ಭದ್ರಗಿರಿ ಅಚ್ಯುತದಾಸರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
#WPWP
೧೩ ನೇ ಸಾಲು:
ಭದ್ರಗಿರಿಯ ಅಧಿದೇವತೆಯಾದ ಶ್ರೀ ವೀರ ವಿಠಲನೇ ಅಚ್ಯುತದಾಸರ ಗುರು. ಅವನ ಸನ್ನಿಧಿಯಲ್ಲಿ ಹಾಡಿ - ಪಾಡಿ, ಕುಣಿದು ನರ್ತಿಸುತ್ತಾ ಗ್ರಾಮದ ಜನರ ಮುಂದೆ ಭಜನಾದಿಗಳನ್ನು ಮಾಡುತ್ತಾ ಕೀರ್ತನ ಕಲೆಯನ್ನು ರೂಢಿಸಿಕೊಂಡ ಸ್ವಾಧ್ಯಾಯಿಯವರು. ಇದಕ್ಕೊಂದು ರೂಪ ಕೊಟ್ಟು ಸಂಗೀತ-ಸಾಹಿತ್ಯಗಳನ್ನೊದಗಿಸಿ ದಾಸದೀಕ್ಷೆ ನೀಡಿದವರು ಕಾಶೀಮಠ ಸಂಸ್ಥಾನದ ಶ್ರೀ ಶ್ರೀ ಸುಧೀಂದ್ರ ತೀರ್ಥರು. ೧೯೫೩ರಲ್ಲಿ ಇವರಿಗೆ ಈ ದೀಕ್ಷೆ ದೊರೆಯಿತು. ಆಧ್ಯಾತ್ಮ ಸಾಧಕರಾದ ಅಚ್ಯುತದಾಸರು ಹಲವಾರು ಭಾರೀ ಹಿಮಾಲಯದಲ್ಲೂ ಪರ್ಯಟನೆ ನಡೆಸಿದವರು.
==ಹರಿಕಥಾಲೋಕದಲ್ಲಿ==
[[File:Keertana Kesari Bhadragiri Shri Achutdasa Swamiji at the Keertana Saptaha in 1992.jpg|thumb|right|400px|ಕೀರ್ತನೆ ಸಪ್ತಾಹ]]
೧೯೫೧ರ ವರ್ಷದ [[ಮಹಾಶಿವರಾತ್ರಿ]]ಯ ದಿನದಂದು ಹರಿಕಥಾ ದಾಸರೊಬ್ಬರ ಗೈರುಹಾಜರಿಯಲ್ಲಿ ೧೯ ವರ್ಷದ ತರುಣ ಅಚ್ಯುತರು ಪ್ರಪ್ರಥಮವಾಗಿ ಯಾವ ಪೂರ್ವಸಿದ್ಧತೆಯೂ ಇಲ್ಲದೆ ಕಥೆ ಮಾಡಿ ಅಲ್ಲಿನ ವಿದ್ವಜ್ಜನರ ಪ್ರಶಂಸೆಗೆ ಪಾತ್ರರಾದರು. ಅಲ್ಲಿಂದ ಅವರು ಹಿಂದಿರುಗಿ ನೋಡಿದವರೇ ಅಲ್ಲ. ಕೀರ್ತಿಯ ಸೋಪಾನವನ್ನೇರುತ್ತಲೇ ಹೋದರು. [[ಕಾಶ್ಮೀರ]]ದಿಂದ [[ಕನ್ಯಾಕುಮಾರಿ]]ಯವರೆಗೆ ಹಲವಾರು ಬಾರಿ ಯಾತ್ರೆ ಮಾಡಿ ತಮ್ಮ ಕೀರ್ತನ ಸೌರಭವನ್ನು ಉಣಬಡಿಸಿದ್ದರು. ಅಚ್ಯುತದಾಸರು [[ಕನ್ನಡ]], [[ಮರಾಠಿ]], [[ತುಳು]], [[ಕೊಂಕಣಿ]], [[ಹಿಂದಿ]] ಭಾಷೆಗಳಲ್ಲಿ ಸಮಾನಾತ್ಮಕ ಪ್ರಭುತ್ವ ಹೊಂದಿ ಈ ಎಲ್ಲಾ ಭಾಷೆಗಳಲ್ಲೂ ಕೀರ್ತನ ಮಾಡುವ ಸಾಮರ್ಥ ಹೊಂದಿದ್ದ ಅಪೂರ್ವ ಕಲಾವಿದರಾಗಿದ್ದರು. [[ಆಕಾಶವಾಣಿ]] – [[ದೂರದರ್ಶನ]] ಕೇಂದ್ರಗಳಿಂದಲೂ ಅಚ್ಯುತದಾಸರ ಅನೇಕ ಕಾರ್ಯಕ್ರಮಗಳು ಪ್ರಸಾರವಾಗಿವೆ.
 
==ಕೃತಿ ರಚನೆ==
ಇದಲ್ಲದೆ ತಮ್ಮ ಗುರುಗಳಾದ ಸುಧೀಂದ್ರ ತೀರ್ಥ ಸ್ವಾಮೀಜಿಯವರಿಂದ ತಪ್ತ ಮುದ್ರಾಂಕಿತದೊಂದಿಗೆ ’ಮೂಲ ನಾರಾಯಣ’ ಎಂಬ ಅಂಕಿತ ಹೊಂದಿ ಸಹಸ್ರಾರು ಕೀರ್ತನೆಗಳನ್ನೂ ರಚಿಸಿದರು. ಹರಿಕಥಾ ಪೂರ್ವರಂಗ, ಗೀತಾರ್ಥ ಚಿಂತನೆ, ಗುರು ಚರಿತ್ರೆ (ದತ್ತ ಮಹಿಮೆ), ಶ್ರೀನಿವಾಸ ಕಲ್ಯಾಣ ಮುಂತಾಗಿ ೨೫ ಕ್ಕೂ ಹೆಚ್ಚು ಗ್ರಂಥ ರಚನೆ ಮಾಡಿದ್ದರು. ಅಲ್ಲದೆ ಕೆಲವು ವರ್ಷಗಳ ಹಿಂದೆ “ಹರಿಕಥಾಮೃತ ಸಿಂಧು” ಎಂಬ ಆರು ಸಂಪುಟಗಳ ಬೃಹತ್ ಗ್ರಂಥ ರಚನೆಯನ್ನು ಮಾಡಿದ್ದರು. ಕೀರ್ತನ ಕಲಾಭ್ಯಾಸಿಗಳಿಗೆ ಇದೊಂದು ವಿಶ್ವಕೋಶದಂತಿದ್ದು ಮಾದರಿಯಾಗಿದೆ.