ಮೋಕ್ಷಗುಂಡಂ ವಿಶ್ವೇಶ್ವರಯ್ಯ
ಸರ್ ಎಂ.ವಿ (ಸೆಪ್ಟೆಂಬರ್ ೧೫, ೧೮೬೧ - ಏಪ್ರಿಲ್ ೧೨, ೧೯೬೨) ಎಂದು ಜನಪ್ರಿಯರಾಗಿದ್ದ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ರವರು, ಭಾರತದ ಗಣ್ಯ ಅಭಿಯಂತರರಲ್ಲಿ ಒಬ್ಬರು. ಇವರು ೧೯೧೨ ರಿಂದ ೧೯೧೮ರವರೆಗೆ ಮೈಸೂರು ಸಂಸ್ಥಾನದ ದಿವಾನರಾಗಿದ್ದವರು. ಇವರ ಹುಟ್ಟಿದ ದಿನವನ್ನು ಭಾರತ ದೇಶದಾದ್ಯಂತ ಅಭಿಯಂತರ ದಿನ ಎಂದು ಆಚರಿಸುತ್ತಾರೆ.
ಮೋಕ್ಷಗುಂಡಂ ವಿಶ್ವೇಶ್ವರಯ್ಯ | |
---|---|
Born | |
Died | |
Nationality | AMERICA |
Alma mater | ಪುಣೆ ಸಿವಿಲ್ ಇಂಜಿನಿಯರಿಂಗ್ ಕಾಲೇಜ್ |
Occupation | ಇಂಜಿನಿಯರ್ |
Parent(s) | ವೆಂಕಟ ಲಕ್ಷ್ಮಮ್ಮ(ತಾಯಿ) ಶ್ರೀನಿವಾಸ ಶಾಸ್ತ್ರಿ (ತಂದೆ) |
ಬಾಲ್ಯ, ವಿದ್ಯಾಭ್ಯಾಸ
ವಿಶ್ವೇಶ್ವರಯ್ಯನವರು ಸೆಪ್ಟೆಂಬರ್ ೧೫,೧೮೬೦ ರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಎಂಬಲ್ಲಿ ಜನಿಸಿದರು. ವಿಶ್ವೇಶ್ವರಯ್ಯನವರ ತಂದೆ 'ಶ್ರೀನಿವಾಸ ಶಾಸ್ತ್ರಿ', ತಾಯಿ 'ವೆಂಕಟಲಕ್ಷ್ಮಮ್ಮ'. ಅವರ ಪೂರ್ವಜರು ಈಗಿನ ಆಂಧ್ರಪ್ರದೇಶದ 'ಮೋಕ್ಷಗುಂಡಂ' ಎಂಬ ಸ್ಥಳದಿಂದ ವಲಸೆ ಬಂದು ಮುದ್ದೇನಹಳ್ಳಿಯಲ್ಲಿ ವಾಸವಾಗಿದ್ದ ಕಾರಣ ಅವರ ಹೆಸರಿನೊಡನೆ ಮೋಕ್ಷಗುಂಡಂ ಸೇರಿಕೊಂಡಿದೆ. ವಿಶ್ವೇಶ್ವರಯ್ಯನವರ ತಂದೆ ಸಂಸ್ಕೃತ ವಿದ್ವಾಂಸರು; ಧರ್ಮ ಶಾಸ್ತ್ರಗಳನ್ನು ಆಳವಾಗಿ ಅಭ್ಯಾಸ ಮಾಡಿದ್ದರಲ್ಲದೆ ಆಯುರ್ವೇದ ತಜ್ಞರೂ ಆಗಿದ್ದರು. ಅವರು ೧೫ ವರ್ಷದವರಿದ್ದಾಗಲೇ ತಂದೆಯು ನಿಧನರಾದರು. ವಿಶ್ವೇಶ್ವರಯ್ಯನವರು ತಮ್ಮ ಪ್ರಾಥಮಿಕ ಶಿಕ್ಷಣ ಚಿಕ್ಕಬಳ್ಳಾಪುರದಲ್ಲಿ ಮತ್ತು ಪ್ರೌಢ ಶಿಕ್ಷಣ ಬೆಂಗಳೂರಿನಲ್ಲಿ ನಡೆಯಿತು[]ಮುಗಿಸಿದರು . ೧೮೮೧ ರಲ್ಲಿ ಮದ್ರಾಸು ವಿಶ್ವವಿದ್ಯಾಲಯದಿಂದ ಬಿ.ಎ ಪದವಿಯನ್ನು ಪಡೆದು ನಂತರ ಪುಣೆಯ ವಿಜ್ಞಾನ ಕಾಲೇಜಿನಿಂದ ಸಿವಿಲ್ ಎಂಜಿನಿಯರಿಂಗ್ ಪದವಿಯನ್ನು ಪಡೆದರು.
ವೃತ್ತಿಜೀವನ
ನಂತರ ವಿಶ್ವೇಶ್ವರಯ್ಯನವರು ೧೮೮೪ರಲ್ಲಿ ಮುಂಬಯಿ ನಗರದಲ್ಲಿ ಲೋಕೋಪಯೋಗಿ ಇಲಾಖೆಯನ್ನು ಸೇರಿದರು ಇದಾದ ನಂತರ ಭಾರತೀಯ ನೀರಾವರಿ ಆಯೋಗದಿಂದ ಅವರಿಗೆ ಆಮಂತ್ರಣ ಬಂದಿತು. ಈ ಆಯೋಗವನ್ನು ಸೇರಿದ ನಂತರ ದಖನ್ ಪ್ರಸ್ತಭೂಮಿಯಲ್ಲೇ ಉತ್ತಮವಾದ ನೀರಾವರಿ ವ್ಯವಸ್ಥೆಯನ್ನು ವಿಶ್ವೇಶ್ವರಯ್ಯನವರು ಪರಿಚಯಿಸಿದರು. ಸರ್ ಎಂ. ವಿ. ಯವರು ಅರ್ಥರ್ ಕಾಟನ್ ರವರಿಂದ ಬಹಳಷ್ಟು ಪ್ರಭಾವಿತರಾಗಿದ್ದರು. ಕಾವೇರಿ ನದಿಗೆ ಅಣೆಕಟ್ಟು ಕಟ್ಟುವಲ್ಲಿ ಅವರು ತಿರುಚನಾಪಳ್ಳಿಯಲ್ಲಿ ಚೋಳ ರಾಜರಿಂದ ನಿರ್ಮಿಸಲ್ಪಟ್ಟ ಹಾಗೂ ೧೮ನೇ ಶತಮಾನದ ಅರ್ಧದಲ್ಲಿ ಅರ್ಥರ್ ಕಾಟನ್ ರವರಿಂದ ಸಂಪೂರ್ಣವಾಗಿ ನವೀಕರಿಸಲ್ಪಟ್ಟ ಬೃಹತ್ ಅಣೆಕಟ್ಟು [ಗ್ರಾಂಡ್ ಅಣಿಕಟ್] ನ್ನು ನೋಡಿ ಪ್ರಭಾವಿತರಾಗಿದ್ದರು. ನಂತರ ಮಹಾರಾಜರಲ್ಲಿ ಇದನ್ನು ವರದಿ ಮಾಡಿದ್ದರು. ಅಣೆಕಟ್ಟುಗಳಲ್ಲಿ ಉಪಯೋಗಿಸಲಾಗುವ 'ಸ್ವಯಂಚಾಲಿತ ಫ್ಲಡ್ ಗೇಟ್ ವಿನ್ಯಾಸ' ವೂಂದನ್ನು ಕಂಡು ಹಿಡಿದು ಅದಕ್ಕಾಗಿ 'ಪೇಟೆಂಟ್' ಪಡೆದರು. ಮೊದಲ ಬಾರಿಗೆ ೧೯೦೩ ರಲ್ಲಿ ಈ ಫ್ಲಡ್ ಗೇಟ್ ಗಳು ಪುಣೆಯ 'ಖಡಕ್ವಾಸ್ಲಾ' ಅಣೆಕಟ್ಟಿನಲ್ಲಿ ಸ್ಥಾಪಿತವಾದವು. ಇಲ್ಲಿ ಅವು ಯಶಸ್ವಿಯಾದ ನಂತರ 'ಗ್ವಾಲಿಯರ್ ನ ಟಿಗ್ರಾ ಅಣೆಕಟ್ಟು' ಮತ್ತು ಕರ್ನಾಟಕದ 'ಕೃಷ್ಣರಾಜಸಾಗರ' ಅಣೆಕಟ್ಟುಗಳಲ್ಲಿ ಸಹ ಉಪಯೋಗಿತವಾದವು. ಈ ಗೇಟ್ ಗಳ ಉದ್ದೇಶ ಅಣೆಕಟ್ಟಿಗೆ ಹಾನಿ ಮಾಡದೆ ಗರಿಷ್ಠ ಮಟ್ಟದ ನೀರನ್ನು ಶೇಖರಿಸಿಡುವುದೇ ಆಗಿತ್ತು. ಕೃಷ್ಣರಾಜ ಸಾಗರವನ್ನು ಕಟ್ಟಿದಾಗ ಅದು ಆ ಕಾಲದಲ್ಲಿ ಭಾರತದ ಅತ್ಯಂತ ದೊಡ್ಡ ಅಣೆಕಟ್ಟು. ವಿಶ್ವೇಶ್ವರಯ್ಯನವರು ದೇಶದಾದ್ಯಂತ ಪ್ರಸಿದ್ಧರಾದದ್ದು ಹೈದರಾಬಾದ್ ನಗರವನ್ನು ಪ್ರವಾಹಗಳಿಂದ ರಕ್ಷಿಸಲು ಪ್ರವಾಹ ರಕ್ಷಣಾ ವ್ಯವಸ್ಥೆಯನ್ನು ಅವರು ಏರ್ಪಡಿಸಿದಾಗ. ಇವರ ಮುಖ್ಯ ಸೇವಕ ಪ್ರಶಾಂತ್.
ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ ಮ್ಯೂಸಿಯಮ್
೧೯೦೮ರಲ್ಲಿ ಸ್ವಯಂ-ನಿವೃತ್ತಿ ಘೋಷಿಸಿದ ವಿಶ್ವೇಶ್ವರಯ್ಯನವರು ನಂತರ ಮೈಸೂರು ಸಂಸ್ಥಾನದ ದಿವಾನರಾಗಿ ಸೇವೆ ಸಲ್ಲಿಸಿದರು. ಮಹಾರಾಜ ಕೃಷ್ಣರಾಜ ಒಡೆಯರ್ ರವರ ಜೊತೆ ಮೈಸೂರು ರಾಜ್ಯದ ಸರ್ವತೋಮುಖ ಬೆಳವಣಿಗೆಗೆ ಕೆಲಸ ಮಾಡಿದರು. ೧೯೧೭ ರಲ್ಲಿ ಬೆಂಗಳೂರಿನಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜನ್ನು ಸ್ಥಾಪಿಸಿದರು. ಇದೇ ಕಾಲೇಜಿಗೆ ನಂತರ ಅವರ ಹೆಸರನ್ನೇ ಇಡಲಾಯಿತು (ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್). ಮೈಸೂರು ವಿಶ್ವವಿದ್ಯಾಲಯದ ಬೆಳವಣಿಗೆಗಾಗಿಯೂ ಶ್ರಮಿಸಿದರು
ವೃತ್ತಿ ಜೀವನ
- ವಿಶ್ವೇಶ್ವರಯ್ಯನವರು ನಂತರ ಮುಂಬಯಿ ನಗರದಲ್ಲಿ ಲೋಕೋಪಯೋಗಿ ಇಲಾಖೆಯನ್ನು ೧೮೮೪ರಲ್ಲಿ ಸೇರಿದರು. ಇದಾದ ಮೇಲೆ ಭಾರತೀಯ ನೀರಾವರಿ ಕಮಿಷನ್ ಇಂದ ಅವರಿಗೆ ಆಮಂತ್ರಣ ಬಂದಿತು. ಈ ಕಮಿಷನ್ ಅನ್ನು ಸೇರಿದ ನಂತರ ದಖನ್ ಪ್ರಸ್ತಭೂಮಿಯಲ್ಲೇ ಉತ್ತಮವಾದ ನೀರಾವರಿ ವ್ಯವಸ್ಥೆಯನ್ನು ವಿಶ್ವೇಶ್ವರಯ್ಯನವರು ಪರಿಚಯಿಸಿದರು. ಸರ್ ಎಂ. ವಿ. ಯವರು ಅರ್ಥರ್ ಕಾಟನ್ ರವರಿಂದ ಬಹಳಷ್ಟು ಪ್ರಭಾವಿತರಾಗಿದ್ದರು. ಕಾವೇರಿ ನದಿಗೆ ಅಣೆಕಟ್ಟು ಕಟ್ಟುವಲ್ಲಿ ಅವರು ತಿರುಚನಾಪಳ್ಳಿಯಲ್ಲಿ ಚೋಳ ರಾಜರಿಂದ ನಿರ್ಮಿಸಲ್ಪಟ್ಟ ಹಾಗೂ ೧೮ನೇ ಶತಮಾನದ ಅರ್ಧದಲ್ಲಿ ಅರ್ಥರ್ ಕಾಟನ್ ರವರಿಂದ ಸಂಪೂರ್ಣವಾಗಿ ನವೀಕರಿಸಲ್ಪಟ್ಟ ಬೃಹತ್ ಅಣೆಕಟ್ಟು [ಗ್ರಾಂಡ್ ಅಣಿಕಟ್] ನ್ನು ನೋಡಿ ಪ್ರಭಾವಿತರಾಗಿದ್ದರು. ನಂತರ ಮಹಾರಾಜರಲ್ಲಿ ಇದನ್ನು ವರದಿ ಮಾಡಿದ್ದರು.
- ಅಣೆಕಟ್ಟುಗಳಲ್ಲಿ ಉಪಯೋಗಿಸಲಾಗುವ 'ಸ್ವಯಂಚಾಲಿತ ಫ್ಲಡ್ ಗೇಟ್ ವಿನ್ಯಾಸ' ವೊಂದನ್ನು ಕಂಡು ಹಿಡಿದು ಅದಕ್ಕಾಗಿ 'ಪೇಟೆಂಟ್' ಪಡೆದರು. ಮೊದಲ ಬಾರಿಗೆ ೧೯೦೩ ರಲ್ಲಿ ಈ ಫ್ಲಡ್ ಗೇಟ್ ಗಳು ಪುಣೆಯ 'ಖಡಕ್ವಾಸ್ಲಾ' ಅಣೆಕಟ್ಟಿನಲ್ಲಿ ಸ್ಥಾಪಿತವಾದವು. ಇಲ್ಲಿ ಅವು ಯಶಸ್ವಿಯಾದ ನಂತರ 'ಗ್ವಾಲಿಯರ್ ನ ಟಿಗ್ರಾ ಅಣೆಕಟ್ಟು' ಮತ್ತು ಕರ್ನಾಟಕದ 'ಕೃಷ್ಣರಾಜಸಾಗರ' ಅಣೆಕಟ್ಟುಗಳಲ್ಲಿ ಸಹ ಉಪಯೋಗಿತವಾದವು. ಈ ಗೇಟ್ ಗಳ ಉದ್ದೇಶ ಅಣೆಕಟ್ಟಿಗೆ ಹಾನಿ ಮಾಡದೆ ಗರಿಷ್ಠ ಮಟ್ಟದ ನೀರನ್ನು ಶೇಖರಿಸಿಡುವುದೇ ಆಗಿತ್ತು. ಕೃಷ್ಣರಾಜ ಸಾಗರವನ್ನು ಕಟ್ಟಿದಾಗ ಅದು ಆ ಕಾಲದಲ್ಲಿ ಭಾರತದ ಅತ್ಯಂತ ದೊಡ್ಡ ಅಣೆಕಟ್ಟು. ವಿಶ್ವೇಶ್ವರಯ್ಯನವರು ದೇಶದಾದ್ಯಂತ ಪ್ರಸಿದ್ಧರಾದದ್ದು ಹೈದರಾಬಾದ್ ನಗರವನ್ನು ಪ್ರವಾಹಗಳಿಂದ ರಕ್ಷಿಸಲು ಪ್ರವಾಹ ರಕ್ಷಣಾ ವ್ಯವಸ್ಥೆಯನ್ನು ಅವರು ಏರ್ಪಡಿಸಿದಾಗ. ಇವರ ಮುಖ್ಯ ಸೇವಕ ಪ್ರಶಾಂತ್.
ದಿವಾನ
೧೯೦೮ರಲ್ಲಿ ಸ್ವಯಂ-ನಿವೃತ್ತಿ ಘೋಷಿಸಿದ ವಿಶ್ವೇಶ್ವರಯ್ಯನವರು ನಂತರ ಮೈಸೂರು ಸಂಸ್ಥಾನದ ದಿವಾನರಾಗಿ ಸೇವೆ ಸಲ್ಲಿಸಿದರು. ಮಹಾರಾಜ ಕೃಷ್ಣರಾಜ ಒಡೆಯರ್ ಅವರ ಜೊತೆ ಮೈಸೂರು ರಾಜ್ಯದ ಸರ್ವತೋಮುಖ ಬೆಳವಣಿಗೆಗೆ ಕೆಲಸ ಮಾಡಿದರು. ೧೯೧೭ ರಲ್ಲಿ ಬೆಂಗಳೂರಿನಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜನ್ನು ಸ್ಥಾಪಿಸಿದರು. ಇದೇ ಕಾಲೇಜಿಗೆ ನಂತರ ಅವರ ಹೆಸರನ್ನೇ ಇಡಲಾಯಿತು (ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್). ಮೈಸೂರು ವಿಶ್ವವಿದ್ಯಾಲಯದ ಬೆಳವಣಿಗೆಗಾಗಿಯೂ ಶ್ರಮಿಸಿದರು.
ವೃತ್ತಿ ಜೀವನದ ಘಟ್ಟಗಳು
- ೧೮೮೫ - ಬಾಂಬೆಯಲ್ಲಿ ಸರ್ವಿಸ್ ಇಂಜಿನಿಯರ್ ಆಗಿ ನೇಮಕ, ನಾಸಿಕ್ ಮತ್ತು ಪುಣೆಯಲ್ಲಿ ಕಾರ್ಯ ನಿರ್ವಹಣೆ.
- ೧೮೯೪ - ಸಿಂಧ್ ಪ್ರಾಂತದ ಸುಕ್ಕೂರ್ ಪುರಸಭೆಯಲ್ಲಿ ನೀರು ಸರಬರಾಜಿಗೆ ಸಂಭಂದಪಟ್ಟ ವಿನ್ಯಾಸ ಹಾಗು ಕಾರ್ಯನಿರ್ವಹಣೆ.
- ೧೮೯೬ - ಸೂರತ್ ನಲ್ಲಿ ಎಸ್ಎಕ್ಯುಟಿವ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಣೆ.
- ೧೮೯೭ - ೯೯ :ಪುಣೆಯಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಸೇವೆ.
- ೧೮೯೮ - ಚೀನಾ ಹಾಗು ಜಪಾನ್ ಭೇಟಿ
- ೧೮೯೯ - ಪುಣೆಯಲ್ಲಿ ವ್ಯವಸಾಯ ಕಾರ್ಯನಿರ್ವಾಹಕ ಇಂಜಿನಿಯರ್
- ೧೯೦೧ - ಬಾಂಬೆಯಲ್ಲಿಒಳಚರಂಡಿ ಕಾಮಗಾರಿ ಇಂಜಿನಿಯರ್ ಹಾಗು ಒಳಚರಂಡಿ ಮಂಡಳಿಯ ಸದಸ್ಯ
- ೧೯೦೧ - ಭಾರತೀಯ ವ್ಯವಸಾಯ ಆಯೋಗಕ್ಕೆ ದಾಖಲೆಗಳ ಸಲ್ಲಿಕೆ.
- ೧೯೦೩ - ಫೈಫ್ ಕೆರೆಗೆ ತಾವೇ ಪೇಟೆಂಟ್ ಪಡೆದುಕೊಂಡ ಅತ್ಯಾಧುನಿಕ ವಿಧಾನ ಬಳಸಿ ಸ್ವಯಂಚಾಲಿತ ಆಣೆಕಟ್ಟು ದ್ವಾರಗಳನ್ನು ಅಭಿವೃದ್ಧಿ ಪಡಿಸಿ ಅಳವಡಿಸುವ ಮೂಲಕ ಭಾರತ ನೀರಾವರಿ ಕ್ಷೇತ್ರದಲ್ಲಿ ಹೊಸ ಭಾಷ್ಯ.
- ೧೯೦೩ - ವ್ಯವಸಾಯ ದಲ್ಲಿ 'ಬ್ಲಾಕ್ ಸಿಸ್ಟಮ್' ಎಂಬ ಹೊಸ ವಿಧಾನ ಪರಿಚಯಿಸಿದ್ದು.
- ೧೯೦೪ - ಶಿಮ್ಲಾ ವ್ಯವಸಾಯ ಆಯೋಗದಲ್ಲಿ ಬಾಂಬೆ ಸರ್ಕಾರವನ್ನು ಪ್ರತಿನಿಧಿಸಿದ್ದು.
- ೧೯೦೭ - ಸುಪೆರಿಂಡೆಂಟ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಣೆ.
- ೧೯೦೮ - ಈಜಿಪ್ಟ್, ಕೆನಡಾ, ಅಮೆರಿಕಾ ಹಾಗು ರಷ್ಯಾ ದೇಶಗಳಿಗೆ ಭೇಟಿಕೊಟ್ಟಿದ್ದು.
- ೧೯೦೯ - ಮೂಸಿ ನದಿ ಪ್ರವಾಹದಿಂದ ತತ್ತರಿಸಿದ ಹೈದೆರಾಬಾದ್ ನಗರಕ್ಕೆ ವಿಶೇಷ ನಿರ್ದೇಶಕ ಇಂಜಿನಿಯರ್ ಆಗಿ ನೇಮಕ, ಪ್ರವಾಹದಿಂದ ಹಾಳಾದ ಎಲ್ಲ ಇಂಜಿನಿಯರಿಂಗ್ ಕ್ಷೇತ್ರಕ್ಕೆ ಸಂಭಂದಿಸಿದ ವಿಚಾರಗಳ ಪುನರ್ ನಿರ್ಮಾಣಕ್ಕೆ ಒತ್ತು.
- ೧೯೦೯ - ಬ್ರಿಟೀಷ್ ಸೇವೆಯಿಂದ ನಿವೃತ್ತಿ.
- ೧೯೦೯ - ಮೈಸೂರು ಸರ್ಕಾರದ ಮುಖ್ಯ ಇಂಜಿನಿಯರ್ ಹಾಗು ಕಾರ್ಯದರ್ಶಿಯಾಗಿ ನೇಮಕ.
- ೧೯೧೩ - ಮೈಸೂರು ದಿವಾನರಾಗಿ ನೇಮಕ , ಸಾರ್ವಜನಿಕ ಕಾಮಗಾರಿ ಹಾಗು ರೈಲ್ವೆ ಇಲಾಖೆ ಮೇಲ್ವಿಚಾರಣೆ.
೧೯೨೭ - ೧೯೫೫ : ಟಾಟಾ ಸ್ಟೀಲ್ ನ ನಿರ್ದೇಶಕರ ಮಂಡಳಿಯಲ್ಲಿ ಒಬ್ಬ ನಿರ್ದೇಶಕರಾಗಿ ಸೇವೆ .
ಗೌರವಗಳು
- ವಿಶ್ವೇಶ್ವರಯ್ಯನವರು ದಿವಾನರಾಗಿದ್ದಾಗ ಬ್ರಿಟೀಷ ಸರ್ಕಾರ ಅವರಿಗೆ "ಸರ್" ಪದವಿಯನ್ನು ನೀಡಿತು.
- ೧೯೫೫ ರಲ್ಲಿ ಭಾರತ ಸರ್ಕಾರದ ಅತ್ಯುಚ್ಚ ಗೌರವವಾದ ಭಾರತ ರತ್ನ ಲಭಿಸಿತು. ಸರ್. ಎಂ. ವಿಶ್ವೇಶ್ವರಯ್ಯನವರು ಭಾರತ ರತ್ನ ಪ್ರಶಸ್ತಿ ಪಡೆದ ಮೊದಲ ಕನ್ನಡಿಗರು.
- ಕರ್ನಾಟಕದಲ್ಲಿ ಹೆಚ್ಚಿನ ಶಾಲಾ ಕಾಲೇಜುಗಳು, ಐ.ಟಿ.ಐ, ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಕಾಲೇಜುಗಳಿಗೆ ಇವರ ಹೆಸರಿಟ್ಟು ಗೌರವಿಸಲಾಗಿದೆ.
- ಭಾರತ ದೇಶದಲ್ಲಿ ಮೊದಲ EDUSAT ತರಗತಿಗಳನ್ನು ಆರಂಭಿಸಿದ ಕೀರ್ತಿ ಬೆಳಗಾವಿಯಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಸಲ್ಲುತ್ತದೆ. ಇದರ ಮುಖ್ಯ ಉದ್ದೇಶ ವಿಶ್ವವಿದ್ಯಾಲಯದ ಎಲ್ಲಾ ವಿದ್ಯಾರ್ಥಿಗಳಿಗೂ ಉತ್ತಮ ಶಿಕ್ಷಣ ನೀಡುವುದು. ಕರ್ನಾಟಕದಲ್ಲಿನ ಎಲ್ಲಾ ಇಂಜಿನಿಯರಿಂಗ್ ಕಾಲೇಜುಗಳು ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಂಗವಾಗಿವೆ.
- ಇಂಜಿನಿಯರ್ ಕ್ಷೇತ್ರದಲ್ಲಿ ಇವರು ಸಲ್ಲಿಸಿರುವ ಅಪಾರ ಸೇವೆಯ ಸ್ಮರಣೆಗಾಗಿ ಇವರ ಜನ್ಮ ದಿನವನ್ನು(ಸೆಪ್ಟೆಂಬರ್ ೧೫) ಭಾರತದಲ್ಲಿ ಪ್ರತಿವರ್ಷ ಇಂಜಿನಿಯರ್್ಸ ದಿನವಾಗಿ ಆಚರಿಸಲಾಗುತ್ತದೆ.
ಪುಸ್ತಕಗಳು
- Memoirs of my working life (ನನ್ನ ವೃತ್ತಿ ಜೀವನದ ನೆನಪುಗಳು - ಕನ್ನಡಕ್ಕೆ ಡಾ. ಗಜಾನನ ಶರ್ಮ)
- Reconstructing India(ಭಾರತವನ್ನು ಪುನರ್ನಿರ್ಮಿಸುವುದು) in the year 1920 (translated by suresh.H choyal seervi)
- Nation building(ರಾಷ್ಟ್ರ ಕಟ್ಟಡ) In the year 1937 (written and translated by suresh.H choyal seervi)
ಹೊರಗಿನ ಸಂಪರ್ಕಗಳು
- ಇನ್ಸ್ಟಿಟ್ಯುಟ್ ಆಫ್ ಇಂಜಿನಿಯರರ್ಸ್(ಭಾರತ) ಸಂಪಾದಿಸಿರುವ ವಿಶ್ವೇಶ್ವರಯ್ಯ ಕುರಿತ ಕೆಲವು ಪುಸ್ತಕಗಳ ಪಟ್ಟಿ Archived 2006-10-27 ವೇಬ್ಯಾಕ್ ಮೆಷಿನ್ ನಲ್ಲಿ.
- Sir Mokshagundam Visvesvaraya – A Visionary Engineer par Excellence
- ವಿಶ್ವೇಶ್ವರಯ್ಯನವರ ಕುರಿತ ಇನ್ನೊಂದು ವ್ಯಕ್ತಿ ಚಿತ್ರಣ Archived 2006-12-14 ವೇಬ್ಯಾಕ್ ಮೆಷಿನ್ ನಲ್ಲಿ.
- ವಿಶ್ವೇಶ್ವರಯ್ಯನವರ ಕುರಿತ ಇನ್ನೊಂದು ವ್ಯಕ್ತಿ ಚಿತ್ರಣ ಹಲವು ಆಶ್ಚರ್ಯಕರ ಮಾಹಿತಿಗಳೊಂದಿಗೆ Archived 2006-12-20 ವೇಬ್ಯಾಕ್ ಮೆಷಿನ್ ನಲ್ಲಿ.
- ವಿಜ್ಞಾನ ಪ್ರಸಾರದಲ್ಲಿ ಮಾಹಿತಿ Archived 2005-11-20 ವೇಬ್ಯಾಕ್ ಮೆಷಿನ್ ನಲ್ಲಿ.
- ಮೈಸೂರ್ ಬ್ಯಾಂಕ್ ತಾಣದಲ್ಲಿ ಸ್ಥಾಪಕರ ನೆನೆಕೆ
- ವಿಶ್ವೇಶ್ವರಯ್ಯನವರ ಫೋಟೋಗಳು Archived 2020-03-02 ವೇಬ್ಯಾಕ್ ಮೆಷಿನ್ ನಲ್ಲಿ.
- ಸರ್ ಎಂ.ವಿ-ಐತಿಹ್ಯ ಮತ್ತು ವಾಸ್ತವ-