ಭೂತನಾಳ ಗ್ರಾಮವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ ವಿಜಯಪುರ ತಾಲ್ಲೂಕಿನಲ್ಲಿದೆ.

ಭೂತನಾಳ
India-locator-map-blank.svg
Red pog.svg
ಭೂತನಾಳ
ರಾಜ್ಯ
 - ಜಿಲ್ಲೆ
ಕರ್ನಾಟಕ
 - ವಿಜಯಪುರ
ನಿರ್ದೇಶಾಂಕಗಳು 16.1833° N 75.7000° E
ವಿಸ್ತಾರ
 - ಎತ್ತರ
 km²
 - 770 ಮೀ.
ಸಮಯ ವಲಯ IST (UTC+5:30)
ಜನಸಂಖ್ಯೆ (೨೦೧೨)
 - ಸಾಂದ್ರತೆ

 - ೫೦/ಚದರ ಕಿ.ಮಿ.

ಭೌಗೋಳಿಕಸಂಪಾದಿಸಿ

ಗ್ರಾಮವು ಭೌಗೋಳಿಕವಾಗಿ ೧೬* ೩೨' ೧೦"x ಉತ್ತರ ಅಕ್ಷಾಂಶ ಮತ್ತು ೭೫* ೩೧' ೧೯" ಪೂರ್ವ ರೇಖಾಂಶದಲ್ಲಿ ಬರುತ್ತದೆ.

ಹವಾಮಾನಸಂಪಾದಿಸಿ

  • ಬೆಸಿಗೆ-ಚಳಿಗಾಲದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ ೪೨.೭ ಡಿಗ್ರಿವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ ೯.೫ ಡಿಗ್ರಿ ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ.
  • ಬೇಸಿಗೆಕಾಲ - ೩೫°C-೪೨°C ಡಿಗ್ರಿ ಸೆಲ್ಸಿಯಸ್
  • ಚಳಿಗಾಲ ಮತ್ತು
  • ಮಳೆಗಾಲ - ೧೮°C-೨೮°C ಡಿಗ್ರಿ ಸೆಲ್ಸಿಯಸ್.
  • ಮಳೆ - ಪ್ರತಿ ವರ್ಷ ಮಳೆ ೩೦೦ - ೬೦೦ಮಿಮಿ ಗಳಸ್ಟು ಆಗಿರುತ್ತದೆ.
  • ಗಾಳಿ -ಗಾಳಿ ವೇಗ ೧೮.೨ ಕಿಮಿ/ಗಂ (ಜೂನ), ೧೯.೬ ಕಿಮಿ/ಗಂ (ಜುಲೈ)ಹಾಗೂ ೧೭.೫ ಕಿಮಿ/ಗಂ (ಅಗಸ್ಟ್) ಇರುತ್ತದೆ.

ಜನಸಂಖ್ಯೆಸಂಪಾದಿಸಿ

ಗ್ರಾಮದಲ್ಲಿ ಜನಸಂಖ್ಯೆ ಸುಮಾರು 2500 ಇದೆ. ಅದರಲ್ಲಿ 1300 ಪುರುಷರು ಮತ್ತು 1200 ಮಹಿಳೆಯರು ಇದ್ದಾರೆ.

ಕಲೆ ಮತ್ತು ಸಂಸ್ಕೃತಿಸಂಪಾದಿಸಿ

 
ಉತ್ತರ ಕರ್ನಾಟಕದ ಊಟ

ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ.ಮಹಿಳೆಯರು ಇಲಕಲ್ಲ ಸೀರೆ ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ.

ಸಾಂಸ್ಕೃತಿಕಸಂಪಾದಿಸಿ

ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ,ಮೆಕ್ಕೆ ಜೋಳ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಜೋಳದ ರೊಟ್ಟಿ, ಸೇಂಗಾ ಚಟ್ನಿ, ಎಣ್ಣಿ ಬದನೆಯಕಾಯಿ ಪಲ್ಯ, ಕೆನೆಮೊಸರು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ.

ಧರ್ಮಸಂಪಾದಿಸಿ

ಗ್ರಾಮದಲ್ಲಿ ಹಿಂದೂ ಮತ್ತು ಮುಸ್ಲಿಂ ಧರ್ಮದ ಜನರಿದ್ದಾರೆ.

ಭಾಷೆಸಂಪಾದಿಸಿ

ಗ್ರಾಮದ ಪ್ರಮುಖ ಭಾಷೆ ಕನ್ನಡ. ಇದರೊಂದಿಗೆ ಹಿಂದಿ, ಮರಾಠಿ ಹಾಗೂ ಇಂಗ್ಲೀಷ್ ಭಾಷೆಗಳನ್ನು ಮಾತನಾಡುತ್ತಾರೆ.

ದೇವಾಲಯಸಂಪಾದಿಸಿ

  • ಶ್ರೀ ಮಹಾಲಕ್ಷ್ಮಿ ದೇವಾಲಯ
  • ಶ್ರೀ ದುರ್ಗಾದೇವಿ ದೇವಾಲಯ
  • ಶ್ರೀ ಮಲ್ಲಿಕಾರ್ಜುನ ದೇವಾಲಯ
  • ಶ್ರೀ ಬಸವೇಶ್ವರ ದೇವಾಲಯ
  • ಶ್ರೀ ವೆಂಕಟೇಶ್ವರ ದೇವಾಲಯ
  • ಶ್ರೀ ಪಾಂಡುರಂಗ ದೇವಾಲಯ
  • ಶ್ರೀ ಹಣಮಂತ ದೇವಾಲಯ

ಮಸೀದಿಸಂಪಾದಿಸಿ

ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.

ನೀರಾವರಿಸಂಪಾದಿಸಿ

ಗ್ರಾಮದ ಪ್ರತಿಶತ 50 ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.

ಕಾಲುವೆಸಂಪಾದಿಸಿ

ಕೃಷ್ಣಾ ನದಿಯ ಆಲಮಟ್ಟಿ ಆಣೆಕಟ್ಟುಯಿಂದ ಮುಳವಾಡ ಏತ ನೀರಾವರಿ ಕಾಲುವೆ ಕಾಲುವೆಯಿದ್ದು ಗ್ರಾಮದಲ್ಲಿ ಸಂಪೂರ್ಣ ಕೃಷಿಗೆ ಸಹಕಾರಿಯಾಗಿದೆ.

ಕೃಷಿ ಮತ್ತು ತೋಟಗಾರಿಕೆಸಂಪಾದಿಸಿ

ಗ್ರಾಮದ ಪ್ರಮುಖ ಉದ್ಯೋಗವೇ ಕೃಷಿ ಮತ್ತು ತೋಟಗಾರಿಕೆಯಾಗಿದೆ. ಈ ಕ್ಷೇತ್ರದಲ್ಲಿ ಸುಮಾರು ೭೫% ಜನರು ಕೆಲಸ ಮಾಡುತ್ತಾರೆ. ಗ್ರಾಮದಲ್ಲಿ ಕೇವಲ ೧೫% ಭೂಮಿ ಮಾತ್ರ ನೀರಾವರಿ ಹೊಂದಿದೆ. ಉಳಿದ ೮೫% ಭೂಮಿ ಮಳೆಯನ್ನೇ ಅವಲಂಭಿಸಿದೆ.

ಆರ್ಥಿಕತೆಸಂಪಾದಿಸಿ

ಗ್ರಾಮದಲ್ಲಿ ಆರ್ಥಿಕ ವ್ಯವಸ್ಥೆ ಮಧ್ಯಮ ತರಗತಿಯಲ್ಲಿದೆ.

ಉದ್ಯೋಗಸಂಪಾದಿಸಿ

ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ ೭೦% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ.

ಬೆಳೆಸಂಪಾದಿಸಿ

ಆಹಾರ ಬೆಳೆಗಳು

ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ

ವಾಣಿಜ್ಯ ಬೆಳೆಗಳು

ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ.

ತರಕಾರಿ ಬೆಳೆಗಳು

ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ.

ಪ್ರಾಣಿಸಂಪಾದಿಸಿ

ತೋಳ, ನರಿ, ಹಾವು, ಮೊಲ, ನವಿಲು, ಬೆಳ್ಳಕ್ಕಿ, ಗುಬ್ಬಿ, ಕಾಗೆ, ಕೋಗಿಲೆ ಇತ್ಯಾದಿ.

ಹಬ್ಬಸಂಪಾದಿಸಿ

ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.

ಶಿಕ್ಷಣಸಂಪಾದಿಸಿ

  • ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಭೂತನಾಳ
  • ಬಿವಿವಿ ಕಿರಿಯ ಪ್ರಾಥಮಿಕ ಶಾಲೆ, ಭೂತನಾಳ
  • ಬಿವಿವಿ ಹಿರಿಯ ಪ್ರಾಥಮಿಕ ಶಾಲೆ, ಭೂತನಾಳ
  • ಬಿವಿವಿ ಪ್ರೌಢ ಶಾಲೆ, ಭೂತನಾಳ
  • ಬಿವಿವಿ ಪದವಿ ಪೂರ್ವ ಮಹಾವಿದ್ಯಾಲಯ, ಭೂತನಾಳ
  • ವಿಶ್ವಚೇತನ ಪದವಿ ಪೂರ್ವ ಮಹಾವಿದ್ಯಾಲಯ, ಭೂತನಾಳ
  • ಪ್ರೇರಣಾ ಅಂತರಾಷ್ಟ್ರೀಯ ಶಾಲೆ, ಭೂತನಾಳ

ಸಾಕ್ಷರತೆಸಂಪಾದಿಸಿ

ಗ್ರಾಮದ ಸಾಕ್ಷರತೆಯ ಪ್ರಮಾಣ ಸುಮಾರು ೬೭%. ಅದರಲ್ಲಿ ೭೫% ಪುರುಷರು ಹಾಗೂ ೫೫% ಮಹಿಳೆಯರು ಸಾಕ್ಷರತೆ ಹೊಂದಿದೆ.

ರಾಜಕೀಯಸಂಪಾದಿಸಿ

ಗ್ರಾಮವು ವಿಜಯಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ.

ಮಳೆ ಮಾಪನ ಕೇಂದ್ರಸಂಪಾದಿಸಿ

  • ಮಳೆ ಮಾಪನ ಕೇಂದ್ರ, ಭೂತನಾಳ

ಮದ್ಯ ಘಟಕಸಂಪಾದಿಸಿ

  • ಹಂಪಿ ಹೆರಿಟೆಜ್ ಮದ್ಯ ಘಟಕ, ಭೂತನಾಳ, ತಾ||ಜಿ|| ವಿಜಯಪುರ

ಅರಣ್ಯ ಇಲಾಖೆಯ ನರ್ಸರಿಸಂಪಾದಿಸಿ

  • ಭೂತನಾಳ ನರ್ಸರಿ, ತಾ||ಜಿ|| ವಿಜಯಪುರ

ಹಾಲು ಉತ್ಪಾದಕ ಘಟಕಸಂಪಾದಿಸಿ

ಕೆ.ಎಮ್.ಎಫ್.(ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ)ನ ಸಹಾಯದೊಂದಿಗೆ ವಿಜಯಪುರ ನಗರದ ಹೊರವಲಯದ ಭೂತನಾಳ ಗ್ರಾಮದಲ್ಲಿ ವಿಜಯಪುರ ಮತ್ತು ಬಾಗಲಕೋಟ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟವನ್ನು ಸ್ಥಾಪಿಸಲಾಗಿದೆ. ವಿಜಯಪುರ ಮತ್ತು ಬಾಗಲಕೋಟ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ, ಭೂತನಾಳ, ವಿಜಯಪುರ. ಇದನ್ನು ವಿಜಯಪುರ ಡೈರಿಯಂತಲು ಕರೆಯುತ್ತಾರೆ. ಡೈರಿಯು ಜಿಲ್ಲೆಯಲ್ಲಿ ಸುಮಾರು 100ಕ್ಕೂ ಹೆಚ್ಚು ಡೈರಿ ಸಹಕಾರಿ ಸಂಘಗಳನ್ನು ಹೊಂದಿದೆ.

ವಿದ್ಯುತ್ ಪರಿವರ್ತನಾ ಕೇಂದ್ರಸಂಪಾದಿಸಿ

  • 110 ಕೆವಿ ವಿದ್ಯುತ್ ಪರಿವರ್ತನಾ ಕೇಂದ್ರ, ಭೂತನಾಳ

ಮೀನುಗಾರಿಕೆ ಸಂಶೋಧನಾ ಕೇಂದ್ರಸಂಪಾದಿಸಿ

  • ಮೀನುಗಾರಿಕೆ ಸಂಶೋಧನಾ ಕೇಂದ್ರ, ಭೂತನಾಳ, ವಿಜಯಪುರ

ಉಲ್ಲೇಖಸಂಪಾದಿಸಿ

ವಿಜಯಪುರ

ಕರ್ನಾಟಕ

"https://kn.wikipedia.org/w/index.php?title=ಭೂತನಾಳ&oldid=852817" ಇಂದ ಪಡೆಯಲ್ಪಟ್ಟಿದೆ