Icono aviso borrar.png
ಈ ಪುಟವನ್ನು ಅಳಿಸುವಿಕೆಗಾಗಿ ಗುರುತುಮಾಡಲ್ಪಟ್ಟಿದೆ. ನಿಮಗೆ ಈ ಲೇಖನವನ್ನು ಅಳಿಸುವುದರ ಬಗ್ಗೆ ವಿರೋಧವಿದ್ದಲ್ಲಿ ವಿಕಿಪೀಡಿಯ:ಅಳಿಸುವಿಕೆಗೆ ಹಾಕಲಾಗಿರುವ ಲೇಖನಗಳು ಪುಟದಲ್ಲಿ ತಿಳಿಸಿ.
ಅಳಿಸುವಿಕೆಗೆ ಗುರುತು ಮಾಡಲು ಕಾರಣ: {{{1}}}



ರಾಯಚೂರು ಕರ್ನಾಟಕ ರಾಜ್ಯದ ಉತ್ತರ ಭಾಗದಲ್ಲಿರುವ ಪ್ರಮುಖ ಜಿಲ್ಲೆ. ರಾಯಚೂರು ಜಿಲ್ಲೆಯ ಜನಸಂಖ್ಯೆ ೨೦೧೧ ರ ಜನಗಣತಿಯಂತೆ ೧೯,೨೮,೮೧೨. ರಾಯಚೂರು ಜಿಲ್ಲೆಯಲ್ಲಿ 8 ತಾಲೂಕುಗಳಿವೆ: ರಾಯಚೂರು, ದೇವದುರ್ಗ, ಸಿಂಧನೂರು, ಮಾನವಿ ಸಿರವಾರ, ಮಸ್ಕಿ., ,ಲಿಂಗಸೂಗೂರು ಅರಕೆರಾ. ತಾಲೂಕು ಗಳು, ಈ ಜಿಲ್ಲೆಯ ಜಿಲ್ಲಾಕೇಂದ್ರ ರಾಯಚೂರು ನಗರ. ಇದು ಬೆಂಗಳೂರಿನಿಂದ ೪೦೯ ಕಿಮೀ ದೂರದಲ್ಲಿದೆ. ರಾಯಚೂರು ಜಿಲ್ಲೆಯ ನೂತನ ಮಸ್ಕಿ ತಾಲೂಕು ಅಶೋಕನ ಶಿಲಾಶಾಸನಗಳನ್ನು ಹೊಂದಿದೆ."ದೇವನಾಮ ಪ್ರಿಯಾ ಪ್ರೀಯದರ್ಶನಿ" ಎಂಬ ಬಿರುದು ಅಶೋಕನದು ಎಂದು ಈ ಶಾಸನದಿಂದ ತಿಳಿದಿದೆ.ಮಸ್ಕಿಯಿಂದ 4 ಕಿಂ.ಮೀ. ಪೂರ್ವಕ್ಕೆ ಚಿಕ್ಕಕಡಬೂರು ಹಳ್ಳಿಯಲ್ಲಿ ಶ್ರೀ ಆದಿಬಸವೇಶ್ವರರ ಪ್ರಸಿದ್ಧ ದೇವಸ್ಥಾನ ಇದೆ.

ರಾಯಚೂರು, ಕರ್ನಾಟಕ

ಇತಿಹಾಸಸಂಪಾದಿಸಿ

ಭಾರತದ ಸ್ವಾತಂತ್ರ ಹೋರಾಟ ಮತ್ತು ನಂತರದ ಹೈದ್ರಾಬಾದ್ ಪ್ರಾಂತ್ಯ ವಿಮೋಚನಾ ಹೋರಾಟದಲ್ಲಿ ಈ ಜಿಲ್ಲೆಯ ಜನತೆಯ ಪಾತ್ರ ಪ್ರಮುಖವಾದುದು. ರಾಯಚೂರು ಕೋಟೆ ರಾಯಚೂರು ನಗರದ ಚಾರಿತ್ರಿಕ ಆಕರ್ಷಣೆಗಳಲ್ಲಿ ಒಂದು - ಇದನ್ನು ೧೨೯೪ ರಲ್ಲಿ ಕಟ್ಟಲಾಯಿತು. ರಾಯಚೂರಿನ ಇನ್ನೊಂದು ವಿಶೇಷತೆಯೆಂದರೆ ವಿಜಯನಗರ ಸಾಮ್ರಾಜ್ಯ ಮತ್ತು ಬಹುಮನಿ ಸಾಮ್ರಾಜ್ಯಗಳ ಅರಸರ ಕಾಲದಲ್ಲಿ ಈ ಪ್ರದೇಶ ಹೋರಾಟದ ಅಂಗಳವೂ ಆಗಿತ್ತೆನ್ನಬಹುದು.

ಭೌಗೋಳಿಕ ಲಕ್ಷಣಗಳುಸಂಪಾದಿಸಿ

ಜಿಲ್ಲೆಯ ದಕ್ಷಿಣದಲ್ಲಿ ತುಂಗಭದ್ರಾ ನದಿ ಹಾಗೂ ಉತ್ತರದಲ್ಲಿ ಕೃಷ್ಣಾ ನದಿಯು ಹರಿಯುತ್ತಿದ್ದು, ಬಹುತೇಕ ಬಯಲು ಪ್ರದೇಶವನ್ನು ಹೊಂದಿದೆ. ಲಿಂಗಸೂಗೂರು, ದೇವದುರ್ಗ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಚಿನ್ನದ ಅದಿರಿನ ನಿಕ್ಷೇಪಗಳಿವೆ.

ಹವಾಗುಣಸಂಪಾದಿಸಿ

ಜಿಲ್ಲೆಯ ಹವಾಗುಣವು ಬಹುತೇಕ ಒಣ ಹವೆ ಇರುತದೆ ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಅಂದರೆ ೪೫ ಡಿಗ್ರಿವರೆಗೆ ಉಷ್ಣತೆ ಇರುತ್ತದೆ.

ಜಿಲ್ಲೆಯ ಪ್ರಮುಖರುಸಂಪಾದಿಸಿ

  • ಶ್ರೀ ಚನ್ನಬಸವಪ್ಪ ಬೆಟ್ಟದೂರು, ಹಿರಿಯ ಸ್ವಾತಂತ್ರ ಹೋರಾಟಗಾರರು, ರೈತ ಹೋರಾಟಗಾರರು, ವಿಚಾರವಾದಿಗಳು
  • ಶ್ರೀ ಶಂಕರಗೌಡ ಬೆಟ್ಟದೂರು, ಹಿರಿಯ ಸ್ವಾತಂತ್ರ ಹೋರಾಟಗಾರರು, ಚಿತ್ರ ಕಲಾವಿದರು
  • ಶ್ರೀ ಶಿವರಾಜ ಪಾಟೀಲ್ , ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಾಧೀಶರು
  • ಶ್ರೀ ಜೆ.ಎಚ್.ಪಾಟೀಲ್,ನಿವೃತ್ತ ಕಾನೂನು ಉಪಕುಲಪತಿಗಳು.
  • ಶ್ರೀ ಡಾ. ಪಂ. ನರಸಿಂಹಲು ವಡವಾಟಿ, ವಿಶ್ವ ವಿಖ್ಯಾತ ಕ್ಲಾರಿಯೋನೆಟ್ ವಾದಕರು, ಮಾಜಿ ಅಧ್ಯಕ್ಷರು, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ.
  • ಶ್ರೀಮತಿ ವಡವಾಟಿ ಶಾರದಾ ಭರತ್, ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಗಾಯಕರು, ರಾಜ್ಯದ ಖ್ಯಾತ ವಚನ ಸಂಗೀತ ಗಾಯಕರು, ಸದಸ್ಯರು, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ.

ಪ್ರಾಮುಖ್ಯತೆಸಂಪಾದಿಸಿ

  • ರಾಯಚೂರು ಜಿಲ್ಲೆಯ ಶಕ್ತಿನಗರದಲ್ಲಿ ಇರುವ ಶಾಖೋತ್ಪನ್ನ ವಿದ್ಯುತ್‌ಸ್ಥಾವರ ಕರ್ನಾಟಕದಲ್ಲಿ ಬಳಸಲ್ಪಡುವ ವಿದ್ಯುಚ್ಛಕ್ತಿಯ ಪ್ರಮುಖ ಕೇಂದ್ರಗಳಲ್ಲಿ ಒಂದಾಗಿದೆ.
  • ಲಿಂಗಸೂಗೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿಯು ದೇಶದಲ್ಲಿಯೇ ಅತಿ ಹೆಚ್ಚು ಚಿನ್ನದ ಅದಿರು ಹೊಂದಿರುವ ಗಣಿಯಾಗಿದೆ. ಅಶೋಕನ ಕಾಲದ ಮಸ್ಕಿ ಶಾಸನ ದೊರೆತಿರುವುದು ಇದೇ ತಾಲೂಕಿನ ಮಸ್ಕಿಯಲ್ಲಿದೆ. ಇದೇ ಶಾಸನದಲ್ಲಿ ದೇವನಾಂಪ್ರಿಯಸ ಅಸೋಕಸ ಎನ್ನುವ ಪ್ರಸಿದ್ಡ ಸಾಲಿದೆ.
  • ಸಿಂಧನೂರು ರಾಜ್ಯದಲ್ಲಿಯೇ ಅತಿ ಹೆಚ್ಚು ಪ್ರಮಾಣದಲ್ಲಿ ಭತ್ತ ಬೆಳೆಯುವ ಪ್ರದೇಶವಾಗಿದೆ.
  • ಲಿಂಗಸೂಗೂರು ತಾಲ್ಲೂಕಿನ ಮುದುಗಲ್ ನಲ್ಲಿ ಐತಿಹಾಸಿಕ ಕೋಟೆ ಇದ್ದು, ಮೊಹರಂ ಆಚರಣೆ ವಿಜೃಂಭಣೆಯಿಂದ ಜರಗುತ್ತದೆ.ಹಾಗೂ ಲಿಂಗಸೂಗೂರು ತಾಲ್ಲೂಕಿನ ಮಸ್ಕಿ ಗ್ರಾಮದಲ್ಲಿ ಅಶೋಕನ ಶೀಲಾಶಾಸನ ದೊರತಿದೆ.
  • ಜಲದುರ್ಗದಲ್ಲಿರುವ ಕೋಟೆ, ಅತ್ಯಂತ ವಿಶೇಷವಾಗಿ ನಿರ್ಮಿಸಲಾದ ಕೋಟೆಗಳಲ್ಲಿ ಒಂದಾಗಿದೆ.
  • ಮಂತ್ರಾಲಯವು ರಾಯಚೂರಿನಿಂದ ಹತ್ತಿರದಲ್ಲಿದೆ.
  • ಮಾನವಿಕೊನೆಯ ತಾಲೂಕು.ಈ ಮಾನವಿಯಲ್ಲಿ ದಾಸ ಸಾಹಿತ್ಯ ಉಗಮವಾಗಿದ್ದು. ವಿಜಯ ದಾಸರು ಮಾನವಿ ತಾಲೂಕಿನವರು.

ಇದನ್ನೂ ನೋಡಿಸಂಪಾದಿಸಿ

ಬಾಹ್ಯ ಅಂತರ್ಜಾಲ ಸಂಪರ್ಕಗಳುಸಂಪಾದಿಸಿ

"https://kn.wikipedia.org/w/index.php?title=ರಾಯಚೂರ&oldid=1097984" ಇಂದ ಪಡೆಯಲ್ಪಟ್ಟಿದೆ