ರಹಿಮತಪೂರ(ಹಳ್ಳಿ) ಒಂದು ಹಳ್ಳಿ ಹಾಗು ಪುಣ್ಯಕ್ಷೇತ್ರ. ರಹಿಮತಪೂರ(ಹಳ್ಳಿ) ಗ್ರಾಮವು ಜಿಲ್ಲಾ ಕೇಂದ್ರ ಬಾಗಲಕೋಟದಿಂದ ಸುಮಾರು ೯೦ ಕಿ. ಮಿ. ಇದ್ದು ಸಾವಳಗಿಹೋಬಳಿ ವ್ಯಾಪ್ತಿಯಲ್ಲಿ ಬರುತ್ತದೆ. ಇದು ಬಿದರಿ ಗ್ರಾಮ ಪಂಚಾಯತ ಮತ್ತು ಅಂಚೆ ಕಚೇರಿ ವ್ಯಾಪ್ತಿಯಲ್ಲಿ ಬರುತ್ತದೆ.

ರಹಿಮತಪೂರ(ಹಳ್ಳಿ)
ರಹಿಮತಪೂರ(ಹಳ್ಳಿ)
village
Population
 (೨೦೧೨)
 • Total೨೦೦೦

ದೇವಾಲಯಗಳು

ಬದಲಾಯಿಸಿ

ಶ್ರೀ ಪಾಂಡುರಂಗ ದೇವಾಲಯ, ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಹಾಗೂ ಶ್ರೀ ಹಣಮಂತ ದೇವಾಲಯಗಳನ್ನು ನಿರ್ಮಿಸಿದ್ದಾರೆ.

ಮಸೀದಿಗಳು

ಬದಲಾಯಿಸಿ

ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.

ನೀರಾವರಿ

ಬದಲಾಯಿಸಿ

ಗ್ರಾಮದ ಪ್ರತಿಶತ ೯೦ ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.

ಹಬ್ಬಗಳು

ಬದಲಾಯಿಸಿ

ಪ್ರತಿವರ್ಷ ಶ್ರೀ ಹನುಮಾನ ಉತ್ಸವ, ಶ್ರೀ ಪಾಂಡುರಂಗ ಸಪ್ತಾಹ(ದಿಂಡಿ), ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.

ಶಿಕ್ಷಣ

ಬದಲಾಯಿಸಿ

ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ. ಶಾಲೆಯಲ್ಲಿ ೧ನೇ ತರಗತಿಯಿಂದ ೭ನೇ ತರಗತಿವರೆಗೆ ೨೦೦ರಕ್ಕು ಹೆಚ್ಚು ವಿದ್ಯಾರ್ಥಿಗಳ್ಳಿದ್ದಾರೆ.