ಲಿಂಗಮ್ಮ : - ಹಡಪದ ಅಪ್ಪಣ್ಣ ಎಂಬುವವರ ಧರ್ಮಪತ್ನಿ. ವ್ಯಕ್ತಿಯ ಹುಟ್ಟಿಗೂ ಅವನು ಸಾಧಿಸುವ ಸಿದ್ಧಿಗೂ ಏನೇನು ಸಂಬಂವಿಲ್ಲ ಎಂಬುದನ್ನು ನಿರೂಪಿಸಿದವಳು. ಈಕೆಯ ವಚನಗಳಲ್ಲಿ ಬೋಧೆಯ ಧಾಟಿ ,ಕಂಡ ದರ್ಶನ, ಬೀರಿದ ಬೆಳಕು, ಏರಿದ ನಿಲುವು, ಸಾಧಕರಿಗೂ, ಸಾಮಾನ್ಯರಿಗೂ, ಶರಣ ರಿಗೂ ಇರುವ ವ್ಯತ್ಯಾಸವನ್ನು ತಿಳಿಸಿದ್ದಾಳೆ. ಎಲ್ಲ ಸಾಧನೆಗೂ ಮೂಲವಾದ ಮನಸ್ಸನ್ನು ಸ್ವೇಚ್ಛೆಯಾಗಿ ಹರಿದಾಡಲು ಬಿಡದೆ ಬಯಲಿನೊಳಗೆ ಓಲಾಡುವ ಶರಣರ ಪಾದದಲ್ಲಿ ಬೆರೆಯಬೇಕೆನ್ನುವಳು. ಈಕೆಯ ವಚನಗಳ ಅಂಕಿತ "ಅಪ್ಪಣ್ಣಪ್ರಿಯ ಚನ್ನಬಸವಣ್ಣ".

ಲಿಂಗಮ್ಮ
ಜನನ೧೧೬೦
ಅಂಕಿತನಾಮಅಪ್ಪಣ್ಣಪ್ರಿಯ ಚನ್ನಬಸವಣ್ಣ
ಸಂಗಾತಿ(ಗಳು)ಹಡಪದ ಅಪ್ಪಣ್ಣ


ಲಿಂಗಮ್ಮಸಂಪಾದಿಸಿ

ಕನಿಷ್ಠದಲ್ಲಿ ಹುಟ್ಟಿದೆ, ಉತ್ತಮರಲ್ಲಿ ಬೆಳೆದೆ
ಸತ್ಯಶರಣರ ಪಾದವಿಡಿದೆ, ಆ ಶರಣರ
 ಪಾದವಿಡಿದು ಗುರುವ ಕಂಡೆ, ಲಿಂಗವ ಕಂಡೆ
ಜಂಗಮವ ಕಂಡೆ, ಪಾದೋದಕವ ಕಂಡೆ
ಪ್ರಸಾದವ ಕಂಡೆ, ಇಂತಿವರ ಕಂಡೆನ್ನ ಕಂಗಳ
ಮುಂದಣ ಕತ್ತಲೆ ಹರಿಯಲೊಡನೆ ಮಂಗಳದ
ಮಹಾಬೆಳಗಿನೊಳೊಗೋಲಾಡಿ ಸುಖಿಯಾದೆನಯ್ಯಾ
ಅಪ್ಪಣ್ಣಪ್ರಿಯ ಚನ್ನಬಸವಣ್ಣ

ಬಾಹ್ಯ ಕೊಂಡಿಗಳುಸಂಪಾದಿಸಿ

"https://kn.wikipedia.org/w/index.php?title=ಲಿಂಗಮ್ಮ&oldid=884949" ಇಂದ ಪಡೆಯಲ್ಪಟ್ಟಿದೆ