ಬಳ್ಳಾರಿ
ವಿಜಯನಗರದ ಕರ್ನಾಟಕ ರಾಜ್ಯದ ಒಂದು ಪ್ರಮುಖ ಜಿಲ್ಲೆ; ಇದೇ ಹೆಸರಿನ ನಗರ ಜಿಲ್ಲೆಯ ರಾಜಧಾನಿ. ಗಗ್ಗಗ್
ಇಲ್ಲಿನ ಪ್ರಸಿದ್ಧ ಸ್ಥಳಗ ಳಲ್ಲಿ ಹಂಪೆ ಮತ್ತು ಅಲ್ಲಿರುವ ವಿಜಯನಗರ ಸಾಮ್ರಾಜ್ಯದ ಅವಶೇಷಗಳು ಮುಖ್ಯವಾದವು. ಬಳ್ಳಾರಿ ಜಿಲ್ಲೆಯ ಇನ್ನೊಂದು ಪ್ರಮುಖ ಪಟ್ಟಣ ಎಂದರೆ ಹೊಸಪೇಟೆ - ಇಲ್ಲಿರುವ ತುಂಗಭದ್ರಾ ಅಣೆಕಟ್ಟು ಕೃಷಿಗೆ ನೀರನ್ನು ಒದಗಿಸುತ್ತದೆ. ಬೊಮ್ಮಘಟ್ಟ
ಇಲ್ಲಿಯ ಶ್ರೀ ಹುಲಿಕುಂಟೇರಾಯ ದೇವಸ್ಥಾನವು ಪ್ರಸಿದ್ಧವಾಗಿದೆ. ಇಲ್ಲಿ
ಪ್ರತೀ ವರ್ಷ ಪಾಲ್ಗುಣ ಶುಕ್ಲದ ದಶಮಿಯಂದು ರಥೋತ್ಸವ ಇರುತ್ತದೆ ಹಾಗೂ ಸಂಡೂರು ತಾಲೂಕಿನ ಸೋವೇನಹಳ್ಳಿಯಲ್ಲಿ ಸಾರಿದುರ್ಗಾಂಭ ಹಾಗೂ ಶ್ರೀ ಸಿದ್ದಲಿಂಗೇಶ್ವರ ರಥೋತ್ಸವಗಳು ವೈಭವದಿಂದ ಜರುಗುತ್ತವೆ.
ಚರಿತ್ರೆ
ಚಾರಿತ್ರಿಕವಾಗಿ, ಬಳ್ಳಾರಿ ಜಿಲ್ಲೆಗೆ ಪ್ರಾಮುಖ್ಯತೆಗೆ ಬಂದದ್ದು ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ. ಇದಕ್ಕೆ ಮೊದಲು ಈ ಪ್ರದೇಶ ಶಾತವಾಹನ, ಕಲ್ಯಾಣಿ ಚಾಲುಕ್ಯರು, ಕದಂಬರು, ಸೇವುಣರು ಮತ್ತು ಹೊಯ್ಸಳರ ನಿಯಂತ್ರಣದಲ್ಲಿತ್ತು. ವಿಜಯನಗರ ಸಾಮ್ರಾಜ್ಯ ಬಳ್ಳಾರಿ ಜಿಲ್ಲೆಯಲ್ಲೇ ರಾಜಧಾನಿಯನ್ನು ಹೊಂದಿದ್ದರಿಂದ ಆ ಸಮಯದಲ್ಲಿ ಈ ಜಿಲ್ಲೆ ಪ್ರಾಮುಖ್ಯತೆಗೆ ಬಂದಿತು. ಬ್ರಿಟಿಷ್ ಆಡಳಿತದ ಕಾಲದಲ್ಲಿ ಮದರಾಸು ಪ್ರಾಂತ್ಯಕ್ಕೆ ಸೇರಿದ್ದ ಬಳ್ಳಾರಿ ಜಿಲ್ಲೆ ೧೯೫೩ ರಲ್ಲಿ ಮೈಸೂರು ರಾಜ್ಯಕ್ಕೆ ವರ್ಗಾಯಿಸಲ್ಪಟ್ಟಿತು.
ಭೌಗೋಳಿಕತೆ
ಕರ್ನಾಟಕದ ಪೂರ್ವದ ಗಡಿಯಲ್ಲಿರುವ ಬಳ್ಳಾರಿ ಜಿಲ್ಲೆಯ ಉತ್ತರಕ್ಕೆ ರಾಯಚೂರು ಮತ್ತು ಕೊಪ್ಪಳ, ಪಶ್ಚಿಮಕ್ಕೆ ಹಾವೇರಿ ಮತ್ತು ಗದಗ್, ದಕ್ಷಿಣಕ್ಕೆ ದಾವಣಗೆರೆ ಮತ್ತು ಚಿತ್ರದುರ್ಗ ಮತ್ತು ಪೂರ್ವಕ್ಕೆ ಆಂಧ್ರ ಪ್ರದೇಶದ ಅನಂತಪುರ ಹಾಗೂ ಕರ್ನೂಲು ಜಿಲ್ಲೆಗಳಿವೆ. ಈ ಜಿಲ್ಲೆಯ ವಿಸ್ತೀರ್ಣ ೮೪೪೭ ಚ.ಕಿಮೀ ಮತ್ತು ವಾರ್ಷಿಕ ಮಳೆ ೬೩.೯ ಸೆಮೀ. ಬಳ್ಳಾರಿ ಜಿಲ್ಲೆಯಲ್ಲಿ ಕಬ್ಬಿಣ, ಮ್ಯಾಂಗನೀಸ್, ತಾಮ್ರ ಮತ್ತು ಸೀಸದ ಗಣಿಗಳು ಸಾಕಷ್ಟಿವೆ.
ಆಕರ್ಷಣೀಯ ಸ್ಥಳಗಳು
ಬಳ್ಳಾರಿಯು ಗಣಿನಾಡು ಎಂದೇ ಪ್ರಸಿದ್ಧಿ
1.ಬಳ್ಳಾರಿ: ಬಳ್ಳಾರಿ ಕೋಟೆ, ಬಳ್ಳಾರಿಯ ಕನಕದುರ್ಗಮ್ಮ ಗುಡಿ, ಮಹದೇವತಾತನವರ ಮಠ
2. ಸಂಡೂರು: ಕುಮಾರಸ್ವಾಮಿ ದೇವಸ್ಥಾನ, ನಾರಿಹಳ್ಳ, ಗಣಿಗಾರಿಕೆ
3. ಕುರುಗೋಡು: ದೊಡ್ಡಬಸವೇಶ್ವರ ದೇವಸ್ಥಾನ
ತಾಲ್ಲೂಕುಗಳು:
ಬಳ್ಳಾರಿ, ಕಂಪ್ಲಿ, ಸಂಡೂರು, ಸಿರುಗುಪ್ಪ, ಕುರುಗೋಡು
ಆಕರ್ಷಣೆಗಳುಸಂಪಾದಿಸಿ
ಬಳ್ಳಾರಿ ಜಿಲ್ಲೆಯ ಪ್ರಸಿದ್ಧ ಸ್ಥಳಗಳಲ್ಲಿ ಹಂಪೆ ಸಿಂಧಿಗೇರಿ ಮತ್ತು ಅಲ್ಲಿರುವ ವಿಜಯನಗರ ಸಾಮ್ರಾಜ್ಯದ ಅವಶೇಷಗಳು ಮುಖ್ಯವಾದವು. ಬಳ್ಳಾರಿ ಜಿಲ್ಲೆಯ ಇನ್ನೊಂದು ಪ್ರಮುಖ ಪಟ್ಟಣ ಎಂದರೆ ಹೊಸಪೇಟೆ - ಇಲ್ಲಿರುವ ತುಂಗಭದ್ರಾ ಅಣೆಕಟ್ಟು ಕೃಷಿಗೆ ನೀರನ್ನು ಒದಗಿಸುತ್ತದೆ. ಬೊಮ್ಮಘಟ್ಟ ಇಲ್ಲಿಯ ಶ್ರೀ ಹುಲಿಕುಂಟೇರಾಯ ದೇವಸ್ಥಾನವು ಪ್ರಸಿದ್ಧವಾಗಿದೆ. ಇಲ್ಲಿ ಪ್ರತೀ ವರ್ಷ ಪಾಲ್ಗುಣ ಶುಕ್ಲದ ದಶಮಿಯಂದು ರಥೋತ್ಸವ ಇರುತ್ತದೆ ಹಾಗೂ ಸಂಡೂರು ತಾಲೂಕಿನ ಸೋವೇನಹಳ್ಳಿಯಲ್ಲಿ ಸಾರಿದುರ್ಗಾಂಭ ಹಾಗೂ ಶ್ರೀ ಸಿದ್ದಲಿಂಗೇಶ್ವರ ರಥೋತ್ಸವಗಳು ವೈಭವದಿಂದ ಜರುಗುತ್ತವೆ. ಓರೆ ಅಕ್ಷರಗಳು
ಚರಿತ್ರೆಸಂಪಾದಿಸಿ
ಚಾರಿತ್ರಿಕವಾಗಿ, ಬಳ್ಳಾರಿ ಜಿಲ್ಲೆಗೆ ಪ್ರಾಮುಖ್ಯತೆಗೆ ಬಂದದ್ದು ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ. ಇದಕ್ಕೆ ಮೊದಲು ಈ ಪ್ರದೇಶ ಶಾತವಾಹನ, ಕಲ್ಯಾಣಿ ಚಾಲುಕ್ಯರು, ಕದಂಬರು, ಸೇವುಣರು ಮತ್ತು ಹೊಯ್ಸಳರ ನಿಯಂತ್ರಣದಲ್ಲಿತ್ತು. ವಿಜಯನಗರ ಸಾಮ್ರಾಜ್ಯ ಬಳ್ಳಾರಿ ಜಿಲ್ಲೆಯಲ್ಲೇ ರಾಜಧಾನಿಯನ್ನು ಹೊಂದಿದ್ದರಿಂದ ಆ ಸಮಯದಲ್ಲಿ ಈ ಜಿಲ್ಲೆ ಪ್ರಾಮುಖ್ಯತೆಗೆ ಬಂದಿತು. ಬ್ರಿಟಿಷ್ ಆಡಳಿತದ ಕಾಲದಲ್ಲಿ ಮದರಾಸು ಪ್ರಾಂತ್ಯಕ್ಕೆ ಸೇರಿದ್ದ ಬಳ್ಳಾರಿ ಜಿಲ್ಲೆ ೧೯೫೩ ರಲ್ಲಿ ಮೈಸೂರು ರಾಜ್ಯಕ್ಕೆ ವರ್ಗಾಯಿಸಲ್ಪಟ್ಟಿತು.
ಭೌಗೋಳಿಕತೆಸಂಪಾದಿಸಿ
ಕರ್ನಾಟಕದ ಪೂರ್ವದ ಗಡಿಯಲ್ಲಿರುವ ಬಳ್ಳಾರಿ ಜಿಲ್ಲೆಯ ಉತ್ತರಕ್ಕೆ ರಾಯಚೂರು ಮತ್ತು ಕೊಪ್ಪಳ, ಪಶ್ಚಿಮಕ್ಕೆ ಹಾವೇರಿ ಮತ್ತು ಗದಗ್, ದಕ್ಷಿಣಕ್ಕೆ ದಾವಣಗೆರೆ ಮತ್ತು ಚಿತ್ರದುರ್ಗ ಮತ್ತು ಪೂರ್ವಕ್ಕೆ ಆಂಧ್ರ ಪ್ರದೇಶದ ಅನಂತಪುರ ಹಾಗೂ ಕರ್ನೂಲು ಜಿಲ್ಲೆಗಳಿವೆ. ಈ ಜಿಲ್ಲೆಯ ವಿಸ್ತೀರ್ಣ ೮೪೪೭ ಚ.ಕಿಮೀ ಮತ್ತು ವಾರ್ಷಿಕ ಮಳೆ ೬೩.೯ ಸೆಮೀ. ಬಳ್ಳಾರಿ ಜಿಲ್ಲೆಯಲ್ಲಿ ಕಬ್ಬಿಣ, ಮ್ಯಾಂಗನೀಸ್, ತಾಮ್ರ ಮತ್ತು ಸೀಸದ ಗಣಿಗಳು ಸಾಕಷ್ಟಿವೆ.
ತಾಲೂಕುಗಳುಸಂಪಾದಿಸಿ
- ಬಳ್ಳಾರಿ
- ಹೂವಿನ ಹಡಗಲಿ
- ಹಗರಿಬೊಮ್ಮನಹಳ್ಳಿ
- ಕೂಡ್ಲಿಗಿ
- ಶಿರಗುಪ್ಪ
- ಹೊಸಪೇಟೆ
- ಸಂಡೂರು
- ಕೊಟ್ಟೂರು
- ಕಂಪ್ಲಿ
- ಕುರಗೋಡ
- ಹರಪ್ಪನಹಳ್ಳಿ
- ಅಕ್ಟೋಬರ್ 2, 2021 ರಿಂದ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸಪೇಟೆಯನ್ನು ಕೇಂದ್ರವಾಗಿಟ್ಟುಕೊಂಡು ವಿಜಯ ನಗರ ಪ್ರತ್ಯೇಕ ಜಿಲ್ಲೆಯನ್ನು ರಚಿಸಲಾಗಿದೆ. ಆದ್ದರಿಂದ ಬಳ್ಳಾರಿ ಜಿಲ್ಲೆಯಲ್ಲಿ ಈಗ ಕೇವಲ ಐದು ತಾಲೂಕುಗಳಿವೆ. ಅವೆಂದರೆ ಬಳ್ಳಾರಿ, ಕುರುಗೋಡು, ಕಂಪ್ಲಿ, ಸಿರಗುಪ್ಪ ಮತ್ತು ಸಂಡೂರು.
ಕೃಷಿಸಂಪಾದಿಸಿ
ಕೃಷಿ ಬಳ್ಳಾರಿ ಜಿಲ್ಲೆಯ ಮುಖ್ಯ ವೃತ್ತಿ. ಕೃಷಿಗೆ ನೀರಿನ ಸರಬರಾಜು ತುಂಗಭದ್ರಾ ನದಿ ಮತ್ತು ಹೊಸಪೇಟೆಯಲ್ಲಿನ ತುಂಗಭದ್ರಾ ಅಣೆಕಟ್ಟಿನಿಂದ ಆಗುತ್ತದೆ. ಇಲ್ಲಿ ಬೆಳೆಯಲ್ಪಡುವ ಮುಖ್ಯ ಬೆಳೆಗಳು ಹತ್ತಿ, ಜೋಳ, ನೆಲಗಡಲೆ, ಭತ್ತ, ಸೂರ್ಯಕಾಂತಿ.
ಇದನ್ನೂ ನೋಡಿಸಂಪಾದಿಸಿ
- ಬಳ್ಳಾರಿ (ಲೋಕ ಸಭೆ ಚುನಾವಣಾ ಕ್ಷೇತ್ರ)
- ಶೇಖರ್ ಗುಪ್ತ;‘ಬಳ್ಳಾರಿ ರಿಪಬ್ಲಿಕ್’ ಉದಯದ ನಿರೀಕ್ಷೆಯಲ್ಲಿ...;13 May, 2018 Archived 2018-06-08 ವೇಬ್ಯಾಕ್ ಮೆಷಿನ್ ನಲ್ಲಿ.
ವಿಕಿಟ್ರಾವೆಲ್ ನಲ್ಲಿ ಬಳ್ಳಾರಿ ಪ್ರವಾಸ ಕೈಪಿಡಿ (ಆಂಗ್ಲ)