ಮಾಡಿದ್ದುಣ್ಣೊ ಮಹಾರಾಯ

ಎಂ.ಎಸ್. ಪುಟ್ಟಣ್ಣನವರು ರಾಮಾಯಣವನ್ನೇ ಮನಸ್ಸಿನಲ್ಲಿಟ್ಟುಕೊಂಡು ಸ್ತ್ರೀಯ ಪಾತಿವ್ರತ್ಯವನ್ನು ಪ್ರಾಮಾಣಿಕತೆಯ ಒಂದು ರೂಪವೆಂದು ನಿರೂಪಿಸಿ ತಮ್ಮ ಮೊದಲ ಕಾದಂಬರಿ ‘ಮಾಡಿದ್ದುಣ್ಣೋ ಮಹಾರಾಯ’ ವನ್ನು ರಚಿಸಿದರು. ತಮ್ಮ ಮೊದಲ ದಾಂಪತ್ಯದ ಬಿರುಕಿನ ಕಾರಣದಿಂದ ನೊಂದ ಪುಟ್ಟಣ್ಣನವರು, ಅದಕ್ಕೆ ವಿರುದ್ಧ ಮುಕ್ತಾಯವನ್ನು ಈ ಕೃತಿಯಲ್ಲಿ ಕಾಣಿಸಿದ್ದಾರೆ. ಒಂದು ಸಂಸ್ಕೃತಿಯ ಧೋರಣೆಯನ್ನು ವೈಯಕ್ತಿಕ ನೆಲೆಗಟ್ಟಿನಲ್ಲಿ ಅನುಭವಿಸಿ, ಪಕ್ವತೆಯನ್ನು ಹೊಂದಿ ಕಲಾತ್ಮಕವಾಗಿ ಅದನ್ನು ಕೃತಿಯಾಗಿಸುವುದರ ಒಂದು ಶ್ರೇಷ್ಠ ಉದಾಹರಣೆ ‘ಮಾಡಿದ್ದುಣ್ಣೋ ಮಹಾರಾಯ’.