ಇಂಗ್ಲಿಷ್ ಸಾಹಿತ್ಯದ ಸಂಕ್ಷಿಪ್ತ ಇತಿಹಾಸ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೪೦ ನೇ ಸಾಲು:
ಈ ವಿಕ್ಟೋರಿಯನ್ ಯುಗದಲ್ಲಿ ಕಾದಂಬರಿ ಎಂಬ ಸಾಹಿತ್ಯಕ ಶೈಲಿ ಆಂಗ್ಲ ಭಾಷೆಯಲ್ಲಿ ಕರೆದೊಯ್ಯುವಂತಹ ಪ್ರಭಾವವನ್ನು ಬೀರಿತು. ಹೆಂಗಸರು ಬರಹಗಾರರಾಗಿ ಮತ್ತು ಓದುಗರಾಗಿ ಪ್ರಮುಖ ಪಾತ್ರವನ್ನು ನಿವ‍೯ಹಿಸಿದರು. [[ಚಾರ್ಲ್ಸ್‌ ಡಿಕನ್ಸ್]] ರವರು ಪಿಕ್ ವಿಕ್ ಪೇಪರ್ಸ್ ಎಂಬುದನ್ನು ೧೮೩೭ ನವೆಂಬರ್ ನಲ್ಲಿ ಪ್ರಕಟಿಸಿದ್ದರು. ೧೯ನೇ ಶತಮಾನದ ಕೊನೆಯವರೆಗೂ ಮೂರು ಸಂಪುಟಗಳ ಆವೃತ್ತಿಯನ್ನು ಪ್ರಕಟಿಸಿದರು. ಪರಿಚಲನೆಯ ಗ್ರಂಥಾಲಯಗಳಿಂದ ಕಾದಂಬರಿಗಳು ಬಹಳ ಪ್ರಸಿದ್ಧಿಯಾದವು. ಚಾಲ್ಸ್೯ ಡಿಕೆನ್ಸ್, ಟ್ರಾಂಬೆ ಸಹೋದರಿಯರು, ಎಮಿಲಿ ಮತ್ತು ಚಾಲ್೯ ಈ ಯುಗದ ಪ್ರಮುಖ ಬರಹಗಾರರು.
|}
===ಇತರೆ===
;ಕಾವ್ಯ-ಪದ್ಯ :
:ವಡ್ರ್ಸವರ್ತ್ (1770-1850); ಕೊಲೆರಿಡ್ಜ್ (1772-1834); ಬೈರನ್ (1788-1824); ಶೆಲ್ಲಿ (sಶೆಲೀ) (1792-1822); ಕ್ಲೇರ್ (1793-1864); ಕೀಟ್ಸ್ 1795-1821)
Line ೨೫೧ ⟶ ೨೫೨:
;ತತ್ವ ಶಾಸ್ತ್ರ-ರಾಜ್ಯ ಶಾಸ್ತ್ರ:
:ಬೆನ್ತ್ಯಾಮ್ (1748-1832) ; ಕೋಬೆಟ್ (1762-1835); ಓವೆನ್ (1771-1858);
===ನವಭಿಜಾತ ಯುಗ:===
ಹದಿನೆಂಟನೆಯ ಶತಮಾನ ಇಂಗ್ಲಿಷ್ ಸಾಹಿತ್ಯ ಚರಿತ್ರೆಯಲ್ಲಿ ನಿಯೊಕ್ಲಾಸಿಕಲ್ (ನವಅಭಿಜಾತ) ಯುಗ ಸರಳವಾದ, ನೇರವಾದ, ಭಾವ ಮತ್ತು ಭಾಷೆಗಳಲ್ಲಿ ಅತಿರೇಕವಿರದಿದ್ದ ಬರಹ, ವ್ಯೆಚಾರಿಕತೆ, ವಿಡಂಬನೆ, ಮೊದಲಾದವುಗಳ ಪ್ರಾಧಾನ್ಯ. ರೊಮ್ಯಾಂಟಿಕ್ ಪಂಥದ ಪ್ರಮುಖ ಪ್ರವೃತ್ತಿಗಳಾದ ಪ್ರಕೃತಿಪ್ರೇಮ ಮತ್ತು ಕಲ್ಪನಾವಿಲಾಸಗಳ ಆಭಾವ-ಇವು ಈ ಯುಗದ ಕಾವ್ಯದ ಪ್ರಮುಖ ಲಕ್ಷಣಗಳು ಇವಕ್ಕೆ ವಿರುದ್ಧ ಲಕ್ಷ್ಪ್ಷಣಗಳನ್ನೇ ಪದ್ಯ ಪಡೆಯಿತು.
 
ಹದಿನೆಂಟನೆಯ ಶತಮಾನದ ಕವಿಗಳಲ್ಲಿ ಮೊದಲು ಬರುವವ ಅಲೆಕ್ಸಾಂಡರ್ ಪೋಪ್. ಲಂಡನ್ನಿನ ಕವಿಯಾದ ಇವನ ಕೃತಿಗಳು ವಿಡಂಬನೆಗಳು. ಸಮಕಾಲೀನ ಲಂಡನ್ ಸಮಾಜವನ್ನೂ ಸೋದರ ಲೇಖಕರನ್ನೂ ನಿರ್ದಾಕ್ಷಿಣ್ಯವಾಗಿ, ಅನೇಕ ವೇಳೆ ಅನ್ಯಾಯವಾಗಿ, ವೈಯಕ್ತ್ತಿಕ ಕಾರಣಗಳಿಗಾಗಿ, ಕಟುವಿಡಂಬನೆಗೆ ಅವನು ಗುರಿಪಡಿಸಿದ್ದಾನೆ. ದಿ ರೇಪ್ ಆಪ್ ದಿ ಲಾಕ್, ಡನ್ಸಿಯಡ್ ಎಂಬ ಇವನ ವಿಡಂಬನಾತ್ಮಕ ಕವಿತೆಗಳು ಪ್ರಸಿದ್ಧ. ಇವುಗಳ ಮಾಧ್ಯಮವಾದ ಹಿರಾಯಿಕ್ ಕಪ್ಲೆಟ್ ಎಂಬ ಛಂದಸ್ಸಿನ ಮೇಲೆ ಅವನಿಗಿರುವ ಸ್ವಾಮ್ಯ ಅಸದೃಶವಾದುದು. ಎಸ್ಸೆ ಅನ್ ಕ್ರಿಟಿಸಿಸಮ್, ಎಸ್ಸೆ ಅನ್ ಮ್ಯಾನ್ ಎಂಬ ಇವನ ಚರ್ಚಾತ್ಮಕ ಕವನಗಳು ಆ ಕಾಲದ ಪದ್ಯವೂ ಹೇಗೆ ಗದ್ಯದ ಕೆಲಸಕ್ಕೆ ಉಪಯೋಗಿಸಲ್ಪಡುತ್ತಿತ್ತು ಎಂಬುದನ್ನು ತೋರಿಸುತ್ತವೆ. ಗಲಿವರ್ಸ್ ಟ್ರಾವೆಲ್ಸ್ ಎಂಬ ಜಗದ್ವಿಖ್ಯಾತ ವಿಡಂಬನಾತ್ಮಕ ಕಥೆಯ ಕರ್ತೃ ಜೊನಾತನ್ ಸ್ವಿಫ್ಟ್. ಅದು ಆ ಕಾಲದ ರಾಜಕೀಯ ಸ್ಥಿತಿಗತಿಗಳನ್ನೂ ಸ್ವಿಫ್ಟನ ನಿರಾಶಾಯುತ ಜೀವನದೃಷ್ಟಿಯನ್ನೂ ಪ್ರತಿಬಿಂಬಿಸುತ್ತದೆ. ದಿ ಬ್ಯಾಟಲ್ ಆಫ್ ಬುಕ್ಸ್, ಸಾಹಿತ್ಯಕ್ಕೆ ಸಂಬಂಧಪಟ್ಟ ವಿಡಂಬನೆ ದಿ ಟೇಲ್ ಆಫ್ ಎ ಟಬ್ ಅವನ ಇನ್ನೊಂದು ಪ್ರಸಿದ್ಧ ಕೃತಿ. ಇಂಗ್ಲಿಷ್ ವಿಡಂಬನಕಾರರಲ್ಲೂ ಗದ್ಯ ಲೇಖಕರಲ್ಲೂ ಸ್ವಿಫ್ಟನ ಸ್ಥಾನ ಗಣ್ಯವಾದುದು. ಅಷ್ಟೇ ಗಣ್ಯರಾದವರು ಡೇನಿಯಲ್ ಡೀಫೋ. ಆಡಿಸನ್ ಮತ್ತು ಸ್ಟೀಲ್ ಇಂಗ್ಲಿಷಿನ ಪ್ರಬಂಧಗಳ ಶ್ರೇಷ್ಠ ನಿರ್ಮಾಪಕರ ಶ್ರೇಣಿಗೆ ಸೇರಿದವರು. ಅವರ ಟ್ಯಾಟ್ಲರ್ ಮತ್ತು ಸ್ಪೆಕ್ಟೇಟರ್ ಪ್ರಬಂಧಗಳು ಸಮಾಜ ಸುಧಾರಣೆಗಾಗಿ ರಚಿತವಾಗಿದ್ದರೂ ಉತ್ತಮ ಕಲಾಕೃತಿಗಳೂ ಆಗಿವೆ ಇಬ್ಬರೂ ನಾಟಕಗಳನ್ನೂ ಬರೆದಿದ್ದಾರೆ. ಇವರು ತಮ್ಮ ಸ್ಪೆಕ್ಟೇಟರ ಪ್ರಬಂಧಗಳಲ್ಲಿ ಸೃಷ್ಟಿಸಿದ ಸರ್ ರೋಜರ್ ಡಿ ಕವರ್ಲಿ ಇಂಗ್ಲಿಷ್ ಸಾಹಿತ್ಯ ಲೋಕದ ವಿಖ್ಯಾತ ವ್ಯಕ್ತಿಗಳಲೊಬ್ಬನಾಗಿರುವುದಲ್ಲದೆ ಮುಂದೆ ಬಂದ ಇಂಗ್ಲಿಷ್ ಕಾದಂಬರಿಗಳ ಬೆಳವಣಿಗೆಯ ಚರಿತ್ರೆಯಲ್ಲೂ ಹೆಸರಾಗಿದ್ದಾನೆ. ಹದಿನಂಟನೆಯ ಶತಮಾನದ ಇತರ ಗದ್ಯ ಲೇಖಕರಾದ ಚರಿತ್ರಕಾರ ಎಡ್ವರ್ಡ್ ಗಿಬ್ಬನ್ (ದಿ ರೈಸ್ ಅಂಡ್ ಫಾಲ್ ಆಫ್ ದಿ ರೋಮನ್ ಎಂಪೈರ್‍ನ ಕರ್ತೃ ಎಡ್ಮಂಡ್ ಬರ್ಕ್-ಇಬ್ಬರೂ ಇಂಗ್ಲಿಷ್ ಗದ್ಯದ ಸತ್ತ್ವ ಮತ್ತು ಓಜಸ್ಸುಗಳನ್ನು ತಮ್ಮ ಕೃತಿಗಳಲ್ಲಿ ತೋರಿಸಿದ್ದಾರೆ.
 
ಪೋಪನ ಅನಂತರ ಬಂದ ಕವಿಗಳಲ್ಲಿ ಆಲಿವರ್ ಗೋಲ್ಡ್ ಸ್ಮಿತ್ ಮತ್ತು ಸ್ಯಾಮುಅಲ್ ಜಾನ್‍ಸನ್ನರು ಕ್ಲಾಸಿಕಲ್ ಪಂಥದ ಕೃತಿಗಳನ್ನೇ ಬರೆದರು. ಗೋಲ್ಡ್ ಸ್ಮಿತ್ ನ ದಿ ಡೆಸರ್ಟಡ್ ವಿಲೇಜ್ ಮತ್ತು ದ ಟ್ರಾವೆಲರ್ ವಿಚಾರಪೂರ್ಣವಾದ ಸಮಸ್ಯಾ ಪ್ರತಿಪಾದಕವಾದ ಕವನಗಳು. ಜಾನ್‍ಸನ್ನನ ದಿ ವ್ಯಾನಿಟಿ ಆಫ ಹ್ಯೂಮನ್ ವಿಷಸ್ ಜೀವನದ ಆಶೋತ್ತರಗಳ ನಿರರ್ಥಕತೆಯನ್ನು ಪ್ರತಿಪಾದಿಸುವ ಕವನ. ಈ ಕವನಗಳೆಲ್ಲ ತಮ್ಮ ವಿಷಯಗಳಿಗೆ ಅನುಗುಣವಾಗಿ ಹಿರಾಯಿಕ್ ಕಪ್ಲೆಟ್ ಛಂದಸ್ಸಿನಲ್ಲಿವೆ. ಗೋಲ್ಡ್ ಸ್ಮಿತ್ ಕವಿಯಾಗಿದ್ದುದಲ್ಲದೆ ಪ್ರಬಂಧಕಾರನೂ ನಾಟಕಕಾರನೂ ಕಾದಂಬರಿಕಾರನೂ ಆಗಿದ್ದ. ದಿ ಸಿಟಿಜನ್ ಆಫ್ ದಿ ವಲ್ರ್ಡ್ ಎಂಬ ಅಂಕಿತನಾಮವನ್ನಿಟ್ಟುಕೊಂಡು ಆತ ಬರೆದ ಪ್ರಬಂಧಗಳು ಸಮಕಾಲೀನರ ಗುಣದೋಷಗಳ ವಿಮರ್ಶೆಯನ್ನು ಒಳಗೊಂಡಿದೆ. ಅವುಗಳಲ್ಲಿರುವ ತಿಳಿಹಾಸ್ಯ ಮಾನವ ಪ್ರೇಮಗಳು ಆಹ್ಲಾದಕರವಾಗಿವೆ. ಅವನ ದಿ ವಿಕಾರ್ ಆಫ್ ವೇಕ್‍ಫೀಲ್ಡ್ ಜಗತ್ತಿನ ಅತ್ಯಂತ ಪ್ರಸಿದ್ಧ ಕಾದಂಬರಿಗಳಲ್ಲೊಂದು. ಅವನ ನಾಟಕಗಳ ಬೆಳವಣಿಗೆಯನ್ನು ಮುಂದುವರಿಸುವುದರಲ್ಲಿ ಗಣನೀಯ ಪಾತ್ರವಹಿಸಿದವು. ಡಾಕ್ಟರ್ ಜಾನ್ಸನ್ ಕವಿಯಾಗಿದ್ದುದರ ಜೊತೆಗೆ ನಿಘಂಟುಕಾರನೂ ಆಗಿದ್ದ. 1755ರಲ್ಲಿ ಪ್ರಕಟವಾದ ಅವನ ಡಿಕ್ಷ್‍ನರಿ ಇಂಗ್ಲಿಷ್ ಭಾಷೆಯ ನಿಘಂಟುಗಳಲ್ಲಿ ಒಂದು ಘಟ್ಟವನ್ನೇ ಸ್ಥಾಪಿಸಿತು. ಇಂಗ್ಲಿಷ್ ವಿಮರ್ಶಕರ ಶ್ರೇಣಿಯಲ್ಲಿ ಅವನದು ದೊಡ್ಡ ಹೆಸರು. ಅವನ ಲೈವ್ಸ್ ಆಫ್ ಪೊಯಟ್ಸ್ ಮತ್ತು ಪ್ರಿಫೇಸ್ ಟು ಷೇಕ್ಸ್‍ಪಿಯರ್ ಅವನು ವಿಮರ್ಶೆಗೆ ಸಲ್ಲಿಸಿದ ಸೇವೆಯ ಪ್ರತೀಕಗಳಾಗಿ ಇಂದಿಗೂ ವಿದ್ವಾಂಸರಿಗೆ ಆಕರ್ಷಕವಾಗಿವೆ. ಜಾನ್ಸನ್ನನ ವಿಮರ್ಶೆ ಕ್ಲಾಸಿಕಲ್ ಯುಗದ ಕಾವ್ಯ ಮೀಮಾಂಸೆ ಮತ್ತು ಕಾವ್ಯ ಲಕ್ಷಣಗಳಿಗೆ ಕೈಮರದಂತಿದೆ. ಆದರೆ ಈ ಪಂಥಕ್ಕೆ ವಿರುದ್ಧವಾದ ಷೇಕ್ಸ್‍ಪಿಯರ್‍ನ ಔನ್ನತ್ಯವನ್ನು ಗುರುತಿಸಬಲ್ಲ ರಸಜ್ಞೆಯೂ ಅವನಲ್ಲಿತ್ತು.
 
ಹದಿನೆಂಟನೆಯ ಶತಮಾನದ ಉತ್ತರಾರ್ಧ ಇಂಗ್ಲಿಷ್ ಕಾದಂಬರಿಯ ಆರಂಭದ ಕಾಲ. ಸ್ಯಾಮ್ಯುಅಲ್ ರಿಚರ್ಡ್‍ಸನ ಮತ್ತು ಹೆನ್ರಿ ಫೀಲ್ಡಿಂಗ್ ಇಂಗ್ಲಿಷಿನ ಮೊದಲ ಕಾದಂಬರಿಕಾರರು. ರಿಚರ್ಡ್‍ಸನ್ನನ ಪ್ಯಾಮೆಲಾ ಮತ್ತು ಕ್ಲಾರಿಸ ಫೀಲ್ಡಿಂಗನ ಜೋಸೆಫ್ ಅಂಡ್ರ್ಯೂಸ್ ಮತ್ತು ಟಾಮ್ ಜೋನ್ಸ್ ಎಂಬ ಪ್ರಸಿದ್ಧ ಕಾದಂಬರಿಗಳು ಈ ಅವಧಿಯಲ್ಲಿ ರಚಿತವಾದುವು. ತೋಬಿಯಸ್ ಸ್ಮಾಲೆಟ್ನ ರೋಡೆರಿಕ್ ರ್ಯಾಂಡಮ್ ಮತ್ತು ಲಾರೆನ್ಸ್ ಸ್ಟರ್ನನ ಟ್ರಿಸ್ಟ್ರಾಮ್ ಷ್ಯಾಂಡಿ ಮತ್ತು ಸೆಂಟಿಮೆಂಟಲ್ ಜರ್ನಿಗಳು ಇಂಗ್ಲ್ಲಿಷ್ ಕಾದಂಬರಿಗಳ ಹಿರಿಯ ಪರಂಪರೆಯನ್ನೇ ಸ್ಥಾಪಿಸಿದುವು. ಬರಬರುತ್ತ ಇಂಗ್ಲಿಷ್ ಕಾದಂಬರಿ ಸಾಮಾಜಿಕ ಸಾಹಿತ್ಯದ ದೊಡ್ಡ ಮಾಧ್ಯಮವಾಯಿತು.
 
==ವಿಕ್ಟೋರಿಯನ್ ಯುಗ==