ಗೋಪಾಲಕೃಷ್ಣ ಅಡಿಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೨೧ ನೇ ಸಾಲು:
 
==ಸಾಹಿತ್ಯ ಶೈಲಿ==
ಅಡಿಗರ ಸಮಗ್ರ ಕಾವ್ಯವನ್ನು ಓದಿದಾಗ "ಆಧುನಿಕ ಮಹಾಕಾವ್ಯ"ವೊಂದನ್ನು ಓದಿದ ಅನುಭವವಾಗುತ್ತದೆ. ಇವರ ಕಾವ್ಯದ ನಾಯಕ ಇಪ್ಪತ್ತನೇ ಸತಮಾನದಶತಮಾನದ ಸ್ವಾತಂತ್ರ್ಯೋತ್ತರ ಭಾರತದ ಆಧುನಿಕ ಸಂವೇದನೆಯ ವ್ಯಕ್ತಿ. ಸ್ವತಂತ್ರ ಭಾರತದ ರಾಜಕೀಯ, ಸಾಮಾಜಿಕ , ಸಾಂಸ್ಕೃತಿಕ ವಾಸ್ತವ ಇವರ ಕಾವ್ಯದಲ್ಲಿ ಆಕಾರ ಪಡೆದಂತೆ ಬಹುಶಃ ಕನ್ನಡದಲ್ಲಿ ಮತ್ತೆ ಯಾರ ಕಾವ್ಯದಲ್ಲೂ ಕಾಣಿಸಿಕೊಂಡಿಲ್ಲವೆನ್ನಬಹುದು. ಅಡಿಗರ ಕಾವ್ಯನಾಯಕನ ಕೆಲವು ಲಕ್ಷಣಗಳನ್ನು ಹೀಗೆ ಗುರ್ತಿಸಬಹುದು.
*ಸಾಂಪ್ರದಾಯಿಕವಾದ ಒಪ್ಪಿತ ಮೌಲ್ಯಗಳ ಬಗ್ಗೆ ಈತನಿಗೆ ಆರಾಧಕ ಮನೋಭಾವವಿಲ್ಲ. ಹಾಗೆಂದು ಅವುಗಳನ್ನು ಈತ ಸಾರಾಸಗಟಾಗಿ ತಿರಸ್ಕರಿಸುವಂಥವನೂ ಅಲ್ಲ. ಚಿಕಿತ್ಸಕ ಮನೋಭಾವದ ಈತನಿಗೆ ಸಮಕಾಲೀನ ಅಗತ್ಯಕ್ಕೆ ತಕ್ಕಂತೆ ಪರಂಪರೆಯನ್ನು ಸೂಕ್ತವಾಗಿ ಒಗ್ಗಿಸಿಕೊಳ್ಳುವುದರ ಬಗ್ಗೆ ಆಸಕ್ತಿ. ಅನೇಕ ನವ್ಯ ಕೃತಿಗಳಲ್ಲಿ ಕಾಣಿಸುವಂತೆ ಅಡಿಗರ ನಾಯಕ ಸೂಕ್ಷ್ಮ ಮನಸ್ಸಿನ ದುರ್ಬಲ ವ್ಯಕ್ತಿಯಲ್ಲ. ಈತನೊಬ್ಬ ಹೋರಾಟಗಾರ, ಎಲ್ಲದರ ಬಗ್ಗೆ ಬಂಡೇಳುವಂಥ ಬಂಡಾಯಗಾರ. ಎಲ್ಲ ಬಗೆಯ ಸರ್ವಾಧಿಕಾರೀ ಶಕ್ತಿಗಳ ವಿರುದ್ಧವೂ ಈತ ಪ್ರತಿಭಟಿಸುತ್ತಾನೆ. ಈ ಪ್ರತಿಭಟನೆ ಆತ್ಮ ವಿಶ್ಲೇಷಣೆಯ ಪ್ರಕ್ರಿಯೆಯೂ ಆಗುತ್ತದೆ. ಎಲ್ಲ ರೀತಿಯ ಆಕ್ರಮಣಗಳನ್ನು ಎದುರಿಸಿ ವ್ಯಕ್ತಿವಿಶಿಷ್ಟತೆಯನ್ನು ಕಾಪಾಡಿಕೊಳ್ಳುವ ಬಗ್ಗೆ ಈತನ ತುಡಿತ.
*ಅಡಿಗರ ಆರಂಭದ ಕವಿತೆಗಳ ಮುಖ್ಯಗುಣ -ಭಾವತೀವ್ರತೆ. ಕೆಚ್ಚು, ಹೋರಾಟದ ಆಹ್ವಾನ ಅಡಿಗರ ಮನೋಭಾವಕ್ಕೆ ಸಹಜವಾದುದೆನ್ನಿಸಿದರೂ ಅದು ಪ್ರಕಟಗೊಂಡಿರುವ ಬಗೆ ಸಂಪೂರ್ಣವಾಗಿ ಭಾವಾವೇಶದಿಂದ ಬಂದದ್ದು. ಮುಂದೆ ಅಡಿಗರು ಗೆಲ್ಲಲು ಬಯಸಿದ್ದು, ವಿರೋಧಿಸಿದ್ದು, ಇಂಥ ರೀತಿಯನ್ನೇ. ಅಡಿಗರ ಆವೇಶ ಉತ್ಸಾಹ ಕ್ರಮೇಣ ವ್ಯಾವಹಾರಿಕ ಜಗತ್ತಿನ ಆಕ್ರಮಣದಿಂದಾಗಿ ಆಘಾತಕ್ಕೊಳಗಾದಂತೆ ಕಂಡು ಬರುತ್ತದೆ. ಬಾಲ್ಯದ ಮುಗ್ಧಲೋಕ, ಹದಿಹರಯದ ಹೊಂಗನಸಿನ ಜಗತ್ತು ಒಡೆದು ಛಿದ್ರವಾಗಿ ಕವಿಮನಸ್ಸು ವ್ಯಗ್ರವಾಗುತ್ತದೆ, ದಿಕ್ಕೆಡುತ್ತದೆ.
"https://kn.wikipedia.org/wiki/ಗೋಪಾಲಕೃಷ್ಣ_ಅಡಿಗ" ಇಂದ ಪಡೆಯಲ್ಪಟ್ಟಿದೆ