, ಕನ್ನಡ ವರ್ಣಮಾಲೆಯ ಕ-ವರ್ಗದ ಮೂರನೇ ಅಕ್ಷರವಾಗಿದೆ. ಈ ಅಕ್ಷರ ಕಂಠ ಘೋಷ ಸ್ಪರ್ಶ ಧ್ವನಿ. ಅಲ್ಪಪ್ರಾಣಾಕ್ಷರ.

ಕನ್ನಡ ಅಕ್ಷರಮಾಲೆ
ಸ್ವರಗಳು
ಯೋಗವಾಹಗಳು
ವರ್ಗೀಯ ವ್ಯಂಜನಗಳು
ಜ಼
ಫ಼
ಅವರ್ಗೀಯ ವ್ಯಂಜನಗಳು

ಚಾರಿತ್ರಿಕ ಹಿನ್ನೆಲೆಸಂಪಾದಿಸಿ

ಇದರ ಅತ್ಯಂತ ಪ್ರಾಚೀನ ಸ್ವರೂಪವನ್ನು ಅಶೋಕನ ಕಾಲದ ಬ್ರಾಹ್ಮೀ ಶಾಸನಗಳಲ್ಲಿ ಕಾಣಬಹುದು. ಕೆಳಭಾಗದ ರೇಖೆಯಿಲ್ಲದಿರುವ ಸಮಭುಜ ತ್ರಿಕೋನದಂತೆ ಕಾಣುವ ಮೌರ್ಯರ ಕಾಲದ ಈ ಅಕ್ಷರದ ಸ್ವರೂಪ ಶಾತವಾಹನ ಕಾಲದಲ್ಲಿ ದುಂಡಗಾಗಿ ಹಿಡಿ ಮತ್ತು ನಾಲೆ ಇಲ್ಲದ ಘಂಟಾಕೃತಿಯನ್ನು ತಾಳುತ್ತದೆ. ಕದಂಬರ ಶಾಸನಗಳಲ್ಲಿ ಪೇಟಿಕಾಶಿರದ ತಲೆಕಟ್ಟು ಬಂದು ಸೇರುತ್ತದೆ. ಅಲ್ಲಿಂದ ಮುಂದೆ ಈ ಅಕ್ಷರ ಹೆಚ್ಚು ಬದಲಾವಣೆಗಳಿಲ್ಲದೆ ಮುಂದುವರಿದು ಈಗಿರುವ ರೂಪವನ್ನು ತಾಳುತ್ತದೆ. ಪ್ರಾಚೀನ ಬ್ರಾಹ್ಮೀ ಲಿಪಿಯಿಂದ ಹೆಚ್ಚು ಬದಲಾವಣೆ ಹೊಂದದ ಅಕ್ಷರಗಳಲ್ಲಿ ಇದು ಮುಖ್ಯವಾದುದು. ಈ ಅಕ್ಷರ ಕಂಠ್ಯ ಘೋಷ ಸ್ಪರ್ಶಧ್ವನಿಯನ್ನು ಸೂಚಿಸುತ್ತದೆ.

ವಿಕಿಸೋರ್ಸ್ ತಾಣದಲ್ಲಿ ಈ ವಿಷಯಕ್ಕೆ ಸಂಬಂಧಪಟ್ಟ ಮೂಲಕೃತಿಗಳು ಇವೆ:
"https://kn.wikipedia.org/w/index.php?title=ಗ&oldid=1099825" ಇಂದ ಪಡೆಯಲ್ಪಟ್ಟಿದೆ