ಅಶೋಕನ ಬಂಡೆ ಶಾಸನಗಳು

ಚಕ್ರವರ್ತಿ ಅಶೋಕನ ಬಂಡೆ ಶಾಸನ[೧]ಗಳು ವಿಶೇಷವಾದ ಗೌರವವನ್ನೋ, ಆಸ್ತಿಯನ್ನೋ ಸಾಧಿಸುವುದರ ಸಲುವಾಗಿ ಕೃತಕ ತಾಮ್ರಪಟಗಳನ್ನು ಸೃಷ್ಟಿಸಿ ಅವುಗಳನ್ನು ಅಧಿಕೃತ ದಾಖಲೆಯೆಂದು ರಾಜರ ಮುಂದೆ ಅಥವಾ ಊರ ಹಿರಿಯರ ಮುಂದೆ ಹಾಜರು ಮಾಡಿ ಅನವಶ್ಯಕ ಸವಲತ್ತುಗಳನ್ನು ಪಡೆಯುತ್ತಿದ್ದರು. ದೊರೆತಿರುವ ಮುಖ್ಯವಾದ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಅಶೊಕನು ಕ್ರಿಸ್ತಪೂರ್ವ 272-232 ರ ಅವಧಿಯಲ್ಲಿ ರಾಜ್ಯಭಾರ ಮಾಡಿದನು. ಅವನು ಮೌರ್ಯವಂಶದ ಮೂರನೆಯ ದೊರೆ. ಅವನ ಸಾಮ್ರಾಜ್ಯದ ದಕ್ಷಿಣದ ಗಡಿಗೆರೆಗಳನ್ನು ಈ ಶಾಸನಗಳು ಸೂಚಿಸುತ್ತವೆ.

ಅಶೋಕನ ಶಾಸನಗಳು ದೊರೆತಿರುವ ಸ್ಥಳಗಳು ಬದಲಾಯಿಸಿ

ಕರ್ನಾಟಕದಲ್ಲಿರುವ ಅಶೋಕನ ಶಾಸನಗಳು[೨],[೩] ಚಿತ್ರದುರ್ಗ ಜಿಲ್ಲೆಯ ಬ್ರಹ್ಮಗಿರಿ, ಸಿದ್ದಾಪುರ ಮತ್ತು ಜಟಿಂಗ ರಾಮೇಶ್ವರ, ಕೊಪ್ಪಳ ಜಿಲ್ಲೆಯ ಕೊಪ್ಪಳ, ಬಳ್ಳಾರಿ ಜಿಲ್ಲೆಯ ನಿಟ್ಟೂರು ಮತ್ತು ಉದೆಗೊಳು ಹಾಗೂ ರಾಯಚೂರು ಜಿಲ್ಲೆಯ ಮಸ್ಕಿಗಳಲ್ಲಿ ನಿಕ್ಷಿಪ್ತ ವಾಗಿವೆ. ಕರ್ನಾಟಕದಲ್ಲಿ ಒಟ್ಟು ಹನ್ನೊಂದು ಇಂತಹ ಶಾಸನಗಳು ದೊರಕಿವೆ. ಅವೆಲ್ಲವನ್ನೂ ಪ್ರಾಕೃತ ಭಾಷೆ ಮತ್ತು ಬ್ರಾಹ್ಮೀ ಲಿಪಿಯಲ್ಲಿ ಬರೆಯಲಾಗಿದೆ. ನೇರವಾಗಿ, ಅಶೋಕನ ಹೆಸರನ್ನು ಹೇಳುವ ಶಾಸನಗಳು ಇಡೀ ದೇಶದಲ್ಲಿ ಎರಡೇ ಎರಡು. ಅವುಗಳಲ್ಲಿ ಒಂದು ಮಸ್ಕಿಯ ಶಾಸನ. ಉಳಿದ ಶಾಸನಗಳಲ್ಲಿ ಅವನನ್ನು ‘ದೇವಾನಾಂ ಪ್ರಿಯ’ ಎಂದು ಕರೆಯಲಾಗಿದೆ. ಕೊಪ್ಪಳದ ಶಾಸನಗಳು, ಗವಿಮಠ ಮತ್ತು ಪಾಲ್ಕಿಗುಂಡು ಎಂಬ ಗುಡ್ಡಗಳಲ್ಲಿಯೂ ಸಿದ್ದಾಪುರದ ಶಾಸನವು ಎಮ್ಮೆತಮ್ಮನ ಗುಂಡು ಎಂಬ ಸ್ಥಳದಲ್ಲಿಯೂ ದೊರೆತಿವೆ.

ಬಂಡೆಗಳ ಮೇಲ್ಮೆಯ ಮೇಲೆ ಕೆತ್ತಿರುವ ಅಶೋಕನ ಶಾಸನಗಳು ಬದಲಾಯಿಸಿ

“ಕರ್ನಾಟಕದಲ್ಲಿ, ಬಂಡೆಗಳ ಮೇಲ್ಮೆಯ ಮೇಲೆ ಕೆತ್ತಿರುವ ಅಶೋಕನ ಶಾಸನಗಳು ಅನೇಕ. ಏಕೆಂದರೆ, ಅದು ಬಂಗಾರವು ದೊರೆಯುವ ಪ್ರದೇಶವಾಗಿದ್ದು, ಅಲ್ಲಿ ಮೌರ್ಯಸಾಮ್ರಾಟರು ಗಣಿಗಾರಿಕೆ ಮಾಡಿದಂತೆ ತೋರುತ್ತದೆ. ಕುತೂಹಲಕಾರಿಯಾದ ಸಂಗತಿಯೆಂದರೆ, ಇದು ದ್ರಾವಿಡ ಪ್ರದೇಶ. ಇಲ್ಲಿ ಇದಕ್ಕೆ ಮೊದಲು ಯಾವುದೇ ಲಿಪಿಯನ್ನು ಬಳಸುತ್ತಿರಲಿಲ್ಲ. ಆದರೆ, ಇಲ್ಲಿನ ಎಲ್ಲ ಶಾಸನಗಳೂ ಪ್ರಾಕೃತಭಾಷೆ ಮತ್ತು ಬ್ರಾಹ್ಮೀ ಲಿಪಯಲ್ಲಿ ರಚಿತವಾಗಿವೆ. ಪ್ರಾಕೃತವಾದರೋ ಉತ್ತರ ಭಾರತದ ಇಂಡೋ ಆರ್ಯನ್ ಭಾಷೆ. ಹೀಗಾಗಿ ಅಧಿಕಾರಿಗಳು ಶಾಸನಗಳನ್ನು ಪ್ರಾಕೃತದಲ್ಲಿ ಓದಿ ಹೇಳಿ, ಅನಂತರ ಅವುಗಳನ್ನು ಸ್ಥಳೀಯ ಸಮುದಾಯದ ಭಾಷೆಗಳಿಗೆ ಅನುವಾದಿಸಿ ಹೇಳಬೇಕಾಗುತ್ತಿತ್ತು. ವಾಯುವ್ಯ ಭಾರತದಲ್ಲಿ, ಇಂತಹುದೇ ಶಾಸನಗಳನ್ನು ಗ್ರೀಕ್ ಮತ್ತು ಅರಮಾಯಿಕ್ ಭಾಷೆಗಳಿಗೆ ಅನುವಾದಿಸಲಾಗಿತ್ತು. ಅಂತಹುದೇನೂ ಇಲ್ಲಿ ನಡೆಯಲಿಲ್ಲ. ಇಲ್ಲಿ, ಸ್ಥಳೀಯವಾದ ಲಿಪಿಯೂ ಇರಲಿಲ್ಲವೆನ್ನುವುದು ಇದಕ್ಕೆ ಕಾರಣವಾಗಿರಬಹುದು. ಪ್ರಾಯಶಃ ರಾಜಕೀಯವಾದ ಪರಿಗಣನೆಯಲ್ಲಿ ಈ ಪ್ರದೇಶಕ್ಕೆ ಹೆಚ್ಚಿನ ಮಹತ್ವವೂ ಇರಲಿಲ್ಲವೇನೋ. ಏಕೆಂದರೆ ಇಲ್ಲಿ ಸಣ್ಣಪುಟ್ಟ ಪಾಳೆಪಟ್ಟುಗಳಿದ್ದವೇ ಹೊರತು ದೊಡ್ಡ ರಾಜ್ಯಗಳಿರಲಿಲ್ಲ. ಮೌಖಿಕತೆಯನ್ನು ಮೂಲನೆಲೆಯಾಗಿ ಹೊಂದಿದ್ದ ಸಮಾಜದಲ್ಲಿ, ಸಾಕ್ಷರತೆಯನ್ನೇ ಅಧಿಕಾರದ ಚಿಹ್ನಯಾಗಿ ಸ್ಥಾಪಿಸುವುದೂ ಇದರ ಉದ್ದೇಶವಾಗಿರಬಹುದು. ಪ್ರಾಯಶಃ ಈ ಶಾಸನಗಳನ್ನೂ ಇದೇ ನೆಲೆಯಲ್ಲಿ ನೋಡಲಾಗುತ್ತಿತ್ತು“

ಉಲ್ಲೇಖಗಳು ಬದಲಾಯಿಸಿ

  1. http://subrahmanyabhat.blogspot.in/2010/03/blog-post_12.html
  2. "ಆರ್ಕೈವ್ ನಕಲು". Archived from the original on 2016-07-09. Retrieved 2016-01-19.
  3. ilyhunt.in/news/india/kannada/vijayavani-epaper-vijvani/sakalarigu-kshemankaranaagiddha-ashoka-chakravarti-newsid-37189994