ಜಕಣಾಚಾರಿ
ಅಮರಶಿಲ್ಪಿ ಜಕಣಾಚಾರಿ ಯವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.
ಅವರ ಜೀವನ
ಬದಲಾಯಿಸಿಕರ್ನಾಟಕದ ತುಮಕೂರಿನಿಂದ ೯ ಕಿ.ಮೀ ದೂರದಲ್ಲಿರುವ ಕೈದಾಳೆಯಲ್ಲಿ ಜಕಣಾಚಾರಿಯವರು ಜನಿಸಿದರು. ಕೆಲವು ದಾಖಲೆಗಳ ಪ್ರಕಾರ ಈ ಊರಿನ ಮೂಲ ಹೆಸರು ಕ್ರೀಡಾಪುರ. ಅವರ ತಮ್ಮ ಜೀವನವನ್ನು ಕಲೆಗಾಗಿ ಮುಡಿಪಾಗಿಟ್ಟಿದ್ದರು. ಅವರು ತಮ್ಮ ವೃತ್ತಿ ಜೀವನವನ್ನು ನೃಪ ಹಯರು ಆ ಪ್ರದೇಶವನ್ನು ಆಳುತ್ತಿರುವಾಗ ಪ್ರಾರಂಭಿಸಿದರು. ತಮ್ಮ ಮದುವೆಯಾದ ನಂತರವೇ ಅವರು ಕೆಲಸ ಹುಡುಕುತ್ತಾ ಮನೆಬಿಟ್ಟು ಹೊರಟರು. ದೂರದ ಪ್ರಯಾಣ ಮಾಡಿದರು ಹಾಗೂ ಹಲವಾರು ದೇವಾಲಯಗಳನ್ನು ನಿರ್ಮಿಸುತ್ತ ಮುನ್ನಡೆದರು ಹಾಗೂ ತಮ್ಮ ಹೆಂಡತಿಯನ್ನು ಸಹ ತಮ್ಮ ಕೆಲಸದಲ್ಲಿ ಮರೆತರು.
ಜಕಣಾಚಾರ್ಯ ಹಾಗೂ ಅವರ ಮಗ
ಬದಲಾಯಿಸಿಜಕಣಾಚಾರ್ಯನ ಮಗನ ಹೆಸರು ಡಂಕಣಾಚಾರ್ಯ. ಡಂಕಣಾಚರ್ಯನು ಆತನ ತಂದೆಯನ್ನು ಹುಡುಕುವುದಕ್ಕಾಗಿ ತಾನೇ ಒಬ್ಬ ಪ್ರಖ್ಯಾತ ಶಿಲ್ಪಿಯಾಗಿ ಬೆಳೆದನು. ಬೇಲೂರಿನಲ್ಲಿ ಅವನು ಶಿಲ್ಪಿಯ ಕೆಲಸಕ್ಕಾಗಿ ನೇಮಿಸಲ್ಪಟ್ಟನು, ಮಹಾನ್ ಶಿಲ್ಪಿ ಜಕಣಾಚಾರಿ ನಿರ್ಮಿಸಿದ ಒಂದು ಶಿಲ್ಪದಲ್ಲಿ ಒಂದು ಒಡಕನ್ನು ಆತನು ಕಂಡನು. ಇದರಿಂದ ಕೋಪಗೊಂಡ ಜಕಣಾಚಾರ್ಯರು ಅವರು ಕೆತ್ತಿದ ಶಿಲ್ಪದಲ್ಲಿ ದೋಷವಿದ್ದರೆ ತನ್ನ ಬಲಗೈಯನ್ನು ಕತ್ತರಿಸಿಕೊಳ್ಳುವುದಾಗಿ ಆ ಯುವ ಶಿಲ್ಪಿಗೆ ಮಾತನ್ನಿತ್ತರು. ಆ ಶಿಲ್ಪವನ್ನು ಪರೀಕ್ಷಿಸಿದ ನಂತರ, ಆ ದೋಷವಿರುವುದು ನಿಜವೆಂದು ಗೊತ್ತಾಗಿ ಜಕಣಾಚಾರ್ಯರು ತಮ್ಮ ವಾಗ್ದಾನದಂತೆ ತಮ್ಮ ಬಲಗೈಯನ್ನು ಕತ್ತರಿಸಿಕೊಂಡರು. ಕೊನೆಯಲ್ಲಿ, ಆ ಇಬ್ಬರು ಶಿಲ್ಪಿಗಳು ಅವರಿಬ್ಬರೂ ತಂದೆ, ಮಗನೆಂಬ ಸಂಬಂಧವನ್ನು ತಿಳಿದುಕೊಂಡರು.
ಚನ್ನಕೇಶವ ದೇವಾಲಯ
ಬದಲಾಯಿಸಿಜಕಣಾಚಾರ್ಯರು ತಮ್ಮ ಹುಟ್ಟೂರಾದ ಕ್ರೀಡಾಪುರದಲ್ಲಿ ಚನ್ನಕೇಶವ ದೇವಾಲಯವನ್ನು ನಿರ್ಮಿಸುವ ಆಶೆ ಹೊಂದಿದರು. ಇದು ಮುಗಿದ ನಂತರ, ಅವರ ಬಲಗೈಯನ್ನು ದೇವರು ಕರುಣಿಸಿದನೆಂದು ದಂತಕಥೆ ಹೇಳುತ್ತದೆ. ಈ ಘಟನೆಯನ್ನು ಸಂತೋಷದಿಂದ ಆಚರಿಸಿದುದರ ನಂತರ ಈ ಕ್ರೀಡಾಪುರ ಊರಿಗೆ ಕೈದಾಳ ಎಂಬ ಹೆಸರು ಬಂತು ಎನ್ನಲಾಗಿದೆ. ಅದಕ್ಕಾಗಿ ಕೈ ಎನ್ನುವ ಪದವನ್ನು ಇಲ್ಲಿ ಬಳಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಸ್ಥಳೀಯ ಸರ್ಕಾರೇತರ ಸಂಸ್ಥೆಗಳು ಕೈದಾಳದಲ್ಲಿರುವ ಚನ್ನಕೇಶವ ದೇವಾಲಯವನ್ನು ರಕ್ಷಣೆಗಾಗಿ ಹಣ ಸಹಾಯ ಕೋರುತ್ತಿವೆ.
ಜಕಣಾಚಾರಿ ಪ್ರಶಸ್ತಿ
ಬದಲಾಯಿಸಿಕರ್ನಾಟಕ ಸರ್ಕಾರವು ಪ್ರತಿವರ್ಷ ಶಿಲ್ಪಕಲೆಗೆ ಅತಿ ಹೆಚ್ಚಿನ ಕೊಡುಗೆ ನೀಡುವ ಕಲೆಗಾರನಿಗೆ ಜಕಣಾಚಾರಿ ಪ್ರಶಸ್ತಿ ನೀಡಿ ಗೌರವಿಸುತ್ತದೆ.