ಚಂದ್ರಶೇಖರ ವೆಂಕಟರಾಮನ್

ಭಾರತದ ಭೌತಶಾಸ್ತ್ರಜ್ಞ

ಸರ್ ಸಿ.ವಿ.ರಾಮನ್,(Sir C.V.Raman) ಶಿಕ್ಷಣ ವಲಯದಲ್ಲಿ ಸುಪ್ರಸಿದ್ಧರಾಗಿದ್ದ, ಚಂದ್ರಶೇಖರ ವೆಂಕಟರಾಮನ್ ರವರು, ನೋಬೆಲ್ ಪ್ರಶಸ್ತಿ ಗಳಿಸಿದ, ಪ್ರಪ್ರಥಮ ಭಾರತೀಯ ವಿಜ್ಞಾನಿ.[೨] ಈ ಪ್ರಶಸ್ತಿಯನ್ನು ೧೯೩೦ ರಲ್ಲಿ ಅವರದೇ ಹೆಸರಿಂದ ಅಲಂಕೃತವಾದ "ರಾಮನ್ ಎಫೆಕ್ಟ್" ಎಂಬ ಶೋಧನೆಗಾಗಿ ಭೌತಶಾಸ್ತ್ರ ಕ್ಷೇತ್ರದಲ್ಲಿ ಪಡೆದರು.

ಸರ್ ಚಂದ್ರಶೇಖರ ವೆಂಕಟರಾಮನ್
Sir CV Raman.JPG
ಸ್ಥಳೀಯ ಹೆಸರು'ರಾಮನ್
ಜನನ೭ ನವೆಂಬರ್ ೧೮೮೮
ತಿರುವನ್ಕೊಯಿಲ್, ಟ್ರಿಚಿನೋಪೋಲಿ, ಮಡ್ರಾಸ್ ಪ್ರಾವಿನ್ಸ್, ಬ್ರಿಟಿಷ್ ಭಾರತ
ಮರಣ೨೧ ನವೆಂಬರ್ ೧೯೭೦
ಬೆಂಗಳೂರು, ಕರ್ನಾಟಕ, ಭಾರತ
ರಾಷ್ಟ್ರೀಯತೆಭಾರತೀಯ
ಕಾರ್ಯಕ್ಷೇತ್ರಭೌತಶಾಸ್ತ್ರ
ಸಂಸ್ಥೆಗಳುಭಾರತೀಯ ಫೈನಾನ್ಸ್ ವಿಭಾಗ[೧]
ಕಲ್ಕತ್ತಾ ವಿಶ್ವವಿದ್ಯಾಲಯ
ಇಂಡಿಯನ್ ಅಸೋಸಿಯೇಷನ್ ಫಾರ್ ಕಲ್ಟಿವೇಷನ್ ಆಫ್ ಸೈನ್ಸ್
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್
ಸೆಂಟ್ರಲ್ ಕಾಲೇಜು , ಬೆಂಗಳೂರು ವಿಶ್ವವಿದ್ಯಾಲಯ
ರಮನ್ ರಿಸರ್ಚ್ ಇನ್ಸ್ಟಿಟ್ಯೂಟ್
ಅಭ್ಯಸಿಸಿದ ವಿದ್ಯಾಪೀಠಮದ್ರಾಸ್ ವಿಶ್ವವಿದ್ಯಾಲಯ
ಡಾಕ್ಟರೇಟ್ ವಿದ್ಯಾರ್ಥಿಗಳುಜಿ.ಎನ್.ರಾಮಚಂದ್ರನ್
ವಿಕ್ರಂ ಅಂಬಾಲಾಲ್ ಸಾರಾಭಾಯ್
ಪ್ರಸಿದ್ಧಿಗೆ ಕಾರಣರಾಮನ್ ಪರಿಣಾಮ
ಗಮನಾರ್ಹ ಪ್ರಶಸ್ತಿಗಳುನೈಟ್ ಬ್ಯಾಚುಲರ್ (೧೯೨೯)
ಭೌತಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ (೧೯೩೦)
ಭಾರತ ರತ್ನ (೧೯೫೪)
ಲೆನಿನ್ ಶಾಂತಿ ಪ್ರಶಸ್ತಿ(೧೯೫೭)
ಸಂಗಾತಿಲೋಕಸುಂದರಿ ಅಮ್ಮಾಳ್ (೧೯೦೭–೧೯೭೦)
ಮಕ್ಕಳುಚಂದ್ರಶೇಖರ್ ಮತ್ತು ರಾಧಾಕೃಷ್ಣನ್,
ಹಸ್ತಾಕ್ಷರ
ಜಾಲತಾಣ
www.nobelprize.org/nobel_prizes/physics/laureates/1930/raman-bio.html/

ಬಾಲ್ಯ ಹಾಗೂ ವಿದ್ಯಾಭ್ಯಾಸಸಂಪಾದಿಸಿ

ಚಂದ್ರಶೇಖರ ವೆಂಕಟಾರಾಮನ್, ನವೆಂಬರ್ ೭, ೧೮೮೮ ರಲ್ಲಿ ತಮಿಳುನಾಡುನ ತಿರುಚಿನಾಪಳ್ಳಿ ಜಿಲ್ಲೆಯ 'ತಿರುವನೈಕಾವಲ್' ಎಂಬಲ್ಲಿ ಜನಿಸಿದರು.[೩] ಅವರ ತಂದೆ, ಚಂದ್ರಶೇಖರ್ ಕಾಲೇಜಿನಲ್ಲಿ ಭೌತಶಾಸ್ತ್ರ ಪ್ರಾಧ್ಯಾಪಕರಾಗಿದ್ದರು. ತಾಯಿಯವರ ಹೆಸರು, ಪಾರ್ವತಿ ಅಮ್ಮಾಳ್. ಆದರೆ ಕುಟುಂಬ ದೊಡ್ಡದಾಗಿದ್ದರಿಂದ ಬಡತನದ ಸ್ಥಿತಿಯಲ್ಲಿದ್ದರು. ರಾಮನ್ ಗೆ ಸಾಕಷ್ಟು ಶೈಕ್ಷಣಿಕ ಸೌಕರ್ಯಗಳನ್ನು ಒದಗಿಸುವ ಅನುಕೂಲ ಅವರಿಗಿರಲಿಲ್ಲ. ಮೇಧಾವಿಯಾಗಿದ್ದ ರಾಮನ್ ವಿದ್ಯಾಭ್ಯಾಸ ಹಾಗೂ ವೃತ್ತಿಜೀವನದಲ್ಲಿ ಮಾಡಿದ ಸಾಧನೆ ಅಪಾರವಾಗಿತ್ತು.

  • ೧೯೦೦: ತಮ್ಮ ೧೨ ನೆ ವಯಸ್ಸಿನಲ್ಲೇ ಮೆಟ್ರಿಕ್ಯುಲೆಶನ್ ಮುಗಿಸಿದರು.
  • ೧೯೦೪: ಮದ್ರಾಸಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಬಿ.ಎ. ಪದವಿ
  • ೧೯೦೭: ಎಂ. ಎಸ್ಸಿ. ಪದವಿ
  • ೧೯೦೭ರಲ್ಲಿ ಭಾರತೀಯ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಕಲ್ಕತ್ತೆಯಲ್ಲಿ, ಡೆಪ್ಯುಟಿ ಅಕೌಂಟೆಂಟ್ ಜನರಲ್ ಆಗಿ ವೃತ್ತಿ-ಜೀವನ ಆರಂಭಿಸಿದರು, ವಿದ್ಯಾರ್ಥಿಯಾಗಿದ್ದಾಗ ವೈಜ್ಞಾನಿಕ ಪ್ರಯೋಗಗಳಲ್ಲಿ ತೋರುತ್ತಿದ್ದ ಆಸಕ್ತಿಯನ್ನು ಅವರು ವೃತ್ತಿನಿರತರಾಗಿದ್ದಾಗಲೂ ಮುಂದುವರಿಸಿದರು
  • ೧೯೧೭ರಲ್ಲಿ ಕಲ್ಕತ್ತಾ ವಿಶ್ವವಿದ್ಯಾಲಯದಲ್ಲಿ ಭೌತಶಾಸ್ತ್ರದ ಪ್ರಾಚಾರ್ಯರಾದರು
  • ೧೯೨೪ರಲ್ಲಿ 'ಲಂಡನಿನ ಫೆಲೊ ಆಫ್ ರಾಯಲ್ ಸೊಸೈಟಿ'ಗೆ ರಾಮನ್ ಆಯ್ಕೆಯಾದರು
  • ಮಾರ್ಚ್ ೧೬ ೧೯೨೮ರಲ್ಲಿ ತಮ್ಮ ಶೋಧನೆ, 'ರಾಮನ್ ಎಫೆಕ್ಟ್'ನ್ನು 'ಬೆಂಗಳೂರಿ'ನಲ್ಲಿ ಬಹಿರಂಗ ಪಡಿಸಿದ ರಾಮನ್, ೧೯೩೦ರಲ್ಲಿ ಅದಕ್ಕಾಗಿ 'ನೋಬೆಲ್ ಪ್ರಶಸ್ತಿ'ಗಳಿಸಿದರು.

ಮದುವೆಸಂಪಾದಿಸಿ

ಡಾ. ರಾಮನ್, ೬, ಮೇ, ೧೯೦೭ ರಲ್ಲಿ ಲೋಕಸುಂದರಿ ಅಮ್ಮಾಳ್ ಎಂಬ ಹುಡುಗಿಯೊಂದಿಗೆ ವಿವಾಹವಾದರು.(೧೮೯೨–೧೯೮೦ [೨೧]). 'ರಾಮನ್,' 'ಲೋಕಸುಂದರಿ ಅಮ್ಮಾಳ್' ದಂಪತಿಗಳಿಗೆ ಚಂದ್ರಶೇಖರ್, ಮತ್ತು ರಾಧಾಕೃಷ್ಣನ್, ಎಂಬ ಇಬ್ಬರು ಗಂಡುಮಕ್ಕಳಿದ್ದಾರೆ.

ರಾಮನ್ ಪರಿಣಾಮಸಂಪಾದಿಸಿ

ಈ ತತ್ತ್ವವು ವಿಜ್ಞಾನಕ್ಕೆ ಸರ್ ಸಿ.ವಿ. ರಾಮನ್ ರ ಒಂದು ದೊಡ್ಡ ಕೊಡುಗೆಯಾಗಿದೆ. ಆಕಾಶದ ನೀಲಿ ಬಣ್ಣ ಅವರನ್ನು ಸ್ಥಬ್ಧರನ್ನಾಗಿ ಮಾಡಿತ್ತು. ಅದು ಹೇಗೆ ಸಾಧ್ಯ ಎಂಬ ಪ್ರಶ್ನೆ ರಾಮನ್ ರನ್ನು ಮೊದಲಿನಿಂದಲೂ ಕಾಡುತ್ತಿತ್ತು. ಅದಕ್ಕೆ ಉತ್ತರ ಕಂಡು ಹಿಡಿಯಲು ಪ್ರಯೋಗ ಮಾಡುತ್ತ ಅವರು ಬಹಳ ಸಮಯವನ್ನು ವ್ಯಯಿಸಿದರು. ಸಮುದ್ರದ ಮೇಲೆ ವಿದೇಶ ಪ್ರಯಾಣದಲ್ಲಿದ್ದಾಗ ಕಡಲಿನ ನೀಲಿ ಬಣ್ಣದ ಕಾರಣವನ್ನು ಅರಿಯಲು ಪ್ರಯೋಗ ಮಾಡುತ್ತ ಹಡಗಿನ ತುಂಬ ಅಲೆದಾಡುತ್ತಿದ್ದರು. ಆಕಾಶದ ನೀಲಿ ಬಣ್ಣ ರಾಮನ್ ರ ಕುತೂಹಲ ಕೆರಳಿಸಿ ಪ್ರಯೋಗಕ್ಕೆ ತೊಡಗಿಸಿತು. ಹಾಗೇ ಬಗೆಬಗೆಯ ಹೂಗಳ ಬಣ್ಣದಿಂದಲೂ ಅವರು ಆಶ್ಚರ್ಯ ಚಕಿತರಾಗುತ್ತಿದ್ದರು. ವಾತಾವರಣದಲ್ಲಿಯ ಧೂಳಿನ ಕಣಗಳು ಬೆಳಕನ್ನು ಭಾಗಶಃ ಚದುರಿಸುವವು. ಹೀಗೆ ಬೆಳಕು ಚದುರಿದಾಗ, ಅದರ ಎಲ್ಲ ಬಣ್ಣಗಳೂ ಚದುರುವುವು. ಹೆಚ್ಚು ಚದುರದ ಕೆಂಪುಬೆಳಕು ದಿಗಂತದ ಸಮೀಪ ಸೂರ್ಯಕಾಣುವ ಪ್ರದೇಶದಲ್ಲಿ ಪ್ರಜ್ವಲಿಸುವುದು. ಉಳಿದದ್ದು ಆಕಾಶಕ್ಕೆ ನೀಲಿ ಬಣ್ಣವನ್ನು ನೀಡುವುದು. ಬೆಳಕು ಚದುರುವಾಗ ಶಕ್ತಿಯ ಸ್ವೀಕಾರ ಅಥವಾ ದಾನ ಬೆಳಕಿನ ತರಂಗಾಂತರವನ್ನು ನಿರ್ದಿಷ್ಟವಾಗಿ ಬದಲಾಯಿಸುವ ಸಾಧ್ಯತೆ ಲಕ್ಷ್ಯದಲ್ಲೊಂದು ಮಾತ್ರ. ಎಂದರೆ ಒಂದು ಲಕ್ಷ ಬೆಳಕಿನ ಕಣಗಳು ಚದುರಿದಾಗ ಒಂದು ಮಾತ್ರ ರಾಮನ್ ಪರಿಣಾಮಕ್ಕೆ ಒಳಗಾಗುವುದು, ಎನ್ನುವ ವಿಚಾರ ಬೆಳಕಿಗೆ ಬಂತು. ಇದನ್ನೇ “ರಾಮನ್ ಪರಿಣಾಮ” ಎಂದು ಕರೆಯಲಾಗುತ್ತದೆ. ಇದು ಅನ್ವಯಿಕ ಉಪಯುಕ್ತತೆಯುಳ್ಳ ತತ್ವ.[೪]

ಟಾಟ ಇನ್ಸ್ಟಿಟ್ಯೂಟ್ ನ ನಿರ್ದೇಶಕರಾಗಿಸಂಪಾದಿಸಿ

 
ರಾಮನ್ ಪುತ್ಥಳಿ (ಬಿರ್ಲಾ ಇಂಡಸ್ಟ್ರಿಯಲ್ & ಟೆಚೊಲೊಜಿಕಲ್ ಮ್ಯೂಸಿಯಂ)

೧೯೩೪ರಲ್ಲಿ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯುಟ್ ಆಫ್ ಸೈನ್ಸ್ ನ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಡಾ. ರಾಮನ್, ತದನಂತರ ೧೯೪೩ರಲ್ಲಿ ರಾಮನ್ ಸಂಶೋಧನಾ ಕೆಂದ್ರವನ್ನು ಬೆಂಗಳೂರಿನಲ್ಲಿ ಸ್ಥಾಪಿಸಿದರು. ಪ್ರೊ. ರಾಮನ್ ಬೆಂಗಳೂರನ್ನು ತಮ್ಮ ಕಾರ್ಯಕ್ಷೇತ್ರವಾಗಿ ಮಾಡಿಕೊಂಡು “ರಾಮನ್ ರಿಸರ್ಚ್ ಇನ್ಸ್ಟಿಟ್ಯೂಟ್ ” ಎಂಬ ವಿಜ್ಞಾನ ಸಂಶೋಧನಾ ಸಂಸ್ಥೆಯನ್ನು ಅವರ ಜೀವಿತ ಕಾಲದಲ್ಲೇ ಸ್ಥಾಪಿಸಿ ಬಹಳಷ್ಟು ಸಂಶೋಧನೆಗಳನ್ನು ಮಾಡಿದರು. ಭಾವಿ ಸಂಶೋಧಕರಿಗೆ ಬಿಟ್ಟುಹೋಗಿರುವ ಈ ಸಂಸ್ಥೆ ವಿಶೇಷವಾಗಿ ಭೌತಶಾಸ್ತ್ರದ ಅತ್ಯಂತ ಪ್ರಮುಖ ಸಂಶೋಧನ ಸಂಸ್ಥೆಯಾಗಿದೆ.

ಗೌರವ, ಪ್ರಶಸ್ತಿಗಳುಸಂಪಾದಿಸಿ

ಮರಣಸಂಪಾದಿಸಿ

ನವೆಂಬರ್ ೨೧ ೧೯೭೦ ರಲ್ಲಿ, 'ಪ್ರೊ.ರಾಮನ್' ರವರು, ದೇಮಹಳ್ಳಿಯಲ್ಲಿ ನಿಧನರಾದರು.

ಹೆಚ್ಚಿನ ಮಾಹಿತಿಸಂಪಾದಿಸಿ

ಉಲ್ಲೇಖಗಳುಸಂಪಾದಿಸಿ

  1. The Nobel Prize in Physics 1930 Sir Venkata Raman Archived 2013-04-21 ವೇಬ್ಯಾಕ್ ಮೆಷಿನ್ ನಲ್ಲಿ., Official Nobel prize biography, nobelprize.org
  2. Documentary on Sir C.V. Raman
  3. "C.V.Raman, Biography". Archived from the original on 2015-01-27. Retrieved 2014-11-06.
  4. 'ರಾಮನ್ ಪರಿಣಾಮದ ಬಗ್ಗೆ ಯೂಟ್ಯೂಬ್'
  • Raman Effect: From Studying Cells to Detecting Bombs, Page :14, Author:Murthy, M.S.S., Science Reporter, Feb, 2016

ಬಾಹ್ಯ ಸಂಪರ್ಕಗಳುಸಂಪಾದಿಸಿ

ಪುರಸ್ಕೃತವರ್ಗ:ಕರ್ನಾಟಕದ ಪ್ರಸಿದ್ಧ ವ್ಯಕ್ತಿಗಳು ನಿಮ್ಮನ್ನು ಪಡೆದ ನಾವೇ ಧನ್ಯರು