ಗಜೇಂದ್ರ ಮೋಕ್ಷ ಎನ್ನುವುದು ಹಿಂದೂ ಧರ್ಮದಲ್ಲಿನ ಒಂದು ಪವಿತ್ರವಾದ ಪಠ್ಯವಾದ ಭಾಗವತ ಪುರಾಣದ ೮ನೇ ಸ್ಕಂಧದಲ್ಲಿರುವ ಒಂದು ಪೌರಾಣಿಕ ಕಥೆ.

ವಿಷ್ಣು ಗಜೇಂದ್ರನನ್ನು ಕಾಪಾಡುತ್ತಾನೆ

ಆಪತ್ಕಾಲದಲ್ಲಿ ಭಗವಂತನ ನಾಮಸ್ಮರಣೆ ಮಾಡಿದರೆ ಬೆಟ್ಟದಂತೆ ಬಂದ ಕಷ್ಟಗಳು ಮಂಜಿನಂತೆ ಕರಗುವುವು ಎಂಬುದಕ್ಕೆ ಇದೊಂದು ದೃಷ್ಟಾಂತ. ಇದನ್ನು ಭಾಗವತದಲ್ಲಿ ಪ್ರಸ್ತಾಪಿಸಲಾಗಿದೆ.

ಇಂದ್ರದ್ಯುಮ್ನ ಪಾಂಡ್ಯದೇಶದ ರಾಜ. ವಿಷ್ಣುಭಕ್ತ. ಒಮ್ಮೆ ತ್ರಿಕೂಟಾಚಲದ ಕಣಿವೆಯಲ್ಲಿ ಮೌನ ತಪಸ್ಸಿನಲ್ಲಿದ್ದಾಗ ತನ್ನಲ್ಲಿಗೆ ಬಂದ ಅಗಸ್ತ್ಯ ಮಹರ್ಷಿಯನ್ನು ಗೌರವಿಸದ ಕಾರಣ ಋಷಿ ಶಾಪಕ್ಕೆಡೆಯಾಗಿ ಗಜ ಜನ್ಮ ಪಡೆದ. ಹೀಗೆ ಇಂದ್ರದ್ಯುಮ್ನ ಆನೆಯಾಗಿ ಕೊಳದಲ್ಲಿ ನೀರು ಕುಡಿಯುತ್ತಿದ್ದಾಗ ಮೊಸಳೆಯೊಂದು ಬಂದು ಆತನ ಕಾಲು ಹಿಡಿಯಿತು. ಏನು ಮಾಡಿದರೂ ತನ್ನನ್ನು ಮೊಸಳೆ ಬಿಡದೆ ಇದ್ದುದನ್ನು ಕಂಡು ಇಂದ್ರದ್ಯುಮ್ನನಿಗೆ ಪೂರ್ವಜನ್ಮದ ಸ್ಮರಣೆಯುಂಟಾಗಿ ಬಿಡುಗಡೆಗಾಗಿ ವಿಷ್ಣುವನ್ನು ಪ್ರಾರ್ಥಿಸಿದ.[] ಆಗ ವಿಷ್ಣು ಪ್ರತ್ಯಕ್ಷನಾಗಿ ಮೊಸಳೆಯನ್ನು ಕೊಂದು ಇಂದ್ರದ್ಯುಮ್ನನು ಶಾಪಮುಕ್ತನಾಗುವಂತೆ ಮಾಡಿದ.

ಉಲ್ಲೇಖಗಳು

ಬದಲಾಯಿಸಿ
  1. "Story of Gajendra Moksha". DNA Of Hinduism (in ಇಂಗ್ಲಿಷ್). Retrieved 2021-11-11.

ಹೊರಗಿನ ಕೊಂಡಿಗಳು

ಬದಲಾಯಿಸಿ
 
ವಿಕಿಸೋರ್ಸ್ ನಲ್ಲಿ ಲಭ್ಯವಿರುವ ಲೇಖನದ ವಿಷಯವನ್ನು ಇಲ್ಲಿ ಅಳವಡಿಸಲಾಗಿದೆ: