ಆಷಾಢಮಾಸ
ಚೈತ್ರದಿಂದ ಆರಂಭವಾಗುವ ಹನ್ನೆರಡು ಚಾಂದ್ರಮಾನ ತಿಂಗಳುಗಳ ಪೈಕಿ ಐದನೆಯದು. ಇದರಲ್ಲಿ ಸಂಭವಿಸುವ ಹುಣ್ಣಿಮೆಯೊಡನೆ ಪೂರ್ವಾಷಾಢಾ ಅಥವಾ ಉತ್ತರಾಷಾಢಾ ನಕ್ಷತ್ರ ಕೂಡುವುದರಿಂದ ಈ ಹೆಸರು ಬಂದಿದೆ. ಸೂರ್ಯ ಮಿಥುನರಾಶಿಯಲ್ಲಿರುವಾಗ ಆಷಾಢ ಪ್ರಾರಂಭವಾಗಿ ಕರ್ಕಾಟಕರಾಶಿಯಲ್ಲಿರುವಾಗ ಮುಗಿಯುತ್ತದೆ.
ಹಲವು ವರ್ಷಗಳಿಗೊಮ್ಮೆ ಸೂರ್ಯ ಮಿಥುನರಾಶಿಯಲ್ಲಿರುವಾಗಲೇ ಮಾಸಮಧ್ಯದಲ್ಲಿ ಸೂರ್ಯಸಂಕ್ರಮಣವಿಲ್ಲದ ಚಾಂದ್ರಮಾಸ ಬರುತ್ತದೆ. ಆ ತಿಂಗಳಿಗೆ ಅಧಿಕಾಷಾಢವೆಂದು ಹೆಸರು. ಇದು ಚೈತ್ರಾದಿ ಮಾಸಗಣನೆಯಲ್ಲಿ ಐದನೆಯದಾಗುತ್ತದೆ. ಮುಂದಿನ ತಿಂಗಳೇ ನಿಜವಾದ ಆಷಾಢ.
ಅಧಿಕಾಷಾಢದಲ್ಲಿ ನಿತ್ಯವಿಧಿಗಳನ್ನು ಬಿಟ್ಟು ಯಾವ ವಿಶೇಷ ಕಾರ್ಯಗಳನ್ನೂ ಮಾಡಕೂಡದು. ವಿಶೇಷವಾಗಿ ಈ ಮಾಸಕ್ಕೆಂದೇ ವಿಹಿತವಾದ ವ್ರತಾದಿಗಳನ್ನು ನಿಜಾಷಾಢ ಮಾಸದಲ್ಲೇ ಮಾಡಬೇಕು. ಆಷಾಢದಲ್ಲಿ ಕರ್ಕಾಟಕರಾಶಿಯಲ್ಲಿ ಸೂರ್ಯನಿರುವ ಕಾಲವನ್ನು ಶೂನ್ಯಮಾಸವೆಂದು ಪರಿಗಣಿಸುತ್ತಾರೆ. ಈ ತಿಂಗಳಿನ [[ಶುಕ್ಲಪಕ್ಷದ ಏಕಾದಶಿಯಂದು ದಕ್ಷಿಣಾಯನ ಪ್ರಾರಂಭದ ಕುರುಹಾಗಿ ದೇವಾಲಯಗಳಲ್ಲಿ ಭಗವಂತನಿಗೆ ಡೋಲೋತ್ಸವ ನಡೆಯುತ್ತದೆ. ಅಂದಿನಿಂದ ಚಾತುರ್ಮಾಸ್ಯವ್ರತ ಪ್ರಾರಂಭ. ನವ ವಿವಾಹಿತೆ ಆಷಾಢದಲ್ಲಿ ಪತಿಯ ಗೃಹದಲ್ಲಿರದೆ ತವರು ಮನೆಯಲ್ಲಿರುತ್ತಾರೆ. ಈ ತಿಂಗಳಿನಲ್ಲಿ ಅತ್ತೆ ಸೊಸೆಯರು ಒಂದೆಡೆ ಇರಕೂಡದೆಂಬುದೇ ಇದಕ್ಕೆ ಕಾರಣ. ಇದು ಕೆಲವರಲ್ಲಿ ಮಾತ್ರ ಆಚರಣೆಯಲ್ಲಿದೆ. ಆಷಾಢ ಮಾಸದ ಎಲ್ಲ ಶುಕ್ರವಾರಗಳಲ್ಲೂ ವಿಶೇಷ ಪೂಜೆಯುಂಟು.
ಈ ಮಾಸದ ಪ್ರಮುಖ ಹಬ್ಬಗಳು
ಬದಲಾಯಿಸಿ- ಪ್ರಥಮಾ/ಶಯನೀ ಏಕಾದಶಿ; ಚಾತುರ್ಮಾಸಾರಂಭ (ಶುಕ್ಲ ಏಕಾದಶಿ)
- ಗುರು ಪೂರ್ಣಿಮ/ವ್ಯಾಸ ಪೂರ್ಣಿಮ (ಹುಣ್ಣಿಮೆ)
- ಕಾಮಿಕಾ ಏಕಾದಶಿ (ಕೃಷ್ಣ ಏಕಾದಶಿ)
- ಕರ್ಕ ಸಂಕ್ರಮಣ, ದಕ್ಷಿಣಾಯಣ ಪರ್ವಕಾಲ
ಚಾಂದ್ರಮಾನ ಮಾಸಗಳು |
---|
ಚೈತ್ರ • ವೈಶಾಖ • ಜ್ಯೇಷ್ಠ • ಆಷಾಢ • ಶ್ರಾವಣ • ಭಾದ್ರಪದ • ಆಶ್ವಯುಜ • ಕಾರ್ತಿಕ • ಮಾರ್ಗಶಿರ • ಪುಷ್ಯ • ಮಾಘ • ಫಾಲ್ಗುಣ |