ಗಲಗಲಿ
ಗಲಗಲಿ ಒಂದು ಗ್ರಾಮ ಹಾಗೂ ಪುಣ್ಯಕ್ಷೇತ್ರ.ಇದು ಕರ್ನಾಟಕ ರಾಜ್ಯದ ಬಾಗಲಕೋಟ ಜಿಲ್ಲೆಯ ಬೀಳಗಿ ತಾಲ್ಲೂಕಿನಲ್ಲಿದೆ. ಗಲಗಲಿ ಗ್ರಾಮವು ಮುಧೋಳ - ಬೀಳಗಿ ರಾಜ್ಯ ಹೆದ್ದಾರಿಯಲ್ಲಿ ಇದೆ. ಜಿಲ್ಲಾ ಕೇಂದ್ರ ಬಾಗಲಕೋಟದಿಂದ ಸುಮಾರು ೫೦ ಕಿ. ಮಿ. ದೂರ ಇದೆ.
ಗಲಗಲಿ
ಗಲಗಲಿ | |
---|---|
village | |
Population (೨೦೧೨) | |
• Total | ೧೫೦೦೦ |
ಚರಿತ್ರೆ
ಬದಲಾಯಿಸಿಗ್ರಾಮವು ಗಾಲವ ಮಹರ್ಷಿಗಳ ತಪೋಭೂಮಿಯಾಗಿತ್ತು.
ದೇವಾಲಯಗಳು
ಬದಲಾಯಿಸಿಶ್ರೀ ಮಹಾಲಕ್ಷ್ಮಿ ದೇವಸ್ಥಾನ, ಶ್ರೀ ಚಂದ್ರಗಿರಿ ದೇವಸ್ಥಾನ, ಪಾಂಡುರಂಗ - ವಿಠ್ಠಲ ದೇವಸ್ಥಾನ ಹಾಗೂ ಶ್ರೀ ಹಣಮಂತ ದೇವಾಲಯಗಳನ್ನು ನಿರ್ಮಿಸಿದ್ದಾರೆ.
ಮಸೀದಿಗಳು
ಬದಲಾಯಿಸಿಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.
ನೀರಾವರಿ
ಬದಲಾಯಿಸಿಗ್ರಾಮದ ಪ್ರತಿಶತ ೯೦ ಭಾಗ ಭೂಮಿ ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.
ಹಬ್ಬಗಳು
ಬದಲಾಯಿಸಿಪ್ರತಿವರ್ಷ ಶ್ರೀ ಚಂದ್ರಗಿರಿ ಜಾತ್ರಾ ಮಹೋತ್ಸ ವ , ಶ್ರೀ ಪಾಂಡುರಂಗ ಸಪ್ತಾಹ(ದಿಂಡಿ), ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಬಸವ ಜಯಂತಿ,ಗಣೇಶ ಹಬ್ಬಗಳನ್ನು ಆಚರಿಸುತ್ತಾರೆ.
ಶಿಕ್ಷಣ
ಬದಲಾಯಿಸಿಗ್ರಾಮದಲ್ಲಿ ಸರಕಾರಿ ಹಿರಿಯ ಗಂಡು ಮಕ್ಕಳ ಪ್ರಾಥಮಿಕ ಶಾಲೆ, ಸರಕಾರಿ ಹಿರಿಯ ಹೆಣ್ಣು ಮಕ್ಕಳ ಪ್ರಾಥಮಿಕ ಶಾಲೆ ಹಾಗೂ ಸರಕಾರಿ ಹಿರಿಯ ಉರ್ದು ಪ್ರಾಥಮಿಕ ಇವೆ.ಅದರಂತೆ ಪ್ರೌಡ ಶಾಲೆ, ಪದವಿಪೂರ್ವ ಕಲಾ ಮಹಾವಿದ್ಯಾಲಯ, ಕೈಗಾರಿಕಾ ತರಬೇತಿ ಕೇಂದ್ರಗಳು ಒಳ್ಳೆಯ ಶಿಕ್ಷಣ ನೀಡುತ್ತಿವೆ.
ಸಾಹಿತ್ಯ
ಬದಲಾಯಿಸಿಗ್ರಾಮದಲ್ಲಿ ಪಂಡರಿನಾಥಾಚಾರ್ಯ ಗಲಗಲಿ,ಸತ್ಯಕಾಮರು ಸಾಹಿತಿಗಳಾಗಿದ್ದಾರೆ.
ಆರೋಗ್ಯ
ಬದಲಾಯಿಸಿಗ್ರಾಮದಲ್ಲಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವಿದೆ.
ಆರಕ್ಷಕ (ಪೋಲಿಸ್) ಠಾಣೆ
ಬದಲಾಯಿಸಿಗ್ರಾಮವು ಉಪ ಪೋಲಿಸ್ ಠಾಣೆ ಹೊಂದಿದೆ.
ವಿದ್ಯುತ್ ಪರಿವರ್ತನಾ ಕೇಂದ್ರ
ಬದಲಾಯಿಸಿ೩೩ಕೆವಿ ವಿದ್ಯುತ್ ಪರಿವರ್ತನಾ ಕೇಂದ್ರವು ಗ್ರಾಮದ ಹಾಗೂ ಸುತ್ತಲಿನ ಹಳ್ಳಿಗಳಿಗೆ ವಿದ್ಯುತ್ ಒದಗಿಸುತ್ತದೆ.
ಉಲ್ಲೇಖ
ಬದಲಾಯಿಸಿಗಲಗಲಿಯು ಇತ್ತೀಚಿನ ದಿನಗಳಲ್ಲಿ ಇಲ್ಲಿಯ ಗುಣಮಟ್ಟದ ಮತ್ತು ರುಚಿಕರವಾದ ಸಿಹಿ ಪದಾರ್ಥವಾದ ಪೆಡೆಗೆ ಹೆಸರುವಾಸಿ ಆಗಿದೆ ಅದರಲ್ಲಿ ಪ್ರಮುಖವಾಗಿ ಬನಶಂಕರಿ ಪೆಡೆ ತುಂಬಾ ಜನರು ಇಷ್ಟ ಪಡೂ ಪೆಡೆ ಅಗಿದೆ.....