ಚರ್ಚೆಪುಟ:ಮಾಲಿನ್ಯ

ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು.[೧] ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು. ಮಾಲಿನ್ಯವನ್ನು ಪ್ರತ್ಯಕ್ಷ ಮಾಲಿನ್ಯ ಹಾಗೂ ಪರೋಕ್ಷ ಮಾಲಿನ್ಯ ಎಂದು ಎರಡು ವಿಭಾಗಗಳಾಗಿ ವಿಂಗಡಿಸಬಹುದಾಗಿದೆ. ಬ್ಲಾಕ್‌ಸ್ಮಿತ್ ಇನ್ಸ್ಟಿಟ್ಯೂಟ್ಎಂಬ ಸಂಸ್ಥೆಯು ಪ್ರತಿ ವರ್ಷ ಪ್ರಪಂಚದ ಅತಿಹೆಚ್ಚು ಮಾಲಿನ್ಯಕ್ಕೊಳಗಾದ ಪ್ರದೇಶಗಳ ಪಟ್ಟಿ ಪ್ರಕಟಿಸುತ್ತದೆ. 2007ರ ಪ್ರಕಟಣೆಯಲ್ಲಿ ಪ್ರಕಟವಾದ ಪಟ್ಟಿಯಲ್ಲಿದ್ದ ಟಾಪ್ 10 ಮಾಲಿನ್ಯ ಪ್ರದೇಶಗಳು ಅಜರ‍್‌ಬೈಜಾನ್, ಚೀನಾ, ಭಾರತ, ಪೆರು, ರಷ್ಯಾ, ಉಕ್ರೇನ್ ಮತ್ತು ಜಾಂಬಿಯಾ ಪ್ರದೇಶದಲ್ಲಿವೆ.

Start a discussion about ಮಾಲಿನ್ಯ

Start a discussion
Return to "ಮಾಲಿನ್ಯ" page.