ಇಂಗ್ಲಿಷ್ ಸಾಹಿತ್ಯದ ಸಂಕ್ಷಿಪ್ತ ಇತಿಹಾಸ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೩೯ ನೇ ಸಾಲು:
.}}
===ಬೆನ್‍ಜಾನ್ಸನ್===
[[File:Benjamin Jonson by Abraham van Blyenberch.jpg|thumb|ಬೆಂಜಮಿನ್ ಜಾನ್ಸನ್: (ಅಬ್ರಹಾಂ ವ್ಯಾನ್ ಬ್ಲೈನ್‌ಬರ್ಚ್ ಅವರಿಂದ ತೈಲಚಿತ್ರ)]]
*ಷೇಕ್ಸ್‍ಪಿಯರನ ಗೆಳೆಯನೂ ಸಹನಾಟಕಕಾರನೂ ಆದ ಬೆನ್‍ಜಾನ್ಸನ್ ವಿಡಂಬನಾತ್ಮಕ ಸಾಮಾಜಿಕ ನಾಟಕಗಳನ್ನು ಬರೆದ. ಹಾಸ್ಯನಾಟಕಗಳು ಸಮಾಜ ಸುಧಾರಣೆಗೆ, ನೀತಿಬೋಧನೆಗೆ ಸಾಧನಗಳಾಗಬೇಕೆಂಬುದು ಅವನ ಮತ. ಆ ಕೆಲಸಕ್ಕಾಗಿ ಆತ ತನ್ನ ಸಮಕಾಲೀನರ ನ್ಯೂನತೆಗಳನ್ನು ಹೊರಗೆಡಹಬೇಕೆಂದು ಸಾಮಾಜಿಕ ನಾಟಕಗಳನ್ನು ರಚಿಸಿದ. ಅವನ ಕಾಲದಲ್ಲಿ ಪ್ರಚಾರದಲ್ಲಿದ್ದ `ಥಿಯರಿ ಆಫ್ ಹ್ಯೂಮರ್ಸ್ ಎನ್ನುವ ಮನಶ್ಯಾಸ್ತ್ರ ಸಿದ್ಧಾಂತವೊಂದನ್ನು ಆತ ತನ್ನ ಕೆಲಸಕ್ಕಾಗಿ ಬಳಸಿಕೊಂಡ. ಪ್ರತಿ ಮನುಷ್ಯನೂ ಒಂದೊಂದು ಪ್ರಬಲ ಪ್ರವೃತ್ತಿಯ ಪ್ರಭಾವಕ್ಕೆ ಒಳಗಾಗುತ್ತಾನೆ. ಅವನ ಕಾರ್ಯಗಳಿಲ್ಲ ಈ ಪ್ರವೃತ್ತಿಯಿಂದ ಪ್ರೇರಿತವಾಗುತ್ತವೆ. ಹಾಗೆ ಹೊರಬಿದ್ದು ತೃಪ್ತಿ ಹೊಂದಿದ ಅನಂತರ ಆ ಪ್ರವೃತ್ತಿ ತನಗೆ ತಾನೇ ಸರಿಹೋಗಬೇಕು ಎಂಬುದೇ ಆ ಸಿದ್ಧಾಂತ. ಈ ಸಹಜ ಪ್ರವೃತ್ತಿಯನ್ನು ಅಂದಿನವರು ಹ್ಯೂಮರ್ ಎನ್ನುತ್ತಿದ್ದರು.
*ಬೆನ್ ಜಾನ್‍ಸನ್ನನ ನಾಟಕಗಳ ಪಾತ್ರಗಳು ಒಬ್ಬೊಬ್ಬರೂ ಇಂಥ ಒಂದೊಂದು ಪ್ರವೃತಿಯ ದಾಸರು. ಆದ್ದರಿಂದ ಅವನ ನಾಟಕಗಳಿಗೆ ಕಾಮಿಡಿ ಆಫ್ ಹ್ಯೂಮರ್ಸ್ ಎಂಬ ಹೆಸರೇ ಬಂದಿದೆ. ಎವೆರಿ ಮ್ಯಾನ್ ಇನ್ ಹಿಸ್ ಹ್ಯೂಮರ್, ಎವೆರಿ ಮ್ಯಾನ್ ಔಟ್ ಆಫ್ ಹಿಸ್ ಹ್ಯೂಮರ್, ದಿ ಆಲ್ಕೆಮಿಸ್ಟ್, ವಾಲ್ಪೋನೆ, ದಿ ಸೈಲೆಂಟ್ ವಉಮನ್, ಬಾರ್ತಲೋಮಿಯೋ ಫೇರ್ ಫೇರ್ ಮೊದಲಾದ ಅವನ ನಾಟಕಗಳ ಹೆಸರುಗಳೇ ಅವನ ಉದ್ದೇಶವನ್ನು, ಹ್ಯೂಮರ್ಸ್ ಸಿದ್ಧಾಂತ ಅವನ ನಾಟಕಗಳಲ್ಲಿ ವಹಿಸುವ ಪಾತ್ರವನ್ನು, ಸೂಚಿಸುತ್ತವೆ. ಬೆನ್ ಜಾನ್ಸನ್ ವಾಸ್ತವಿಕ ನಾಟಕಗಳ ರಚನಕಾರ. ಸಮಕಾಲೀನ ಜನರ ನಡೆನುಡಿಗಳು ಅವನ ನಾಟಕಗಳಲ್ಲಿ ಮೂಡಿವೆ. ಇದರ ಫಲವಾಗಿ ಕಾಮೆಡಿ ಆಫ್ ಮ್ಯಾನರ್ಸ್ ಎಂಬ ಸಾಮಾಜಿಕ ನಾಟಕಗಳ ಇನ್ನೊಂದು ವರ್ಗಕ್ಕೂ ಅವನು ಪ್ರವರ್ತಕನಾದ ಷೇಕ್ಸಪಿಯರ್ ಮತ್ತು ಬೆನ್ ಜಾನ್ಸನ್ನರಲ್ಲದೆ ಈ ಯುಗದ ಇತರ ಗಣ್ಯನಾಟಕಕಾರರು ಫೋರ್ಡ್ ಮಿಡ್ಲ್‍ಟನ್, ಹೇವುಡ್, ಡೆಕ್ಕರ್, ಮ್ಯಾಸಿಂಜರ್ ಮತ್ತು ಷರ್ಲೆ. ಫೋರ್ಡನ ದಿ ಬ್ರೋಕನ್ ಹಾರ್ಟ್, ಮಿಡ್ಲಟನ್ನನ ದಿ ಛೇಂಜ್‍ಲಿಂಗ್, ಮ್ಯಾಸಿಂಜರನ ಎ ನ್ಯೂ ವೇ ಟು ಪೆ ಓಲ್ಡ್ ಡೆಟ್ಸ್, ಷರ್ಲೆಯ ಹ್ಯೆಡ್ ಪಾರ್ಕ್, ಹೇವುಡ್‍ನ ಎ ವುಮನ್ ಕಿಲ್ಡ್ ವಿತ್ ಕ್ಯೆಂಡನೆಸ್- ಇವು ಅವರ ನಾಟಕಗಳಲ್ಲಿ ಪ್ರಸಿದ್ಧವಾಗಿವೆ. ಹೇವುಡ್‍ನ ನಾಟಕ ಕುಟುಂಬ ಜೀವನದಲ್ಲಿ ಉದ್ಭವಿಸುವ ದುರಂತ ಸನ್ನಿವೇಶಗಳನ್ನು ಚಿತ್ರಿಸಿರುವ ಡೊಮೆಸ್ಟಿಕ್ ಟ್ರಾಜಿಡಿ ವರ್ಗಕ್ಕೆ ಸೇರಿದ್ದು. ಡೆಕ್ಕರ್‍ನ ದ ಷ್ಯೂ ಮೇಕರ್ಸ್ ಹಾಲಿಡೆ ಸಮಾಜದ ಕೆಳಮಟ್ಟಕ್ಕೆ ಸೇರಿದ ಜನರ ಜೀವನದ ಚಿತ್ರಗಳನ್ನು ಒಳಗೊಂಡಿದೆ. ಮೋಚಿಯೊಬ್ಬ ಪುರಸಭಾಮೇಯರ್ ಆಗುವುದು ಅದರ ಕಥೆ. ಬೋಮಂಟ್ ಮತ್ತು ಫ್ಲೆಚರ್ ಎಂಬ ಇಬ್ಬರು ನಾಟಕಕಾರರು ಒಟ್ಟಿಗೆ ನಾಟಕ ರಚನೆ ಮಾಡುತ್ತಿದ್ದು ಟ್ರಾಜಿ-ಕಾಮೆಡಿ ನಾಟಕವರ್ಗವನ್ನು ಆರಂಭಿಸಿದರು (ಷೇಕ್ಸ್‍ಪಿಯರ್ ತನ್ನ ಕಡೆಯ ನಾಟಕಗಳನ್ನು ಬರೆದಾಗ ಇದರಿಂದ ಪ್ರಭಾವಿತನಾದನೆಂದು ಕೆಲವರು ವಿದ್ವಾಂಸರ ಅಭಿಪ್ರಾಯ). ದುಃಖಪೂರಿತ ಸನ್ನಿವೇಶಗಳಲ್ಲಿ ಆರಂಭವಾಗಿ ಅನಿರೀಕ್ಷಿತವಾದ (ಕೆಲವು ವೇಳೆ ಅತಿಮಾನವವಾದ) ಘಟನೆಗಳ ಪರಿಣಾಮವಾಗಿ ನಾಟಕ ಸುಖಾಂತವಾಗುತ್ತದೆ. ಷೇಕ್ಸ್‍ಪಿಯರ್ ಬರೆದಂಥ ರುದ್ರನಾಟಕಗಳನ್ನು ನೋಡುವುದಕ್ಕೆ ಬೇಕಾದ ಮನಸ್ಸಿನ ದೃಢತೆ ಸಾಕಷ್ಟು ಇಲ್ಲದಿದ್ದ ಪ್ರೇಕ್ಷóಕರ ತೃಪ್ತಿಗಾಗಿ ರಚಿತವಾದ ನಾಟಕಗಳಿವು. ಕೃತಕವೂ ಅಸಹಜವೂ ಆದ ಆಗುಹೋಗುಗಳ ಆಧಾರದ ಮೇಲೆ ನಿಂತಿರುವ ಈ ಬಗೆಯ ನಾಟಕಗಳು ಆ ಕಾಲಕ್ಕೆ ಕೊನೆಯಾದುದರಲ್ಲಿ ಆಶ್ಚರ್ಯವೇನಿಲ್ಲ.