ಇಂಗ್ಲಿಷ್ ಸಾಹಿತ್ಯದ ಸಂಕ್ಷಿಪ್ತ ಇತಿಹಾಸ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೧೭ ನೇ ಸಾಲು:
*ಆನಂತರ ಬಂದ ಗದ್ಯಲೇಖಕರಲ್ಲಿ '''ಫ್ರಾನ್ಸಿಸ್ ಬೇಕನ್''' ಗಣ್ಯನಾದವ. ದಿ ಅಡ್ವಾನ್ಸ್ಮೆಂಟ್ ಆಫ್ ಲರ್ನಿಂಗ್ ಮತ್ತು ಎಸ್ಸೇಸ್ ಎಂಬ ಕವನ ಬರಹಗಳು ಖ್ಯಾತಿವೆತ್ತಿವೆ. ಅವನ ಪ್ರಬಂಧಗಳು ಇಂಗ್ಲಿಷ್‍ನಲ್ಲಿ ಆ ಜಾತಿಯ ಮೊಟ್ಟಮೊದಲನೆಯ ಕೃತಿಗಳು. ಎಸ್ಸೆ ಎಂಬ ಪದವನ್ನು ಇಂಗ್ಲಿಷಿಗಿತ್ತವನೂ ಅವನೇ ಲೌಕಿಕವಾಗಿ ಊರ್ಜಿತವಾಗುವುದು ಹೇಗೆ ಎನ್ನುವುದೇ ಬೇಕನ್ನನ ಪ್ರಮುಖ ಆಸಕ್ತಿಯಾಗಿತ್ತು. ಇತರರಿಗೂ ಅವನು ಅದನ್ನೇ ಬೋಧಿಸಿದ. ಅವನ ಗದ್ಯ ಬಿಗಿಯಾದ ಅಡಕವಾದ ವಾಕ್ಯಗಳಿಂದ ಕೂಡಿ ಆಲೋಚನಾ ಭರಿತವಾಗಿದೆ. ಬೇಕನ್ನನ ಗದ್ಯಕೃತಿಗಳು ಹದಿನೇಳನೆಯ ಶತಮಾನದ ಮೊದಲ ದಶಕಕ್ಕೆ ಸೇರಿದ ಬರೆಹಗಳು
*ಇದೇ ದಶಕದಲ್ಲಿ ಬಂದುದು ಇಂಗ್ಲಿಷ್ ಗದ್ಯ ಕೃತಿಗಳಲ್ಲೆಲ್ಲ ಅತ್ಯಂತ ಪ್ರಭಾವಯುತವಾದ '''ಬ್ಯೆಬಲಿನ ಭಾಷಾಂತರ-ದಿ ಆಥರೈಸ್ಡ್‍ವರ್ಷನ್''', ಸರಳವೂ ಸುಂದರವೂ ಕಾವ್ಯಮಯವೂ ಆದ ಈ ಪುಸ್ತಕಇಂಗ್ಲಿಷ್ ಲೇಖಕರನೇಕರ ಮೇಲೆ ತನ್ನ ಪ್ರಭಾವವನ್ನು ಬೀರಿದ್ದಲ್ಲದೆ ಇಂಗ್ಲಿಷ್ ಭಾಷೆಯನ್ನು ಸ್ಥಿಮಿತಗೊಳಿಸುವುದರಲ್ಲೂ ದೊಡ್ಡ ಉಪಕಾರ ಮಾಡಿದೆ ಹದಿನೇಳನೇಯ ಶತಮಾನದ ಇತರ ಗದ್ಯಲೇಖಕರು ರಾಬರ್ಟ್ ಬರ್ಟನ್, ಥಾಮಸ್ ಫುಲ್ಲರ್, ಜೆರೆಮಿ ಟೆಯ್ಲರ್, ಐಜಾóಕ್ ವಾಲ್ಟನ್, ಸರ್ ಥಾಮಸ್ ಬ್ರೌನ್, ಸ್ಯಾಮ್ಯುಆಲ್ ಪೀಪ್ಸ್, ಥಾಮಸ್ ಹಾಬ್ಸ್ ಮತ್ತು ಜಾನ್ ಲಾಕ್. ಬರ್ಟನ್ನನ ದಿ ಅನಾಟಮಿ ಆಫ್ ಮೆಲಂಕ ಫುಲ್ಲರನ ಇಂಗ್ಲಿಷ್ ವರ್ದೀಸ್. ಟೆಯ್ಲರನ ಹೋಲಿ ಲಿವಿಂಗ್ ಅಂಡ್ ಹೋಲಿ ಡ್ಯೆಯಿಂಗ್, ವಾಲ್ಟನ್ನನ ದಿ ಕಂಪ್ಲೀಟ್ ಆಂಗ್ಲರ್, ಬ್ರೌನನ ರಿಲಿಜಯೋ ಮೆಡಿಚಿ ಮತ್ತು ಆರ್ನ್ ಬರಿಯಲ್, ಪೀಪ್ಸನ ಡಯರಿ, ಹಾಬ್ಸನ ಲೆವಿಯತಾನ್ ಮತ್ತು ಲಾಕ್‍ನ ಎಸ್ಸೆ ಆನ್ ಹ್ಯೂಮನ್ ಅಂಡರ್‍ಸ್ಟ್ಯಾಂಡಿಂಗ್ - ಇವು ಇಂಗ್ಲಿಷ್ ಸಾಹಿತ್ಯ ಚರಿತ್ರೆಯಲ್ಲಿ ಮೈಲಿಗಲ್ಲುಗಳಂಥ ಗ್ರಂಥಗಳು.
====ಪುನಃಸ್ಥಾಪನ ಯುಗ(೧೬೬೦-೧೭೦೦)-ರೆಸ್ಟೊರೇಷನ್ ಏಜ್====
*ಡ್ರ್ರ್ಯೆಡನ್, ಪೀಪ್ಸ್, ಹಾಬ್ಸ್, ಲಾಕ್, ಇವರೆಲ್ಲ ಹದಿನೇಳನೆಯ ಶತಮಾನದ ಕೊನೆಯ ನಲವತ್ತು ವರ್ಷಗಳಾದ ರೆಸ್ಟೊರೇಷನ್ ಏಜ್ ಎಂಬ ಅವಧಿಗೆ ಸೇರಿದವರು. ಈ ಯುಗ ಇಂಗ್ಲಿಷ್ ಗದ್ಯದ ಚರಿತ್ರೆಯಲ್ಲಿ ಮಾತ್ರವಲ್ಲದೆ, ನಾಟಕದ ಚರಿತ್ರೆಯಲ್ಲೂ ಪ್ರಸಿದ್ಧವಾಗಿದೆ. ಅಂದು ನಾಟಕ ನೋಡುವುದಕ್ಕೆ ಹೋಗುತ್ತಿದ್ದವರನೇಕರು ಸಮಾಜದ ಮೇಲ್ತರಗತಿಗೆ ಸೇರಿದ್ದವರು ರಾಜ ಎರಡನೆಯ ಚಾರಲ್ಸನ ಸಮೀಪವರ್ತಿಗಳು ಆವನೂ ಅವನ ಅನುಚರರೂ ಅನೀತಿಗೆ ಅತಿಭೋಗಕ್ಕೆ ಹೆಸರಾಗಿದ್ದವರು ಈ ದೋಷಗಳೇ ಪ್ರಧಾನವಾಗಿರುವ ಗದ್ಯನಾಟಕಗಳು ಈ ಅವಧಿಯಲ್ಲಿ ಬಂದುವು ರೆಸ್ಟೋರೇಷನ್ ನಾಟಕವೆಂದರೆ ಅನೀತಿಯುತವಾದುದೆನ್ನುವಷ್ಟರಮಟ್ಟಿಗೆ ಅವುಗಳಲ್ಲಿ ಕೆಲವು ಅಪಖ್ಯಾತಿಯನ್ನು ಪಡೆದಿವೆ ಅವುಗಳಲ್ಲಿ ಕೆಲವು ಸರ ಜಾರ್ಜ್ ಎತಿರೆಜ್, ವಿಲಿಯಂ ವ್ಯೆಚರ್ಲಿ, ಮಿಸೆಸ್ ಆಫ್ರಾಬೆನ್, ಮತ್ತು ವಿಲಿಯಂ ಕಾಂಗ್ರೀವ್‍ರವರ ನಾಟಕಗಳು ಇಂಥವು ವೈಚರ್ಲಿಯ ದಿ ಕಂಟ್ರಿ ಹೌಸ್ ಇದಕ್ಕೆ ಒಳ್ಳೆಯ ಉದಾಹರಣೆ, ಕಾಂಗ್ರೀವ್‍ನ ದಿ ವೆ ಆಫ್ ದಿ ವರ್ಲ್ಯ್ ಇಂಗ್ಲಿಷಿನ ಅತ್ಯಂತ ಪ್ರಸಿದ್ಧವಾದ ನಾಟಕಗಳಲ್ಲೊಂದು. ಇದರ ಗದ್ಯದ ಸೊಬಗು ವಿಮರ್ಶಕರ ಮೆಚ್ಚುಗೆಗೆ ಪಾತ್ರವಾಗಿದೆ. ಈ ನಾಟಕಗಳೂ ಹದಿನೇಳನೆಯ ಶತಮಾನದ ಆದಿಯಲ್ಲಿ ಬಂದ ವ್ಸಾನ್ ಬ್ರೂ ಮತ್ತು ಫರ್ಕುಹರ್‍ರ ನಾಟಕಗಳೂ ಗದ್ಯ ನಾಟಕಗಳನ್ನು ಇಂಗ್ಲಿಷಿನಲ್ಲಿ ಸ್ಥಾಪಿಸಿದ್ದಲ್ಲದೆ ಕಾಮೆಡಿ ಆಫ್ ಮ್ಯಾನರ್ಸ್ ವರ್ಗದ ನಾಟಕಕ್ಕೂ ಹಿರಿ ಸ್ಥಾನವನ್ನು ತಂದು ಕೊಟ್ಟವು.