲ್ಲಿ ಹಿಂದೂ ಮತ್ತು ಮುಸ್ಲಿಂ ಧರ್ಮದ ಜನರಿದ್ದಾರೆ.

ಗ್ರಾಮದ ಪ್ರಮುಖ ಭಾಷೆ ಕನ್ನಡ ಭಾಷೆಯನ್ನು ಮಾತನಾಡುತ್ತಾರೆ .

ದೇವಾಲಯ

ಬದಲಾಯಿಸಿ
  • ಶ್ರೀ ಮಹಾಲಕ್ಷ್ಮಿ ದೇವಾಲಯ
  • ಶ್ರೀ ದುರ್ಗಾದೇವಿ ದೇವಾಲಯ
  • ಶ್ರೀ ಮಲ್ಲಿಕಾರ್ಜುನ ದೇವಾಲಯ
  • ಶ್ರೀ ಬಸವೇಶ್ವರ ದೇವಾಲಯ
  • ಶ್ರೀ ದ್ಯಾವಪ್ಪಮುತ್ಯಾ ದೇವಾಲಯ
  • ಶ್ರೀ ದ್ಯಾಮಮ್ಮ ದೇವಿ ದೇವಾಲಯ
  • ಶ್ರೀ ಹಣಮಂತ ದೇವಾಲಯ
  • ಶ್ರೀಏಳಾದೀಶ್ವರ ದೇವಾಲಯ
  • ಶ್ರೀ ನಾಗಲಿಂಗೇಶ್ವರ ದೇವಾಲಯ
  • ಶ್ರೀ ಬೀರಲಿಂಗೇಶ್ವರ ದೇವಾಲಯ

ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.

ನೀರಾವರಿ

ಬದಲಾಯಿಸಿ

ಗ್ರಾಮದ ಪ್ರತಿಶತ 50 ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.

ಕಾಲುವೆ

ಬದಲಾಯಿಸಿ

ಕೃಷ್ಣಾ ನದಿಯ ಆಲಮಟ್ಟಿ ಆಣೆಕಟ್ಟುಯಿಂದ ಮುಳವಾಡ ಏತ ನೀರಾವರಿ ಕಾಲುವೆ ಕಾಲುವೆಯಿದ್ದು ಗ್ರಾಮದಲ್ಲಿ ಸಂಪೂರ್ಣ ಕೃಷಿಗೆ ಸಹಕಾರಿಯಾಗಿದೆ.

ಕೃಷಿ ಮತ್ತು ತೋಟಗಾರಿಕೆ

ಬದಲಾಯಿಸಿ

ಗ್ರಾಮದ ಪ್ರಮುಖ ಉದ್ಯೋಗವೇ ಕೃಷಿ ಮತ್ತು ತೋಟಗಾರಿಕೆಯಾಗಿದೆ. ಈ ಕ್ಷೇತ್ರದಲ್ಲಿ ಸುಮಾರು ೭೫% ಜನರು ಕೆಲಸ ಮಾಡುತ್ತಾರೆ. ಗ್ರಾಮದಲ್ಲಿ ಕೇವಲ ೧೫% ಭೂಮಿ ಮಾತ್ರ ನೀರಾವರಿ ಹೊಂದಿದೆ. ಉಳಿದ ೮೫% ಭೂಮಿ ಮಳೆಯನ್ನೇ ಅವಲಂಭಿಸಿದೆ.

ಆರ್ಥಿಕತೆ

ಬದಲಾಯಿಸಿ

ಗ್ರಾಮದಲ್ಲಿ ಆರ್ಥಿಕ ವ್ಯವಸ್ಥೆ ಮಧ್ಯಮ ತರಗತಿಯಲ್ಲಿದೆ.

ಉದ್ಯೋಗ

ಬದಲಾಯಿಸಿ

ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ ೭೦% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ.

ಆಹಾರ ಬೆಳೆಗಳು ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ ವಾಣಿಜ್ಯ ಬೆಳೆಗಳು ದ್ರಾಕ್ಷಿ, ಕಬ್ಬು, ಮಾವು, ಬಾಳೆ, ಸೂರ್ಯಕಾಂತಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ. ತರಕಾರಿ ಬೆಳೆಗಳು ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ.

ಆಲದ ಮರ, ಬೇವಿನ ಮರ, ಜಾಲಿ ಮರ, ಹೈಬ್ರೀಡ್ ಜಾಲಿ ಮರ, ಮಾವಿನ ಮರ ಮತ್ತು ಅರಳಿ ಮರ ಇತ್ಯಾದಿ.

ಪ್ರಾಣಿ

ಬದಲಾಯಿಸಿ

ತೋಳ, ನರಿ, ಹಾವು, ಮೊಲ, ನವಿಲು, ಬೆಳ್ಳಕ್ಕಿ, ಗುಬ್ಬಿ, ಕಾಗೆ, ಕೋಗಿಲೆ ಇತ್ಯಾದಿ.

ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.

ಶಿಕ್ಷಣ

ಬದಲಾಯಿಸಿ

ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ.

ಸಾಕ್ಷರತೆ

ಬದಲಾಯಿಸಿ

ಗ್ರಾಮದ ಸಾಕ್ಷರತೆಯ ಪ್ರಮಾಣ ಸುಮಾರು ೬೭%. ಅದರಲ್ಲಿ ೭೫% ಪುರುಷರು ಹಾಗೂ ೫೫% ಮಹಿಳೆಯರು ಸಾಕ್ಷರತೆ ಹೊಂದಿದೆ.

ರಾಜಕೀಯ

ಬದಲಾಯಿಸಿ

ಗ್ರಾಮವು ವಿಜಯಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ.

"https://kn.wikipedia.org/w/index.php?title=ಅಮರಗೋಳ&oldid=845079" ಇಂದ ಪಡೆಯಲ್ಪಟ್ಟಿದೆ