ಎಬೊನೈಟ್
ಎಬೊನೈಟ್ ಅಧಿಕ ಗಂಧಕ ಬೆರೆತ ಬಿರುಸಾದ ರಬ್ಬರ್.[೧][೨] ರಬ್ಬರ್ ಮತ್ತು ಗಂಧಕವನ್ನು ಬೆರೆಸಿ ೧೪೦೦ - ೧೬೦೦ ಸೆಂ.ಗ್ರೇ. ಉಷ್ಣತೆಗೆ ಕಾಸಿ ಇದನ್ನು ತಯಾರಿಸಬಹುದು. ಸಾಮಾನ್ಯ ಉಷ್ಣತಾಮಿತಿಗಳಲ್ಲಿ ಬಿರುಸಾಗಿದ್ದು ಕಾಸಿದಾಗ ಮೃದುವಾಗುವುದು. ಸ್ಥಿತಿಸ್ಥಾಪಕತ್ವ ಗುಣವಿಲ್ಲ. ಗಡಸು ಮೈ. ಗೀರುನಿರೋಧಕವಾಗಿದೆ. ಎರಕಹೊಯ್ದು ರಂಧ್ರ ಮಾಡಿ ಚೆನ್ನಾಗಿ ಹೊಳೆಯುವಂತೆಯೂ ಮಾಡಬಹುದು. ವಿದ್ಯುನ್ನಿರೋಧಕವಸ್ತು. ಹಲವಾರು ರಾಸಾಯನಿಕಗಳು ಇದರೊಡನೆ ವರ್ತಿಸುವುದಿಲ್ಲ.
ಉಪಯೋಗಗಳು
ಬದಲಾಯಿಸಿರೇಡಿಯೊ, ತಾಂತ್ರಿಕ ಮುಂತಾದ ಉದ್ದಿಮೆಗಳಲ್ಲಿ ಹೆಚ್ಚಿನ ಉಪಯೋಗವಿದೆ. ರಸಾಯನೋದ್ಯಮದಲ್ಲಿ ರಕ್ಷಕ ಪದರವಾಗಿ ಉಪಯೋಗಿಸುವರು. ಅಚ್ಚುಹಾಕಿ ಕೋಶಪೆಟ್ಟಿಗೆ ಫೌಂಟನ್ ಪೆನ್ನು ಕೊಳವೆ,[೩][೪] ಟೆಲಿಫೋನ್, ಹೆಣಿಗೆ, ತಂಬಾಕು ಚಿಲುಮೆ ಮುಂತಾದ ಹಲವಾರು ನಿತ್ಯೋಪಯೋಗಕಾರಿ ವಸ್ತುಗಳನ್ನು ಇದರಿಂದ ತಯಾರಿಸಬಹುದು.
ಉಲ್ಲೇಖಗಳು
ಬದಲಾಯಿಸಿ- ↑ "Hartgummi (Ebonite) (in German)[[Category:Articles with German-language sources (de)]]". Archived from the original on 2014-12-18. Retrieved 2023-02-10.
{{cite web}}
: URL–wikilink conflict (help) - ↑ "eboDUST Ebonite/Hard-rubber dust". Archived from the original on 2014-12-05. Retrieved 2014-11-30.
- ↑ "What Is Ebonite?". Unsharpen. Retrieved 19 July 2021.
- ↑ "Ebonite". fountainpen.it. Retrieved 2022-04-02.
ವಿಕಿಸೋರ್ಸ್ ನಲ್ಲಿ ಲಭ್ಯವಿರುವ ಲೇಖನದ ವಿಷಯವನ್ನು ಇಲ್ಲಿ ಅಳವಡಿಸಲಾಗಿದೆ: