ಚಮಕೇರಿ ಗ್ರಾಮವು ಕರ್ನಾಟಕ ರಾಜ್ಯದ ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿದೆ. ಚಮಕೇರಿ ಗ್ರಾಮವು ವಿಜಯಪುರ- ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯ ಸಮೀಪದಲ್ಲಿದೆ. ಜಿಲ್ಲಾ ಕೇಂದ್ರ ಬೆಳಗಾವಿಯಿಂದ ಸುಮಾರು ೧೪೦ ಕಿ. ಮಿ. ಹಾಗೂ ವಿಜಯಪುರದಿಂದ ೮೦ ಕಿ. ಮಿ. ದೂರದಲ್ಲಿದೆ.

ಚಮಕೇರಿ
ಚಮಕೇರಿ
village
Population
 (೨೦೧೨)
 • Total೨೦೦೦
Websitewww.chamakeri.in

ಚರಿತ್ರೆ

ಬದಲಾಯಿಸಿ

ಗ್ರಾಮದಲ್ಲಿಇತಿಹಾಸ ಪ್ರಸಿದ್ದ ಬಬಲಾದಿ ಶ್ರೀ ಸದಾಶಿವ ಮಠವಿದೆ.

ದೇವಾಲಯಗಳು

ಬದಲಾಯಿಸಿ

ಶ್ರೀ ಸದಾಶಿವ ಮಠ, ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಮತ್ತು ಶ್ರೀ ಹಣಮಂತ ದೇವಾಲಯಗಳನ್ನು ನಿರ್ಮಿಸಿದ್ದಾರೆ. ಬೀರಲಿಂಗೇಶ್ವರ ಟೆಂಪಲ್

ಮಸೀದಿಗಳು

ಬದಲಾಯಿಸಿ

ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.

ನೀರಾವರಿ

ಬದಲಾಯಿಸಿ

ಗ್ರಾಮದ ಪ್ರತಿಶತ ೪೦ ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿದೆ.

ಹಬ್ಬಗಳು

ಬದಲಾಯಿಸಿ

ಪ್ರತಿವರ್ಷ ಶ್ರೀ ಸದಾಶಿವ ಜಾತ್ರಾ ಮಹೋತ್ಸ ವ, ಶ್ರೀ ಪಾಂಡುರಂಗ ಸಪ್ತಾಹ(ದಿಂಡಿ), ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.

ಶಿಕ್ಷಣ

ಬದಲಾಯಿಸಿ
  • ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆ
  • ಸರಕಾರಿ ಹಿರಿಯ ಮರಾಠಿ ಪ್ರಾಥಮಿಕ ಶಾಲೆ
  • ಶ್ರೀ ಶಿವಯ್ಯಾ ಸ್ವಾಮೀಜಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ

ಭೌಗೋಳಿಕ

ಬದಲಾಯಿಸಿ

ಗ್ರಾಮವು ಭೌಗೋಳಿಕವಾಗಿ ೧೬* ೩೨' ೧೦"x ಉತ್ತರ ಅಕ್ಷಾಂಶ ಮತ್ತು ೭೫* ೩೧' ೧೯" ಪೂರ್ವ ರೇಖಾಂಶದಲ್ಲಿ ಬರುತ್ತದೆ.

ಹವಾಮಾನ

ಬದಲಾಯಿಸಿ
  • ಬೆಸಿಗೆ-ಚಳಿಗಾಲದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ ೪೨.೭ ಡಿಗ್ರಿವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ ೯.೫ ಡಿಗ್ರಿ ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ.
  • ಬೇಸಿಗೆಕಾಲ - ೩೫°C-೪೨°C ಡಿಗ್ರಿ ಸೆಲ್ಸಿಯಸ್
  • ಚಳಿಗಾಲ ಮತ್ತು
  • ಮಳೆಗಾಲ - ೧೮°C-೨೮°C ಡಿಗ್ರಿ ಸೆಲ್ಸಿಯಸ್.
  • ಮಳೆ - ಪ್ರತಿ ವರ್ಷ ಮಳೆ ೩೦೦ - ೬೦೦ಮಿಮಿ ಗಳಸ್ಟು ಆಗಿರುತ್ತದೆ.
  • ಗಾಳಿ -ಗಾಳಿ ವೇಗ ೧೮.೨ ಕಿಮಿ/ಗಂ (ಜೂನ), ೧೯.೬ ಕಿಮಿ/ಗಂ (ಜುಲೈ)ಹಾಗೂ ೧೭.೫ ಕಿಮಿ/ಗಂ (ಅಗಸ್ಟ್) ಇರುತ್ತದೆ.

ಜನಸಂಖ್ಯೆ

ಬದಲಾಯಿಸಿ

ಗ್ರಾಮದಲ್ಲಿ ಜನಸಂಖ್ಯೆ ಸುಮಾರು ೨,೫೦೦ ಇದೆ. ಅದರಲ್ಲಿ ೧೩೦೦ ಪುರುಷರು ಮತ್ತು ೧೨೦೦ ಮಹಿಳೆಯರು ಇದ್ದಾರೆ.

ಕಲೆ ಮತ್ತು ಸಂಸ್ಕೃತಿ

ಬದಲಾಯಿಸಿ
 
ಉತ್ತರ ಕರ್ನಾಟಕದ ಊಟ

ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ.ಮಹಿಳೆಯರು ಇಲಕಲ್ಲ ಸೀರೆ ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ.

ಭಾಷೆಗಳು

ಬದಲಾಯಿಸಿ

ಗ್ರಾಮದ ಪ್ರಮುಖ ಭಾಷೆ ಕನ್ನಡ. ಇದರೊಂದಿಗೆ ಹಿಂದಿ, ಮರಾಠಿ ಹಾಗೂ ಇಂಗ್ಲೀಷ್ ಭಾಷೆಗಳನ್ನು ಮಾತನಾಡುತ್ತಾರೆ.

ಕಾಲುವೆಗಳು

ಬದಲಾಯಿಸಿ

ಕೃಷ್ಣಾ ನದಿಯ ಕಾಲುವೆಯಿದ್ದು ಗ್ರಾಮದಲ್ಲಿ ಸಂಪೂರ್ಣ ಕೃಷಿಗೆ ಸಹಕಾರಿಯಾಗಿದೆ.

ಉದ್ಯೋಗ

ಬದಲಾಯಿಸಿ

ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ ೭೦% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ.

ಬೆಳೆಗಳು

ಬದಲಾಯಿಸಿ

ಆಹಾರ ಬೆಳೆಗಳು

ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ ,ಕಡಲೆ, ತೊಗರಿ,ಹೆಸರು ಮತ್ತು ಕಡಲೆ ಇತ್ಯಾದಿ

ವಾಣಿಜ್ಯ ಬೆಳೆಗಳು

ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ.

ತರಕಾರಿ ಬೆಳೆಗಳು

ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೂಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತ್ತಂಬರಿ ಇತ್ಯಾದಿ.

ಸಾಕ್ಷರತೆ

ಬದಲಾಯಿಸಿ

ಗ್ರಾಮದ ಸಾಕ್ಷರತೆಯ ಪ್ರಮಾಣ ಸುಮಾರು ೬೭%. ಅದರಲ್ಲಿ ೭೫% ಪುರುಷರು ಹಾಗೂ ೫೫% ಮಹಿಳೆಯರು ಸಾಕ್ಷರತೆ ಹೊಂದಿದೆ.

ರಾಜಕೀಯ

ಬದಲಾಯಿಸಿ

ಗ್ರಾಮವು kagwad ವಿಧಾನ ಸಭಾ ಕ್ಷೇತ್ರ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ.

ಉಲ್ಲೇಖ

ಬದಲಾಯಿಸಿ
"https://kn.wikipedia.org/w/index.php?title=ಚಮಕೇರಿ&oldid=1172839" ಇಂದ ಪಡೆಯಲ್ಪಟ್ಟಿದೆ