ಕಬಂಧ
ಕಬಂಧ : ರಾಮನಿಂದ ಹತರಾದ ರಾಕ್ಷಸರಲ್ಲಿ ಒಬ್ಬ. ಕುವೆಂಪು ಅವರು ಈತನನ್ನು ಅಕಶೇರು ಕಶ್ಮಲ ಸರೀಸೃಪ-ಎಂದು ಬಣ್ಣಿಸಿದ್ದಾರೆ. ಶ್ರೀರಾಮ ಸುವರ್ಣಮೃಗ ರೂಪವನ್ನು ಧರಿಸಿದ ಮಾರೀಚನನ್ನು ಕೊಂದು ಹಿಂತಿರುಗಿ ಸೀತಾಶೂನ್ಯವಾದ ಆಶ್ರಮವನ್ನು ಕಂಡು, ನೊಂದು, ಸೀತೆಯನ್ನು ಹುಡುಕುತ್ತ ಮುಂದೆ ಸಾಗುತ್ತಿರಲಾಗಿ ದಂಡಕಾರಣ್ಯದ ದಕ್ಷಿಣ ಭಾಗದಲ್ಲಿ ಮೇಘಾಕೃತಿಯ ಮಹಾಪರ್ವತದಂತೆಯೂ ಸಾಲವೃಕ್ಷದಂತೆ ಹೆಗಲುಳ್ಳವನಾಗಿಯೂ ದೊಡ್ಡದಾದ ಭುಜಗಳುಳ್ಳವನಾಗಿಯೂ ಎದೆಯ ಭಾಗದಲ್ಲಿ ವಿಸ್ತಾರವಾದ ಕಣ್ಣುಳ್ಳವನಾಗಿಯೂ ಇದ್ದ, ಬೃಹದಾಕಾರವಾದ ಹೊಟ್ಟೆಯೆಂಬ ಮುಖವುಳ್ಳ, ಘೋರಾಕೃತಿಯ ಪುರುಷನೊಬ್ಬನನ್ನು ಕಂಡ. ಕೂಡಲೆ ರಾಮ ಅವನ ಎಡಭುಜವನ್ನೂ ಲಕ್ಷ್ಮಣ ಬಲಭುಜವನ್ನೂ ಕತ್ತರಿಸಿದರು. ಕಬಂಧ ಅಸು ನೀಗಿದ. ಒಡನೆಯೆ ಅವನ ದೇಹದಿಂದ ದಿವ್ಯಾಕೃತಿಯ ಪುರುಷನೊಬ್ಬ ಹೊರಬಂದು ಅಂತರಿಕ್ಷದಲ್ಲಿ ಸೂರ್ಯನಂತೆ ಜ್ವಲಿಸುತ್ತ ನಿಂತು, ಹಿಂದೆ ವಿಶ್ವಾವಸುವೆಂಬ ಗಂಧರ್ವನಾದ ತನಗೆ ಬ್ರಾಹ್ಮಣಶಾಪದಿಂದ ರಾಕ್ಷಸ ಸ್ವರೂಪ ಬಂದುದನ್ನೂ ರಾಮಾದಿಗಳಿಂದ ಶಾಪವಿಮೋಚನೆಯಾದುದನ್ನೂ ತಿಳಿಸಿ, ರಾವಣ ಸೀತೆಯನ್ನು ಕದ್ದೊಯ್ದು ಲಂಕಾಪುರಿಯಲ್ಲಿ ಇಟ್ಟಿರುವನೆಂದೂ ಸಮಾನ ವ್ಯಸನಿಯಾದ ಸುಗ್ರೀವನಿಂದ ಸೀತಾಪ್ರಾಪ್ತಿಗೆ ಬೇಕಾದ ಅನುಕೂಲವೆಲ್ಲ ದೊರಕುವುದೆಂದೂ ತಿಳಿಸಿ ಅದೃಶ್ಯನಾದ. ಇದು ವಾಲ್ಮೀಕಿ ರಾಮಾಯಣದ ವಿವರ.
ಬಾಹ್ಯ ಸಂಪರ್ಕಗಳು
ಬದಲಾಯಿಸಿವಾಲ್ಮೀಕಿ ವಿರಚಿತ ರಾಮಾಯಣ |
---|
ಪಾತ್ರಗಳು |
ವಾಲ್ಮೀಕಿ | ದಶರಥ | ಕೌಸಲ್ಯ | ಸುಮಿತ್ರ | ಕೈಕೇಯಿ | ಜನಕ | ಮಂಥರ | ರಾಮ | ಭರತ | ಲಕ್ಷ್ಮಣ | ಶತ್ರುಘ್ನ | ಸೀತಾ | ಊರ್ಮಿಳಾ | ಮಾಂಡವಿ | ಶ್ರುತಕೀರ್ತಿ | ವಿಶ್ವಾಮಿತ್ರ | ಅಹಲ್ಯೆ | ಜಟಾಯು | ಸಂಪಾತಿ | ಹನುಮಂತ | ಸುಗ್ರೀವ | ವಾಲಿ | ಅಂಗದ | ಜಾಂಬವಂತ | ವಿಭೀಷಣ | ತಾಟಕಿ | ಶೂರ್ಪನಖಿ | ಮಾರೀಚ | ಸುಬಾಹು | ಖರ | ರಾವಣ | ಕುಂಭಕರ್ಣ | ಮಂಡೋದರಿ | ಮಯಾಸುರ | ಇಂದ್ರಜಿತ್ | ಪ್ರಹಸ್ತ | ಅಕ್ಷಯಕುಮಾರ | ಅತಿಕಾಯ | ಲವ | ಕುಶ |ಕಬಂಧ |
ಇತರೆ |
ಅಯೋಧ್ಯೆ | ಮಿಥಿಲಾ | ಲಂಕಾ | ಸರಯು | ಸುಗ್ರೀವಾಜ್ಞೆ | ತ್ರೇತಾಯುಗ | ರಘುವಂಶ | ಲಕ್ಷ್ಮಣ ರೇಖೆ | ಆದಿತ್ಯ ಹೃದಯಂ | ಸಂಜೀವಿನಿ ಪರ್ವತ | ಸುಂದರಕಾಂಡ | ಪುಷ್ಪಕ ವಿಮಾನ | ವೇದಾವತಿ | ವಾನರ |ಜಟಾಯು | |