ಕನ್ನಡ ವರ್ಣಮಾಲೆಯ ಎಂಟನೇ ಅಕ್ಷರವಾಗಿದೆ.ಇದು ಒಂದು ಸ್ವರಾಕ್ಷರ.

ಕನ್ನಡ ಅಕ್ಷರಮಾಲೆ
ಸ್ವರಗಳು
ಯೋಗವಾಹಗಳು
ಅಂ ಅಃ
ವ್ಯಂಜನಗಳು
ಅವರ್ಗೀಯ ವ್ಯಂಜನಗಳು
ಹೊಸ ಅಕ್ಷರಗಳು
ಜ಼ ಫ಼
ಎ ಅಕ್ಷರವನ್ನು ಬರೆಯುವ ವಿಧಾನ
Екараву.png

ಚಾರಿತ್ರಿಕ ಹಿನ್ನೆಲೆಸಂಪಾದಿಸಿ

ಕನ್ನಡ ವರ್ಣಮಾಲೆಯ ಒಂಬತ್ತನೆಯ ಅಕ್ಷರ. ಹ್ರಸ್ವ ಸ್ವರ. ಸಂಸ್ಕøತದಲ್ಲಿ ಹ್ರಸ್ವ ಎಕಾರವಿಲ್ಲವಾಗಿ ಬ್ರಾಹ್ಮೀ ಲಿಪಿಯ ಲೇಖಗಳಲ್ಲಿ ಈ ಅಕ್ಷರದ ರೂಪ ದೊರೆಯದು. ಕನ್ನಡದಲ್ಲಿ ಈ ಲಿಪಿ ಮತ್ತು ಉಚ್ಛಾರಣೆ ಬಳಕೆಯಲ್ಲಿದ್ದರೂ ಪ್ರಾಚೀನ ಕನ್ನಡದ ಶಾಸನಗಳಲ್ಲಿ ಎ ಕಾರಕ್ಕೆ ಬದಲು ಏ ಕಾರವನ್ನೇ ಬಳಸಲಾಗಿದೆ. ಬಹುಶಃ ಇದು ಸಂಸ್ಕøತ ಪ್ರಭಾವದಿಂದ ಆಗಿರಬಹುದು. ಬರವಣಿಗೆಯಲ್ಲಿ ಒಂದೇ ಅಕ್ಷರ ಕಂಡುಬಂದರೂ ಸಂದರ್ಭಕ್ಕೆ ತಕ್ಕಂತೆ ಹ್ರಸ್ವವಾಗಿಯೊ ದೀರ್ಘವಾಗಿಯೊ ಉಚ್ಛರಿಸುವ ವಾಡಿಕೆ ಇತ್ತು. ಲಿಪಿಯ ದೃಷ್ಟಿಯಿಂದ ಈ ಅಕ್ಷರದ ಹ್ರಸ್ವ ಮತ್ತು ದೀರ್ಘ ರೂಪಗಳಿಗಿರುವ ವ್ಯತ್ಯಾಸ ಯಾವಾಗ ರೂಢಿಗೆ ಬಂತು ಎಂದು ಹೇಳುವುದು ಕಷ್ಟ. ಕ್ರಿ.ಶ.15ನೆಯ ಶತಮಾನದ ವಿಜಯನಗರ ಕಾಲದಲ್ಲಿ ವ್ಯಂಜನಾಕ್ಷರಗಳೊಂದಿಗಿನ ಎ ವರ್ಣದ ರೂಪ ಹೇಗಿತ್ತೆಂಬುದನ್ನು ಚಿತ್ರದಲ್ಲಿ ತೋರಿಸಿದೆ.[೧]

ಶಾಸ್ತ್ರೀಯ ವಿವರಸಂಪಾದಿಸಿ

ಈ ಅಕ್ಷರ ಪೂರ್ವ ಅಗೋಲ ಅರ್ಧ ಸಂವೃತ ಹ್ರಸ್ವಸ್ವರವನ್ನು ಸೂಚಿಸುತ್ತದೆ.

ಸ್ವರಾಕ್ಷರಗಳು ಎಂದರೇನು ?ಸಂಪಾದಿಸಿ

  1. ಸ್ವಯಂ ರಂಜತೇ ಇತಿಃ ಸ್ವರಃ - ಸ್ವತಂತ್ರವಾಗಿ ಉಚ್ಚರಿಸಲು ಬರುವ ಅಕ್ಷರಗಳೇ ಸ್ವರಗಳು.[೨]
  2. ಅಕಾರಂ ಮೊದಲಾಗಿರೆ ಪದಿನಾಲ್ಕು ಸ್ವರಂಗಳ್.

ಸಂಸ್ಕೃತದಲ್ಲಿ (ದೇವನಾಗರಿ) ಸ್ವರಾಕ್ಷರಗಳು ‘ಅ’ ಕಾರ ದಿಂದ ‘ಔ’ ಕಾರದವರೆಗೆ ೧೪ ಇವೆ. ಅವುಗಳೆಂದರೆ,

ಹೃಸ್ವಸ್ವರಸಂಪಾದಿಸಿ

ಒಂದು ಮಾತ್ರೆಗಳ ಕಾಲಾವಧಿಯಲ್ಲಿ ಉಚ್ಚರಿಸಬಹುದಾದ ಅಕ್ಷರಗಳು ೫ - ಅ, ಇ, ಉ, ಋ, ೡ. ಎ, ಒ - ಈ ಅಕ್ಷರಗಳನ್ನು ಲಘು(ವ್ಯಾಕರಣ) ಎಂದು ಕರೆಯುತ್ತಾರೆ. ಇವುಗಳಲ್ಲಿ ಅಕ್ಷರವೂ ಒಂದಾಗಿದೆ.

ಕನ್ನಡದ ನಾವಿ ಸ್ವರಗಳುಸಂಪಾದಿಸಿ

ಈ ನಾಮಿ ಸ್ವರಗಳನ್ನು ಸವರ್ಣಗಳೆಂದು ಕರೆಯುತ್ತಾರೆ.

ಹೃಸ್ವಸ್ವರ ದೀರ್ಘಸ್ವರ

ಅಕ್ಷರವನ್ನು ಉಚ್ಛರಿಸುವ ವಿಧಾನಸಂಪಾದಿಸಿ

ದಿಂದ ಆರಂಭವಾಗುವ ನಾಮಪದಗಳುಸಂಪಾದಿಸಿ

  • ಪ್ರಾಣಿ ಸಂಬಂಧಿ ಪದ : ಎಮ್ಮೆ
  • ಮನುಷ್ಯ ಸಂಬಂಧಿ ಪದ : ಎಲ್ಲಪ್ಪ
  • ಸಸ್ಯ ಸಂಬಂಧಿ ಪದ : ಎಲೆ

ಅಕ್ಷರದಿಂದ ಆರಂಭವಾಗುವ ಸಂಖ್ಯಾವಚಿ ಪದಗಳುಸಂಪಾದಿಸಿ

  • ಎಂಟು, ಎಂಬತ್ತು, ಎಪ್ಪತ್ತು

ಉಲ್ಲೇಖಸಂಪಾದಿಸಿ

  1. https://kn.wikisource.org/wiki/ಮೈಸೂರು_ವಿಶ್ವವಿದ್ಯಾನಿಲಯ_ವಿಶ್ವಕೋಶ/ಎ
  2. ಕೇಶಿರಾಜಶಬ್ದಮಣಿದರ್ಪಣ
ವಿಕಿಸೋರ್ಸ್ ತಾಣದಲ್ಲಿ ಈ ವಿಷಯಕ್ಕೆ ಸಂಬಂಧಪಟ್ಟ ಮೂಲಕೃತಿಗಳು ಇವೆ:
"https://kn.wikipedia.org/w/index.php?title=ಎ&oldid=913605" ಇಂದ ಪಡೆಯಲ್ಪಟ್ಟಿದೆ