ರಕ್ಷಾ ಬಂಧನ
ಅಣ್ಣ ತಂಗಿಯ ಜೀವನದ ಒಂದು ಉತ್ತಮ ಪ್ರೀತಿಯ ಸಂಕೇತ ಒಬ್ಬರನ್ನು ಪರಸ್ಪರ ರಕ್ಷಣೆ ಮಾಡುವ ಮನಸ್ತಾಪವನ್ನು ಹೊಂದಿರುತ್ತಾರೆ. ರಕ್ಷಾ ಬಂಧನ ಪ್ರಾಚೀನ ಕಾಲದಿಂದ ಬಹಳ ಪ್ರಾಮುಖ್ಯತೆ ಹೊಂದಿದೆ
ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುವ ಒಂದು ಹಬ್ಬ. ಆ ದಿನ ಸಹೋದರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ. ತಂಗಿಯ ರಕ್ಷಣೆ ಅಣ್ಣನಿಂದ, ಅಣ್ಣನ ರಕ್ಷಣೆ ತಂಗಿಯಿಂದ ಎಂಬ ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟ ಗೊಳಿಸುವ ಹಬ್ಬ ಇದಾಗಿದೆ.[೧]
- ಭಾರತದಲ್ಲಿ ಶ್ರಾವಣ ಮಾಸದ ಹುಣ್ಣಿಮೆಯನ್ನು ಯಜುರ್ ಉಪಕರ್ಮ ಎಂದು ಹಿಂದಿನಿಂದ ಆಚರಿಸುತ್ತಿದ್ದಾರೆ. ಈ ದಿನಕ್ಕೆ ಮತ್ತೊಂದು ವಿಶೇಷವಿದೆ. ಮುಂಚೆ ಉತ್ತರ ಭಾರತದಲ್ಲಿ ಮಾತ್ರ ಹೆಚ್ಚು ಪ್ರಚಲಿತವಿದ್ದ 'ರಕ್ಷಾಬಂಧನ' ಅಥವಾ 'ರಾಖಿ' ಹಬ್ಬವನ್ನು ಇತ್ತೀಚಿನ ವರ್ಷಗಳಲ್ಲಿ ಭಾರತದಾದ್ಯಂತ ಎಲ್ಲರೂ ಆಚರಿಸುತ್ತಾರೆ. ಆದರೆ ಅಣ್ಣ ತಂಗಿಯರ ಬಾಂಧವ್ಯವನ್ನು ಪ್ರತಿಯೊಬ್ಬರೂ ಭಾವನಾತ್ಮಕವಾಗಿ ಸ್ಮರಿಸುವ ಈ ದಿನ ಬಾಲ್ಯದ ಅನೇಕ ಸಿಹಿ ಕಹಿ ನೆನಪುಗಳನ್ನು ನಮ್ಮ ಮನದಲ್ಲಿ ಮೂಡಿಸುತ್ತದೆ.
- ರಕ್ಷಾ ಬಂಧನ ಆಚರಣೆಗೆ ಭಾರತೀಯ ಸಂಸ್ಕೃತಿಯಲ್ಲಿ ತನ್ನದೇ ಆದ ಮಹತ್ವವಿದೆ. ಪ್ರತಿಯೊಬ್ಬ ಸಹೋದರಿಯು ಸಮಾಜದ ದುಷ್ಟಶಕ್ತಿಗಳಿಂದ ರಕ್ಷಿಸೆಂದು ತನ್ನ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟುತ್ತಾಳೆ. ಪ್ರತಿಯೊಬ್ಬ ಸಹೋದರನೂ ಈ ಸಮಯದಲ್ಲಿ ಸಹೋದರಿಯೆಡೆಗೆ ತನ್ನ ಭ್ರಾತತ್ವ ಪ್ರೇಮವನ್ನು ಉಜ್ವಲಗೊಳಿಸಬೇಕೆಂಬುದು ರಕ್ಷಾಬಂಧನ ಹಬ್ಬದ ನೀತಿಯಾಗಿದೆ
ಉಲ್ಲೇಖಗಳು
ಬದಲಾಯಿಸಿhttps://www.raksha-bandhan.com/ https://timesofindia.indiatimes.com/life-style/events/happy-raksha-bandhan-2018-quotes-rakhi-wishes-messages-sms-facebook-and-whatsapp-status-happy-rakhi-2018/articleshow/65529005.cmshttps://hindi.timesnownews.com/spiritual/article/raksha-bandhan-2018-puja-shubh-muhurat-date-time-to-tie-rakhi/261923 Archived 2020-12-01 ವೇಬ್ಯಾಕ್ ಮೆಷಿನ್ ನಲ್ಲಿ.
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |