ಎಸ್.ಕೆ.ಬೆಳ್ಳುಬ್ಬಿ

ಎಸ್.ಕೆ.ಬೆಳ್ಳುಬ್ಬಿ(ಪೂರ್ಣ ಹೆಸರು: ಸಂಗಣ್ಣ ಕಲ್ಲಪ್ಪ ಬೆಳ್ಳುಬ್ಬಿ)ಯವರು ಹಿರಿಯ ರಾಜಕಾರಿಣಿ ಮತ್ತು ಮಾಜಿ ಸಚಿವರು. ಇವರು ವಿಜಯಪುರ ಜಿಲ್ಲೆಬಸವನಬಾಗೇವಾಡಿ ತಾಲ್ಲೂಕಿನ ಕೊಲ್ಹಾರ ಗ್ರಾಮದವರು.

1955ರಲ್ಲಿ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಕೊಲ್ಹಾರ ಗ್ರಾಮದಲ್ಲಿ ಜನಿಸಿದ ಎಸ್.ಕೆ.ಬೆಳ್ಳುಬ್ಬಿಯವರು ಮೂಲತಃ ಒಕ್ಕಲುತನ ಕುಟುಂಬದಿಂದ ಬಂದವರು.

ಶಿಕ್ಷಣ

ಬದಲಾಯಿಸಿ

ಬೆಳ್ಳುಬ್ಬಿಯವರು ವಿಜಯಪುರ ಜಿಲ್ಲೆಬಸವನಬಾಗೇವಾಡಿ ತಾಲ್ಲೂಕಿನ ಕೊಲ್ಹಾರ ಗ್ರಾಮದ ಶ್ರೀ ಸಂಗಮೇಶ್ವವ ಪ್ರೌಢ ಶಾಲೆಯಲ್ಲಿ ಹತ್ತನೇಯ ತರಗತಿಯಲ್ಲಿ ತೆರ್ಗಡೆ ಹೊಂದಿದ್ದಾರೆ.

ರಾಜಕೀಯ

ಬದಲಾಯಿಸಿ
  • ಬಸವನಬಾಗೇವಾಡಿ ಕ್ಷೇತ್ರದ ಕಾಂಗ್ರೆಸ್‌ ಭದ್ರಕೋಟೆ ಛಿದ್ರಗೊಳಿಸಿ ಎರಡು ಬಾರಿ ಬಿಜೆಪಿಯಿಂದ ಗೆದ್ದವರು.
  • ಎಸ್.ಕೆ.ಬೆಳ್ಳುಬ್ಬಿಯವರು ಪಂಚಾಯಿತಿ ಮಟ್ಟದಿಂದಲೇ ವಿಧಾನಸಭೆ ತನಕ ರಾಜಕಾರಣದಲ್ಲಿ ಯಶಸ್ಸು ಕಂಡವರು. 1978ರಲ್ಲಿ ಗ್ರಾಪಂ ಸದಸ್ಯರಾಗಿ ಆಯ್ಕೆಯಾದರು.
  • 1983ರಲ್ಲಿ ಕೊಲ್ಹಾರ ಗ್ರಾಪಂ ಅಧ್ಯಕ್ಷರಾಗಿದ್ದರು.
  • 1987ರಲ್ಲಿ ಮಂಡಲ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿ ಮಂಡಲ ಪಂಚಾಯಿತಿ ಅಧ್ಯಕ್ಷ ಹುದ್ದೆಯನ್ನೂ ಗಿಟ್ಟಿಸಿಕೊಂಡರು.
  • 1994ರಲ್ಲಿ ಕೆಸಿಪಿ ಪಕ್ಷದಿಂದ ಬಸವನಬಾಗೇವಾಡಿ ಕ್ಷೇತ್ರದಿಂದ ವಿಧಾನಸಭೆ ಪ್ರವೇಶಿಸುವ ಮೊದಲ ಪ್ರಯತ್ನ ಫಲಿಸಲಿಲ್ಲ.
  • 1999ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಶಾಸಕರಾಗಿ ಆಯ್ಕೆಯಾದರು.[]
  • 2008ರಲ್ಲಿ 2ನೇ ಬಾರಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ಕೆಲ ತಿಂಗಳು ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ತೋಟಗಾರಿಕಾ ಮಂತ್ರಿಸ್ಥಾನವನ್ನೂ ಅಲಂಕರಿಸಿದ್ದರು.
  • 2012ರಲ್ಲಿ ಜಗದೀಶ ಶೆಟ್ಟರ ಸಂಪುಟದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಮಂತ್ರಿಯಾಗಿದ್ದರು.
  • 1994, 2004, 2013 ಹಾಗೂ 2018ರ ಚುನಾವಣೆಯಲ್ಲಿ ಸೋಲಿನ ಕಹಿ ಅನುಭವಿಸಿದ್ದಾರೆ.[][]

ಸಚಿವರು

ಬದಲಾಯಿಸಿ
  • 2008ರಲ್ಲಿ 2ನೇ ಬಾರಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ಕೆಲ ತಿಂಗಳು ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ತೋಟಗಾರಿಕಾ ಮಂತ್ರಿಸ್ಥಾನವನ್ನೂ ಅಲಂಕರಿಸಿದ್ದರು.
  • 2012ರಲ್ಲಿ ಜಗದೀಶ ಶೆಟ್ಟರ ಸಂಪುಟದಲ್ಲಿ ಎಪಿಎಂಸಿ ಮಂತ್ರಿಯಾಗಿದ್ದರು.


ಉಲ್ಲೇಖಗಳು

ಬದಲಾಯಿಸಿ