ಇಂಗ್ಲಿಷ್ ಸಾಹಿತ್ಯದ ಸಂಕ್ಷಿಪ್ತ ಇತಿಹಾಸ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೩೫ ನೇ ಸಾಲು:
 
*ಇಂಗ್ಲಿಷ್ ಕಾದಂಬರಿಯ ಚರಿತ್ರೆಯಲ್ಲಿ ಹೆನ್ರಿ ಜೇಮ್ಸ್‍ನ ಸ್ಥಾನದ ಬಗ್ಗೆ ವಿವಾದ ಉಂಟು. ಅವನು ಹುಟ್ಟಿದುದು ಅಮೆರಿಕದಲ್ಲಿ. 33ನೇ ವರ್ಷದಲ್ಲಿ ಇಂಗ್ಲೆಂಡಿಗೆ ಬಂದು ನೆಲಸಿದ. ಇವನು ಪಾತ್ರಗಳ ಮನಸ್ಸಿನಲ್ಲಿಳಿದು ಅನುಭವವನ್ನು ಅವರ ಪ್ರಜ್ಞೆಯೊಳಗಿಂದ ಕಾಣುತ್ತಾನೆ. ಈತನ ಗುರಿ, `ಸಂಪೂರ್ಣ ಮನುಷ್ಯನನ್ನು ಆತನ ಆವರಣದಲ್ಲಿ ಚಿತ್ರಿಸುವುದು.
*ಇವನಿಗೆ ಮುಖ್ಯವಾಗಿದ್ದುದು ಒಂದು ದೃಷ್ಟಿಕೋನ. ದೃಷ್ಟಿಕೋನವೇ ಕಾದಂಬರಿಯ ಆಧಾರ. ಮುಖ್ಯ ಪಾತ್ರದ ಮನಸ್ಸಿನೊಳಗೆ ಇಳಿದು ಅದರೊಳಗಿಂದ ಇವನ ಪಾತ್ರಗಳನ್ನು ಕಾಣುತ್ತಾನೆ. ಇವನು ಕಾದಂಬರಿಯ ಹೊಸ ಸಾಧ್ಯತೆಗಳನ್ನು ತೋರಿಸಿಕೊಟ್ಟ. '''ಜಾನ್ ಗಾಲ್ಸ್‍ವರ್ದಿಯಗಾಲ್ಸ್‍ವರ್ದಿ'''ಯ `ದ ಫಾರ್‍ಸೈಟ್ ಸಾಗಾ; ಶ್ರೀಮಂತವರ್ಗದ ವಿಡಂಬನೆ. '''ಎಚ್.ಜಿ.ವೆಲ್ಸ್''' `ಸೈಂಟಿಫಿಕ್ ಫಿಕ್‍ಷನ್ ಅಥವಾ `ವೈಜ್ಞಾನಿಕ ಕಾಲ್ಪನಿಕ (ಕಾದಂಬರಿ) ರೂಪವನ್ನು ಬಲಗೊಳಿಸಿದವನು. `'''ದ ಟೈಮ್ ಮೆಷೀನ್''' `ದ ವಾರ್ ಆಫ್ ದ ವಲ್ಡ್ರ್ಸ್ ಮುಂತಾದ ಕಾದಂಬರಿಗಳಲ್ಲಿ ವಿಜ್ಞಾನವು ಗೆದ್ದುಕೊಂಡ ಜ್ಞಾನಕ್ಕೆ ಕಲ್ಪನೆಯ ರೆಕ್ಕೆಗಳನ್ನು ಕೊಡುತ್ತಾನೆ.
[[File:George Charles Beresford - Virginia Woolf in 1902 - Restoration.jpg|thumb|1902 ರಲ್ಲಿ ವರ್ಜೀನಿಯಾ ವೂಲ್ಫ್ - ಜಾರ್ಜ್ ಚಾರ್ಲ್ಸ್ ಬೆರೆಸ್‌ಫೋರ್ಡ್ -ನಿಂದ ಪುನಃಸ್ಥಾಪನೆ]]
*'''ಥಾಮಸ್ ಹಾರ್ಡಿ''' ನಿರಾಶಾವಾದಿ. ಕ್ರೈಸ್ತಮತದ ಕರುಣಾಯ ದೇವನ ಪರಿಕಲ್ಪನೆಯನ್ನು ತಿರಸ್ಕರಿಸಿ, ಮನುಷ್ಯನ ಗುಣ, ಯೋಗ್ಯತೆಗಳಿಗೆ ಲಕ್ಷ್ಯಕೊಡದ, ತನ್ನದೇ ಗುರಿ ಇರುವ ಒಂದು ಪ್ರಬಲ ಅದೃಶ್ಯ ಶಕ್ತಿಯನ್ನು ಕಂಡ ಶ್ರೇಷ್ಠ `ಟ್ರ್ಯಾಜಿಕ್ ಕಾದಂಬರಿಗಳನ್ನು ಬರೆದ. ಈ ಕಾದಂಬರಿಗಳಲ್ಲಿ ಮಾನವ ಕುಲವನ್ನು ನಿಗೂಢ ವಿಶ್ವದ ಹಿನ್ನೆಲೆಯಲ್ಲಿ ಕಾಣುತ್ತೇವೆ. ಇವನು ಆಧುನಿಕ ಕಾದಂಬರಿಗೆ ಸಿದ್ಧತೆ ಮಾಡಿದವನು. '''ಡಿ.ಎಚ್.ಲಾರೆನ್ಸ್''', ತನ್ನ ಕಾಲದಲ್ಲಿ ಅಶ್ಲೀಲ ಬರಹಗಾರ ಎನ್ನುವ ಆಪಾದನೆಯನ್ನು ಎದುರಿಸಿದ. ಬದುಕನ್ನು ಒಪ್ಪಿಕೊಳ್ಳಬೇಕು, ಸಹಜವಾಗಿ ಅನುಭವಿಸಬೇಕು ಎನ್ನುವುದು ಆತನ ನಿಲುವು. ಜೋಸೆಫ್ ಕಾನ್ರಾಡ್ `ಮಾಂಟಾಜ್ ಪರಿಣಾಮವನ್ನು ಸಾಧಿಸುತ್ತಾನೆ. ಅನುಭವದ ಸಂಕೀರ್ಣತೆಯನ್ನು ಮನದಟ್ಟು ಮಾಡಿಕೊಡುತ್ತಾನೆ. ಜಾರ್ಜ್ ಆರ್‍ವೆಲ್ (ಎತಿಕ್ ಬ್ಲೇರ್) ಎರಡು ರಾಜಕೀಯ ಕಾದಂಬರಿಗಳನ್ನು ಬರೆದ, ಎರಡೂ (`ಅನಿಮಲ್ ಫಾರ್ಮ್, `ನೈನ್‍ಟೀನ್ ಎಯ್ಟಿಫೋರ್) ವಾಮಪಂಥದ ಸಿದ್ಧ ಪದಬೃಂದಗಳನ್ನು ಬಳಸುತ್ತಲೇ ಅದಕ್ಕೆ ದ್ರೋಹ ಮಾಡುವುದು ಎಷ್ಟು ಸುಲಭ ಎನ್ನುವುದನ್ನೂ ತೋರಿಸುತ್ತವೆ. '''ಜೇಮ್ಸ್ ಜಾಯ್ಸಿನಜಾಯ್ಸಿ'''ನ ಹಲವು ಕಾದಂಬರಿಗಳಲ್ಲಿ '''`ಯೂಲಿಸಿಸ್''' ಅತ್ಯಂತ ಪ್ರಸಿದ್ಧವಾದದ್ದು. ಈ ಬೃಹತ್ ಕಾದಂಬರಿ ಇಪ್ಪತ್ತನಾಲ್ಕು ಗಂಟೆಗಳಲ್ಲಿ ನಡೆಯುವ ಕ್ರಿಯೆಯನ್ನು ನಿರೂಪಿಸುತ್ತದೆ. ಕಾದಂಬರಿಯು ಸಂಕೇತಗಳಿಂದ ತುಂಬಿಹೋಗಿದೆ. ಭಾಷೆಗೆ ಅಸಾಧಾರಣ ಗಮನಕೊಟ್ಟು, ಪದಪದಕ್ಕೂ, ವಾಕ್ಯವಾಕ್ಯಕ್ಕೂ ವಾಕ್ಯದ ಲಯಕ್ಕೆ ಗಮನಕೊಟ್ಟು ಜಾಯ್ಸ್ ಬರೆದ. ಇವನು `ಸ್ಟೀಮ್ ಆಫ್ ಕಾನ್‍ಷಸ್‍ನೆಸ್ ತಂತ್ರವನ್ನು ಬಳಸಿದ. '''ವರ್ಜಿನಿಯ ವುಲ್ಫ್''' ಸಹ ಇದೇ ತಂತ್ರವನ್ನು ಬಳಸಿದಳು. ಇ.ಎಂ.ಫಾರ್‍ಸ್ಟರ್, ಐ.ವಿ.ಕಾಂಪ್ಟನ್-ಬರ್ನೆಟ್, ಆಲ್ಡಸ್ ಹಕ್ಸ್‍ಲಿ ಈ ಕಾಲದ ಇತರ ಗಮನಾರ್ಹ ಕಾದಂಬರಿಕಾರರು.
 
*ಅನಂತರದ ಅವಧಿಯ ಪ್ರಮುಖ ಕಾದಂಬರಿಕಾರರಲ್ಲಿ ಒಬ್ಬ ಗ್ರಹಾಂ ಗ್ರೀನ್. ಕಷ್ಟವಾದ ನೈತಿಕ ಆಯ್ಕೆಗಳನ್ನು ಎದುರಿಸುವ ಮನುಷ್ಯ ಇವನ ವಸ್ತು. ಭಗವಂತನ `ಗ್ರೇಸ್ (ಕೃಪೆ)ಗೆ ಇವನು ಮಹತ್ವ ನೀಡುತ್ತಾನೆ. ಆರ್ಥರ್ ಕೊಯ್‍ಸ್ಲರ್‍ನ ಬದುಕೇ ಅಸಾಧಾರಣ ಘಟನೆಗಳಿಂದ, ಅನುಭವಗಳಿಂದ ತುಂಬಿಹೋದದ್ದು. ಸ್ವಾತಂತ್ರ್ಯದ ಬಯಕೆ ಇವನ ಕಾದಂಬರಿಗಳಲ್ಲಿ ತೀವ್ರವಾಗಿದೆ. ವಿಲಿಯಂ ಗೋಲ್ಡಿಂಗನೊ ಸಮಾಜದ ಪರಂಪರೆ ಮತ್ತು ಕಟ್ಟುಪಾಡುಗಳಿಂದ ದೂರವಿರುವ ಮನುಷ್ಯರು ಕಷ್ಟವಾದ ನೈತಿಕ ಆಯ್ಕೆಗಳನ್ನು ಮಾಡುವುದನ್ನು ನಿರೂಪಿಸುತ್ತಾನೆ.
*ಎರಡನೆಯ ಮಹಾಯುದ್ಧದ ನಂತರದ ಕಾಲ ನಿರಾಸೆ, ಗೊಂದಲಗಳ ಕಾಲ, ಬದುಕಿನ ಸ್ವರೂಪ-ಮೌಲ್ಯಗಳ, ಮತ್ತೊಂದು ಅನ್ವೇಷಣೆಯ ಕಾಲ. ಫಿಲಿಪ್ ಲಾರ್ಕಿನ್, ವಿಲಿಯಂ ಕೂಪರ್, ಜಾನ್ ವೇಯ್ನ್, ಮೊದಲಾದವರ ಕಾದಂಬರಿಗಳಲ್ಲಿ `ಆ್ಯಂಗ್ರಿ ಯಂಗ್ ಮ್ಯಾನ್ (ಕ್ಷುದ್ರ ತರುಣ)ನ ಮನಃಸ್ಥಿತಿಯನ್ನು ಕಾಣುತ್ತೇವೆ. ಡೇವಿಡ್ ಸ್ಕೋಂ ಆಂಗಸ್ ವಿಲ್ಸನ್ ಮೊದಲಾದವರ ಕಾದಂಬರಿಗಳಲ್ಲಿ `ಸೋಷಿಯಲ್ ರಿಯಲಿಸಂ' (ಸಾಮಾಜಿಕ ವಾಸ್ತವತೆ ಕಾಣುತ್ತದೆ. ಎರಡನೆಯ ಮಹಾಯುದ್ಧದ ಅನಂತರದ ಒತ್ತಡಗಳಿಂದ ತಪ್ಪಿಸಿಕೊಳ್ಳುವ `ಫ್ಯಾಂಟಸಿಗಳೂ ಕಾಣಿಸಿಕೊಂಡವು. ಜೇಮ್ಸ್ ಬಾಂಡ್‍ನ ಕಥೆಗಳನ್ನು ಐಯಾನ್‍ಫ್ಲೆಮಿಂಗ್ ಬರೆದ. ಹೆಡ್ಲಿ ಛೇಸ್ ಇಂಥವೇ ಪಲಾಯನ ಕಾದಂಬರಿಗಳನ್ನು ಬರೆದ. ಇವುಗಳಲ್ಲಿ ನೈತಿಕತೆಯ ಸುಳಿವೇ ಇಲ್ಲ. ಪಾಲ್ ಸ್ಕಾಟ್‍ನಂಥವರು ನಷ್ಟವಾದ ಸಾಮ್ರಾಜ್ಯವನ್ನು ವಸ್ತುವಾಗಿ ಆರಿಸಿಕೊಂಡರು. ಈ ಅವಧಿಯಲ್ಲಿ ಜೇನ್‍ರಿಸ್, ಅನಿತ ಬ್ಯುಕ್‍ನರ್ ಹಲವರು ಮಹಿಳೆಯರು ಕಾದಂಬರಿಗಳನ್ನು ಬರೆದರು.
*ಇಪ್ಪತ್ತನೆಯ ಶತಮಾನದಲ್ಲಿ ಕಾದಂಬರಿಕಾರನು ತತ್ತರಿಸುವ ಅನುಭವಗಳಿಗೆ ಒಳಗಾದ. ಕಾದಂಬರಿಯು ವಸ್ತುಗಳನ್ನು ಆರಿಸಿಕೊಂಡಿತು. ಇದಕ್ಕೆ ಅನುಗುಣವಾಗಿ ರೂಪದಲ್ಲಿ ಪ್ರಯೋಗಗಳಾದವು. ನಿಯತಕಾಲಿಕಗಳ ಮೇಲೆ ಕಾದಂಬರಿಕಾರನ ಅವಲಂಬನೆ ಕಡಿಮೆಯಾದುದರಿಂದ ಹಲವು ರೀತಿಗಳಲ್ಲಿ ಆತನ ಸ್ವಾತಂತ್ರ್ಯ ವಿಸ್ತಾರವಾಯಿತು.
 
===ಗದ್ಯ===
*ಬದುಕು ಹಲವು ದಿಕ್ಕುಗಳಲ್ಲಿ ಚಾಚಿಕೊಂಡಂತೆ ಗದ್ಯವು ನಿರ್ವಹಿಸಬೇಕಾದ ಹೊಣೆಗಳೂ ಹೆಚ್ಚಿದವು. ಹಲವರು ತಮ್ಮ ಅನುಭವಗಳನ್ನು ನಿರೂಪಿಸಿ ಆತ್ಮವೃತ್ತಗಳನ್ನು ಬರೆದರು. ಹಲವರು ಆರ್ಥಿಕ, ಸಾಮಾಜಿಕ, ರಾಜಕೀಯ ಮತ್ತು ನೈತಿಕ ಸವಾಲುಗಳನ್ನು ಪರಾಮರ್ಶಿಸಿದರು. ವೇಗವಾಗಿ ಬೆಳೆಯುತ್ತಿದ್ದ ವಿಜ್ಞಾನದ ತಿಳವಳಿಕೆಯನ್ನು ಜನ ಸಾಮಾನ್ಯರಿಗೆ ಕೊಂಡೊಯ್ಯಲು ಮತ್ತು ವಿಜ್ಞಾನದ ಆವಿಷ್ಕಾರಗಳು ಬದುಕಿನ ಮೇಲೆ ಮಾಡುವ ಪ್ರಭಾವವನ್ನು ವಿಮರ್ಶಿಸಲು ವಿಜ್ಞಾನಿಗಳು ಪುಸ್ತಕಗಳನ್ನು ಬರೆದರು. ಜಗವು ಕಿರಿದಾದಂತೆ ಪ್ರವಾಸವೂ ಹೆಚ್ಚಿ, ಪ್ರವಾಸ ಸಾಹಿತ್ಯ ಬೆಳೆಯಿತು. ಇವೆಲ್ಲದರ ನಡುವೆ ಲಲಿತ ಪ್ರಬಂಧ ಸ್ಪಲ್ಪಮಟ್ಟಿಗೆ ಹಿಂದಕ್ಕೆ ಸರಿಯಿತು.