ನೇಪಾಳ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
#WLF
#WLF
೬೩ ನೇ ಸಾಲು:
== ಅರ್ಥವ್ಯವಸ್ಥೆ ==
ನೇಪಾಳವು ಕೃಷಿಪ್ರಧಾನ ದೇಶ. ದೇಶದ ೭೬% ಜನರು ಜೀವನಕ್ಕಾಗಿ ವ್ಯವಸಾಯವನ್ನೇ ಅವಲಂಬಿಸಿದ್ದಾರೆ. [[ಬತ್ತ]], [[ಗೋಧಿ]], [[ಕಬ್ಬು]] ಮತ್ತು [[ಸೆಣಬು]] ಮುಖ್ಯ ಬೆಳೆಗಳು. ಕೈಗಾರಿಕೆಗಳು ಕೃಷಿ ಉತ್ಪನ್ನಗಳನ್ನು ಸಂಸ್ಕರಿಸುವುದಕ್ಕೇ ಸೀಮಿತ. [[ಪ್ರವಾಸೋದ್ಯಮ|ಪ್ರವಾಸೋದ್ಯಮವು]] ದೇಶದ ಪ್ರಮುಖ ಆರ್ಥಿಕ ಚಟುವಟಿಕೆ. ನೇಪಾಳದ ಹೆಚ್ಚಿನ ಭಾಗವು ಪರ್ವತಪ್ರಾಂತ್ಯವಾಗಿರುವುದರಿಂದ [[ರಸ್ತೆ]] ಹಾಗೂ [[ರೈಲುಮಾರ್ಗ|ರೈಲುಮಾರ್ಗಗಳ]] ನಿರ್ಮಾಣ ಕಠಿಣ ಮತ್ತು ಅತಿ ವೆಚ್ಚವುಂಟುಮಾಡುವುದಾಗಿದೆ. ೨೦೦೩ರಂತೆ ದೇಶದಲ್ಲಿ ಒಟ್ಟು ೮೫೦೦ ಕಿ.ಮೀ. ಉತ್ತಮ ರಸ್ತೆಗಳು ಹಾಗೂ ಕೇವಲ ೫೯ ಕಿ.ಮೀ. ರೈಲುಮಾರ್ಗವಿದ್ದಿತು. ಇದರಿಂದಾಗಿ ರಾಷ್ಟ್ರದ ಆರ್ಥಿಕ ಪ್ರಗತಿ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ. [[ದೂರಸಂಪರ್ಕ ವ್ಯವಸ್ಥೆ|ದೂರಸಂಪರ್ಕ ವ್ಯವಸ್ಥೆಯು]] ಬಹಳ ಕೆಳಸ್ತರದ್ದಾಗಿದೆ. [[ಆಧುನಿಕ ತಂತ್ರಜ್ಞಾನ|ಆಧುನಿಕ ತಂತ್ರಜ್ಞಾನವು]] ದೇಶದ ಜನತೆಯನ್ನು ತಲುಪಿಲ್ಲ. ನೇಪಾಳವು ಹೊರರಾಷ್ಟ್ರಗಳ ಸಹಾಯಧನವನ್ನು ಬಹುಮಟ್ಟಿಗೆ ಅವಲಂಬಿಸಿದೆ. ಭಾರತ, ಅಮೆರಿಕಾ, ಜಪಾನ್ , ಇಂಗ್ಲಂಡ್, ಯುರೋಪಿಯನ್ ಒಕ್ಕೂಟಗಳು ಪ್ರಮುಖ ದಾನಿಗಳು.
[[File:Durbarnuwkot.jpg|thumb|ದರ್ಬರ್ನುವ್ಕೋಟ್]]
 
== ಇತರ ವಿಷಯಗಳು ==
ನೇಪಾಳವು ವಿಶ್ವದ ಏಕೈಕ ಹಿಂದೂ ರಾಷ್ಟ್ರ. ದೇಶದ ಅಧಿಕೃತ ಭಾಷೆ [[ನೇಪಾಲಿ]]. ಉಳಿದಂತೆ [[ಮೈಥಿಲಿ]], [[ಭೋಜಪುರಿ]] ಮತ್ತು [[ಅವಧಿ]] ಭಾಷೆಗಳು ನುಡಿಯಲ್ಪಡುತ್ತವೆ. ನೇಪಾಳದಲ್ಲಿ ಪುರುಷರ [[ಸರಾಸರಿ ಆಯುರ್ಮಾನ]] ಮಹಿಳೆಯರಿಗಿಂತ ಹೆಚ್ಚು. ಇಡೀ ಪ್ರಪಂಚದಲ್ಲಿ ನೇಪಾಳವೊಂದರಲ್ಲಿ ಮಾತ್ರ ಈ ವಿದ್ಯಮಾನ ಕಂಡುಬರುತ್ತದೆ. ಸಾಂಸ್ಕೃತಿಕ ವಿಷಯಗಳಲ್ಲಿ ನೇಪಾಳವು ಟಿಬೆಟ್ ಮತ್ತು ಭಾರತವನ್ನು ಹೋಲುತ್ತದೆ. ಉತ್ತರದ ಹಿಮಾಲಯ ಪ್ರದೇಶದಲ್ಲಿ ಟಿಬೆಟ್ ಸಂಸ್ಕೃತಿಯ ಛಾಪು ಕಂಡುಬರುವುದು. ಉಳಿದಂತೆ ಎಲ್ಲಾ ಕಡೆ [[ಹಿಂದೂ ಸಂಸ್ಕೃತಿ|ಹಿಂದೂ ಸಂಸ್ಕೃತಿಯ]] ಗಾಢ ಛಾಯೆ ಇದೆ. ನೇಪಾಳವು ಭಾರತವನ್ನು ಬಹಳವಾಗಿ ಅವಲಂಬಿಸಿದೆ. ಆರ್ಥಿಕ ಸಹಾಯ , ತಂತ್ರಜ್ಞಾನ, ರಕ್ಷಣೆ ಇವುಗಳೆಲ್ಲವೂ ಹೆಚ್ಚಿನ ಪ್ರಮಾಣದಲ್ಲಿ ಭಾರತದಿಂದಲೇ ನೇಪಾಳಕ್ಕೆ ಒದಗಿದೆ.
"https://kn.wikipedia.org/wiki/ನೇಪಾಳ" ಇಂದ ಪಡೆಯಲ್ಪಟ್ಟಿದೆ