ಇಂಗ್ಲಿಷ್ ಸಾಹಿತ್ಯದ ಸಂಕ್ಷಿಪ್ತ ಇತಿಹಾಸ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೩೫ ನೇ ಸಾಲು:
*'''ಇಪ್ಪತ್ತನೇ ಶತಮಾನ:'''
[[File:Thomas-Hardy.jpg|thumb|ಥಾಮಸ್ ಹಾರ್ಡಿ]]
*ಕಾದಂಬರಿ ಪ್ರಕಾರದಲ್ಲಿ 1900ರಿಂದ 1920ರವರೆಗೆ ಮಧ್ಯಂತರ ಅವಧಿ, ವಿಕ್ಟೋರಿಯ, ಯುಗದಿಂದ ಆಧುನಿಕ ಯುಗಕ್ಕೆ ಸೇತುವೆ. 1920ರ ದಶಕದಲ್ಲಿ ಜೇಮ್ಸ್ ಜಾಯ್ಸ್‍ನ `ಯೂಲಿಸಿಸ್(1922), ವರ್ಜೀನಿಯ ವುಲ್ಫಳ `ಮಿಸೆಸ್ ಡಾಲೊನೆಟ್ (1925) ಮತ್ತು ಡಿ.ಎಚ್. ಲರೆನ್ಸನ ಕಾದಂಬರಿಗಳು ಹೊಸ ಯುಗದ ಉದಯವನ್ನು ಸ್ಪಷ್ಟವಾಗಿ ಸಾರಿದವು. ಹಾರ್ಡಿಂiÀiಹಾರ್ಡಿಂಜ್ ಕಾದಂಬರಿಗಳಲ್ಲಿಯೂ ಕಥಾವಸ್ತುವಿಗೆ ಪ್ರಾಧಾನ್ಯ, ಕಥಾವಸ್ತುವು ಹಲವು ಘಟನಾವಳಿಗಳ ಸರಪಳಿ. ಆದರೆ ಕ್ರಮೇಣ ಕಥಾವಸ್ತುವಿನ ಪ್ರಾಧಾನ್ಯ ಕಡಿಮೆಯಾಯಿತು. `ಓಪನ್ ಎಂಡೆಡ್ ಕಾದಂಬರಿಗಳು (ಪಾತ್ರಗಳ ಪ್ರಾಪಂಚಿಕ ಸ್ಥಿತಿಯನ್ನು ಒಂದು ಸ್ಪಷ್ಟ ಘಟ್ಟಕ್ಕೆ ತಂದು ನಿಲ್ಲಿಸದಿರುವ ಕಾದಂಬರಿಗಳು) ಹೆಚ್ಚಾದವು. ಕಾದಂಬರಿಯಲ್ಲಿ ನೈತಿಕ ನಿಲುವು, ಮನುಷ್ಯನ ಬದುಕಿನ ದರ್ಶನ ಇವು ಮೈದಾಳಿದವು. ಕಾಲ (ಟೈಂ)ದ ಸ್ವರೂಪದಲ್ಲಿ ಆಸಕ್ತಿ ಬೆಳೆಯಿತು. ಭಾಷೆಯ ಸಂವಹನ ಸ್ವರೂಪದಲ್ಲಿ ಆಸಕ್ತಿ ಉಂಟಾಯಿತು
 
*ಇಂಗ್ಲಿಷ್ ಕಾದಂಬರಿಯ ಚರಿತ್ರೆಯಲ್ಲಿ ಹೆನ್ರಿ ಜೇಮ್ಸ್‍ನ ಸ್ಥಾನದ ಬಗ್ಗೆ ವಿವಾದ ಉಂಟು. ಅವನು ಹುಟ್ಟಿದುದು ಅಮೆರಿಕದಲ್ಲಿ. 33ನೇ ವರ್ಷದಲ್ಲಿ ಇಂಗ್ಲೆಂಡಿಗೆ ಬಂದು ನೆಲಸಿದ. ಇವನು ಪಾತ್ರಗಳ ಮನಸ್ಸಿನಲ್ಲಿಳಿದು ಅನುಭವವನ್ನು ಅವರ ಪ್ರಜ್ಞೆಯೊಳಗಿಂದ ಕಾಣುತ್ತಾನೆ. ಈತನ ಗುರಿ, `ಸಂಪೂರ್ಣ ಮನುಷ್ಯನನ್ನು ಆತನ ಆವರಣದಲ್ಲಿ ಚಿತ್ರಿಸುವುದು.
*ಇವನಿಗೆ ಮುಖ್ಯವಾಗಿದ್ದುದು ಒಂದು ದೃಷ್ಟಿಕೋನ. ದೃಷ್ಟಿಕೋನವೇ ಕಾದಂಬರಿಯ ಆಧಾರ. ಮುಖ್ಯ ಪಾತ್ರದ ಮನಸ್ಸಿನೊಳಗೆ ಇಳಿದು ಅದರೊಳಗಿಂದ ಇವನ ಪಾತ್ರಗಳನ್ನು ಕಾಣುತ್ತಾನೆ. ಇವನು ಕಾದಂಬರಿಯ ಹೊಸ ಸಾಧ್ಯತೆಗಳನ್ನು ತೋರಿಸಿಕೊಟ್ಟ. '''ಜಾನ್ ಗಾಲ್ಸ್‍ವರ್ದಿ'''ಯ `ದ ಫಾರ್‍ಸೈಟ್ ಸಾಗಾ; ಶ್ರೀಮಂತವರ್ಗದ ವಿಡಂಬನೆ. '''ಎಚ್.ಜಿ.ವೆಲ್ಸ್''' `ಸೈಂಟಿಫಿಕ್ ಫಿಕ್‍ಷನ್ ಅಥವಾ `ವೈಜ್ಞಾನಿಕ ಕಾಲ್ಪನಿಕ (ಕಾದಂಬರಿ) ರೂಪವನ್ನು ಬಲಗೊಳಿಸಿದವನು. `'''ದ ಟೈಮ್ ಮೆಷೀನ್''' `ದ ವಾರ್ ಆಫ್ ದ ವಲ್ಡ್ರ್ಸ್ ಮುಂತಾದ ಕಾದಂಬರಿಗಳಲ್ಲಿ ವಿಜ್ಞಾನವು ಗೆದ್ದುಕೊಂಡ ಜ್ಞಾನಕ್ಕೆ ಕಲ್ಪನೆಯ ರೆಕ್ಕೆಗಳನ್ನು ಕೊಡುತ್ತಾನೆ.
[[File:George Charles Beresford - Virginia Woolf in 1902 - Restoration.jpg|thumb|1902 ರಲ್ಲಿ ವರ್ಜೀನಿಯಾ ವೂಲ್ಫ್ - ಜಾರ್ಜ್ ಚಾರ್ಲ್ಸ್ ಬೆರೆಸ್‌ಫೋರ್ಡ್ -ನಿಂದ ಪುನಃಸ್ಥಾಪನೆ]]
*'''ಥಾಮಸ್ ಹಾರ್ಡಿ''' ನಿರಾಶಾವಾದಿ. ಕ್ರೈಸ್ತಮತದ ಕರುಣಾಯ ದೇವನ ಪರಿಕಲ್ಪನೆಯನ್ನು ತಿರಸ್ಕರಿಸಿ, ಮನುಷ್ಯನ ಗುಣ, ಯೋಗ್ಯತೆಗಳಿಗೆ ಲಕ್ಷ್ಯಕೊಡದ, ತನ್ನದೇ ಗುರಿ ಇರುವ ಒಂದು ಪ್ರಬಲ ಅದೃಶ್ಯ ಶಕ್ತಿಯನ್ನು ಕಂಡ ಶ್ರೇಷ್ಠ `ಟ್ರ್ಯಾಜಿಕ್ ಕಾದಂಬರಿಗಳನ್ನು ಬರೆದ. ಈ ಕಾದಂಬರಿಗಳಲ್ಲಿ ಮಾನವ ಕುಲವನ್ನು ನಿಗೂಢ ವಿಶ್ವದ ಹಿನ್ನೆಲೆಯಲ್ಲಿ ಕಾಣುತ್ತೇವೆ. ಇವನು ಆಧುನಿಕ ಕಾದಂಬರಿಗೆ ಸಿದ್ಧತೆ ಮಾಡಿದವನು. '''ಡಿ.ಎಚ್.ಲಾರೆನ್ಸ್''', ತನ್ನ ಕಾಲದಲ್ಲಿ ಅಶ್ಲೀಲ ಬರಹಗಾರ ಎನ್ನುವ ಆಪಾದನೆಯನ್ನು ಎದುರಿಸಿದ. ಬದುಕನ್ನು ಒಪ್ಪಿಕೊಳ್ಳಬೇಕು, ಸಹಜವಾಗಿ ಅನುಭವಿಸಬೇಕು ಎನ್ನುವುದು ಆತನ ನಿಲುವು. ಜೋಸೆಫ್ ಕಾನ್ರಾಡ್ `ಮಾಂಟಾಜ್ ಪರಿಣಾಮವನ್ನು ಸಾಧಿಸುತ್ತಾನೆ. ಅನುಭವದ ಸಂಕೀರ್ಣತೆಯನ್ನು ಮನದಟ್ಟು ಮಾಡಿಕೊಡುತ್ತಾನೆ. ಜಾರ್ಜ್ ಆರ್‍ವೆಲ್ (ಎತಿಕ್ ಬ್ಲೇರ್) ಎರಡು ರಾಜಕೀಯ ಕಾದಂಬರಿಗಳನ್ನು ಬರೆದ, ಎರಡೂ (`ಅನಿಮಲ್ ಫಾರ್ಮ್, `ನೈನ್‍ಟೀನ್ ಎಯ್ಟಿಫೋರ್) ವಾಮಪಂಥದ ಸಿದ್ಧ ಪದಬೃಂದಗಳನ್ನು ಬಳಸುತ್ತಲೇ ಅದಕ್ಕೆ ದ್ರೋಹ ಮಾಡುವುದು ಎಷ್ಟು ಸುಲಭ ಎನ್ನುವುದನ್ನೂ ತೋರಿಸುತ್ತವೆ. '''ಜೇಮ್ಸ್ ಜಾಯ್ಸಿ'''ನ ಹಲವು ಕಾದಂಬರಿಗಳಲ್ಲಿ '''`ಯೂಲಿಸಿಸ್''' ಅತ್ಯಂತ ಪ್ರಸಿದ್ಧವಾದದ್ದು. ಈ ಬೃಹತ್ ಕಾದಂಬರಿ ಇಪ್ಪತ್ತನಾಲ್ಕು ಗಂಟೆಗಳಲ್ಲಿ ನಡೆಯುವ ಕ್ರಿಯೆಯನ್ನು ನಿರೂಪಿಸುತ್ತದೆ. ಕಾದಂಬರಿಯು ಸಂಕೇತಗಳಿಂದ ತುಂಬಿಹೋಗಿದೆ. ಭಾಷೆಗೆ ಅಸಾಧಾರಣ ಗಮನಕೊಟ್ಟು, ಪದಪದಕ್ಕೂ, ವಾಕ್ಯವಾಕ್ಯಕ್ಕೂ ವಾಕ್ಯದ ಲಯಕ್ಕೆ ಗಮನಕೊಟ್ಟು ಜಾಯ್ಸ್ ಬರೆದ. ಇವನು `ಸ್ಟೀಮ್ ಆಫ್ ಕಾನ್‍ಷಸ್‍ನೆಸ್ ತಂತ್ರವನ್ನು ಬಳಸಿದ. '''ವರ್ಜಿನಿಯ ವುಲ್ಫ್''' ಸಹ ಇದೇ ತಂತ್ರವನ್ನು ಬಳಸಿದಳು. ಇ.ಎಂ.ಫಾರ್‍ಸ್ಟರ್, ಐ.ವಿ.ಕಾಂಪ್ಟನ್-ಬರ್ನೆಟ್, '''ಆಲ್ಡಸ್ ಹಕ್ಸ್‍ಲಿ''' ಈ ಕಾಲದ ಇತರ ಗಮನಾರ್ಹ ಕಾದಂಬರಿಕಾರರು.
 
*ಅನಂತರದ ಅವಧಿಯ ಪ್ರಮುಖ ಕಾದಂಬರಿಕಾರರಲ್ಲಿ ಒಬ್ಬ ಗ್ರಹಾಂ ಗ್ರೀನ್. ಕಷ್ಟವಾದ ನೈತಿಕ ಆಯ್ಕೆಗಳನ್ನು ಎದುರಿಸುವ ಮನುಷ್ಯ ಇವನ ವಸ್ತು. ಭಗವಂತನ `ಗ್ರೇಸ್ (ಕೃಪೆ)ಗೆ ಇವನು ಮಹತ್ವ ನೀಡುತ್ತಾನೆ. ಆರ್ಥರ್ ಕೊಯ್‍ಸ್ಲರ್‍ನ ಬದುಕೇ ಅಸಾಧಾರಣ ಘಟನೆಗಳಿಂದ, ಅನುಭವಗಳಿಂದ ತುಂಬಿಹೋದದ್ದು. ಸ್ವಾತಂತ್ರ್ಯದ ಬಯಕೆ ಇವನ ಕಾದಂಬರಿಗಳಲ್ಲಿ ತೀವ್ರವಾಗಿದೆ. ವಿಲಿಯಂ ಗೋಲ್ಡಿಂಗನೊ ಸಮಾಜದ ಪರಂಪರೆ ಮತ್ತು ಕಟ್ಟುಪಾಡುಗಳಿಂದ ದೂರವಿರುವ ಮನುಷ್ಯರು ಕಷ್ಟವಾದ ನೈತಿಕ ಆಯ್ಕೆಗಳನ್ನು ಮಾಡುವುದನ್ನು ನಿರೂಪಿಸುತ್ತಾನೆ.