ದೀಪಾವಳಿ

ಕ್ಯಾಸನೂರು ಅಡಿಕೆ ಹಾಳೆಯಲ್ಲಿ ಮಾಡಿದ ಕೆಂಬೋತಿ ದೀಪಗಳಿಂದ ಮೊಟ್ಟ ಮೊದಲು ದೀಪಾವಳಿ ಆಚರಣೆ ಹುಟ್ಟಿಕೊಂಡಿತು. ಇಲ್

ದೀಪಾವಳಿ (ದೀಪಗಳ ಸಾಲು) ದೀಪಗಳಿಂದ ದೀಪಗಳನ್ನು ಹಚ್ಚುವ ಹಬ್ಬ. ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ಭಾರತದಲ್ಲಿ ಸಾಂಪ್ರದಾಯಿಕವಾಗಿ ಪಂಚಾಂಗ ಚಂದ್ರಮಾನವನ್ನು ಅವಲಂಬಿಸಿವೆ. ಅಂದರೆ ಆಶ್ವಯುಜ ಮಾಸ ಕೃಷ್ಣಪಕ್ಷದ ಚತುರ್ದಶಿ, ಅಮಾವಾಸ್ಯೆ ಹಾಗೂ ಕಾರ್ತಿಕ ಮಾಸ ಶುಕ್ಲಪಕ್ಷದ ಪಾಡ್ಯ - ಈ ದಿನಗಳಲ್ಲಿ ದೀಪಾವಳಿಯನ್ನು ಆಚರಿಸಲಾಗುತ್ತಿದೆ.

ದೀಪಾವಳಿ
ದೇವಸ್ಥಾನದಲ್ಲಿ ದೀಪಗಳ ಸಾಲು
ಪರ್ಯಾಯ ಹೆಸರುಗಳುದಿವಾಲಿ
ಆಚರಿಸಲಾಗುತ್ತದೆಹಿಂದೂ, ಸಿಖ್, ಬೌದ್ಧರು.[]
ರೀತಿಸಾಂಸ್ಕೃತಿಕ, ಧಾರ್ಮಿಕ
ಆಚರಣೆಗಳುದೀಪ ಬೆಳಗುವಿಕೆ, ಮನೆ ಅಲಂಕಾರ, ಪಟಾಕಿ, ಪೂಜೆ, ಉಡುಗೊರೆ

ಹಿಂದೂ ಧರ್ಮ

ಬದಲಾಯಿಸಿ

ಶ್ರೀ ರಾಮ ರಾವಣನನ್ನು ಗೆದ್ದು ಸೀತೆ ಮತ್ತು ಲಕ್ಷ್ಮಣರೊಂದಿಗೆ ಅಯೋಧ್ಯೆಗೆ ಮರಳಿದ ಸಮಯವೆಂದು ದೀಪಾವಳಿಯನ್ನು ಕೆಲವರು ಆಚರಿಸುತ್ತಾರೆ, ಅಮಾವಾಸ್ಯೆಯ ಹಿಂದಿನ ದಿನ (ನರಕ ಚತುರ್ದಶಿ) ಶ್ರೀಕೃಷ್ಣ ನರಕಾಸುರನನ್ನು ಸಂಹರಿಸಿದ ದಿನ ಎಂದು ಹೇಳಲಾಗುತ್ತದೆ. ಒಟ್ಟಿನಲ್ಲಿ ದೀಪಾವಳಿಯಲ್ಲಿ ಕೇಡಿನ ಮೇಲೆ ಶುಭದ ವಿಜಯವನ್ನು ಆಚರಿಸಲಾಗುತ್ತದೆ.

ಬಲಿ-ವಾಮನರ ಕಥೆ ಮತ್ತು ಬಲಿಯ ತ್ಯಾಗವನ್ನು ಅಮಾವಾಸ್ಯೆಯ ಮರುದಿನ ಬಲಿಪಾಡ್ಯಮಿ ದೀಪಾವಳಿಯೊಂದಿಗೆ ಇನ್ನಿತರ ಪುರಾಣಗಳೂ ಸಂಬಂಧಿತವಾಗಿದೆ. ಉದಾಹರಣೆಗೆ, ಬಲಿ-ವಾಮನರ ಕಥೆ ಮತ್ತು ಬಲಿಯ ತ್ಯಾಗವನ್ನು ಅಮಾವಾಸ್ಯೆಯ ಮರುದಿನ ಬಲಿಪಾಡ್ಯಮಿಯಾಗಿ ಆಚರಿಸಲಾಗುತ್ತದೆ.

ಹಿಂದೂ ಧರ್ಮದಜನರು ಪ್ರತಿ ವರ್ಷವೂ ಪ್ರಪಂಚದಿ ಎಲ್ಲೆಡೆ ದೀಪಾವಳಿಯನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ. ಹೊಸ ಬಟ್ಟೆಗಳು, ಸಿಹಿ ತಿಂಡಿಗಳು ಎಲ್ಲಕ್ಕೂ ಹೆಚ್ಚಾಗಿ ಪಟಾಕಿಗಳಿಗೆ ದೀಪಾವಳಿ ಪ್ರಸಿದ್ಧ. ಉತ್ತರ ಭಾರತದಲ್ಲಿ ದೀಪಾವಳಿಯ ಸಮಯವೇ ಹೊಸ ಆರ್ಥಿಕ ವರ್ಷದ ಪ್ರಾರಂಭ ಸಹ; ಹೊಸ ಲೆಕ್ಕದ ಪುಸ್ತಕಗಳನ್ನು ಈ ಸಮಯದಲ್ಲೇ ತೆರೆಯಲಾಗುತ್ತದೆ.

ದೀಪಾವಳಿಯ ಅಂಗವಾಗಿ ನಡೆಯುವ ಇತರ ಸಮಾರಂಭಗಳಲ್ಲಿ ಆಯುಧಪೂಜೆ ಮತ್ತು ಗೋಪೂಜೆಗಳನ್ನು ಹೆಸರಿಸಬಹುದು.

ದಕ್ಷಿಣ ಭಾರತದಲ್ಲಿ ಸಾಮಾನ್ಯವಾಗಿ ಮೂರು ದಿನಗಳ ಆಚರಣೆ ನಡೆಯುತ್ತದೆ. ದಕ್ಷಿಣ ಭಾರತದಲ್ಲಿ ನರಕ ಚತುರ್ದಶಿ ಪ್ರಮುಖವಾದರೆ, ಉತ್ತರ ಭಾರತದಲ್ಲಿ ಅಮಾವಾಸ್ಯೆಯಂದು ಆಚರಿಸಲಾಗುವ ಲಕ್ಷ್ಮಿ ಪೂಜೆ ಮುಖ್ಯವಾದದ್ದು.

ಸಿಖ್ ಧರ್ಮ

ಬದಲಾಯಿಸಿ

ಸಿಕ್ಖ್ ಧರ್ಮದಲ್ಲಿಯೂ ದೀಪಾವಳಿ[] ಮುಖ್ಯ ಹಬ್ಬ. ೧೬೨೦ ರಲ್ಲಿ ಸಿಕ್ಖರ ಆರನೆಯ ಗುರು ಹರಗೋಬಿಂದ್ ಸಿಂಗ್ ಗ್ವಾಲಿಯರ್‌ನ ಕೋಟೆಯಲ್ಲಿ ಬಂಧಿತರಾಗಿದ್ದ ೫೨ ರಾಜರನ್ನು ಬಿಡಿಸಿ ತಂದ ದಿನವೆಂದು ಈ ಕಾಲವನ್ನು ಆಚರಿಸಲಾಗುತ್ತದೆ.

ಜೈನ ಧರ್ಮ

ಬದಲಾಯಿಸಿ

ಜೈನ ಧರ್ಮದಲ್ಲಿ ದೀಪಾವಳಿಯನ್ನು ಕಾರ್ತಿಕ ಮಾಸದ ೩ ದಿನ ಆಚರಿಸುತ್ತಾರೆ. ದೀಪಾವಳಿಯು ಜೈನ ಧರ್ಮದಲ್ಲಿ ಕಡೆಯ ತೀರ್ಥಂಕರ ಮಹಾವೀರರು ಕಾರ್ತಿಕ ಚತಿರ್ದಶಿಯಂದು (ಕ್ರಿ.ಪೂ ೫೨೭ ಅಕ್ಟೋಬರ್ ೧೫) ಪಾವಾಪುರಿಯಲ್ಲಿ ಮೋಕ್ಷ ಹೊಂದಿದ ದಿನವಾಗಿ ಆಚರಿಸುತ್ತಾರೆ. ಕ್ರಿ.ಪೂ ೩ನೇ ಶತಮಾನದಲ್ಲಿ ಆಚಾರ್ಯ ಭದ್ರಬಾಹುವಿನಿಂದ ರಚಿತವಾದ ಕಲ್ಪಶ್ರುತ ಗ್ರಂಥದಲ್ಲಿರುವಂತೆ ಮಹಾವೀರರ ನಿರ್ವಾಣ ಕಾಲದಲ್ಲಿದ್ದ ದೇವತೆಗಳಿಂದ ಅಂಧಕಾರವು ಮರೆಯಾಗಿದ್ದಿತು. ಆದರೆ ಮುಂದಿನ ರಾತ್ರಿ ಗಾಡಾಂಧಕಾರವು ಆವರಿಸಿತು. ತಮ್ಮ ಗುರುವಿನ ಜ್ಜಾನಜ್ಯೋತಿಯ ಸಂಕೇತವಾಗಿ ೧೬ ಗಣ-ಚಕ್ರವರ್ತಿ, ೯ ಮಲ್ಲ ಮತ್ತು ೯ಗಣರಾಜ್ಯದಲ್ಲಿ ದ್ವಾರವನ್ನು ಬೆಳಗಿದರು. ಜೈನರಿಗೆ ಇದು ವರ್ಷದ ಪ್ರಾರಂಭ. ಮನೆಯ ದ್ವಾರವನ್ನು ದೀಪದಿಂದ ಬೆಳಗುವುದರ ಜೊತೆಗೆ ಈ ಸಮಯದಲ್ಲಿ ಮಹಾವೀರರ ಉಪದೇಶಗಳನ್ನೊಳಗೊಂಡ ಉತ್ತಾರಾಧ್ಯಾಯನ ಸ್ತೋತ್ರದ ಪಠಣೆ ಮಾಡುತ್ತಾರೆ. ಕೆಲವರು ಮಹಾವೀರರ ನಿರ್ವಾಣ ಸ್ಠಳವಾದ ಬಿಹಾರ ರಾಜ್ಯದ ಪಾವಾಪುರಿಗೆ ಯಾತ್ರೆ ಕೈಗೊಳ್ಳುತ್ತಾರೆ. ವ್ಯಾಪಾರಿಗಳು ಹೊಸ ಲೆಕ್ಕದ ಪುಸ್ತಕಗಳನ್ನು ಪ್ರಾರಂಭಿಸುತ್ತಾರೆ.

ಚಿತ್ರಗಳು

ಬದಲಾಯಿಸಿ
ಚತುರ್ದಶಿಯ ದೀಪಗಳ ಅಲಂಕಾರ (ಒಳಾಂಗಣ)
ನೇಪಾಳಿನ ದೇವಸ್ಥಾನ, ದೀಪಾವಳಿಯ ಅಲಂಕಾರ (ತಿಹಾರ್ ಹಬ್ಬ)
ಅಮೃತಸರದ "ಬಂಡಿ ಚೋರ್ ದಿವಸ್" ಮತ್ತು ದೀಪಾವಳಿಯ ಸಡಗರ
ಚೆನ್ನೈ ನಗರದ ಸಿಡಿಮದ್ದುಗಳ ಸಂಭ್ರಮ
ಗ್ರಾಮಾಂತರ - ಗಂಗಾ ನದಿಯ ಮೇಲಿನ ತೇಲುವ ದೀಪಗಳು
ದೀಪಾವಳಿ "ಮಿಠಾಯಿ"

ಉಲ್ಲೇಖಗಳು

ಬದಲಾಯಿಸಿ
  1. Townsend, Charles M (2014). TheOxford Handbook of Sikh Studies. Oxford University Press. p. 440. ISBN 978-0-19-969930-8.
  2. "ಆರ್ಕೈವ್ ನಕಲು". Archived from the original on 2019-10-12. Retrieved 2019-10-12.


"https://kn.wikipedia.org/w/index.php?title=ದೀಪಾವಳಿ&oldid=1259254" ಇಂದ ಪಡೆಯಲ್ಪಟ್ಟಿದೆ