ಕಲಬೀಳಗಿ ಒಂದು ಗ್ರಾಮ.ಇದು ಕರ್ನಾಟಕ ರಾಜ್ಯದ ಬಾಗಲಕೋಟ ಜಿಲ್ಲೆಜಮಖಂಡಿ ತಾಲ್ಲೂಕಿ ನಲ್ಲಿದೆ. ಕಲಬೀಳಗಿ ಗ್ರಾಮವು ಜಿಲ್ಲಾ ಕೇಂದ್ರ ಬಾಗಲಕೋಟಯಿಂದ ಸುಮಾರು ೧೦೦ ಕಿ. ಮಿ. ಇದ್ದು ಸಾವಳಗಿ ಹೋಬಳಿ ವ್ಯಾಪ್ತಿಯಲ್ಲಿ ಬರುತ್ತದೆ.

ಕಲಬೀಳಗಿ
ಕಲಬೀಳಗಿ
village
Population
 (೨೦೧೨)
 • Total೨೦೦೦

ದೇವಾಲಯಗಳು ಬದಲಾಯಿಸಿ

ಶ್ರೀ ಪಾಂಡುರಂಗ ದೇವಾಲಯ, ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಹಾಗೂ ಶ್ರೀ ಹಣಮಂತ ದೇವಾಲಯಗಳನ್ನು ನಿರ್ಮಿಸಿದ್ದಾರೆ.

ಮಸೀದಿಗಳು ಬದಲಾಯಿಸಿ

ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.

ಸಂಘಟನೆಗಳು ಬದಲಾಯಿಸಿ

ಛತ್ರಪತಿ ಶಿವಾಜಿ ಯುವಕ ಮಂಡಳಿ, ಶ್ರೀ ಬಸವೇಶ್ವರ ಯುವಕ ಮಂಡಳಿ ಹಾಗೂ ಕನಕ ಸೇನೆ ಇದೆ.

ನೀರಾವರಿ ಬದಲಾಯಿಸಿ

ಗ್ರಾಮದ ಪ್ರತಿಶತ ೪೦ ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.

ಹಬ್ಬಗಳು ಬದಲಾಯಿಸಿ

ಪ್ರತಿವರ್ಷ ಶ್ರೀ ಹನುಮಾನ ಉತ್ಸವ, ಶ್ರೀ ಪಾಂಡುರಂಗ ಸಪ್ತಾಹ(ದಿಂಡಿ), ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.

ಶಿಕ್ಷಣ ಬದಲಾಯಿಸಿ

ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ. ಶಾಲೆಯಲ್ಲಿ ೧ನೇ ತರಗತಿಯಿಂದ ೭ನೇ ತರಗತಿವರೆಗೆ ೨೦೦ರಕ್ಕೂ ಹೆಚ್ಚು ವಿದ್ಯಾರ್ಥಿಗಳ್ಳಿದ್ದಾರೆ. ಹಾಗೂ ಬಂಜಾರಾ ವಿದ್ಯಾವರ್ಧಕ ಸಂಘದ ಪ್ರೌಢಶಾಲೆಯಿದೆ.

ವಿದ್ಯುತ್ ಪರಿವರ್ತನಾ ಕೇಂದ್ರ ಬದಲಾಯಿಸಿ

ಗ್ರಾಮದಲ್ಲಿ ೩೩ ಕೆ.ವಿ. ವಿದ್ಯುತ್ ಪರಿವರ್ತನಾ ಕೇಂದ್ರವಿದೆ.

"https://kn.wikipedia.org/w/index.php?title=ಕಲಬೀಳಗಿ&oldid=1092994" ಇಂದ ಪಡೆಯಲ್ಪಟ್ಟಿದೆ