ಗಾಂಧಿ ಜಯಂತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೩ ನೇ ಸಾಲು:
==ತತ್ವ, ಸಿದ್ದಾಂತಗಳು==
* ಅವರ ಮುಖ್ಯ ತತ್ವಗಳು ಸತ್ಯ ಮತ್ತು ಅಹಿಂಸೆ. ಅಹಿಂಸೆಯ ತತ್ವ ಭಾರತೀಯ ಧಾರ್ಮಿಕ ವಿಚಾರದಲ್ಲಿ ಅನೇಕ ಶತಮಾನಗಳಿಂದ ಅಸ್ತಿತ್ವದಲ್ಲಿರುವ ತತ್ವ. ಗಾಂಧೀಜಿಯವರು ಕಟ್ಟಾ ಸಸ್ಯಾಹಾರಿಗಳು. ಲಂಡನ್ ನಲ್ಲಿ ಓದುತ್ತಿದ್ದಾಗ ಅವರು ಸಸ್ಯಾಹಾರದ ಬಗೆಗೆ ಪುಸ್ತಕಗಳನ್ನೂ ಬರೆದಿದ್ದರು.
* ಹಿಂದೂ ಮತ್ತು ಜೈನ ಸಮಾಜಗಳಲ್ಲಿ ಸಸ್ಯಾಹಾರದ ತತ್ವ ಶತಮಾನಗಳಿಂದಲೂ ಆಳವಾಗಿ ಬೇರೂರಿರುವುದು. ವಿವಿಧ ರೀತಿಯ ಆಹಾರ ಕ್ರಮಗಳೊಂದಿಗೆ ಪ್ರಯೋಗಗಳನ್ನು ಕೈಗೊಂಡ ಗಾಂಧೀಜಿಯವರ ನಂಬಿಕೆ ನಮ್ಮ ಆಹಾರ ಕ್ರಮ ನಮ್ಮ ಮೂಲಭೂತ ಅಗತ್ಯಗಳನ್ನು ಪೂರೈಸಬೇಕೇ ಹೊರತು ಅದಕ್ಕಿಂತ ಹೆಚ್ಚು ಆಹಾರವನ್ನು ಸೇವಿಸುವ ಅಗತ್ಯವಿಲ್ಲವೆಂಬುದು. ..
 
* ಕಾಲಕಾಲಕ್ಕೆ ಉಪವಾಸ ವ್ರತವನ್ನೂ ಕೈಗೊಳ್ಳುತ್ತಿದ್ದ ಗಾಂಧೀಜಿಯವರು ಉಪವಾಸ ಸತ್ಯಾಗ್ರಹವನ್ನು ಸ್ವಾತಂತ್ರ್ಯ ಚಳುವಳಿಯಲ್ಲೂ ಉಪಯೋಗಿಸಿದವರು. 36 ನೆಯ ವಯಸ್ಸಿನಲ್ಲಿ ಗಾಂಧೀಜಿಯವರು ಬ್ರಹ್ಮಚರ್ಯ ವ್ರತವನ್ನು ಸ್ವೀಕರಿಸಿದರು. ಹಾಗೆಯೇ ವಾರದಲ್ಲಿ ಒಂದು ದಿನ ಮೌನವ್ರತವನ್ನು ಆಚರಿಸುತ್ತಿದ್ದರು.
* ಇದರಿಂದ ಆತ್ಮಶಾಂತಿ ಸಿಕ್ಕುತ್ತದೆಂಬುದು ಗಾಂಧೀಜಿಯವರ ನಂಬಿಕೆ. ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಹಿಂದಿರುಗಿದ ಮೇಲೆ ಶ್ರೀಮಂತ ಉಡುಪುಗಳನ್ನು ಗಾಂಧೀಜಿ ಎಂದಿಗೂ ಧರಿಸಲಿಲ್ಲ. ಭಾರತದ ಅತ್ಯಂತ ಬಡ ಮನುಷ್ಯ ಒಪ್ಪಿಕೊಳ್ಳಬಹುದಾದ ಉಡುಪುಗಳನ್ನು ಮಾತ್ರ ಅವರು ಧರಿಸುತ್ತಿದ್ದರು. ಮನೆಯಲ್ಲಿಯೇ ನೇಯ್ದ ಖಾದಿ ಬಟ್ಟೆಗಳನ್ನು ಧರಿಸುವುದನ್ನು ಗಾಂಧೀಜಿ ಪ್ರೋತ್ಸಾಹಿಸುತ್ತಿದ್ದರು.
"https://kn.wikipedia.org/wiki/ಗಾಂಧಿ_ಜಯಂತಿ" ಇಂದ ಪಡೆಯಲ್ಪಟ್ಟಿದೆ