ಉತ್ತರೆ (ಮಹಾಭಾರತ): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Added content
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
Added content
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧ ನೇ ಸಾಲು:
[[File:Uttara crying for her husband.jpg|thumb|ಅಭಿಮನ್ಯುವಿಗಗಿ ದುಃಖಿಸುತ್ತಿರುವ ಉತ್ತರಾ]]
'''ಉತ್ತರಾ'''(ವಿರಾಟರಾಜನ ಮಗಳು): ಉತ್ತರಾ ವಿರಾಟರಾಜನ ಮಗಳು. [[ಅಭಿಮನ್ಯು]]ವಿನ ಹೆಂಡತಿ. ಉತ್ತರಕುಮಾರನ ತಂಗಿ. [[ಅರ್ಜುನ]] ಸುಭದ್ರೆಯರ ಸೊಸೆಸುಭದ್ರೆಯ. [[ಪರೀಕ್ಷಿತ್]] ರಾಜನ ತಾಯಿ. ತ್ರಿಗರ್ತರು ವಿರಾಟರಾಜನ ಗೋವುಗಳನ್ನು ಹಿಡಿಯಲು ಅವರಿಗೆ ಸಹಾಯಕರಾಗಿ ಬಂದ [[ಕೌರವ]] ಸೇನೆಯನ್ನು [[ಬೃಹನ್ನಳೆ]]ಯ ವೇಷದಲ್ಲಿದ್ದ ಅರ್ಜುನ ಎದುರಿಸಿದ. ಸಂತೋಷಗೊಂಡ ವಿರಾಟರಾಜ ಅರ್ಜುನನಿಗೆ ಉತ್ತರೆಯನ್ನು ಕೊಡಲು ಹೋದಾಗ ಅದುವರೆಗೂ ತನ್ನ ಮಗಳಂತೆ ನೋಡಿದ ಉತ್ತರೆಯನ್ನು ಮದುವೆಯಾಗಲು ಅರ್ಜುನ ನಿರಾಕರಿಸಿ ಆಕೆಯನ್ನು ತನ್ನ ಮಗ ಅಭಿಮನ್ಯುವಿಗೆ ತಂದುಕೊಂಡ. ಮುಂದೆ ಕುರುಕ್ಷೇತ್ರ ಯುದ್ಧದಲ್ಲಿ ಪದ್ಮವ್ಯೂಹ ಭೇದಿಸಿ ಹೊರಬರಲಾರದೆ ಅಭಿಮನ್ಯು ಮಡಿದ. ಬಸುರಿಯಾಗಿದ್ದ ಉತ್ತರೆ ವಿಧವೆಯಾದಳು. ಕುರುಕ್ಷೇತ್ರ ಯುದ್ಧಮುಗಿದಾಗ ಪಾಂಡವರ ಮೇಲಿನ ಸೇಡಿನ ಕಿಡಿ ಸಿಡಿದು [[ಅಶ್ವತ್ಥಾಮ]] ಬ್ರಹ್ಮಶಿರಾಸ್ತ್ರವನ್ನು ಪ್ರಯೋಗಿಸಿದ. ಅದು ಪಾಂಡವರ ಸಂತತಿಯನ್ನು ನಾಶಮಾಡುವುದೆಂದು ತಿಳಿದ ಶ್ರೀಕೃಷ್ಣ ಅಸ್ತ್ರವನ್ನು ಹಿಂದಕ್ಕೆ ಕರೆಯುವಂತೆ ಕೋರಿದಾಗ ಅಶ್ವತ್ಥಾಮ ನಿರಾಕರಿಸಿದ. ಆದರೂ ಕೃಷ್ಣನ ಕೃಪೆಯಿಂದ ಮಗು ಬದುಕಿತು. ಪರೀಕ್ಷಿತ್ ಎಂಬ ಹೆಸರಿನಿಂದ ಖ್ಯಾತವಾಗಿ ಕುರುಸಂತತಿಯ ಕುಡಿಯಾಗಿ ವಂಶವನ್ನು ಬೆಳೆಸಿತು.
{{Includes Wikisource|ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಉತ್ತರಾ(ವಿರಾಟರಾಜನ ಮಗಳು)}}
{{ಮಹಾಭಾರತ}}
"https://kn.wikipedia.org/wiki/ಉತ್ತರೆ_(ಮಹಾಭಾರತ)" ಇಂದ ಪಡೆಯಲ್ಪಟ್ಟಿದೆ