ಕೋರೇಗಾಂವ್ ಯುದ್ಧ
(ಕೋರೇಗಾಂವ್ ಯುದ್ಧ.. ಇಂದ ಪುನರ್ನಿರ್ದೇಶಿತ)
| ||||||||||||||||||||||||||||||||||||||
ಟೆಂಪ್ಲೇಟು:Campaignbox Third Anglo-Maratha War |
ಕೋರೇಗಾಂವ್ ಯುದ್ಧ[೨][೩] ಇತಿಹಾಸದಲ್ಲಿ ಮುಚ್ಚಿಹೋದ ಸಾಹಸದ ಘಟನೆ. ಮೂವತ್ತು ಸಾವಿರ ಸೈನಿಕರನ್ನು ಕೇವಲ ಐನೂರು ಜನ ಸೈನಿಕರು ಸೇರಿಕೊಂಡು ಸೋಲಿಸಿದ ಕದನ. ಪೇಶ್ವೆಗಳ ಆಡಳಿತದಲ್ಲಿದ್ದ ಜಾತಿ, ಅಸ್ಪೃಶ್ಯತೆ, ಮೇಲು ಕೀಳುಗಳ ವಿರುದ್ಧ ಸೆಟೆದು ನಿಂತು ಮಾನವೀಯ ಮೌಲ್ಯಗಳನ್ನು ಪಡೆದುಕೊಳ್ಳಲು ಹಂಬಲಿಸುವ ಮಹರ್ ಸೈನಿಕರ ಧೈರ್ಯ ಸಾಹಸ, ಕೆಚ್ಚೆದೆಯ ಹೋರಾಟ. ಶೋಷಿತರು ಮೇಲ್ಜಾತಿ ಶೋಷಕರ ವಿರುದ್ಧ, ಅವರ ಶೋಷಣೆಯ ನಡವಳಿಕೆಯ ವಿರುದ್ಧ ಯುದ್ಧ ಘೋಷಿಸಿದ, ನಡೆಸಿ ಗೆಲುವು. ಅದು ಭೀಮಾ ತೀರದಲ್ಲಿ ನಡೆದಿದ್ದರಿಂದ ಅದು ಇತಿಹಾಸದಲ್ಲಿ ‘ಭೀಮಾ ಕೋರೇಗಾಂವ್ ಯುದ್ಧ’ವೆಂದೇ ಪ್ರಸಿದ್ಧವಾಗಿದೆ. ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಕೋರೇಗಾಂವ್
ಇತಿವೃತ್ತ
ಬದಲಾಯಿಸಿ- ಭಾರತದ ಇತಿಹಾಸದಲ್ಲಿ ನಡೆದಿರುವ ವಿವಿಧ ಯುದ್ಧಗಳಲ್ಲಿ, ಬರೇ ಆ ರಾಜರು ಈ ರಾಜರ ವಿರುದ್ಧ, ಮಹಮ್ಮದೀಯರು ಬ್ರಿಟಿಷರ ವಿರುದ್ಧ, ಬ್ರಿಟಿಷರು ಫ್ರೆಂಚರ ವಿರುದ್ಧ, ಫ್ರೆಂಚರು ಡಚ್ಚರ ವಿರುದ್ಧ... ಹೀಗೆ ಸಾಮ್ರಾಜ್ಯಶಾಹಿಗಳು ನಡೆಸಿದ ಯುದ್ಧಗಳ ಬಗ್ಗೆಯಷ್ಟೆ ಚರಿತ್ರೆ ದಾಖಲಿಸಲಾಗಿದೆ. ಆದರೆ ಶೋಷಿತರು ಮೇಲ್ಜಾತಿ ಶೋಷಕರ ವಿರುದ್ಧ, ಅವರ ಶೋಷಣೆಯ ನಡವಳಿಕೆಯ ವಿರುದ್ಧ ಯುದ್ಧ ಘೋಷಿಸಿದ, ನಡೆಸಿ ಗೆಲುವು ದಾಖಲಿಸಿದ ಬಗ್ಗೆ ಎಲ್ಲಿಯೂ ದಾಖಲಾಗಿಲ್ಲ!
- ಇತಿಹಾಸ ಕೃತಿಯ ಯಾವ ಪುಟದಲ್ಲೂ ಅಂತಹದ್ದೊಂದು ಯುದ್ಧದ ಬಗ್ಗೆ ಉಲ್ಲೇಖವಿಲ್ಲ. ಶೋಷಿತರು ಶೋಷಕ ಶಕ್ತಿಗಳ ವಿರುದ್ಧ ಸಾರಿದ ಯುದ್ಧ ಕೋರೇಗಾಂವ್ ಯುದ್ಧ.[೪] ಅದು ಭೀಮಾ ತೀರದಲ್ಲಿ ನಡೆದಿದ್ದರಿಂದ ಅದು ಇತಿಹಾಸದಲ್ಲಿ ‘ಭೀಮಾ ಕೋರೇಗಾಂವ್ ಯುದ್ಧ’ವೆಂದೇ ಪ್ರಸಿದ್ಧವಾಗಿದೆ.
- 1818ರ ಹೊಸ ವರ್ಷದ ಸಂದರ್ಭದಲ್ಲಿ ನಡೆದ ಆ ಯುದ್ಧದ ವಿವರ ಹೇಳುವುದಕ್ಕೂ ಮುನ್ನ ಆ ಸಮಯದಲ್ಲಿ ಇದ್ದ ಸಾಮಾಜಿಕ ಸ್ಥಿತಿಗತಿಯನ್ನು ದಾಖಲಿಸುವುದು ಸೂಕ್ತವೆನಿಸುತ್ತದೆ. 1818 ಅದು ಮಹಾರಾಷ್ಟ್ರದಲ್ಲಿ ಪೇಶ್ವೆಗಳ ಆಡಳಿತದ ಕಾಲ. ಆಗಿನ ಪೇಶ್ವೆ ಮಂತ್ರಿ 2ನೆ ಬಾಜೀರಾಯ. ಸಾಮಾಜಿಕ ದುಸ್ಥಿತಿಯ ಸಂದರ್ಭದಲ್ಲಿ ಮಹರಾಷ್ಟ್ರದ ಅಸ್ಪಶ್ಯರಾದ ಮಹಾರರಿಗೆ ದೌರ್ಜನ್ಯಕೋರ ಇಂತಹ ಪೇಶ್ವೆಗಳ, ಮತ್ತವರ ಸಾಮ್ರಾಜ್ಯದ ವಿರುದ್ಧ ಹೋರಾಡುವ ಅದ್ಭುತ ಅವಕಾಶವೊಂದು ಬರುತ್ತದೆ. * ಅದೇ ಕೋರೇಗಾಂವ್ ಯುದ್ಧ! ಅಂಬೇಡ್ಕರರ ಪ್ರಕಾರವೇ ಹೇಳುವುದಾದರೆ ‘‘ಮರಾಠರ ರಾಜ್ಯದಲ್ಲಿ ಪೇಶ್ವೆಗಳ ಆಡಳಿತದಲ್ಲಿ, ಅಸ್ಪಶ್ಯರ ನೆರಳು ಹಿಂದೂವೊಬ್ಬನ ಮೇಲೆ ಬಿದ್ದು ಆತ ಮಲಿನವಾಗುವುದನ್ನು ತಪ್ಪಿಸಲು ಸಾರ್ವಜನಿಕ ಬೀದಿಗಳಲ್ಲಿ ಅಸ್ಪಶ್ಯರಿಗೆ ಪ್ರವೇಶವನ್ನು ನಿರಾಕರಿಸಲಾಗಿತ್ತು. ಈ ಬಗೆಯ ಸಾಮಾಜಿಕ ಅಸಮತೋಲನದ ವಿರುದ್ದ ದಮನಿತ ಸಮುದಾಯ ಸಿಡಿದೆದ್ದು ವಿಜೇತರಾದ ದಿನ.
ಯುದ್ದಕ್ಕೆ ಕಾರಣ ದಲಿತರ ದಯನೀಯ ಸ್ಥಿತಿ
ಬದಲಾಯಿಸಿ- ಅಸ್ಪಶ್ಯನೊಬ್ಬನನ್ನು ಹಿಂದೂವೊಬ್ಬ ಮುಟ್ಟಿ ಆತ ಮಲಿನಗೊಳ್ಳುವುದನ್ನು ತಪ್ಪಿಸಲು ಅಸ್ಪಶ್ಯನು ತನ್ನ ಕುತ್ತಿಗೆಗೆ ಅಥವಾ ಮುಂಗೈಗೆ ಕಪ್ಪು ದಾರವೊಂದನ್ನು ಕಟ್ಟಿಕೊಳ್ಳುವುದು ಆ ದಿನಗಳಲ್ಲಿ ಕಡ್ಡಾಯವಾಗಿತ್ತು. ಅಲ್ಲದೆ ಪೇಶ್ವೆಗಳ ರಾಜಧಾನಿಯಾದ ಪೂನಾದಲ್ಲಿ ಹಿಂದೂಗಳು, ಅಸ್ಪಶ್ಯನೋರ್ವ ನಡೆದ ದಾರಿಯಲ್ಲಿ ನಡೆದು ಮಲಿನಗೊಳ್ಳುವುದನ್ನು ತಡೆಯಲು ಅಸ್ಪಶ್ಯನು ತನ್ನ ನಡುವಿಗೆ ಹಗ್ಗವೊಂದನ್ನು ಬಿಗಿದು ಅದಕ್ಕೆ ಕಸಪೊರಕೆಯೊಂದನ್ನು ಕಟ್ಟಿ ತಾನು ನಡೆದ ದಾರಿಯನ್ನು ಆತ ಗುಡಿಸಬೇಕಾಗಿತ್ತು! * ಅದಲ್ಲದೆ ಅದೇ ಪೂನಾ ನಗರದಲ್ಲಿ ಅಕಸ್ಮಾತ್ ಅಸ್ಪಶ್ಯನೊಬ್ಬ ದಾರಿಯಲ್ಲಿ ಉಗಿದು, ಆ ಉಗುಳನ್ನು ಹಿಂದೂವೊಬ್ಬ ತುಳಿದು ಆತ ಮಲಿನವಾಗುವುದನ್ನು ತಪ್ಪಿಸಲು, ಅಸ್ಪಶ್ಯ ತನ್ನ ಕೊರಳಿಗೆ ಮಣ್ಣಿನ ಮಡಕೆಯೊಂದನ್ನು ನೇತು ಹಾಕಿಕೊಳ್ಳ ಬೇಕಾಗುತ್ತಿತ್ತು ಮತ್ತು ಉಗಿಯಬೇಕೆಂದಾಗ ಆತ ಆ ಮಡಕೆಯಲ್ಲಿ ಉಗಿಯಬೇಕಾಗಿತ್ತು! ಪೇಶ್ವೆಗಳ ಕಾಲದ ಅಸ್ಪಶ್ಯರ ಸ್ಥಿತಿಗತಿಯನ್ನು ಅಂಬೇಡ್ಕರರು ಹೀಗೆ ವಿವರಿಸುತ್ತಾ ಹೋಗುತ್ತಾರೆ.
- ಇದೇನು ಅಸ್ಪಶ್ಯರು ಮೇಲ್ಜಾತಿಗಳ ವಿರುದ್ಧ, ಅವರ ದೌರ್ಜನ್ಯದ ವಿರುದ್ಧ ನೇರಾನೇರ ಕಾದಾಟಕ್ಕಿಳಿದದ್ದಲ್ಲ. ಆದರೆ ಯಾವ ಜಾತಿ/ವರ್ಣವ್ಯವಸ್ಥೆಯಲ್ಲಿ ಶಸ್ತ್ರಹಿಡಿಯುವುದು ಇಂತಹ ಜಾತಿಗೆ/ವರ್ಣಕ್ಕೆ ಎಂದು ಮೀಸಲಾಗಿತ್ತೋ ಅಂತಹ ಶ್ರೇಣೀಕೃತ ಜಾತಿ ವ್ಯವಸ್ಥೆಯ ಸಮಯದಲ್ಲಿ ಬ್ರಿಟಿಷರ ಪರವಾಗಿ, ಅವರ ಸೇನೆಯಲ್ಲಿ ಸೈನಿಕರಾಗಿಯಷ್ಟೆ ಅಸ್ಪಶ್ಯ ಮಹಾರರು ಕಾದಾಡಿದ್ದು.
ಆ ಹೋರಾಟದ ಸಾಧಕ-ಬಾಧಕಗಳು
ಬದಲಾಯಿಸಿ- ಅಂಬೇಡ್ಕರರ ಬರಹಗಳು ಮತ್ತು ಭಾಷಣಗಳು, ಸಂಪುಟ 17, ಭಾಗ 3 (ಇಂಗ್ಲಿಷ್ ಆವೃತ್ತಿ) ಪುಟ.4ರ ಪ್ರಕಾರ ಹೇಳುವುದಾದರೆ ‘‘ಭೀಮಾ ನದಿಯ ತೀರದಲ್ಲಿದ್ದ ಆ ಕೋರೇಗಾಂವ್ ರಣಾಂಗಣದಲ್ಲಿ ಬಾಂಬೆ ರೆಜಿಮೆಂಟ್‌ನ ಕೇವಲ 500 ಜನ ಮಹಾರ್ ಕಾಲ್ದಳದ ಸೈನಿಕರು ಪೂನಾದ 250 ಅಶ್ವದಳದವರ ನೆರವಿನೊಂದಿಗೆ, ಜೊತೆಗೆ ಮದ್ರಾಸ್‌ನ 24 ಗನ್‌ಮೆನ್‌ಗಳ ಸಹಾಯದಿಂದ 20,000 ಅಶ್ವದಳವಿದ್ದ, 8,000 ದಷ್ಟು ಕಾಲ್ದಳವಿದ್ದ ಪೇಶ್ವೆಯ ಬೃಹತ್ ಸೇನೆಯ ವಿರುದ್ಧ 1818 ಜನವರಿ 1ರಂದು ಬೆಳಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆಯ ತನಕ ಸತತ 12 ಗಂಟೆಗಳು ಯಾವುದೇ ವಿಶ್ರಾಂತಿ-ಆಯಾಸವಿಲ್ಲದೆ, ಆಹಾರ-ನೀರಿನ ಪರಿವೆಯಿಲ್ಲದೆ ಕ್ಯಾಪ್ಟನ್ ಎಫ್.ಎಫ್.ಸ್ಟಾಂಟನ್‌ನ ನೇತೃತ್ವದಲ್ಲಿ ಜಯಿಸುತ್ತಾರೆ!’’
- ಕ್ಯಾಪ್ಟನ್ ಸ್ಟಾಂಟನ್‌ನ ನೇತೃತ್ವದಲ್ಲಿ ಸಿರೂರ್‌ನಿಂದ 1818 ಡಿಸೆಂಬರ್ 31ರ ರಾತ್ರಿ ಹೊರಟ ಮಹಾರ್ ಸೇನೆ ಸತತ 27ಕಿ.ಮೀ.ಗಳು ನಡೆದು ಮಾರನೆಯ ದಿನ 1ನೆ ತಾರೀಕು ಬೆಳಗ್ಗೆ ಕೋರೇಗಾಂವ್ ರಣಾಂಗಣವನ್ನು ತಲುಪುತ್ತದೆ. ಅದೇ ಸಮಯದಲ್ಲಿ ಮೂರೂ ದಿಕ್ಕುಗಳಿಂದಲೂ ತಲಾ 600ರಷ್ಟಿದ್ದ ಪೇಶ್ವೆಯ ಕಾಲ್ದಳದ 3 ತುಕಡಿಗಳು ಕ್ಯಾಪ್ಟನ್ ಸ್ಟಾಂಟನ್‌ನ ಪಡೆಯನ್ನು ಸುತ್ತುವರಿಯುತ್ತವೆ.
- ಅಲ್ಲದೆ ಪೇಶ್ವೆಯ ಈ ಸೈನ್ಯದ ಬೆಂಬಲಕ್ಕೆ ಬೃಹತ್ ಅಶ್ವದಳ, ರಾಕೆಟ್‌ದಳ ಬೇರೆ! ಒಟ್ಟಾರೆ ಸಂದಿಗ್ಧ ಸ್ಥಿತಿಯಲ್ಲಿ ಬ್ರಿಟಿಷ್ ಸೇನೆಯು ಪೇಶ್ವೆಗಳ ಕಾಲ್ದಳ ಮತ್ತು ಫಿರಂಗಿ ದಳಗಳಿಂದ ಸಂಪೂರ್ಣ ವೃತ್ತಾಕಾರ ಮಾದರಿಯಲ್ಲಿ ಸುತ್ತುವರಿಯುತ್ತದೆ. ಹೇಗೆಂದರೆ ಪಕ್ಕದಲ್ಲೇ ಇದ್ದ ಭೀಮಾನದಿಗೆ ಹೋಗುವ ದಾರಿಗಳೆಲ್ಲ ಬಂದ್ ಆಗುವ ಮಟ್ಟಿಗೆ! ಕಡೆಗೆ ವಿಧಿಯಿಲ್ಲದೆ ಎರಡೂ ದಳಗಳೂ ಕೋರೇಗಾಂವ್ ಗ್ರಾಮವನ್ನು ಪ್ರವೇಶಿಸುತ್ತವೆ.
- ಕೋರೇಗಾಂವ್ ಗ್ರಾಮವನ್ನು ಪ್ರವೇಶಿಸಿದ್ದೇ ತಡ ಎರಡೂ ಪಡೆಗಳೂ ಬೀದಿ ಬೀದಿಗಳಲ್ಲಿ, ಮನೆ-ಗುಡಿಸಲುಗಳ ಮುಂದೆ ಕೈ ಕೈ ಮಿಲಾಯಿಸುತ್ತಾ ನೇರಾ-ನೇರ ಕಾದಾಟಕ್ಕಿಳಿಯುತ್ತವೆ. ಅದರಲ್ಲೂ ಬಹುತೇಕ ಮಹಾರರೇ ತುಂಬಿದ್ದ ಬ್ರಿಟಿಷ್ ಸೈನ್ಯಕ್ಕೆ ಬಹಳ ಹಾನಿಯಾಗುತ್ತದೆ. ಆದರೂ ಎದೆಗುಂದದ ಮಹಾರ್ ಸೈನಿಕರು ಅತ್ಯುತ್ಕೃಷ್ಟ ಧೈರ್ಯದಿಂದ ಮುನ್ನುಗ್ಗುತ್ತಲೇ ಹೋಗುತ್ತಾರೆ.
- ಪಡೆಯ ನೇತೃತ್ವವಹಿಸಿದ್ದ ಕ್ಯಾಪ್ಟನ್ ಸ್ಟಾಂಟನ್‌ನಂತೂ ‘‘ಕಡೆಯ ಸೈನಿಕನಿರುವ ತನಕ, ಕಡೆಯ ಬುಲೆಟ್ ಇರುವ ತನಕ ಹೋರಾಡುತ್ತಲೇ ಇರಿ’’ ಎಂದು ಹುರಿದುಂಬಿಸುತ್ತಲೇ ಇರುತ್ತಾನೆ. ಪರಿಣಾಮವಾಗಿ ಮಹಾರ್ ಸೈನಿಕರು ಅತ್ಯಮೋಘ ಧೈರ್ಯದಿಂದ, ಎಲ್ಲ ದುರದೃಷ್ಟಗಳ ನಡುವೆ ಹೋರಾಡುತ್ತ ವೀರಾವೇಶದಿಂದ ಮುನ್ನುಗ್ಗುತ್ತಾರೆ.
- ಮಹಾರ್ ಸೈನಿಕರ ಅಂತಹ ಮುನ್ನುಗ್ಗುವಿಕೆಯಲ್ಲಿ ಅದೆಂತಹ, ಅದೆಷ್ಟು ಶತಮಾನಗಳ ನೋವಿನ ಆಕ್ರೋಶವಿತ್ತು? ತತ್ಫಲವಾಗಿ ಬಹುಸಂಖ್ಯೆಯಲ್ಲಿದ್ದರೂ ಕೂಡ ಪೇಶ್ವೆಯ ಸೈನ್ಯ ಹಿಮ್ಮೆಟ್ಟಿ ಸೋತು ರಾತ್ರಿ 9ಗಂಟೆಗೆ ಗುಂಡಿನ ದಾಳಿಯನ್ನು ನಿಲ್ಲಿಸುತ್ತದೆ. ಹಾಗೂ ವಿಧಿಯಿಲ್ಲದೆ ಕೋರೇಗಾಂವ್‌ನಿಂದ ರಾತ್ರೋರಾತ್ರಿ ಕಾಲ್ಕೀಳುತ್ತದೆ!
- ಒಟ್ಟಾರೆ ಅತ್ಯಮೋಘ ಧೈರ್ಯ ಮತ್ತು ಶಿಸ್ತುಬದ್ಧ ಶೌರ್ಯವನ್ನು ಪ್ರದರ್ಶಿಸಿದ ಮಹಾರ್ ಸೈನಿಕರು ಶೋಷಕ ಪೇಶ್ವೆಗಳ ವಿರುದ್ಧ ಅಭೂತ ಪೂರ್ವ ಜಯ ದಾಖಲಿಸುತ್ತಾರೆ. ಈ ಯುದ್ಧದ ನಂತರ ಮಹಾರಾಷ್ಟ್ರದಲ್ಲಿ ಪೇಶ್ವೆಗಳ ಆಡಳಿತ ಕೊನೆಗೊಳ್ಳುತ್ತದೆ. ಹಾಗೆಯೇ ಅಸ್ಪಶ್ಯರ ದಯನೀಯ ಸ್ಥಿತಿ ಕೂಡ ಸುಧಾರಣೆ ಕಾಣಲು ಆರಂಭಿಸುತ್ತದೆ.
- ಈ ಯುದ್ಧದಲ್ಲಿ ಜಯ ತಂದುಕೊಟ್ಟು ಮಡಿದ 22 ಮಹಾರ್ ಸೈನಿಕರ ಸ್ಮರಣಾರ್ಥ ಕೋರೇಗಾಂವ್‌ನಲ್ಲಿ ಮಹಾರ್ ಸೈನಿಕರು ಪ್ರಥಮ ಗುಂಡು ಸಿಡಿಸಿದ ಸ್ಥಳದಲ್ಲೇ 65 ಅಡಿ ಎತ್ತರದ ಒಂದು ಶಿಲಾಸ್ಮಾರಕ ಕೂಡ 1821 ಮಾರ್ಚ್ 26ರಂದು ನಿರ್ಮಾಣ ಗೊಳ್ಳುತ್ತದೆ ಹಾಗೂ ಆ ಸ್ಮಾರಕದಲ್ಲಿ ಮಡಿದ 22 ಸೈನಿಕರ ಜೊತೆಗೆ ಗಾಯಗೊಂಡವರ ಹೆಸರನ್ನೂ ಕೆತ್ತಿಸಲಾಗುತ್ತದೆ.
- ‘‘ಇತಿಹಾಸ ಮರೆತವರು ಇತಿಹಾಸ ಸೃಷ್ಟಿಸಲಾರರು’’ ಎಂದು ಹೇಳಿದ ಬಾಬಾಸಾಹೇಬ್ ಅಂಬೇಡ್ಕರರಿಗೆ ತನ್ನ ಜನರ ಇಂತಹ ಅದ್ಭುತ ಐತಿಹಾಸಿಕ ಜಯದ ಬಗ್ಗೆ ಬಹಳ ಹೆಮ್ಮೆ ಇತ್ತು. ಆ ಕಾರಣಕ್ಕಾಗಿ ಕೋರೆಗಾಂವ್‌ನಲ್ಲಿನ ಮಹಾರ್ ಸೈನಿಕರ ಈ ಸ್ಮಾರಕಕ್ಕೆ ಅಂಬೇಡ್ಕರರು ಪ್ರತಿ ವರ್ಷ ಸಕುಟುಂಬ ಸಮೇತರಾಗಿ ಭೇಟಿ ನೀಡುತ್ತಿದ್ದರು. ಅಲ್ಲದೆ ಅಗಲಿದ ಯೋಧರಿಗೆ ಬಾಬಾಸಾಹೇಬರು ತಮ್ಮ ಅಭೂತಪೂರ್ವ ನಮನ ಸಲ್ಲಿಸುತ್ತಿದ್ದರು.
- ಅಂಬೇಡ್ಕರರಿಗೆ ತಿಳಿದಿತ್ತು ಕೋರೇಗಾಂವ್‌ನಲ್ಲಿ ಮಹಾರ್ ಸೈನಿಕರು ಹೋರಾಡಿದ್ದು ಒಂದು ಸಾಮ್ರಾಜ್ಯದ ವಿರುದ್ಧವಲ್ಲ ವ್ಯವಸ್ಥೆಯ ವಿರುದ್ಧ, ಯಾವ ವ್ಯವಸ್ಥೆ ತಮ್ಮನ್ನು ಕೀಳಾಗಿ ಕಾಣುತ್ತಿತ್ತೋ ಪ್ರಾಣಿಗಳಿಗಿಂತ ಹೀನಾಯವಾಗಿ ನಡೆಸಿಕೊಳ್ಳುತ್ತಿತ್ತೋ ಅಂತಹ ದೌರ್ಜನ್ಯಕೋರ ಸಂಸ್ಕೃತಿಯ ವಿರುದ್ಧ ಎಂಬುದು. ಒಂದು ವೇಳೆ ಕೋರೇಗಾಂವ್ ಯುದ್ಧ ನಡೆಯದಿದ್ದರೆ ಪೇಶ್ವೆಗಳ ಅಟ್ಟಹಾಸ ಮತ್ತೂ ಮುಂದುವರಿದಿರುತ್ತಿತ್ತು.
- ಆ ಯುದ್ಧ ನಡೆದು 73 ವರ್ಷಗಳ ನಂತರ(1891) ಹುಟ್ಟಿದ ಅಂಬೇಡ್ಕರರು ಶಿಕ್ಷಣ ಪಡೆದು, ವಿದೇಶಿ ವ್ಯಾಸಂಗಕ್ಕೆ ತೆರಳಿ ಸಂವಿಧಾನಶಿಲ್ಪಿಯಾಗಲು ಇದು ಕಾರಣೀಭೂತವಾಯಿತು. ಈ ನಿಟ್ಟಿನಲ್ಲಿ ಕೋರೇಗಾಂವ್ ಯುದ್ಧ ಅಸ್ಪಶ್ಯರ ಹೋರಾಟದ ಇತಿಹಾಸದಲ್ಲಿ ಒಂದು ಅಪರೂಪದ ಮೈಲುಗಲ್ಲಾಗಿ ಉಳಿಯುತ್ತದೆ. ಹಾಗೆಯೇ ಸ್ಫೂರ್ತಿಯ ಸಂಕೇತವೂ ಅದಾಗುತ್ತದೆ.
ನೋಡಿ
ಬದಲಾಯಿಸಿ
ಆಕರ ಗ್ರಂಥಗಳು
ಬದಲಾಯಿಸಿ- ಅಂಬೇಡ್ಕರರ ಬರಹಗಳು ಮತ್ತು ಭಾಷಣಗಳು, ಸಂಪುಟ 17, ಭಾಗ 3 (ಇಂಗ್ಲಿಷ್ ಆವೃತ್ತಿ) ಪುಟ.4
- ಕೋರೇಗಾಂವ್: ದಿ ಗ್ರೇಟ್ ಫೈಟ್!* - ರಘೋತ್ತಮ ಹೊ.ಬ
- Shraddha Kumbhojkar (2015). "Politics, caste and the remembrance of the Raj: the Obelisk at Koregaon". In Dominik Geppert and Frank Lorenz Müller (ed.). Sites of Imperial Memory: Commemorating Colonial Rule in the Nineteenth and Twentieth Centuries. Oxford University Press. ISBN 978-0-7190-9081-3.
{{cite book}}
: Invalid|ref=harv
(help)
ಉಲ್ಲೇಖ
ಬದಲಾಯಿಸಿ- ↑ ಉಲ್ಲೇಖ ದೋಷ: Invalid
<ref>
tag; no text was provided for refs namedGazetteer1885
- ↑ http://kannadanet.com/koppal-breaking-news/blog-post_4-21/
- ↑ http://janashakthi.co.in/node/2823
- ↑ http://kannadanet.com/koppal-breaking-news/8-2/