ಸಾವಿತ್ರಿಬಾಯಿ ಫುಲೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
೯ ನೇ ಸಾಲು:
 
==ಶಿಕ್ಷಕಿ==
* ಸಾವಿತ್ರಿಬಾಯಿ ಶ್ರೀ ಭಿಡೆಯವರ ಮನೆಯಲ್ಲಿ ಆರಂಭಗೊಂಡ ಕನ್ಯಾಶಾಲೆಯ ಪ್ರಧಾನ ಶಿಕ್ಷಕಿಯಾದರು. ಆ ಕಾಲದಲ್ಲಿ ಸ್ರ್ರೀಯೊಬ್ಬಳು ಶಿಕ್ಷಕಿಯಾಗುವುದು ಧರ್ಮಕ್ಕೂ, ಸಮಾಜಕ್ಕೂ ದ್ರೋಹ ಬಗೆದಂತೆ ಎಂದು ಅವರನ್ನು ಪಾಠಶಾಲೆಗೆ ಹೋರಟಾಗ ಕೆಲವರು ಕೇಕೇ ಹಾಕಿ ನಗುತ್ತಿದ್ದರು, ಅವರ ಮೇಲೆ ಕೆಸರು, ಸಗಣಿ ಎರಚಿ, ಕಲ್ಲನೂ ತೂರುತ್ತಿದ್ದರು. ಇದರಿಂಇದರಿಂದ ಧೃತಿಗೆಡದ ಸಾವಿತ್ರಿಬಾಯಿಯವರು ಯಾವಾಗಲೂ ಒಂದು ಸೀರೆಯೊಂದನ್ನು ತಮ್ಮ ಬ್ಯಾಗಿನಲ್ಲಿ ಇಟ್ಟುಕೊಳ್ಳುತ್ತಿದ್ದರು.
* ದಾರಿಯಲ್ಲಿ ಕೆಸರು, ಸಗಣಿ ಎರಚಿಸಿಕೊಂಡಾಗ, ಬೇಸರ ಗೊಳ್ಳದೆ- ನಮ್ಮ ಮೇಲೆ ಎರಚುವ ಸೆಗಣಿ, ತೂರುವ ಕಲ್ಲುಗಳನ್ನು ಹೂಗಳೆಂದು ಪರಿಭಾವಿಸಿ, ಶಾಲೆಯಲ್ಲಿ ಮಕ್ಕಳು ಬರುವುದರೊಳಗೆ ಬ್ಯಾಗಿನಲ್ಲಿ ಇಟ್ಟುಕೊಂಡಿರುತ್ತಿದ್ದ ಮತ್ತೊಂದು ಸೀರೆಯನ್ನು ಉಟ್ಟುಕೊಂಡು ಪಾಠಕ್ಕೆ ಅಣಿಯಾಗುತ್ತಿದ್ದರು. ೧೮೪೮ರಿಂದ ೧೮೫೨ರ ಅವಧಿಯಲ್ಲಿ ೧೮ ಪಾಠಶಾಲೆಗಳನ್ನು ಫುಲೆ ದಂಪತಿಗಳು ತೆರೆದರು.
* ಈ ಪಾಠಶಾಲೆಗಳ ಶಡಳಿತದಆಡಳಿತದ ಜವಾಬ್ದಾರಿಯನ್ನು ಸಾವಿತ್ರಿಬಾಯಿ ನಿರ್ವಹಿಸಬೇಕಾಗಿತ್ತು. ಶಿಕ್ಷಕಿ, ಸಂಚಾಲಕಿ, ಮುಖ್ಯೋಪಾಧ್ಯಾಯಿನಿ ಮುಂತಾದ ಕೆಲಸಗಳನ್ನು ಇವರು ಸಮರ್ಪಕವಾಗಿ ನಿಭಾಯಿಸುವುದರ ಮೂಲಕ ಜ್ಯೋತಿಬಾಫುಲೆ ಅವರಿಗೆ ನೆರವಾದರು. ಬ್ರಿಟಿಷ್ ಸರ್ಕಾರದವರು ಅವರ ಕೆಲಸ ಕಾರ್ಯಗಳನ್ನು ಕೂಲಂಕುಷವಾಗಿ ಅವಲೋಕಿಸಿ ಮೆಚ್ಚುಗೆ ಸೂಸಿದ್ದರು.
* ಇಂದು ಭಾರತದ ಮಹಿಳೆಯರ ಸಮಾಜದ ಎಲ್ಲಾ ಕ್ಷೇತ್ರದಲ್ಲಿ ಸಮಾನತೆಯ ಹಕ್ಕಿಗೆ ಕಾರಣರಾದವರು ಮಾತೆ ಸಾವಿತ್ರಿ ಬಾಪುಲೆ. ಇವರು ಸಮಾಜದ ಅನಿಷ್ಟ ಪದ್ದತಿಗಳಾದ ಬಾಲ್ಯ ವಿವಾಹ, ಸತಿಸಹಗಮನ ಪದ್ದತಿ, ಕೇಶ ಮುಂಡನೆ ವಿರುದ್ದ ಹೋರಾಟ ಮಾಡಿ, ಮಹಿಳೆಯರಿಗೋಸ್ಕರ ಪ್ರ ಪ್ರಥಮವಾಗಿ ಶಾಲೆಗಳು, ಅಬಲಾಶ್ರಮ ಸ್ಥಾಪನೆ ಮಾಡಿದ ಕೀತಿ೯ ಇವರಿಗೆ ಸಲ್ಲುತ್ತದೆ. ಇವರು ಒಟ್ಟು 14 ಶಾಲೆಗಳನ್ನು ಸ್ಥಾಪನೆ ಮಾಡುತ್ತಾರೆ.
* ಈ ಎಲ್ಲಾ ಸಾಧನೆಗಳನ್ನು ಪರಿಗಣಿಸಿ ,‌ ಬ್ರಿಟಿಷ್ ಸರಕಾರ ಇವರಿಗೆ "ಇಂಡಿಯಾಸ್ ಫಸ್ಟ್ ಲೇಡಿ ಟೀಚರ್" ಎಂದು ಬಿರುದು ಕೂಡ ಕೊಟ್ಟಿದೆ. ಸ್ತ್ರೀಯರು ಕೂಡ ಪುರುಷರಂತೆ ಶಿಕ್ಷಣವನ್ನು ಪಡೆಯಬೇಕೆಂಬ ಮಹದಾಸೆಯಿಂದ ತಮಗೊದಗಿದ ಕಷ್ಟ - ಕಾರ್ಪಣ್ಯಗಳನ್ನು ಲೆಕ್ಕಿಸದೇ ಸ್ತ್ರೀ ಸಂಕುಲಕ್ಕೆ ಶೈಕ್ಷಣಿಕ ರಹದಾರಿಯನ್ನು ತೋರಿಸಿದರು.