ರಾಮಾಯಣದಲ್ಲಿ ಬರುವ ರಾಕ್ಷಸನ ಪಾತ್ರ.

ಮಾರೀಚ
Rama stalks the demon Marica, who has assumed the form of a golden deer.jpg
ಚಿನ್ನದ ಜಿಂಕೆಯ ರೂಪದಲ್ಲಿರುವ ಮಾರೀಚನನ್ನು ಬೆನ್ನಟ್ಟುತ್ತಿರುವ ರಾಮ
ದೇವನಾಗರಿमारीच
ಸಂಸ್ಕೃತ ಲಿಪ್ಯಂತರಣಮಾರೀಚ
ಸಂಲಗ್ನತೆರಾಕ್ಷಸ
ನೆಲೆದಂಡಕಾರಣ್ಯ

ರಾಮ,ಲಕ್ಷ್ಮಣರು ವಿಶ್ವಾಮಿತ್ರರಲ್ಲಿ ವಿದ್ಯಾರ್ಜನೆ ಮಾಡುತ್ತಿರುವಾಗ ಸುಬಾಹು ಮತ್ತು ಮಾರೀಚನೆಂಬ ರಾಕ್ಷಸರು ವಿಶ್ವಾಮಿತ್ರರ ಹೋಮ-ಯಾಗಾದಿಗಳಲ್ಲಿ ವಿಘ್ನ ತರುತ್ತಿರುತ್ತಾರೆ. ಆಗ ವಿಶ್ವಾಮಿತ್ರರ ಅಪ್ಪಣೆಯ ಮೇರೆಗೆ ರಾಮ,ಲಕ್ಷ್ಮಣರು ಈ ರಾಕ್ಷಸರ ಮೇಲೆ ದಾಳಿ ಮಾಡಿದಾಗ ಸುಬಾಹು ಮೃತನಾಗುತ್ತಾನೆ ಮತ್ತು ಮಾರೀಚ ಅನಾಮಧೇಯ ದ್ವೀಪವೊಂದರಲ್ಲಿ ಬಚ್ಚಿಟ್ಟುಕೊಳ್ಳುತ್ತಾನೆ.ಮುಂದೆ ರಾಮ-ಲಕ್ಷ್ಮಣ-ಸೀತೆಯರು ಅರಣ್ಯದಲ್ಲಿ ವನವಾಸದಲ್ಲಿದ್ದಾಗ ಇದೇ ಮಾರೀಚ ರಾವಣನಿಗೆ ಸಹಾಯಮಾಡಲೆಂದು ಬಂಗಾರ ವರ್ಣದ ಜಿಂಕೆಯಾಗಿ ಸೀತೆಯ ಕುಟೀರದ ಮುಂದೆ ಸುಳಿದಾಡತೊಡಗಿ ಸೀತೆಯ ಮನಸೂರೆಗೊಳ್ಳುತ್ತಾನೆ. ಪತ್ನಿಯ ಆಸೆಗಾಗಿ ಈ ಮಾಯಾಮೃಗ ದ ಬೆನ್ನತ್ತಿ ಹೋದ ರಾಮ ಕೊನೆಗೆ ಬೇಸತ್ತು ಜಿಂಕೆಯನ್ನು ತೀರ್ಥಹಳ್ಳಿಯ ಸಮೀಪವಿರುವ ಮೃಗವಧೆ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ಬಳಿ ಕೊಂದುಹಾಕುತ್ತಾನೆಂದು ರಾಮಾಯಣದಲ್ಲಿ ವಿವರಿಸಲಾಗಿದೆ.ವಾಲ್ಮೀಕಿ ವಿರಚಿತ ರಾಮಾಯಣ
ಪಾತ್ರಗಳು
ವಾಲ್ಮೀಕಿ | ದಶರಥ | ಕೌಸಲ್ಯ | ಸುಮಿತ್ರ | ಕೈಕೇಯಿ | ಜನಕ | ಮಂಥರ | ರಾಮ | ಭರತ | ಲಕ್ಷ್ಮಣ | ಶತ್ರುಘ್ನ | ಸೀತಾ | ಊರ್ಮಿಳಾ | ಮಾಂಡವಿ | ಶ್ರುತಕೀರ್ತಿ | ವಿಶ್ವಾಮಿತ್ರ | ಅಹಲ್ಯ | ಜಟಾಯು | ಸಂಪಾತಿ | ಹನುಮಂತ | ಸುಗ್ರೀವ | ವಾಲಿ | ಅಂಗದ | ಜಾಂಬವಂತ | ವಿಭೀಷಣ | ತಾಟಕ | ಶೂರ್ಪನಖಿ | ಮಾರೀಚ | ಸುಬಾಹು | ಖರ | ರಾವಣ | ಕುಂಭಕರ್ಣ | ಮಂಡೋದರಿ | ಮಯಾಸುರ | ಇಂದ್ರಜಿತ್ | ಪ್ರಹಸ್ತ | ಅಕ್ಷಯಕುಮಾರ | ಅತಿಕಾಯ | ಲವ | ಕುಶ |ಕಬಂಧ
ಇತರೆ
ಅಯೋಧ್ಯೆ | ಮಿಥಿಲಾ | ಲಂಕಾ | ಸರಯು | ಸುಗ್ರೀವಾಜ್ಞೆ | ತ್ರೇತಾಯುಗ | ರಘುವಂಶ | ಲಕ್ಷ್ಮಣ ರೇಖೆ | ಆದಿತ್ಯ ಹೃದಯಂ | ಸಂಜೀವಿನಿ ಪರ್ವತ | ಸುಂದರಕಾಂಡ | ಪುಷ್ಪಕ ವಿಮಾನ | ವೇದಾವತಿ | ವಾನರ |ಜಟಾಯು |
"https://kn.wikipedia.org/w/index.php?title=ಮಾರೀಚ&oldid=856592" ಇಂದ ಪಡೆಯಲ್ಪಟ್ಟಿದೆ