ಮಹಾ ಶಿವರಾತ್ರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Change the festival date now.
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩೭ ನೇ ಸಾಲು:
'''ಶಿವರಾತ್ರಿಯ ಮಹಿಮೆ:'''
 
ಕೈಲಾಸವಾಸಿ ಶಿವನಿಗೆ ಶಿವರಾತ್ರಿ ಅತ್ಯಂತ ಪ್ರಿಯವಾದ ದಿನ. ಶಿವರಾತ್ರಿಯಂದು ತನ್ನನ್ನು ಪೂಜಿಸುವ ಭಕ್ತರಿಗೆ ತಾನು ವಿಶೇಷವಾಗಿ ಅನುಗ್ರಹ ನೀಡುವುದಾಗಿ ಸ್ವತ: ಶಿವನೇ ಪಾರ್ವತಿಯಲ್ಲಿ ಅರುಹಿದ್ದಾನೆ ಎನ್ನುತ್ತದೆ ಶಿವಪುರಾಣ. ಶಿವ-ಪಾರ್ವತಿಯರ ವಿವಾಹ ಮಹೋತ್ಸವದ ದಿನವಿದು ಎಂಬುದು ವಿಶೇಷ. ಹಿಮವಂತನ ಮಗಳು ಪಾರ್ವತಿ ಈ ದಿನದಂದು ರಾತ್ರಿಯಿಡಿ ಶಿವನಾಮ ಪಠಿಸುತ್ತಾ, ತಪಸ್ಸು ಮಾಡಿ, ಶಿವನನ್ನು ಮೆಚ್ಚಿಸಿ, ವಿವಾಹವಾದಳೆಂಬುದು ಪ್ರತೀತಿ. ಶಿವ ರುದ್ರತಾಂಡವನಾಡಿದ ರಾತ್ರಿಯೂ ಇಂದೇ ಎನ್ನಲಾಗುತ್ತದೆ. ದೇವತೆಗಳು ಹಾಗೂ ಅಸುರರ ನಡುವೆ ಸಮುದ್ರ ಮಂಥನ ನಡೆದು ವಿಷ ಉದ್ಭವವಾದಾಗ, ಅದನ್ನು ಶಿವ ಕುಡಿದ. ವಿಷ ಗಂಟಲೊಳಗಿಂದ ಇಳಿಯದಂತೆ ಪಾರ್ವತಿ ಇಡೀ ರಾತ್ರಿ ತಡೆದಳು ಎನ್ನುತ್ತದೆ ಶಿವಪುರಾಣದ ಇನ್ನೊಂದು ಮಹಿಮೆ. ಹಾಗಾಗಿ, ಭಕ್ತರು ಇಡೀ ರಾತ್ರಿ ಎಚ್ಚರವಿದ್ದು, ನೀಲಕಂಠನನ್ನು ಸ್ತುತಿಸುತ್ತಾರೆ. ಭಗೀರಥನ ತಪಸ್ಸಿಗೆ ಮೆಚ್ಚಿ ಇಳೆಗೆ ಇಳಿದು ಬಂದ ಗಂಗೆಯನ್ನು ಶಿವ ತನ್ನ ಜಡೆಯಲ್ಲಿ ತುಂಬಿಸಿಕೊಂಡಿದ್ದ. ಇದರಿಂದ ವಿಚಲಿತನಾದ ಭಗೀರಥ ಗಂಗೆಯನ್ನು ಭೂಮಿಗೆ ಹರಿಸುವಂತೆ ಶಿವನನ್ನು ಪ್ರಾರ್ಥಿಸಿದ. ಆತನ ಭಕ್ತಿಗೆ ಮೆಚ್ಚಿ ಶಿವ ಗಂಗೆಯನ್ನು ಹರಿಯಬಿಟ್ಟಿದ್ದು ಇದೇ ದಿನ ಎನ್ನುತ್ತದೆ ಪುರಾಣ. ಲಿಂಗಪುರಾಣದ ಪ್ರಕಾರ, ಲಿಂಗ ರೂಪಿಯಾಗಿ ಭಕ್ತರಿಗೆ ಅನುಗ್ರಹ ನೀಡಿದ ದಿನವಿದು. ಶಿವನ ಆದಿ ಮತ್ತು ಅಂತ್ಯ ಹುಡುಕಲು ಹೊರಟ ವಿಷ್ಣು ಹಾಗೂ ಬ್ರಹ್ಮನಿಗೆ, ಶಿವರಾತ್ರಿಯಂದು ಶಿವ ಲಿಂಗರೂಪಿಯಾಗಿ ದರ್ಶನ ನೀಡಿದ ಎಂಬುದು ಪ್ರತೀತಿ. ಇದು ಸ್ಕಂದ ಪುರಾಣ ಒಂದು ಭಾಗ
 
'''ಬೇಡನ ಶಿವಭಕ್ತಿ: '''
೯೨ ನೇ ಸಾಲು:
 
ಅಭಿಷೇಕಪ್ರಿಯ ಎಂದೇ ಖ್ಯಾತನಾದ ಶಿವನಿಗೆ ದಿನವಿಡಿ ಹಾಲು, ಜೇನುತುಪ್ಪ ಹಾಗೂ ನೀರಿನ ಅಭಿಷೇಕ ನಡೆಯುತ್ತದೆ. ಪ್ರತಿ 3 ಗಂಟೆಗೊಮ್ಮೆ ಶಿವಲಿಂಗಕ್ಕೆ ಅಭಿಷೇಕ ಮಾಡಲಾಗುತ್ತದೆ. ಬಿಲ್ವಪತ್ರೆ, ತುಳಸಿ, ಶ್ರೀ ಗಂಧ, ಹಾಲು, ಜೇನುತುಪ್ಪಗಳಿಂದ ಅಭಿಷೇಕ ನಡೆಯುತ್ತದೆ. ಶಿವ ಪಂಚಾಕ್ಷರಿ ಮಂತ್ರ "ಓಂ ನಮ: ಶಿವಾಯ", ಹರ ಹರ ಮಹಾದೇವ, ಶಂಭೋ ಶಂಕರ...ಶಿವದೇವಾಲಯಗಳಲ್ಲಿ ಮಾರ್ದನಿಸುತ್ತದೆ. ನಾಲ್ಕು ಆಯಾಮಗಳ ರುದ್ರಪಠಣ, ಶಿವರಾತ್ರಿ ಪೂಜೆಯ ವಿಶೇಷ. ಶಿವಪುರಾಣದ ಪ್ರಕಾರ ರುದ್ರ ಹಾಗೂ ಚಮೆಗಳ ಪಠಣ ಶಿವನಿಗೆ ಅಚ್ಚುಮೆಚ್ಚು. ದೇವಾಲಯಗಳಲ್ಲಿ ಸಂಜೆ 6 ಗಂಟೆಯಿಂದ ಮೊದಲ್ಗೊಂಡು ಮುಂಜಾನೆ 6 ಗಂಟೆಯವರೆಗೆ ರುದ್ರಪಠಣದ ಮೂಲಕ ಶಿವ ಸ್ತುತಿ, ಜಾಗರಣೆ ನಡೆಯುತ್ತದೆ. ಪ್ರತಿ 3 ಗಂಟೆಗೊಮ್ಮೆ ಮಂಗಳಾರತಿ ಮಾಡಲಾಗುತ್ತದೆ. ಬೆಳಗ್ಗೆ 6 ಗಂಟೆಗೆ ಮಹಾಮಂಗಳಾರತಿ ಆಚರಣೆ ಮೂಲಕ ಜಾಗರಣೆ ಮುಕ್ತಾಯಗೊಳ್ಳುತ್ತದೆ. ಮೊದಲನೆಯ ಆಯಾಮದಲ್ಲಿ ಹಾಲು, ಎರಡನೆಯ ಆಯಾಮದಲ್ಲಿ ಮೊಸರು, ಮೂರನೆಯ ಆಯಾಮದಲ್ಲಿ ತುಪ್ಪ ಹಾಗೂ ನಾಲ್ಕನೆಯ ಆಯಾಮದಲ್ಲಿ ಜೇನುತುಪ್ಪಗಳಿಂದ ಶಿವನಿಗೆ ಅಭಿಷೇಕ ಮಾಡುವ ಪದ್ಧತಿಯೂ ಕೆಲವೆಡೆ ಇದೆ.
 
==ಉಲ್ಲೇಖಗಳು==
{{Reflist}}
"https://kn.wikipedia.org/wiki/ಮಹಾ_ಶಿವರಾತ್ರಿ" ಇಂದ ಪಡೆಯಲ್ಪಟ್ಟಿದೆ