ಭ್ರಷ್ಟಾಚಾರವು ಯಾವುದೇ ವ್ಯಕ್ತಿ ನಿಯಮಬಾಹಿರವಾದ ಮತ್ತು ತನಗೆ ತಮ್ಮವರಿಗೆ ನ್ಯಾಯಬದ್ಧವಾಗಿ ಸಲ್ಲಬೇಕಾದುದಕ್ಕಿಂತ ಹೆಚ್ಚಿನ ಸೌಲಭ್ಯ ಅಥವಾ ವಸ್ತು ಯಾ ಹಣ ಪಡೆಯುವುದು ಅಥವಾ ಲಾಭಮಾಡಿಕೊಳ್ಳುವುದು ಎನ್ನಬಹುದು. ಸಾರ್ವಜನಿಕ ಸೇವಾ ಸ್ಥಾನದಲ್ಲಿರುವವರು, ಜನ ಪ್ರತಿನಿಧಿಗಳು ಅಥವಾ ಸರಕಾರದ ಅಧಿಕಾರಿಗಳು ಯಾ ಸೇವಕರು ನಿಯಮ ಬಾಹಿರವಾಗಿ ಅಥವಾ ತಮ್ಮ ಆ ಸ್ಥಾನವನ್ನು ಉಪಯೋಗಿಸಿಕೊಂಡು ನಿಯಮಕ್ಕಿಂತ ಹೆಚ್ಚಿನ ಅಥವಾ ತಮಗೆ ಸಲ್ಲಬೇಕಾದುದಕ್ಕಿಂತ ಹೆಚ್ಚಿನ ಸೌಲಭ್ಯ ಅಥವಾ ಲಾಭ ಪಡೆಯುವುದು. ತಮ್ಮ ಅಧಿಕಾರವನ್ನು ನಿಯಮಕ್ಕೆ ವಿರುದ್ಧವಾಗಿ ಸ್ವಂತ ಉಪಯೋಗಕ್ಕೆ ಬಳಸಿಕೊಳ್ಳುವುದು.
ಪ್ರಕರಣ ದಾಖಲಾದರೂ ನ್ಯಾಯ ನೀಡಿಕೆ ಮತ್ತು ತಪ್ಪಿತಸ್ಥರಿಗೆ ಶಿಕ್ಷೆ ಆಗುವಲ್ಲಿ ವಿಳಂಬವಾಗುತ್ತಿರುವುದರಿಂದ ಭ್ರಷ್ಟಾಚಾರ ನಿಯಂತ್ರಣ ಪರಿಣಾಮಕಾರಿಯಾಗುತ್ತಿಲ್ಲ. ಹೀಗಾಗಿ ಹಲವೆಡೆ ಜನರು ದೂರು ನೀಡಲೂ ಹಿಂದೇಟು ಹಾಕುತ್ತಿದ್ದಾರೆ ಎಂದು ‘ಕಾಮನ್‌ವೆಲ್ತ್ ಹ್ಯೂಮನ್ ರೈಟ್ಸ್ ಇನಿಷಿಯೇಟಿವ್’ ಹೇಳಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ ಬಿಡುಗಡೆ ಮಾಡಿರುವ ವರದಿಯನ್ನು ಅಧ್ಯಯನ ಮಾಡಿ ಸಂಸ್ಥೆ ಈ ವರದಿ ಸಿದ್ಧಪಡಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಹೊರತಾಗಿಯೂ ಭಾರತದಲ್ಲಿ ನಾಗರಿಕರು ಮೂಲ ಸೌಲಭ್ಯ ಪಡೆಯಲು ಲಂಚ ನೀಡಲೇ ಬೇಕಾದ ಒತ್ತಡದಲ್ಲಿ ಸಿಲುಕಿದ್ದಾರೆ ಎಂದು ವರದಿ ಬಹಿರಂಗಪಡಿಸಿದೆ.
ಸರ್ಕಾರಿ ಸಾರ್ವಜನಿಕ ಸೇವೆಗಳಾದ ಶಾಲೆ, ಆಸ್ಪತ್ರೆಗಳಂತಹ ಮೂಲ ಸೌಲಭ್ಯ ಪಡೆಯಲು 10 ಮಂದಿ ಭಾರತೀಯರಲ್ಲಿ ಏಳು ಮಂದಿ(ಶೇಕಡಾ 69) ಲಂಚ ನೀಡಬೇಕಾದ ಸ್ಥಿತಿ ಇದೆ ಎಂದು ‘ಟ್ರಾನ್ಸ್‌ಪರೆನ್ಸಿ ಇಂಟರ್ ನ್ಯಾಷನಲ್’ ವರದಿಯಲ್ಲಿ ಹೇಳಿದೆ ಎಂದು ‘ಫ್ಲಿಪ್‌ಬೋರ್ಡ್’ ವರದಿ ಮಾಡಿದೆ.
‘ಸಾರ್ವಜನಿಕರು ಮತ್ತು ಭ್ರಷ್ಟಾಚಾರ: ಏಷ್ಯಾ ಪೆಸಿಫಿಕ್’ ಶೀರ್ಷಿಕೆ ಅಡಿ 16 ರಾಷ್ಟ್ರಗಳು ಹಾಗೂ ಇತರೆ ಕೆಲವು ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಲಾಗಿದ್ದು, ಅತಿ ಹೆಚ್ಚು ಲಂಚದ ಪ್ರಮಾಣ ಭಾರತದಲ್ಲಿ ನಡೆಯುತ್ತಿದೆ ಎಂದು ವರದಿ ಬಹಿರಂಗಪಡಿಸಿದೆ. ಭ್ರಷ್ಟಾಚಾರ ವಿರೋಧಿ ಸಂಘಟನೆ 2016ರ ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಭಾರತದಲ್ಲಿ 2,802 ಜನರ ಮುಖಾ ಮುಖಿ ಸಂದರ್ಶನ ನಡೆಸಿದೆ.[೨]