ಗಾಂಧಿ ಜಯಂತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Reverted edits by 106.206.105.60 (talk) to last revision by Pavanaja
No edit summary
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೯ ನೇ ಸಾಲು:
==ಗಾಂಧಿಯವರ ಜನನ, ಜೀವನ==
* ಇವರ ಪೂರ್ಣ ಹೆಸರು ಮೋಹನದಾಸ್ ಕರಮ‍ಚಂದ್ ಗಾಂಧಿ ಅಕ್ಟೋಬರ್ 2, 1869 ರಲ್ಲಿ ಭಾರತದ [[ಗುಜರಾತ್]] ರಾಜ್ಯದ [[ಪೋರಬಂದರ್]] ನಲ್ಲಿ ಜನಿಸಿದರು. ಇವರ ತಂದೆ ಕರಮಚಂದ್ ಗಾಂಧಿ, ತಾಯಿ ಪುತಲೀಬಾಯಿ. 13 ನೆಯ ವಯಸ್ಸಿನಲ್ಲಿ ಗಾಂಧೀಜಿ ಕಸ್ತೂರಿ ಬಾ ಅವರನ್ನು ವಿವಾಹವಾದರು.
* ನಂತರ ಇವರಿಗೆ ನಾಲ್ಕು ಮಕ್ಕಳು ಜನಿಸಿದರು : [[ಹರಿಲಾಲ್ ಗಾಂಧಿ]], [[ಮಣಿಲಾಲ್ ಗಾಂಧಿ]] , [[ರಾಮದಾಸ್ ಗಾಂಧಿ]] ಮತ್ತು [[ದೇವದಾಸ್ ಗಾಂಧಿ]]. 4 ನೇ ವಯಸ್ಸಿನಲ್ಲಿ ಗಾಂಧೀಜಿ ಲಂಡನ್ ನಗರದ ಯೂನಿವರ್ಸಿಟಿ ಕಾಲೇಜಿನಲ್ಲಿ ವಕೀಲಿ ವೃತ್ತಿಗಾಗಿ ತರಬೇತಿ ಪಡೆಯಲು ತೆರಳಿ ತರಬೇತಿಯನ್ನು ಮುಗಿಸಿ ಬಂದು.
* ಮುಂಬಯಿ ನಗರದಲ್ಲಿ ವಕೀಲಿ ವೃತ್ತಿಯನ್ನು ಆರಂಭಿಸಲು ಬಹಳ ಪ್ರಯತ್ನಿಸಿದರು. ಆದರೆ ಹೆಚ್ಚು ಯಶಸ್ಸು ಕಾಣದಿದ್ದರಿಂದ ಎರಡು ವರ್ಷಗಳ ನಂತರ ದಕ್ಷಿಣ ಆಫ್ರಿಕಾಕ್ಕೆ ಕೆಲಸದ ಮೇಲೆ ತೆರಳಿದರು. ಅಲ್ಲಿ ಭಾರತೀಯ ನಿವಾಸಿಗಳಿಗೆ ಸಮಾನ ಹಕ್ಕುಗಳನ್ನು ನೀಡದ ಬ್ರಿಟಿಷ್ ಸರ್ಕಾರದ ವರ್ಣಭೇದ ನೀತಿಯನ್ನು ನೋಡಿ ಬೇಸರಗೊಂಡರು.
* ಗಾಂಧೀಜಿ ಅಲ್ಲಿನ ವರ್ಣಭೇದ ನೀತಿಯನ್ನು ಅಳಿಸಲು ಚಳುವಳಿಯನ್ನು ಆರಂಭಿಸಿದರು. ಅಲ್ಲಿನ ಪೀಟರ್ ಮ್ಯಾರಿಟ್ಸ್ ಬರ್ಗ್ ಎಂಬ ನಗರದಲ್ಲಿ ರೈಲಿನಲ್ಲಿ ಮೊದಲ ದರ್ಜೆ ಟಿಕೆಟ್ ತೆಗೆದು ಕೊಂಡಿದ್ದರೂ ಅಲ್ಲಿ ಕೂರಲು ಬಿಡದೆ ರೈಲಿನಿಂದ ಹೊರ ಹಾಕಿದಾಗ, ಅವರ ವರ್ಣಭೇದ ನೀತಿಯ ವಿರುದ್ಧ ಹೋರಾಡುವ ನಿಶ್ವಯ ಸ್ಥಿರವಾಯಿತು. ನವೆಂಬರ್ 6, 1913 ರಲ್ಲಿ ಭಾರತೀಯ ಗಣಿಗಾರರ ಒಂದು ಮೆರವಣಿಗೆಯಲ್ಲಿ ಹೋಗುತ್ತಿದ್ದಾಗ ಗಾಂಧೀಜಿ ಬಂಧಿತರಾದರು.
೨೧ ನೇ ಸಾಲು:
* ಉಪ್ಪಿನ ಉತ್ಪಾದನೆಗೆ ಬ್ರಿಟಿಷ್ ಸರ್ಕಾರಕ್ಕೆ ಕರ ಕೊಡುವ ಬದಲು ಜನರು ತಾವಾಗಿಯೇ ಉಪ್ಪನ್ನು ಉತ್ಪಾದಿಸಲಿಕ್ಕಾಗಿ ಗಾಂಧೀಜಿ ಮಾರ್ಚ್ 12, 1930 ರಂದು ಸಹಸ್ರಾರು ಜನರೊಡನೆ ಸಮುದ್ರತೀರಕ್ಕೆ ನಡೆದು ಉಪ್ಪನ್ನು ಉತ್ಪಾದಿಸಿದರು. ಮೇ 8, 1933 ರಂದು ಆರಂಭಗೊಂಡು 21 ದಿನಗಳ ಕಾಲ[[ಬ್ರಿಟಿಸ್|ಬ್ರಿಟಿಷ್]] ಆಡಳಿತವನ್ನು ವಿರೋಧಿಸಿ ಉಪವಾಸ ಸತ್ಯಾಗ್ರಹ ನಡೆಸಿದರು. * ಮಾರ್ಚ್ 3, 1939 ರಂದು ಆರಂಭಗೊಂಡು ಇನ್ನೊಂದು ಉಪವಾಸವನ್ನು ನಡೆಸಿದರು. ಗಾಂಧೀಜಿ 1924 ರಲ್ಲಿ ಬೆಳಗಾವಿಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷ ರಾಗಿದ್ದರು.”ಭಾರತ ಬಿಟ್ಟು ತೊಲಗಿರಿ” ಚಳುವಳಿ 1942 ರಲ್ಲಿ ಆರಂಭವಾಯಿತು. ಆಗಸ್ಟ್ 9, 1942 ರಂದು ಬ್ರಿಟಿಷರು ಗಾಂಧೀಜಿಯನ್ನು ಮತ್ತೆ ಬಂಧಿಸಿ ಎರಡು ವರ್ಷಗಳ ಕಾಲ ಬಂಧನದಲ್ಲಿರಿಸಿದರು.
 
=='''''ತತ್ವ, ಸಿದ್ದಾಂತಗಳು'''''==
* '''''ಅವರ ಮುಖ್ಯ ತತ್ವಗಳು ಸತ್ಯ ಮತ್ತು ಅಹಿಂಸೆ. ಅಹಿಂಸೆಯ ತತ್ವ ಭಾರತೀಯ ಧಾರ್ಮಿಕ ವಿಚಾರದಲ್ಲಿ ಅನೇಕ ಶತಮಾನಗಳಿಂದ ಅಸ್ತಿತ್ವದಲ್ಲಿರುವ ತತ್ವ. ಗಾಂಧೀಜಿಯವರು ಕಟ್ಟಾ ಸಸ್ಯಾಹಾರಿಗಳು. ಲಂಡನ್ ನಲ್ಲಿ ಓದುತ್ತಿದ್ದಾಗ ಅವರು ಸಸ್ಯಾಹಾರದ ಬಗೆಗೆ ಪುಸ್ತಕಗಳನ್ನೂ ಬರೆದಿದ್ದರು. '''''
* '''''ಹಿಂದೂ ಮತ್ತು ಜೈನ ಸಮಾಜಗಳಲ್ಲಿ ಸಸ್ಯಾಹಾರದ ತತ್ವ ಶತಮಾನಗಳಿಂದಲೂ ಆಳವಾಗಿ ಬೇರೂರಿರುವುದು. ವಿವಿಧ ರೀತಿಯ ಆಹಾರ ಕ್ರಮಗಳೊಂದಿಗೆ ಪ್ರಯೋಗಗಳನ್ನು ಕೈಗೊಂಡ ಗಾಂಧೀಜಿಯವರ ನಂಬಿಕೆ ನಮ್ಮ ಆಹಾರ ಕ್ರಮ ನಮ್ಮ ಮೂಲಭೂತ ಅಗತ್ಯಗಳನ್ನು ಪೂರೈಸಬೇಕೇ ಹೊರತು ಅದಕ್ಕಿಂತ ಹೆಚ್ಚು ಆಹಾರವನ್ನು ಸೇವಿಸುವ ಅಗತ್ಯವಿಲ್ಲವೆಂಬುದು. '''''
* '''''ಕಾಲಕಾಲಕ್ಕೆ ಉಪವಾಸ ವ್ರತವನ್ನೂ ಕೈಗೊಳ್ಳುತ್ತಿದ್ದ ಗಾಂಧೀಜಿಯವರು ಉಪವಾಸ ಸತ್ಯಾಗ್ರಹವನ್ನು ಸ್ವಾತಂತ್ರ್ಯ ಚಳುವಳಿಯಲ್ಲೂ ಉಪಯೋಗಿಸಿದವರು. 36 ನೆಯ ವಯಸ್ಸಿನಲ್ಲಿ ಗಾಂಧೀಜಿಯವರು ಬ್ರಹ್ಮಚರ್ಯ ವ್ರತವನ್ನು ಸ್ವೀಕರಿಸಿದರು. ಹಾಗೆಯೇ ವಾರದಲ್ಲಿ ಒಂದು ದಿನ ಮೌನವ್ರತವನ್ನು ಆಚರಿಸುತ್ತಿದ್ದರು. '''''
* '''''ಇದರಿಂದ ಆತ್ಮಶಾಂತಿ ಸಿಕ್ಕುತ್ತದೆಂಬುದು ಗಾಂಧೀಜಿಯವರ ನಂಬಿಕೆ. ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಹಿಂದಿರುಗಿದ ಮೇಲೆ ಶ್ರೀಮಂತ ಉಡುಪುಗಳನ್ನು ಗಾಂಧೀಜಿ ಎಂದಿಗೂ ಧರಿಸಲಿಲ್ಲ. ಭಾರತದ ಅತ್ಯಂತ ಬಡ ಮನುಷ್ಯ ಒಪ್ಪಿಕೊಳ್ಳಬಹುದಾದ ಉಡುಪುಗಳನ್ನು ಮಾತ್ರ ಅವರು ಧರಿಸುತ್ತಿದ್ದರು. ಮನೆಯಲ್ಲಿಯೇ ನೇಯ್ದ ಖಾದಿ ಬಟ್ಟೆಗಳನ್ನು ಧರಿಸುವುದನ್ನು ಗಾಂಧೀಜಿ ಪ್ರೋತ್ಸಾಹಿಸುತ್ತಿದ್ದರು.'''''
* '''''ಗಾಂಧೀಜಿಯವರ ಚರಕ ನಂತರ ಭಾರತ ರಾಷ್ಟ್ರೀಯ ಕಾಂಗ್ರೆಸ್ ನ ಬಾವುಟದಲ್ಲಿಯೂ ಸೇರಿತು. ಸತ್ಯದೊಂದಿಗೆ ನನ್ನ ಪ್ರಯೋಗಗಳು ಮಹಾತ್ಮ ಗಾಂಧಿಯವರ ಆತ್ಮ ಚರಿತ್ರೆ. ಜನಪ್ರಿಯವಾಗಿ ಮಹಾತ್ಮ ಗಾಂಧಿ, ಆಧುನಿಕ ಭಾರತ ದೇಶದ ಪಿತಾಮಹರಲ್ಲಿ ಒಬ್ಬರು, ಮತ್ತು ಭಾರತೀಯ ಸ್ವಾತಂತ್ರ್ಯ ಚಳುವಳಿಯ ಪ್ರಭಾವಶಾಲಿ ನಾಯಕರು ಮತ್ತು ಸತ್ಯಾಗ್ರಹಿಗಳು.'''''
* '''''ಬ್ರಿಟಿಷ್ ಆಡಳಿತದಿಂದ ಭಾರತ ಸ್ವಾತಂತ್ರ್ಯ ಪಡೆಯುವುದರಲ್ಲಿ ಮುಖ್ಯ ಪಾತ್ರ ವಹಿಸಿದರಲ್ಲದೆ, ಪರದೇಶದ ಆಡಳಿತಕ್ಕೆ ಒಳಗಾಗಿದ್ದ ಇತರ ದೇಶಗಳಲ್ಲಿಯೂ ಸ್ವಾತಂತ್ರ್ಯ ಚಳುವಳಿಗೆ ಸ್ಫೂರ್ತಿ ತಂದರು. ಮಾರ್ಟಿನ್ ಲೂಥರ್ ಕಿಂಗ್, ನೆಲ್ಸನ್ ಮಂಡೇಲಾ ಮೊದಲಾದ ಅಹಿಂಸಾವಾದಿ ಹೋರಾಟಗಾರರು ಗಾಂಧೀಜಿಯವರ ಸತ್ಯಾಗ್ರಹದ ತತ್ವದಿಂದ ಆಳವಾಗಿ ಪ್ರಭಾವಿತರಾದವರು. '''''
* '''''ಗಾಂಧೀಜಿಯವರ ಹೇಳಿಕೆಯಂತೆ, ಅವರ ಮೌಲ್ಯಗಳು ಸರಳ ಧಾರ್ಮಿಕ ನಂಬಿಕೆಗಳಿಂದ ಬಂದಂಥವು: ಸತ್ಯ ಮತ್ತು ಅಹಿಂಸೆ. ಅವರ ಹಾದಿಯಲ್ಲಿ ಸಾಗಲು ಜನ ಪ್ರಯತ್ನಿಸಲಿ.<ref>[https://www.prajavani.net/gandhi-150-667919.html ನಿಜದ ನೋವನು ಉಂಡ ಮಹಾತ್ಮ!;ಲಕ್ಷ್ಮೀಶ ತೋಳ್ಪಾಡಿ;d: 29 ಸೆಪ್ಟೆಂಬರ್ 2019]</ref><ref>[https://www.prajavani.net/around-truth-gandhi-and-his-667918.html ಸತ್ಯದ ಸುತ್ತ... ಗಾಂಧಿ ಚಿಂತನೆ;ಜಿ.ಎನ್‌. ದೇವಿ;d: 29 ಸೆಪ್ಟೆಂಬರ್ 2019,]</ref> <ref>[https://www.prajavani.net/stories/national/former-pti-journalist-now-99-669208.htmlಗಾಂಧಿ ಹತ್ಯೆಯ ಆ ದಿನ: ಮಾಜಿ ಪತ್ರಕರ್ತನ ನೆನಪು;ಪಿಟಿಐ;d: 03 ಅಕ್ಟೋಬರ್ 2019,]</ref><ref>[https://www.prajavani.net/gandhi-and-kannada-667920.html ಕನ್ನಡ ಕಾವ್ಯಲೋಕ ಕಂಡ ಬಾಪೂ;ವೈ.ಎಸ್‌.ವಿ. ದತ್ತ;d: 29 ಸೆಪ್ಟೆಂಬರ್ 2019]</ref>'''''
 
==ನೋಡಿ==
"https://kn.wikipedia.org/wiki/ಗಾಂಧಿ_ಜಯಂತಿ" ಇಂದ ಪಡೆಯಲ್ಪಟ್ಟಿದೆ