ತೆಂಗಿನಕಾಯಿ ಮರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೭೯ ನೇ ಸಾಲು:
 
== ಸಸ್ಯಲಕ್ಷಣ ==
ತೆಂಗು 70 - 80 ವರ್ಷಗಳ ಕಾಲ ಬದುಕಿ ಫಲಕೊಡುವ ಒಂಟಿ ಕಾಂಡದ ವೃಕ್ಷ. ಮರದ ಬುಡದಲ್ಲಿ ಭದ್ರವಾದ [[ಬೇರು]]ಗಳುಂಟು. ಕಾಂಡ ಕೊಂಬೆರಹಿತವಾಗಿದ್ದು ಬಿದ್ದ ಗರಿಗಳ ಗುರುತಿನಿಂದ ಕೂಡಿ ಸ್ತಂಭಾಕೃತಿಯಿಂದ 20 - 25 m. ಗೂ ಹೆಚ್ಚು ಎತ್ತರವಾಗಿ ಬೆಳೆಯುವುದು. [[ಮರ]]ದ ತುದಿಯಲ್ಲಿ ದಟ್ಟವಾಗಿ [[ಬೆಳೆದ]] ಬೇರೆ ಬೇರೆ ವಯಸ್ಸಿನ ಸುಮಾರು 30 - 40 ಗರಿಗಳಿರುತ್ತವೆ.
 
ಗಿಡದ ತುದಿಯ ಕೇಂದ್ರದಲ್ಲಿ ಸುಳಿಯಿದೆ. ಗರಿಗಳ ಉದ್ದ ಸುಮಾರು 4-6m. ಮಧ್ಯದ ದಿಂಡಿನ ಎರಡು ಕಡೆಯೂ ಅಭಿಮುಖ ಮಾದರಿಯಲ್ಲಿ ಜೋಡಣೆಗೊಂಡಿರುವ 200 ರಿಂದ 300 ಕಿರುಪತ್ರಗಳುಂಟು. ಒಂದು ಸಿಂಗಾರದಲ್ಲಿ (ಹೊಂಬಾಳೆಯಲ್ಲಿ) ಗಂಡು ಮತ್ತು ಹೆಣ್ಣು ಹೂಗಳಿರುತ್ತವೆ. ಪ್ರತಿ ಎಲೆಯ ಕಂಕುಳಲ್ಲೂ ಒಂದು ಸಿಂಗಾರ ಬರುವುದು. ಸಿಂಗಾರ ಉದ್ದನೆಯ ಕವಚದಿಂದ ಮುಚ್ಚಿರುವುದು. ಕವಚ ಒಡೆದು ಸಿಂಗಾರ ಅರಳಿದಾಗ ಅದರ ನಡುದಿಂಡಿನ ಎರಡು ಭಾಗದಲ್ಲೂ ಜೋಡಣೆಗೊಂಡಿರುವ ಉಪಕವಲುಗಳ ಮೇಲೆ ಹೂಗಳು ಗೋಚರವಾಗುವುವು. ತುದಿಯಲ್ಲಿ ಗಂಡು ಹೂಗಳೂ, ಬುಡದಲ್ಲಿ ಹೆಣ್ಣು ಹೂಗಳೂ ಇವೆ. ಮೊದಲು ಗಂಡು ಹೂಗಳು ಅನಂತರ ಹೆಣ್ಣು ಹೂಗಳು ಅರಳುತ್ತವೆ. ಉತ್ತಮವಾಗಿ ಕೃಷಿಮಾಡಿದ ಮರದಿಂದ 100 - 200 ಕಾಯಿಗಳು ದೊರೆಯುವುವು. ಕಾಯಿಗಳ ಬಣ್ಣ ಹಳದಿ, ಕೆಂಪು, ಕಿತ್ತಳೆ, ಕಂದು, ಹಸಿರು - ಹೀಗೆ ವೈವಿಧ್ಯಮಯ. ಕಾಯಿ ಡ್ರೂಪ್ ಮಾದರಿಯದು.
"https://kn.wikipedia.org/wiki/ತೆಂಗಿನಕಾಯಿ_ಮರ" ಇಂದ ಪಡೆಯಲ್ಪಟ್ಟಿದೆ