ಗೌರಿ ಮೊರದ ಬಾಗಿನಕ್ಕೆ [] ಸಂಸ್ಕೃತದಲ್ಲಿ 'ವೇಣುಪಾತ್ರ' ಎಂದು ಕರೆಯುತ್ತಾರೆ. ಭಾದ್ರಪದ ಶುಕ್ಲ ತದಿಗೆ ಹೆಣ್ಣುಮಕ್ಕಳಿಗೆ ಸಂಭ್ರಮದ ಹಬ್ಬ. ಇದೇ ಗೌರೀ ತದಿಗೆ. ಇದು ಸೌಭಾಗ್ಯಪ್ರದವಾದ ವ್ರತ. ದೊಡ್ಡಗೌರೀ ಮುಂತಾದ ಹೆಸರಿನಿಂದ ಪ್ರಸಿದ್ಧವಿದೆ. ತಳಿರುತೋರಣಗಳಿಂದ ಅಲಂಕೃತವಾದ ಮಂಟಪದ ಮಧ್ಯದಲ್ಲಿ ಗೌರಿಯ ಪ್ರತಿಮೆಯನ್ನು ಅಥವಾ ಪ್ರತಿಕೃತಿಯನ್ನು ಇಟ್ಟು ಷೋಡಶೋಪಚಾರಗಳಿಂದ ಪೂಜಿಸಿ ವ್ರತಕಥೆಯನ್ನು ಕೇಳುತ್ತಾರೆ ಮತ್ತು ಮೊರದ ಬಾಗಿನವನ್ನು ಕೊಡುತ್ತಾರೆ.

ಗೌರಿ ಪೆಟ್ಟಿಗೆಯಲ್ಲಿ ಇಡುವ ವಿಗ್ರಹ ಪೂಜೆ ಮಾಡುವವರ ಎದುರು ಇಡಬೇಕು. ಪೆಟ್ಟಿಗೆಯ ಮುಚ್ಚಳ ನಮ್ಮನ್ನು ಎದುರುಗೊಳ್ಳಬೇಕು.

ಬಾಗಿನ ತಯಾರಿಸುವ ವಿಧಾನ

ಬದಲಾಯಿಸಿ
  • ಸ್ವರ್ಣಗೌರಿ ವ್ರತದಂದು ಕೊಡುವ ಬಾಗಿನವನ್ನು ತಯಾರಿಸುವುದೇ ಹೆಣ್ಣುಮಕ್ಕಳಿಗೆ ಬಲು ಪ್ರಮುಖ ಕೆಲಸ. ಇದನ್ನು ತಯಾರಿಸುವುದರಲ್ಲೂ ವಿಧಾನಗಳಿವೆ. ಸ್ವರ್ಣಗೌರಿ ಹಬ್ಬದ ಬಾಗಿನಕ್ಕೆ ಹೊಸ ಮೊರಗಳನ್ನು ಹಬ್ಬಕ್ಕೆ ಮುಂಚಿನ ಅಮವಾಸ್ಯೆಗೆ ಮೊದಲೇ ತೊಳೆದು ಒಣಗಿಸಿ ಮೊರಗಳಿಗೆ ಅರಿಶಿನ ಹಚ್ಚಬೇಕು.
  • ದೊಡ್ಡವರಿಗೆ ಎರಡು ಜೊತೆ ದೊಡ್ಡ ಮೊರ, ಚಿಕ್ಕವರಿಗೆ ಒಂದು ಜೊತೆ ಸಣ್ಣಮೊರಕ್ಕೆ ಮಧ್ಯದಲ್ಲಿಕುಂಕುಮ ಇಟ್ಟುಕೆಳಗೆ ಮೇಲೆ ಚಂದ್ರ (ಕೇಸರಿ ಬಣ್ಣವಿರುತ್ತದೆ.) ಮತ್ತು ಕಾಡಿಗೆ ಚುಕ್ಕೆಗಳನ್ನು ಇಡಬೇಕು. ಐದು ಎಳೆ ಅರಿಶಿನ ದಾರಕ್ಕೆ ಒಂದು ಅರಿಶಿನದ ಕೊನೆಕಟ್ಟಿ ಮೇಲೆ ಮುಚ್ಚುವ ಮೊರಕ್ಕೆ ಕಟ್ಟಬೇಕು.

ಹದಿನಾರು ಸಂಖ್ಯೆಯ ವಿಶೇಷ ಮಹತ್ವ

ಬದಲಾಯಿಸಿ
  • ಬಾಗಿನದ ಈ ಮೊರಗಳಿಗೆ 16 ಬಟ್ಟಲಡಿಕೆ, 16 ಅರಿಶಿನ ಕೊನೆ, 16 ವೀಳ್ಯದೆಲೆ, ನಾಲ್ಕು ಕಪ್ಪು ಬಣ್ಣದ ಚಿಕ್ಕ ಗೌರಿ ಬಳೆ, ಎರಡು ಬಿಚ್ಚೋಲೆ, ಕರಿಮಣಿ, ಅರಿಶಿನ ಕುಂಕುಮದ ತಲಾ ಎರಡೆರಡು ಡಬ್ಬಿಗಳು, ಗೌರಿದಾರ, ಒಂದು ಕಾಡಿಗೆ ಡಬ್ಬಿ, ಒಂದು ಕನ್ನಡಿ, ಒಂದು ಬಾಚಣಿಗೆ, ಗಾಜಿನ ಬಳೆಗಳು ಒಂದು ಡಜನ್‌ ಬೆಳ್ಳಿಯ ಅಥವ ವೈಟ್‌ ಮೆಟಲ್‌ನ ಕಾಲುಂಗುರಗಳು ಒಂದು ಜೊತೆ, ಎರಡು ಹವಳದ ಮಣಿ, ಎರಡು ಮುತ್ತಿನ ಮಣಿ, ಒಂದು ಗ್ರಾಂ ಚಿನ್ನದ ತಾಳಿ ಬೊಟ್ಟು ಒಂದು, ದುಂಡನೆಯ ಕುಂಕುಮವಿಡಲು ವೈಟ್‌ ಮೆಟಲ್‌/ಬೆಳ್ಳಿಯ ಒಂದು ಬೊಟ್ಟಿನ ಕಡ್ಡಿ (ಮೊಳೆತರಹ ಇರುತ್ತದೆ.)
  • 16 ಎಳೆ ಹಸಿದಾರಕ್ಕೆ ಅರಿಶಿನ ನೀರು ಹಚ್ಚಿ16 ಗಂಟು ಹಾಕಿ ಅದರಲ್ಲಿಒಂದು ಗಂಟಿಗೆ ಹೂವು ಮತ್ತು ಪತ್ರೆ ಸೇರಿಸಿ ಕಟ್ಟಬೇಕು. ಗೌರಿಗೆ ಪೂಜೆಯ ನಂತರ ಮುತ್ತೈದೆಯರನ್ನು ಪೂರ್ವ ಅಥವ ಪಶ್ಚಿಮದ ಕಡೆಗೆ ಮುಖ ಮಾಡಿ ಕುಳ್ಳಿರಿಸಿ ಅವರ ಅಂಗೈ, ಅಂಗಾಲುಗಳಿಗೆ ಅರಿಶಿನದ ನೀರು ಹಚ್ಚಿ, ಕುಂಕುಮ ಹೂವು ಕೊಟ್ಟು ಬಾಗಿನ ಮುಚ್ಚಿ ಒಂದು ಉದ್ದರಣೆ ನೀರು, ಅಕ್ಷತೆ ಹಾಕಿ ನಮ್ಮ ಸೆರಗನ್ನು ಅದರ ಮೇಲಿಟ್ಟು ಕೊಡಬೇಕು.
  • ಬಾಗಿನ ತೆಗೆದುಕೊಳ್ಳುವ ಮುತ್ತೈದೆ ಸಹ ತಮ್ಮ ಸೀರೆಯ ಸೆರಗನ್ನು ಭುಜದ ಮೇಲಿಂದ ಮುಂದಕ್ಕೆ ತಂದು ಎರಡೂ ಕೈಗಳಿಂದ ಬಾಗಿನವನ್ನು ಹಿಡಿದುಕೊಂಡು ಅಡ್ಡಡ್ಡ ಉದ್ದುದ್ದ ಅಲ್ಲಾಡಿಸಬೇಕು. ಮೇಲಿನ ಮುಚ್ಚಳವಿರುವ ಮೊರವನ್ನು ತುಂಬಿರುವ ಮೊರದ ಕೆಳಕ್ಕೆ ಇಟ್ಟು ಎರಡೂ ಮೊರಗಳನ್ನು ಮತ್ತೆ ಅಡ್ಡ ಉದ್ದ ಅಲ್ಲಾಡಿಸಿ ಕೊಡಬೇಕು.

ಹದಿನೈದು ಮುತ್ತೈದೆಯರಿಗೆ

ಬದಲಾಯಿಸಿ
  • ಮದುವೆಯಾದ ಹೆಣ್ಣು ಮಕ್ಕಳಿಗೆ ಮೊದಲ ವರ್ಷದ ಗೌರಿ ಹಬ್ಬ ತುಂಬಾ ವಿಜೃಂಭಣೆಯಿಂದ ಮಾಡುತ್ತಾರೆ. 16 ಮೊರದ ಬಾಗಿನಗಳನ್ನು ಮೇಲೆ ಹೇಳಿದ ರೀತಿಯಲ್ಲಿ ತಯಾರಿಸಿ ಗೌರಿಗೆ ಎಲ್ಲಾ ಬಾಗಿನಗಳನ್ನು ತೋರಿಸಿ ನಂತರ 15 ಮುತ್ತೈದೆ ಯರಿಗೆ ಬಾಗಿನ ಕೊಡುತ್ತಾರೆ. ಒಂದು ಬಾಗಿನವನ್ನು ಮನೆಯಲ್ಲಿ ಇಟ್ಟುಕೊಳ್ಳಬೇಕು.
  • ಬಾಗಿನದಲ್ಲಿ ಅವರ ಶಕ್ತಿಗೆ ಅನುಸಾರವಾಗಿ ಬೆಳ್ಳಿ, ಬಂಗಾರದ ಸಣ್ಣ ವಸ್ತುಗಳನ್ನು ಹಾಕಿ ಕೊಡುತ್ತಾರೆ. ಮೊರದ ಬಾಗಿನದ ಮೇಲೆ ಇತ್ತೀಚೆಗೆ ಕುಂದನ್‌ ಅಥವ ಚಮಕಿ ಗೋಲ್ಡನ್‌ ರಿಬ್ಬನ್‌ಗಳಿಂದ ಅಲಂಕರಿಸಿ ಕೊಡುತ್ತಾರೆ. ಮುತ್ತೈದೆಯ ಕಾಲಿಗೆ ನಮಸ್ಕರಿಸಿ ಆಶೀರ್ವಾದ ತೆಗೆದುಕೊಳ್ಳಬೇಕು.
  • ಅವರಿಗೆ ಪಾನಕ ಕೋಸಂಬರಿ ಸಹ ಕೊಟ್ಟು ಕೈ ದಾರ ಕಟ್ಟಿಸಿಕೊಳ್ಳಬೇಕು. ಸ್ವರ್ಣಗೌರಿಗೆ ಷೋಡಶೋಪಚಾರ ಸೇವೆ ಮಾಡಿ ಸಂತೃಪ್ತಿಪಡಿಸುವಂತೆ ಷೋಡಶ ಮಂಗಳದ್ರವ್ಯ ಗಳನ್ನು ಮೊರದ ಬಾಗಿನಕ್ಕೆ ಹಾಕಿ ಮುತ್ತೈದೆಗೆ ಕೊಟ್ಟು ಆಧರಿಸಬೇಕು.

ಸೀರೆಯ ಸೆರಗಿನಲ್ಲಿ ಮಹಾಲಕ್ಷ್ಮೀಯು ಸೌಭಾಗ್ಯ ರೂಪದಲ್ಲಿರುವುದರಿಂದ ಸೆರಗು ಹಿಡಿದು ಮರದ ಬಾಗಿನ ಕೊಡುತ್ತಾರೆ.

  • ಮೊರದಬಾಗಿನದಲ್ಲಿ ನಾರಾಯಣನ ಅಂಶ ಇರುತ್ತದೆ. ಮೊರವೆಂಬ ನಾರಾಯಣ ಮತ್ತು ಒಳಗಿರುವ ಲಕ್ಷ್ಮಿಯರ ತರಹ ಜೊತೆಯಲ್ಲಿ, ದಂಪತಿಗಳು ಲಕ್ಷ್ಮೀ-ನಾರಾಯಣರ ತರಹ ಇರಲಿ ಅನ್ನೋ ಕಾರಣಕ್ಕೆ ಮತ್ತು ಸುಮಂಗಲಿತನ ಯಾವಾಗಲೂ ಇರಲಿ ಅನ್ನೋ ಕಾರಣಕ್ಕೆ ೧೬ ಸುಮಂಗಲೀ ದೇವತೆಗಳ ಸಾಕ್ಷಿಯಾಗಿ, ಬಾಗಿನ ಕೊಡುತ್ತಾರೆ.
  • ಬಾಗಿನವನ್ನು ಹೊತ್ತು ಸಂಭ್ರಮದಿಂದ ಓಡಾಡುವ ಸುಮಂಗಲಿಯರನ್ನು ಅಂದಿನಿಂದ ಒಂದು ವಾರಗಳ ಕಾಲ ನೋಡಬಹುದು. ಶ್ರಾವಣ ಮಾಸದಲ್ಲಿ ಪ್ರತಿ ಮಂಗಳವಾರವೂ ಕಲಶದಲ್ಲಿ ಮಂಗಳಗೌರಿಯನ್ನು ಆವಾಹನ ಮಾಡಿ ಸ್ತ್ರೀಯರು ಷೋಡಶೋಪಚಾರಗಳಿಂದ ಪೂಜೆ ಮಾಡುತ್ತಾರೆ.

ಮಕ್ಕಳ ಬಾಗಿನ

ಬದಲಾಯಿಸಿ
  • ಮಕ್ಕಳ ಬಾಗಿನಕ್ಕೆ ಕಾಲಕ್ಕೆ ತಕ್ಕಂತೆ ಬರುವ ಫ್ಯಾಷನಬಲ್‌ ಶೃಂಗಾರ ಸಾಧನಗಳು (ಬಳೆ, ಬಿಂದಿ, ಹೇರ್‌ ಕ್ಲಿಪ್‌, ನೈಲ್‌ ಪಾಲಿಶ್‌, ಸರ, ಓಲೆ ಮತ್ತು ರುಮಾಲು ಇತ್ಯಾದಿ)ಹಾಕಿ ಜೊತೆಗೆ ಹಣ್ಣುಗಳು ಸಣ್ಣ ತೆಂಗಿನಕಾಯಿ ವಿಳ್ಳೇದೆಲೆ ಅಡಿಕೆ, ಸಹ ಸೇರಿಸುತ್ತಾರೆ. ಈ ಬಾಗಿನವನ್ನು ಸಮವಯಸ್ಕ ಕನ್ನಿಕೆಗೆ ಕೊಡಿಸುತ್ತಾರೆ. ಒಟ್ಟಿನಲ್ಲಿ ಈ ಹಬ್ಬ ಹೆಣ್ಣು ಮಕ್ಕಳಿಗೆ ತುಂಬಾ ಖುಷಿ ಮತ್ತು ಸಂಭ್ರಮವನ್ನು ತರುತ್ತದೆ.
  • ಮೊರದ ಬಾಗಿನದ ಬದಲು ಉಪಯೋಗವಾಗುವಂತಹ ಫ್ರೂಟ್‌ ಬಾಕ್ಸ್‌ಗಳನ್ನು ಸಹ ಕೊಡುವುದು ರೂಢಿಯಿದೆ. ಕುಂಕುಮ ಇಡುವ ಮುಂಚೆ ಬೊಟ್ಟಿನ ಪೇಸ್ಟ್‌ನ ಒಂದು ಚಿಕ್ಕ ಡಬ್ಬಿ. ಒಂದು ತೆಂಗಿನಕಾಯಿ, ಒಂದು ಸೌತೇಕಾಯಿ, ಒಂದು ಮುಸುಕಿನ ಜೋಳ, ಐದು ತರಹದ ಹಣ್ಣುಗಳು, ಒಂದು ರವಿಕೆ ಪೀಸ್‌, ಅಕ್ಕಿ, ತೊಗರಿಬೇಳೆ, ಬೆಲ್ಲ, ಕಡ್ಲೆಬೇಳೆ, ಹೆಸರುಬೇಳೆ, ರವೆ, ಎಲ್ಲವನ್ನು ಒಂದೊಂದು ಪ್ರತ್ಯೇಕವಾಗಿ ಕವರಿಗೆ ಹಾಕಿ, ಮುಚ್ಚಿ ದೊಡ್ಡವರ ಮತ್ತು ಮಕ್ಕಳ ಬಾಗಿನದ ಮೊರಗಳಿಗೆ ಹಾಕಬೇಕು. ಐದು ರೂ. ದಕ್ಷಿಣೆ ಹಾಕಿಡಬೇಕು.
  • ಇನ್ನು ಹಬ್ಬದ ದಿನ ಮನೆಯಲ್ಲಿ ಚಿಕ್ಕ ಹೆಣ್ಣು ಮಕ್ಕಳು (ಕನ್ನಿಕೆಯರು) ಇದ್ದರೆ ಅವರಿಗಾಗಿ ಚಿಕ್ಕ ಗೌರಿ ತಂದು ಸ್ಥಾಪಿಸಿ ಚಿಕ್ಕ ಚಿಕ್ಕ ಪೂಜೆ ಸಾಮಾನುಗಳನ್ನು ತಟ್ಟೆಯಲ್ಲಿ ಜೋಡಿಸಿಕೊಂಡು ಪೂಜೆ ಮಾಡಿಸುತ್ತಾರೆ.

ಗೌರಿಹಬ್ಬದ ಮರದ ಬಾಗಿನದಲ್ಲಿ ಹಾಕುವ ಪದಾರ್ಥಗಳು ಮತ್ತು ಅವಕ್ಕೆ ಸಂಬಂಧಿಸಿದ ದೇವತೆಗಳು

ಬದಲಾಯಿಸಿ
  • ಮೊರದ ಬಾಗಿನಕ್ಕೆ ಅಣಿಯಾದ ಮೊರವನ್ನು ಶುಭ್ರಗೊಳಿಸಿ ಅದಕ್ಕೆ ಅರಿಶಿನ, ಕುಂಕುಮ ಹಚ್ಚಿ ಚೆನ್ನಾಗಿ ಆರಿಸಿ ನಂತರ ಧಾನ್ಯಗಳು, ತೆಂಗಿನಕಾಯಿ, ಬಳೆ-ಬಿಚ್ಚೋಲೆ, ಕನ್ನಡಿ, ಬಳೆಗಳು, 5 ಬಗೆಯ ಹಣ್ಣುಗಳು, ರವಿಕೆ ಕಣ, ತಾಯಿಗೆ ಹಾಗೆ ಅತ್ತಿಗೆ, ನಾದಿನಿಯರಿಗೆ ಸೀರೆಯನ್ನು ಹಾಕಿ, ಸುಮಂಗಲಿಯರು ಉಪಯೋಗಿಸುವ ವಸ್ತುಗಳು, ಭಕ್ಷ್ಯಗಳು ಹಾಕಿ ಮೊರದ ಬಾಗಿನ ಸಿದ್ಧ ಪಡಿಸಬೇಕು.
  • ದೇವಿಯನ್ನು ಸ್ಥಾಪನೆ ಮಾಡುವ ಸ್ಥಳವನ್ನು ಶುಭ್ರವಾಗಿ ಅಲಂಕರಿಸಿ, ಗೌರಿ ಮೂರ್ತಿಯನ್ನು ಶೃಂಗರಿಸಿ, ತೋರಣದಿಂದ ಮಂಟಪವನ್ನು ಹಾಗೆ ಮನೆಯ ಮುಂಬಾಗಿಲನ್ನು ಅಲಂಕರಿಸಬೇಕು. ಪತ್ರೆಗಳನ್ನು, ಹೂವುಗಳನ್ನು, ಹೂವಿನ ಮಾಲೆಗಳನ್ನು ಕಟ್ಟಿ, 5 ತೆಂಗಿನಕಾಯಿ ಪೂಜೆಗಾಗಿ ಅರಿಶಿನ ಕುಂಕುಮ, ಚಂದ್ರ, ಚಂದನ, ಅಡಿಕೆ, ದಶಾಂಗಂ, ೫ ಬಗೆಯ ಹಣ್ಣುಗಳನ್ನು, ದೀಪದ ಕಂಬಕ್ಕೆ ದೀಪದ ಬತ್ತಿಗಳನ್ನು ತುಪ್ಪದಲ್ಲಿ ನೆನಸಿ, ಗೆಜ್ಜೆವಸ್ತ್ರಗಳು, 16 ಎಳೆಯ ಗೆಜ್ಜೆವಸ್ತ್ರ ಹಾಗೆ 16 ಎಳೆ ದೋರ ಗ್ರಂಥಿಗಳನ್ನು ತಯಾರಿಸಬೇಕು. ಅದಕ್ಕೆ 16 ಗಂಟನ್ನು ಹಾಕಿ ದೋರವನ್ನು ಸಿದ್ಧಪಡಿಸಬೇಕು.
  • ಪಂಚಾಮೃತ ಅಭಿಷೇಕ ಮಧುಪರ್ಕ, ಮಂಗಳಾರತಿ ಬತ್ತಿಗಳು. ಒಂದು ತಟ್ಟೆಯಲ್ಲಿ ಉಪಾಯನ ದಾನಕ್ಕಾಗಿ 2 ತೆಂಗಿನಕಾಯಿಗಳು ನಾಲ್ಕು ವಿಳ್ಳೆದೆಲೆ, ಅಡಿಕೆಗಳು, ದಕ್ಷಿಣೆ, ಸ್ವಲ್ಪ ಅಕ್ಕಿ ಅದನ್ನು ಮುಚ್ಚಲು ಒಂದು ತಟ್ಟೆ ಅಥವಾ ಬಾಳೆಯೆಲೆ ಉಪಯೋಗಿಸಬೇಕು. ಮೊರದ ಬಾಗಿನ ಕೊಡುವಾಗ ಈ ಕೆಳಕಂಡ ಮಂತ್ರವನ್ನು ಶ್ರದ್ಧಾಪೂರ್ವಕವಾಗಿ ಹೇಳಿ ಬಾಗಿನ ಕೊಟ್ಟರೆ, ಬ್ರಹ್ಮಾಂಡ ದಾನ ಮಾಡಿದ ಪುಣ್ಯ ಲಭಿಸುವುದೆಂದು ಹೇಳಿಕೆಯಿದೆ. "ರಾಮಪತ್ನಿ ಮಹಾಭಾಗಿ ಪುಣ್ಯಮೂರ್ತಿ ನಿರಾಮುಖಿ ಮಯಾದತ್ತಾಣಿ ಸೂರ್ಪಾಣಿ ಗೃಹಾಣಿ ಮಾನಿ ಜಾನಕಿ'.
  1. ಅರಿಸಿನ : ಗೌರಿದೇವೀ.
  2. ಕುಂಕುಮ : ಮಹಾಲಕ್ಷ್ಮೀ
  3. ಸಿಂಧೂರ : ಸರಸ್ವತೀ
  4. ಕನ್ನಡಿ : ರೂಪಲಕ್ಷ್ಮೀ.
  5. ಬಾಚಣಿಗೆ : ಶೃಂಗಾರಲಕ್ಷ್ಮೀ.
  6. ಕಾಡಿಗೆ : ಲಜ್ಜಾಲಕ್ಷ್ಮೀ. :
  7. ಅಕ್ಕಿ : ಶ್ರೀ ಲಕ್ಷ್ಮೀ.
  8. ತೊಗರಿಬೇಳೆ : ವರಲಕ್ಷ್ಮೀ.
  9. ಉದ್ದಿನಬೇಳೆ : ಸಿದ್ದಲಕ್ಷ್ಮೀ.
  10. ತೆಂಗಿನಕಾಯಿ : ಸಂತಾನಲಕ್ಷ್ಮೀ.
  11. ವೀಳ್ಯದ ಎಲೆ : ಧನಲಕ್ಷ್ಮೀ.
  12. ಅಡಿಕೆ : ಇಷ್ಟಲಕ್ಷ್ಮೀ.
  13. ಫಲ(ಹಣ್ಣು) : ಜ್ಞಾನಲಕ್ಷ್ಮೀ.
  14. ಬೆಲ್ಲ : ರಸಲಕ್ಷ್ಮೀ.
  15. ವಸ್ತ್ರ : ವಸ್ತ್ರಲಕ್ಷ್ಮೀ.
  16. ಹೆಸರುಬೇಳೆ : ವಿದ್ಯಾಲಕ್ಷ್ಮೀ.

ಷೋಡಶಲಕ್ಷ್ಮೀಯರು

ಬದಲಾಯಿಸಿ

ಮುತ್ತ್ತೈದೆ ದೇವತೆಯರು ೧೬[] ಜನರು. ಇವರನ್ನು ಷೋಡಶಲಕ್ಷ್ಮೀಯರು ಎಂದು ಕರೆಯುತ್ತಾರೆ.

  1. ಗೌರಿ,
  2. ಪದ್ಮ,
  3. ಶುಚಿ,
  4. ಮೇಧಾ,
  5. ಸಾವಿತ್ರಿ,
  6. ವಿಜಯಾ,
  7. ಜಯಾ,
  8. ದೇವಸೇನಾ,
  9. ಸಾಹಾ,
  10. ಮಾತರಲೋಕಾ,
  11. ಮಾತಾರಾ,
  12. ಶಾಂತೀ,
  13. ಪೃಥ್ವಿ,
  14. ಧೃತೀ,
  15. ತುಷ್ಟೀ,
  16. ಸ್ವಧಾದೇವಿ..

ಬಾಹ್ಯ ಸಂಪರ್ಕ

ಬದಲಾಯಿಸಿ

ಉಲ್ಲೇಖಗಳು

ಬದಲಾಯಿಸಿ
  1. ಸ್ವರ್ಣರಂಜಿತ ಗೌರಿ -ಕನ್ನಡಪ್ರಭ ಲೇಖನ
  2. http://vijaykarnataka.indiatimes.com/religion/how-to-give-bagina/articleshow/60203780.cms