ಶ್ರೀಮತಿ ಡಾ. ಟಿ.ಎನ್.ನಾಗರತ್ನ ಇವರು ಹರಿದಾಸ ಸಾಹಿತ್ಯದಲ್ಲಿ ಮಹತ್ವದ ಹೆಸರು. ೩೫ ವರ್ಷಗಳ ಕಾಲ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ, ಮಾನಸಗಂಗೋತ್ರಿ ಮೈಸೂರಿನಲ್ಲಿ, ಸಂಶೋಧನ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಹಲವು ಕೀರ್ತನೆಗಳನ್ನು ರಚಿಸಿ ಜನಪ್ರಿಯರಾಗಿದ್ದಾರೆ. ಇವರಿಗೆ ೧೯೮೦ರಲ್ಲಿ “ಶ್ರೀ ವಾದಿರಾಜರ ಕೃತಿಗಳು” ಕೃತಿಗಾಗಿ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪುರಸ್ಕಾರ ಲಭಿಸಿದೆ. ೨೦೧೦ರಲ್ಲಿ ಹರಿದಾಸ ಸಾಹಿತ್ಯದ ಸಮಗ್ರ ಕೆಲಸದಿಂದ 'ಕನಕಶ್ರೀ' ಪ್ರಶಸ್ತಿಗೂ ಭಾಜನರಾಗಿದ್ದಾರೆ. ಪ್ರಸ್ತುತ ಇವರು ಕನಕದಾಸರ 'ಮೋಹನತರಂಗಿಣಿ' ಕೃತಿಯ ಅನುವಾದದ ಕೆಲಸದಲ್ಲಿ ನಿರತರಾಗಿದ್ದಾರೆ.