ಇಂಗ್ಲಿಷ್ ಸಾಹಿತ್ಯದ ಸಂಕ್ಷಿಪ್ತ ಇತಿಹಾಸ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೨೦ ನೇ ಸಾಲು:
*ಇಪ್ಪತ್ತನೆಯ ಶತಮಾನದ ಸಾಹಿತ್ಯ ಶ್ರೀಮಂತವಾಗಿದೆ. ವೈವಿಧ್ಯಮಯವಾಗಿದೆ. ಈ ಸಾಹಿತ್ಯವು ಹಲವು ರಾಜಕೀಯ, ಸಾಮಾಜಿಕ ಮತ್ತು ಸಾಹಿತ್ಯಕ ಪ್ರಭಾವಗಳಿಗೆ ಒಳಗಾಯಿತು. ಈ ಶತಮಾನದ ಪೂರ್ವಾರ್ಧವು ಎರಡು ಜಾಗತಿಕ ಸಮರಗಳನ್ನು ಕಂಡಿತು. ಕೈಗಾರಿಕಾ ಕ್ರಾಂತಿಯಿಂದ ಅಭೂತಪೂರ್ವ ಆರ್ಥಿಕ ಕ್ರಾಂತಿಯನ್ನು ಸಮೃದ್ಧಿಯನ್ನು ತಂದಿದ್ದ ವಿಜ್ಞಾನ, ತಂತ್ರಜ್ಞಾನಗಳು ಯುದ್ಧಕ್ಕೆ ಕಾಣಿಕೆ ನೀಡಿ ಹಿಂದೆ ಎಂದೂ ಇಲ್ಲದಷ್ಟು ಯುದ್ಧಗಳು ಕ್ರೂರವೂ ವಿನಾಶಕವೂ ಆಗುವಂತೆ ಮಾಡಿದವು. ವಿಜ್ಞಾನ-ತಂತ್ರಜ್ಞಾನಗಳ ಕ್ರೂರ ಮುಖದ ಅನಾವರಣವಾಯಿತು. ಈ ಅವಧಿಯಲ್ಲೇ ಕಾರ್ಲ್ ಮಾಕ್ರ್ಸ್‍ನ ಸಿದ್ಧಾಂತಗಳು ಹಬ್ಬಿ ಕಾರ್ಮಿಕರ ಚಳವಳಿಗಳು ಬಲವಾದವು. ಕಾರ್ಮಿಕ ಘರ್ಷಣೆಗಳೂ ಪ್ರಾರಂಭವಾದವು. ಫ್ರಾಯ್ಡ್‍ನ ಮನಶ್ಯಾಸ್ತ್ರದಲ್ಲಿ ರೂಪಿಸಿದ ಸಿದ್ಧಾಂತಗಳು ಮನುಷ್ಯರನ್ನು ಬೆಚ್ಚಿ ಬೀಳಿಸಿದವು. ಮನುಷ್ಯನು ಮನುಷ್ಯನನ್ನು ಅರ್ಥಮಾಡಿಕೊಳ್ಳಲು ಹೊಸ ವಿಧಾನಗಳನ್ನು ಅನುಸರಿಸಿದ. ವಿದ್ಯುಚ್ಛಕ್ತಿ, ಚಲನಚಿತ್ರಗಳು ಬದುಕಿನಲ್ಲಿ ಕ್ರಾಂತಿಯನ್ನುಂಟುಮಾಡಿದವು. ಕಾಲ-ದೇಶಗಳ ಮೇಲಿನ ವಿಜಯ ಇನ್ನೂ ವ್ಯಾಪಕವಾಯಿತು. ದೇಶದ ಒಳಗಡೆ ಸ್ವಯಂಚಾಲಿತ ವಾಹನಗಳ ವೇಗ, ಬಳಕೆ ಹೆಚ್ಚಾದವು. ಜನತೆಯ ಶಿಕ್ಷಣವೂ ಸರ್ಕಾರದ ಹೊಣೆ ಎಂಬ ಅರಿವು ಮೂಡಿತು. 1919ರಲ್ಲಿ ಮಹಿಳೆಯರಿಗೆ ಮತದಾನದ ಹಕ್ಕು ಪ್ರಾಪ್ತವಾಯಿತು. ಕಾರ್ಮಿಕನಿಗೂ ಈ ಹಕ್ಕು ಲಭ್ಯವಾಯಿತು. 1928ರಲ್ಲಿ 21 ವರ್ಷವಾದವರಿಗೆಲ್ಲ ಮತದಾನದ ಹಕ್ಕನ್ನು ಕೊಡಲಾಯಿತು. ಇಂಗ್ಲೆಂಡ್ ಮುಕ್ತ ವ್ಯಾಪಾರ (ಫ್ರೀ ಟ್ರೇಡ್) ದಿಂದ ರಕ್ಷಣಾನೀತಿ (ಪ್ರೊಟೆಕ್ಷ್‍ನಿಸ್ಟ್)ಗೆ ವಾಲಿತು. ಭಾರತದಲ್ಲಿ ಸ್ವಾತಂತ್ರ್ಯ ಚಳವಳಿ ಬಲವಾಯಿತು. ದಕ್ಷಿಣ ಆಫ್ರಿಕದಲ್ಲಿ ಬೋಯರ್ ಯುದ್ಧ ನಡೆಯಿತು. ಬ್ರಿಟಿಷ್ ಸಾಮ್ರಾಜ್ಯಷಾಹಿಗೆ ಸವಾಲುಗಳು ಬಂದವು.
*ಈ ಶತಮಾನದ ಉತ್ತರಾರ್ಧದಲ್ಲಿ ಬಾಂಬ್‍ನ ಭಯಂಕರ ಶಕ್ತಿಯಿಂದ ಜಗತ್ತು ಇನ್ನೂ ತಲ್ಲಣಿಸುತ್ತಿತ್ತು. ಬ್ರಿಟಿಷ್ ಸಾಮ್ರಾಜ್ಯವು ಕರಗಿ ಹೋಗಿ ಅದರ ರಾಜಕೀಯ ಪ್ರಾಬಲ್ಯ ಕುಗ್ಗಿತ್ತು. ಆರ್ಥಿಕ ವ್ಯವಸ್ಥೆಗೆ ಪೆಟ್ಟು ಬಿದ್ದಿತು. ವಿಜ್ಞಾನ-ತಂತ್ರಜ್ಞಾನಗಳು ಬೆಳೆದು ಕಾಲ, ದೇಶಗಳ ಮೇಲೆ ಪ್ರಭುತ್ವ ಹೆಚ್ಚಾಯಿತು. ಕಂಪ್ಯೂಟರ್ ಬದುಕನ್ನೇ ಕ್ರಾಂತಿಗೊಳಿಸಿತು. ಜಗತ್ತಿನಲ್ಲಿ ಎರಡು ಬಣಗಳ ಸ್ಪರ್ಧೆ ತೀವ್ರವಾಗಿ ಘರ್ಷಣೆಗಳೂ ಶೀತಲ ಸಮರವೂ ತೀಕ್ಷ್ಣವಾದವು. ಆದರೆ ಇದ್ದಕ್ಕಿದಂತೆ ಸೋವಿಯೆಟ್ ರಷ್ಯ ಕರಗಿ ಹೋಗಿ, ರಾಜಕೀಯ ಸಮೀಕರಣಗಳು ಬದಲಾದವು. ಇಂಗ್ಲೆಂಡ್, ಜಪಾನ್‍ನಂತಹ ದೇಶಗಳಿಂದ ಆರ್ಥಿಕವಾಗಿ ತೀವ್ರ ಸ್ಪರ್ಧೆಯನ್ನು ಎದುರಿಸಬೇಕಾಯಿತು. ಜಗತ್ತಿನ ಇತರ ಭಾಗಗಳ ಚಿಂತನೆಗಳು ಮತ್ತು ಸಾಹಿತ್ಯಗಳು ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಾದವು. ಐನ್‍ಸ್ಟೀನನ ಸಾಪೇಕ್ಷ ಸಿದ್ಧಾಂತವೂ ಅನಂತರದ ವೈಜ್ಞಾನಿಕ ಬೆಳವಣಿಗೆಗಳು ಜಗತ್ತಿನ ಚಿಂತನೆಯ ಮೇಲೆ ಗಾಢವಾದ ಪರಿಣಾಮವನ್ನು ಬೀರಿದವು.
====ಜಾರ್ಜ್‍ಯನ್ಜಾರ್ಜಿಯನ್ ಕವಿಗಳು====
*ಈ ಶತಮಾನದ ಪ್ರಾರಂಭದ ವರ್ಷಗಳಲ್ಲಿ ಕಾವ್ಯರಚನೆ ಮಾಡಿದ ಕವಿಗಳನ್ನು `ಜಾರ್ಜ್‍ಯನ್ ಕವಿಗಳು ಎಂದು ಕರೆಯುತ್ತಾರೆ. ಇವರಲ್ಲಿ ಬಹು ಜನಪ್ರಿಯತೆಗಳಿಸಿದವನು ರೂಪರ್ಟ್ ಬ್ವುಕ್ (1893-1918). ಈ ಕವಿಗಳು ನೇರವಾಗಿ ಮಹಾಯುದ್ಧದಲ್ಲಿ ಭಾಗವಹಿಸಿದವರು. ಇವರಲ್ಲಿ ಬಹು ಮಂದಿ ಚಿಕ್ಕ ವಯಸ್ಸಿನಲ್ಲಿ ಯುದ್ಧಕ್ಕೆ ಬಲಿಯಾದರು. ಇವರು ಯುದ್ಧದ ನೋವು, ದೇಶಾಭಿಮಾನ ಇವುಗಳಿಗೆ ದನಿಕೊಡುತ್ತಾರೆ. ವಾಲ್ಟರ್ ಡಿ.ಟಿ.ಮೇಕ್, ಡಿ.ಎಚ್.ಲರೆನ್ಸ್ ಡಬ್ಲ್ಯು ಬಿ ಯೇಟ್ಸ್, ಟಿ.ಎಸ್.ಎಲಿಯಟ್, ಡಬ್ಲ್ಯು ಬಿ.ಆಡನ್ ಶತಮಾನದ ಪೂರ್ವಾರ್ಧದ ಪ್ರಮುಖ ಕವಿಗಳು. ಯೇಟ್ಸ್‍ನ ಕವನಗಳು ಬದುಕಿನ ಎಲ್ಲ ಅನುಭವಗಳನ್ನು ಸ್ವೀಕರಿಸಿ, ತನ್ನೊಳಗಿನ ತಳಮಳ-ನಿರಾಸೆ-ಭರವಸೆ ಯಾವುದನ್ನು ಮುಚ್ಚಿಡದೆ, ಶಕ್ತವಾದ ವ್ಯಕ್ತಿತ್ವದಿಂದ ಮೂಡಿದ ಕನವಗಳು. ಎಲಿಯೆಟ್, ಮೊದಲ ಮಹಾಯುದ್ಧದ ನಂತರ ಮೂಡಿದ ನಿರಾಸೆ, ಆಧ್ಯಾತ್ಮಿಕ ಶೂನ್ಯ ಇವುಗಳಿಗೆ ಅಭಿವ್ಯಕ್ತಿ ನೀಡಿದ. ಈ ಅಭಿವ್ಯಕ್ತಿಯ ರೀತಿ ಹಿಂದಿನ ಕಾವ್ಯಕ್ಕಿಂತ ತೀರ ಭಿನ್ನವಾಗಿದ್ದು ಹೊಸ ಯುಗಕ್ಕೆ ನಾಂದಿಯಾಯಿತು. ಅನಂತರದ ವರ್ಷಗಳಲ್ಲಿ ಸಮಾಧಾನವನ್ನು ಕಂಡುಕೊಂಡ ಎಲಿಯಟ್ ಬರೆದ `ದ ಫೋರ್ ಕ್ಯಾರ್ಟೆಟ್ಸ್ ಶತಮಾನದ ಅತ್ಯಂತ ಮಹತ್ವದ ಚಿಂತನೆಯ ಕಾವ್ಯವಾಯಿತು. ಉತ್ತರಾರ್ಧದಲ್ಲಿ ಫಿಲಿಪ್ ಲಾರ್ಕಿನ್, ಟೆಡ್ ಹ್ಯೂಸ್, ಇವನ ಹೆಂಡತಿ ಸಿಲ್ವಿಯ ಪ್ಲಾವ್, ಪೀಟರ್ ಪೋರ್ಟರ್ ಮೊದಲಾದವರು ಪ್ರಮುಖ ಕವಿಗಳು.
===ನಾಟಕ===
*ರೊಮ್ಯಾಂಟಿಕ್ ಯುಗ ಮತ್ತು ವಿಕ್ಟೋರಿಯನ್ ಯುಗಗಳಲ್ಲಿ ಗಮನಾರ್ಹ ನಾಟಕಕಾರರು ಬರಲಿಲ್ಲ. 20ನೆಯ ಶತಮಾನದ ಪೂರ್ವಾರ್ಧದಲ್ಲಿ ಪ್ರಾರಂಭದಲ್ಲಿ ನಾಟಕಕ್ಕೆ ಸ್ವಲ್ಪ ಜೀವಕಳೆ ನೀಡಿದವರು ಆರ್ಥರ್ ಹೆನ್ರಿ ಜೋನ್ಸ್ ಮತ್ತು ಆರ್ಥರ್ ವಿಂಗ್ ಪಿನಿಡೊ. ಆದರೆ, ನಾಟಕ ಮಂದಿರಕ್ಕೆ ಹೊಸ ಜೀವ, ಚೈತನ್ಯ ನೀಡಿದವನು ಜಾರ್ಜ್ ಬರ್ನಾರ್ಡ್ ಷಾ. ನಾಟಕಮಂದಿರವನ್ನು ಚಿಂತನೆಯ ಮಂದಿರವನ್ನಾಗಿ, ಸಾಮಾಜಿಕ ಕ್ರಾಂತಿಯ ರಂಗವನ್ನಾಗಿ ಮಾಡಬಯಸಿದ. ಇವನ ಮಾತಿನ ಚಮತ್ಕಾರ ಅದ್ಭುತವಾದದ್ದು. ವಾದ ವಿವಾದಗಳೆಂದರೆ ಉತ್ಸಾಹ. ನಾಟಕಗಳನ್ನು ಪ್ರಕಟಿಸುವಾಗ ಸುದೀರ್ಘ ಮುನ್ನುಡಿಗಳನ್ನು ಬರೆದ. ಮನುಷ್ಯ ಸ್ವಭಾವವನ್ನು ಆಳವಾಗಿ ಗ್ರಹಿಸದಿದ್ದರೂ ರಂಗಮಂದಿರದಲ್ಲಿ ಮಾತಿನ ಮಿಂಚಿನಿಂದ, ಮೋಡಿಯಿಂದ, ಐರನಿಯಿಂದ ಅತ್ಯಂತ ಪರಿಣಾಮಕಾರಿ ನಾಟಕಕಾರನಾದ ಈಗ ಆತನ ನಾಟಕಗಳ ಹೊಳಪು ಮಾಸಿದೆ. ಜಾನ್ ಗಾಲ್ಸ್ ವರ್ದಿ, ಸೀನ್ ಒಡೇಸಿ, ಟೆರೆನ್ಸ್ ರ್ಯಾಟಿಗನ್ ಗಮನಿಸಬೇಕಾದ ಇತರ ನಾಟಕಕಾರರು. ಯೇಟ್ಸ್ ಮತ್ತು ಎಲಿಯೇಟ್ ಕಾವ್ಯರೂಪಕ (ಪೊಯಟಿಕ್ ಡ್ರಾಮ)ಕ್ಕೆ ಮತ್ತೆ ಜೀವ ನೀಡಿದರು. ಕ್ರಿಸ್ಟಫರ್ ಫ್ರೈ, ಜೆ.ಬಿ. ಪ್ರೀಸ್ಟ್‍ಲಿ, ಆಡನ್, ಕ್ರಿಸ್ಟಫರ್ ಇಷರ್‍ವುಡ್ ಇವರು ಇದೇ ಕಾಲದ ನಾಟಕಕಾರರು. ಜೆ.ಎಂ.ಸಿಂಗ್, ಸಾಮರ್‍ಸೆಟ್ ಮಾಮ್, ನೊಯೆಲ್ ಕಾರ್ಡ್ ವೈನೋದಿಕಗಳನ್ನು ಬರೆದರು.
*1956ರ ಮೇ 8ರಂದು ಜಾನ್ ಅಸ್‍ಬಾರ್ನ್‍ನ `ಲುಕ್ ಬ್ಯಾಕ್ ಇನ್ ಆಂಗರ್ ಎನ್ನುವ ನಾಟಕವು ಪ್ರದರ್ಶಿತವಾಯಿತು. ಇದರೊಂದಿಗೆ ಇಂಗ್ಲಿಷ್ ನಾಟಕ ಹೊಸ ಯುಗಕ್ಕೆ ಕಾಲಿಟ್ಟಿತು. `ದಿ ಆ್ಯಂಗ್ರಿ ಯಂಗ್ ಮ್ಯಾನ್ ಥಿಯೇಟರ್ ಜನ್ಮತಾಳಿತು. ಎರಡನೆಯ ಮಹಾಯುದ್ಧದ ನಂತರ ತರುಣ ಜನಾಂಗದಲ್ಲಿ ಮೊಳಕೆ ಇಟ್ಟ ಅಸಮಾಧಾನ, ಕ್ರೋಧ ನಿರಾಸೆ ಎಲ್ಲ ಈ ಬಗೆಯ ನಾಟಕಗಳಲ್ಲಿ ಪ್ರಕಟವಾದವು. ಒಂದು ವರ್ಷದ ನಂತರ ಪ್ರದರ್ಶಿತವಾದ ಸ್ಯಾಮ್ಯುಎಟ್ ಬೆಕೆಟನ ನಾಟಕ `ವೆಯ್‍ಟಿಂಗ್ ಫಾರ್ ಗೋಡೋ ಮನುಷ್ಯನನ್ನು ಅವನ ಮೂಲಸ್ಥಿತಿಗೆ, ಅತ್ಯಂತ ನಿಸ್ಸಹಾಯಕ ಮತ್ತು ಅನಿಶ್ಚಯತೆಗಳ ಸ್ಥಿತಿಗೆ ಇಳಿಸಿ, ಯಾವುದೇ ಆಸೆ-ಭರವಸೆಗಳ ಕನ್ನಡಕವಿಲ್ಲದೆ ಬದುಕಿನ ವಾಸ್ತವಿಕತೆಯನ್ನು ಕಾಣುವ ಪ್ರಯತ್ನ. ಇದರೊಂದಿಗೆ `ಅಬ್ಸರ್ಡ್ ಥಿಯೇಟರ್ ಪ್ರಾರಂಭವಾಯಿತು. ಈ ಕಾಲದ ಇತರ ಗಮನಾರ್ಹ ನಾಟಕಕಾರರು ಆರ್ನಲ್ಡ್ ವೆಸ್ಕರ್, ಜಾನ್ ಆರ್ಡನ್, ಎಡ್ವರ್ಡ್ ಬಾಂಡ್ ಮೊದಲಾದವರು, ವೈನೋದಿಕ ಪ್ರಕಾರದಲ್ಲಿ ಹೆರಾಲ್ಡ್ ಪಿಂಟರ್, ಟಾಮ್ ಸ್ಟಾಫರ್ಡ್, (ಶ್ರೀಮತಿ) ಕಾವಿಟ್ ಚರ್ಚಿಲ್ ಮೊದಲಾದವರು.
*ಈ ಅವಧಿಯಲ್ಲಿ ಇಂಗ್ಲಿಷ್ ನಾಟಕವು ಹಲವು ಆಂದೋಲನಗಳನ್ನು ಕಂಡಿತು. ಇವುಗಳಲ್ಲಿ ಪ್ರಮುಖವಾದವು ವರ್ಕರ್ಸ್ ಥಿಯೇಟರ್ ಮೂವ್‍ಮೆಂಟ್, ಫೆಮಿನಿಸ್ಟ್ ಥಿಯೇಟರ್, ಐರಿಷ್ ಥಿಯೇಟರ್ ಮತ್ತು ಥಿಯೇಟಿಕ್ ಆಫ್ ದಿ ಅಬ್ಸರ್ಡ್
 
==[[ಸದಸ್ಯ:Bschandrasgr|ನೋಡಿ]]==