ಲೋಕಾಪುರ ಒಂದು ಗ್ರಾಮ ಹಾಗೂ ಪುಣ್ಯಕ್ಷೇತ್ರ.ಇದು ಕರ್ನಾಟಕ ರಾಜ್ಯದ ಬಾಗಲಕೋಟ ಜಿಲ್ಲೆಯ ಮುಧೋಳ ತಾಲ್ಲೂಕಿನಲ್ಲಿದೆ. ಲೋಕಾಪುರ ಗ್ರಾಮವು ಜಿಲ್ಲಾ ಕೇಂದ್ರ ಬಾಗಲಕೋಟದಿಂದ ಸುಮಾರು ೩೫ ಕಿ. ಮಿ. ದೂರ ಇದೆ.

ಲೋಕಾಪುರ
ಲೋಕಾಪುರ
village
Population
 (೨೦೧೨)
 • Total೧೫೦೦೦

ಚರಿತ್ರೆ

ಬದಲಾಯಿಸಿ

ಲೋಕಾಪುರಯಲ್ಲಿ ಒಳ್ಳೆಯ ಶಿಕ್ಷಣ ಕೇಂದ್ರ, ವ್ಯಾಪಾರ ಕೇಂದ್ರ, ಹಣಕಾಸು ಕೇಂದ್ರ,ನೆಮ್ಮದಿ ಕೇಂದ್ರ, ಬಿ.ಎಸ್.ಎನ್.ಎಲ್ ಕಚೇರಿ, ರೈತ ಸಂಪರ್ಕ ಕೇಂದ್ರ, ಬಸ್ ನಿಲ್ದಾಣ, ಅಂಚೆ ಕಚೇರಿ,ಪ್ರಾಥಮಿಕ ಆರೋಗ್ಯ ಕೇಂದ್ರ, ಪ್ರಾಥಮಿಕ ಪಶು ಆರೋಗ್ಯ ಕೇಂದ್ರ, ಬ್ಯಾಂಕಗಳು ಹಾಗೂ ಇತರೆ ಕಚೇರಿಗಳಿವೆ.

=='ದೇವಾಲಯಗಳು ಶ್ರೀ ಜ್ಞಾನೇಶ್ವರ ಮಠ, ಶ್ರೀ ಮಹಾಲಕ್ಷ್ಮಿದೇವಸ್ಥಾನ,ಪಾಂಡುರಂಗ - ವಿಠ್ಠಲ ದೇವಸ್ಥಾನ ಶ್ರೀ ಹಣಮಂತ ದೇವಾಲಯಗಳನ್ನು ಶ್ರೀ ಕಾಶೀಲಿಂಗೇಶ್ವರ ದೇವಸ್ಥಾನ ಹಾಗೂ ಶ್ರೀ ಲೋಕೇಶ್ವರ ದೇವಸ್ಥಾನ ಶ್ರೀ ದುರ್ಗಾದೇವಿ ದೇವಸ್ಥಾನ ಇವೆ.

ಮಸೀದಿಗಳು

ಬದಲಾಯಿಸಿ

ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.

ನೀರಾವರಿ

ಬದಲಾಯಿಸಿ

ಗ್ರಾಮದ ಪ್ರತಿಶತ ೫೦ ಭಾಗ ಭೂಮಿ ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.

ಹಬ್ಬಗಳು

ಬದಲಾಯಿಸಿ

ಪ್ರತಿವರ್ಷ ಶ್ರೀ ಕ್ಷೇತ್ರ ಜ್ಞಾನೇಶ್ವರ ಮಠದ ಆರಾಧನ ಮಹೋತ್ಸವ ಲಕ್ಷ್ಮೀ ಜಾತ್ರಾ ಮಹೋತ್ಸ ವ, ಶ್ರೀ ಪಾಂಡುರಂಗ ಸಪ್ತಾಹ(ದಿಂಡಿ), ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.

ಶಿಕ್ಷಣ

ಬದಲಾಯಿಸಿ
  • ಸರಕಾರಿ ಹಿರಿಯ ಗಂಡು ಮಕ್ಕಳ ಪ್ರಾಥಮಿಕ ಶಾಲೆ
  • ಸರಕಾರಿ ಹಿರಿಯ ಹೆಣ್ಣು ಮಕ್ಕಳ ಪ್ರಾಥಮಿಕ ಶಾಲೆ
  • ಸರಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆ
  • ಪ್ರೌಡ ಶಾಲೆ
  • ಪದವಿಪೂರ್ವ ಕಲಾ ಮಹಾವಿದ್ಯಾಲಯ
  • ಸರ್ಕಾರಿ ಕಲಾ ಮಹಾವಿದ್ಯಾಲಯ
  • ಕೈಗಾರಿಕಾ ತರಬೇತಿ ಕೇಂದ್ರ

ಆರಕ್ಷಕ (ಪೋಲೀಸ್) ಠಾಣೆ

ಬದಲಾಯಿಸಿ

ಗ್ರಾಮದಲ್ಲಿ ಪೋಲೀಸ್ ಠಾಣೆ ಇದೆ.

"https://kn.wikipedia.org/w/index.php?title=ಲೋಕಾಪುರ&oldid=1167676" ಇಂದ ಪಡೆಯಲ್ಪಟ್ಟಿದೆ