ಮೋಕ್ಷಗುಂಡಂ ವಿಶ್ವೇಶ್ವರಯ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Reverted edits by 157.45.59.60 (talk) to last revision by ಅನೂಪ್
No edit summary
೨೦ ನೇ ಸಾಲು:
 
==ಬಾಲ್ಯ, ವಿದ್ಯಾಭ್ಯಾಸ==
ವಿಶ್ವೇಶ್ವರಯ್ಯನವರು ಜನಿಸಿದ್ದು ಸೆಪ್ಟೆಂಬರ್ 15,1860 ರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಎಂಬಲ್ಲಿ ಬ್ರಾಹ್ಮಣ ಕುಟುಂಬದಲ್ಲಿ.
ವಿಶ್ವೇಶ್ವರಯ್ಯನವರ ತಂದೆ 'ಶ್ರೀನಿವಾಸ ಶಾಸ್ತ್ರಿ', ತಾಯಿ 'ವೆಂಕಟಲಕ್ಷ್ಮಮ್ಮ'. ಅವರ ಪೂರ್ವಜರು ಈಗಿನ ಆಂದ್ರಪ್ರದೇಶದ 'ಮೋಕ್ಷಗುಂಡಂ' ಎಂಬ ಸ್ಥಳದಿಂದ ವಲಸೆ ಬಂದು ಮುದ್ದೇನಹಳ್ಳಿಯಲ್ಲಿ ವಾಸವಾಗಿದ್ದ ಕಾರಣ ಅವರ ಹೆಸರಿನೊಡನೆ ಮೋಕ್ಷಗುಂಡಂ ಸೇರಿಕೊಂಡಿದೆ. ವಿಶ್ವೇಶ್ವರಯ್ಯ ನವರ ತಂದೆ ಸಂಸ್ಕೃತ ವಿದ್ವಾಂಸರು; ಧರ್ಮ ಶಾಸ್ತ್ರಗಳನ್ನು ಆಳವಾಗಿ ಅಭ್ಯಾಸ ಮಾಡಿದ್ದರಲ್ಲದೆ ಆಯುರ್ವೇದ ತಜ್ಞರೂ ಆಗಿದ್ದರು. ಅವರು ೧೫ ವರ್ಷದವರಿರುವಾಗಲೆ ತಂದೆಯು ನಿಧನರಾದರು. ವಿಶ್ವೇಶ್ವರಯ್ಯನವರ ಪ್ರಾಥಮಿಕ ಶಿಕ್ಷಣ ಚಿಕ್ಕಬಳ್ಳಾಪುರದಲ್ಲಿ ಮತ್ತು ಪ್ರೌಢ ಶಿಕ್ಷಣ ಬೆಂಗಳೂರಿನಲ್ಲಿ ನಡೆಯಿತು. ೧೮೮೧ ರಲ್ಲಿ ಮದ್ರಾಸು ವಿಶ್ವವಿದ್ಯಾಲಯದಿಂದ ಬಿ.ಎ ಪದವಿಯನ್ನು ಪಡೆದು ನಂತರ ಪುಣೆಯ ವಿಜ್ಞಾನ ಕಾಲೇಜಿನಿಂದ ಸಿವಿಲ್ ಎಂಜಿನಿಯರಿಂಗ್ ಪದವಿಯನ್ನು ಪಡೆದರು.