ರಾಜ್‌ಕುಮಾರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೪೪ ನೇ ಸಾಲು:
== ಬಣ್ಣದ ಬದುಕು ==
===ರಂಗಭೂಮಿ ಮತ್ತು ತಂದೆಯ ಪ್ರಭಾವ===
* [[ಬೇಡರ ಕಣ್ಣಪ್ಪ]] ಚಿತ್ರದಲ್ಲಿ [[ನಾಯಕ|ನಾಯಕನಾಗಿ]] ನಟಿಸುವ ಮುನ್ನ ಡಾ. ರಾಜ್ ಅವರ ಹೆಸರು ಮುತ್ತುರಾಜ ಎಂದಿತ್ತು. ಮುತ್ತುರಾಜನ ತಂದೆ ''ಸಿಂಗಾನಲ್ಲೂರು ಪುಟ್ಟಸ್ವಾಮಯ್ಯ''<ref>https://kannada.news18.com/photogallery/entertainment/what-are-the-real-names-of-sandalwood-these-famous-actors-hg-402775.html</ref> ರವರು ಎಂದರೆ ೧೯೩೦-೧೯೫೦ ಕಾಲದಲ್ಲಿ ಕನ್ನಡ ರಂಗಭೂಮಿಯ ದೊಡ್ಡ ಹೆಸರು. ರೌದ್ರ ಪಾತ್ರಗಳಿಗೆ ಹೆಸರಾಗಿದ್ದ ಪುಟ್ಟಸ್ವಾಮಯ್ಯರವರು '''[[ಗುಬ್ಬಿ ಕಂಪನಿ |ಗುಬ್ಬಿ ಕಂಪನಿ ಯಲ್ಲಿ]]ಕಂಪನಿಯಲ್ಲಿ''' ಕಲಾವಿದರಾಗಿದ್ದರು. ಬಡತನದಿಂದಾಗಿ ಮುತ್ತುರಾಜ್ ವಿದ್ಯಾಭ್ಯಾಸ ನಾಲ್ಕನೆ ತರಗತಿಗೆ ನಿಂತಿತು.
* ಗುಬ್ಬಿ ಕಂಪನಿಯೇ ವಿಶ್ವವಿದ್ಯಾನಿಲಯವಾಯಿತು. ತಂದೆಯನ್ನು ನೆರಳಿನಂತೆ ಹಿಂಬಾಲಿಸಿದ ಮುತ್ತು ರಾಜ್‌ಗೆ ಅವರಿಂದಲೇ ತರಬೇತಿಯಾಯಿತು. ನಾಟಕಗಳಲ್ಲಿ ಸಣ್ಣ ಪುಟ್ಟ ಪಾತ್ರ ನಿರ್ವಹಿಸುತ್ತಿದ್ದರು. ಡಾ. ರಾಜ್‌ಕುಮಾರ್ ಜೀವನದಲ್ಲಿ ತಂದೆ ಬೀರಿರುವ ಪ್ರಭಾವ ಅಪಾರ.ಫಾಲ್ಕೆ ಪ್ರಶಸ್ತಿ ಪ್ರಕಟವಾದಾಗ ಅವರು ಮೊದಲು ನೆನಪಿಸಿಕೊಂಡದ್ದು ತಂದೆ ಹೇಳಿದ ಮಾತುಗಳನ್ನೇ:"ಇಂತಹ ಸಾಧನೆ ನಿನ್ನಿಂದ ಸಾಧ್ಯ" ಎಂದು ಪುಟ್ಟಸ್ವಾಮಯ್ಯ ಮಗನ ಭವಿಷ್ಯವನ್ನು ಅಂದೇ ನುಡಿದಿದ್ದರು. ಅದು ನಿಜವಾಯಿತು.
* "ನನ್ನ ತಂದೆ ರಂಗದ ಮೇಲೆ ಹುರಿ ಮೀಸೆ ತಿರುಗಿಸುತ್ತಾ, ಆರ್ಭಟಿಸುತ್ತಾ ರಂಗ ಪ್ರವೇಶಿಸಿದರೆಂದರೆ ಎಂತಹವರಿಗೂ ಒಂದು ಬಾರಿ ನಡುಕ ಬರುತ್ತಿತ್ತು" ಎಂದು ತಂದೆಯವರ ಅಭಿನಯವನ್ನು ಬಣ್ಣಿಸುವ ರಾಜ್‌ಕುಮಾರ್ ಅವರಿಗೆ ತಂದೆಯ ಅಭಿನಯ ಬಲುಪ್ರಿಯ. "ನಾನೂ ಅದೇ ರೀತಿ ಮಾಡಬೇಕೆಂದು [[ಭಕ್ತ ಪ್ರಹ್ಲಾದ]] ಚಿತ್ರದಲ್ಲಿ ಹಿರಣ್ಯ ಕಶಿಪು ಪಾತ್ರದಲ್ಲಿ ಅವರಂತೆ ಅಭಿನಯಿಸಲು ಸಾಧ್ಯವೇ ಎಂದು ಪ್ರಯತ್ನಿಸಿದೆ; ಆದರೆ ಬರಲಿಲ್ಲ" ಎಂದು ಹೇಳಿದ್ದಾರೆ.
೧,೪೦೬ ನೇ ಸಾಲು:
==ಕನ್ನಡಪರ ಚಳುವಳಿಗಳಲ್ಲಿ ಡಾ. ರಾಜ್==
[[Image:Raj_Gokak.jpg|thumb|right|ಗೋಕಾಕ್ ಚಳುವಳಿಯಲ್ಲಿ ಡಾ. ರಾಜ್]]
* '''ಗೋಕಾಕ್ ವರದಿ'''ಯು [[ಕನ್ನಡ]]ವನ್ನು ಪ್ರಾಥಮಿಕ ಶಿಕ್ಷಣದಲ್ಲಿ ಕಡ್ಡಾಯವಾಗಿ ಅಳವಡಿಸಿಕೊಳ್ಳುವುದು ಹಾಗು ಇನ್ನಿತರ ಮೂಲಭೂತ ಸೌಲಭ್ಯಗಳನ್ನು ಕನ್ನಡ ಭಾಷೆಗೆ ಕೊಡುವುದರ ಬಗ್ಗೆ ಸಿದ್ಧವಾಗಿತ್ತು. ಆದರೆ, ಈ ವರದಿಯು ಜಾರಿಗೆ ಬಂದಿರಲಿಲ್ಲ. ೧೯೮೧ರಲ್ಲಿ, [[ಪಾಟೀಲ ಪುಟ್ಟಪ್ಪ]], [[ಚಂದ್ರಶೇಖರ ಪಾಟೀಲ್]] ಮುಂತಾದ ಸಾಹಿತಿಗಳು, ಕನ್ನಡ ವಿದ್ಯಾರ್ಥಿಗಳು, ಹಲವು ಸಂಘಸಂಸ್ಥೆಗಳು ಗೋಕಾಕ್ ವರದಿಯನ್ನು ಜಾರಿಗೊಳಿಸುವಂತೆ ಚಳುವಳಿಯನ್ನು ಪ್ರಾರಂಭ ಮಾಡಿದರು.
* ಇದೇ ಚಳುವಳಿಯು '''ಗೋಕಾಕ್ ಚಳುವಳಿ''' ಎಂದೇ ಹೆಸರಾಯಿತು.
*ಚಳುವಳಿಯು ಪ್ರಾರಂಭಗೊಂಡು ಹಲವಾರು ದಿನಗಳು ಕಳೆದರೂ, ಜನಸಾಮಾನ್ಯರಿಂದ ಉತ್ಸಾಹದ ಪ್ರತಿಕ್ರಿಯೆ ಕಂಡುಬರಲಿಲ್ಲ. ಈ ಸಮಯದಲ್ಲಿ, ಡಾ. ರಾಜ್ ಅವರನ್ನು ಚಳುವಳಿಗೆ ಆಹ್ವಾನಿಸಿ, ಚಳುವಳಿಯ ಬಲವರ್ಧನೆ ಮಾಡಬೇಕೆಂದು ಕೋರಲಾಯಿತು. ಡಾ. ರಾಜ್ ನೇತೃತ್ವದಲ್ಲಿ [[ಕನ್ನಡ ಚಿತ್ರರಂಗ]], ಗೋಕಾಕ್ ಚಳುವಳಿಗೆ ಸಂಪೂರ್ಣ ಸಹಕಾರ ನೀಡಲು ಪ್ರಕಟಿಸಿ, ರಾಜ್ಯಾದ್ಯಂತ ಪ್ರವಾಸ ಕೈಗೊಂಡಿತು.
"https://kn.wikipedia.org/wiki/ರಾಜ್‌ಕುಮಾರ್" ಇಂದ ಪಡೆಯಲ್ಪಟ್ಟಿದೆ