ಬೇಲೂರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚಿಹ್ನೆ
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೬೨ ನೇ ಸಾಲು:
==ಇತಿಹಾಸ==
 
ಇದನ್ನು ಹಿ೦ದೆ '''ವೇಲುಪುರ'''' ಎ೦ದು ಕರೆಯುತ್ತಿದ್ದರು. ದೇವಾಲಯ ಕಟ್ಟುವ ಕಾರ್ಯ ಹೊಯ್ಸಳ ಚಕ್ರವರ್ತಿಯಾದ [[ವಿಷ್ಣುವರ್ಧನ]]ನ ಆಳ್ವಿಕೆಯಲ್ಲಿ ಪ್ರಾರಂಭವಾಯಿತು. ರಾಜಾ ವಿಷ್ಣುವರ್ಧನನು ತಲಕಾಡಿನಲ್ಲಿ [[ಚೋಳರು|ಚೋಳರ]] ಮೇಲಿನ ವಿಜಯೋತ್ಸವವನ್ನು ಆಚರಿಸುವ ಸಮಯವಾದ ೧೧೧೭ರಲ್ಲಿ ತನ್ನ ಗುರುಗಳಾದ ಶ್ರೀ [[ರಾಮಾನುಜಾಚಾರ್ಯರು|ರಾಮಾನುಜಾಚಾರ್ಯರ]] ಆಶಿರ್ವಾದದೊಂದಿಗೆ ಚೆನ್ನಕೇಶವಸ್ವಾಮಿಯ ವಿಗ್ರಹವನ್ನು ಪ್ರತಿಷ್ಠೆ ಮಾಡಿದನು. ಈ ರೀತಿಯಾಗಿ ಈ ದೇವಸ್ಥಾನಕ್ಕೆ ವಿಜಯನಾರಾಯಣಸ್ವಾಮಿ ದೇವಸ್ಥಾನವೆಂದು ಹೆಸರು ಬಂದಿದೆ. ಸುಮಾರು ೧೦೩ ವರ್ಷಗಳ ಕಾಲ ನಡೆದಂತಹ ಈ ದೇವಾಲಯದ ಕಾರ್ಯ, ವಿಷ್ಣುವರ್ಧನನ ಮೊಮ್ಮಗನಾದ ಇಮ್ಮಡಿ ವೀರ ಬಲ್ಲಳನ ಆಳ್ವಿಕೆಯಲ್ಲಿ ರೂಪಗೊಂಡಿತು. ದೇವಾಲಯಕ್ಕೆ ಒಂದು ವಿಮಾನ ಗೋಪುರವಿದ್ದು, ಈ ಕಾರಣವಾಗಿ ಇದನ್ನು ಹೊಯ್ಸಳದ ಏಕಕೂಟ ಶೈಲಿಯ ದೇವಸ್ಥಾನವೆಂದು ಪರಿಗಣಿಸಲಾಗಿದೆ. ಈ ದೇವಾಲಯದ ಗೋಪುರವು ೭೦ ಅಡಿಗಳಿಗೂ ಎತ್ತರವಾಗಿದ್ದು ಧಾಳಿಕಾರರ ಹಾವಳಿಗೆ ಸಿಕ್ಕಿ ವಿರೂಪಗೊಂಡಿತ್ತು. ಇದನ್ನು ೧೩೯೭ರಲ್ಲಿ ವಿಜಯನಗರದ ಅರಸರಾದ [[ಕೃಷ್ಣದೇವರಾಯ]]ರ ಮುತ್ತಜ್ಜರಾದ ಹರಿಹರ ಮಹಾರಾಜರ ದಂಡಾಧಿಪತಿ ಸಾಲುವ ಗೊಂಡನೆಂಬವರು ಇದರ ಜೀರ್ಣೋದ್ಧಾರ ಕಾರ್ಯವನ್ನು ಕೈಗೊಂಡರು. ಈ ದೇವಾಲಯಕ್ಕೆ ಇನ್ನೊಂದು ಬಾಗಿಲಿದೆ. ಇದಕ್ಕೆ 'ಆನೆ ಬಾಗಿಲು' ಎಂದು ಕರೆಯುತ್ತಾರೆ
 
ಬೇಲೂರೀನಲ್ಲಿ ಅನೇಕ ದೇವಾಯಗಳಿವೆ. ಅವುಗಳಲ್ಲಿ ಚನ್ನ ಕೇಶವ ದೇವಾಲಯ ಪ್ರಸಿದ್ದವಾಗಿದೆ.
 
==ದೇವಾಲಯದ ಆವರಣದಲ್ಲಿ ಮುಖ್ಯ ದೇವಸ್ಥಾನಗಳು==
ಗೋಪುರದ ಮೂಲಕ ಒಳಗೆ ಬಂದ ಕೂಡಲೆ ಪ್ರದಕ್ಷಿಣಾಕಾರದಲ್ಲಿ ದೇವಾಲಯವನ್ನು ಸುತ್ತಿದರೆ ಕಾಣುವ ಮುಖ್ಯ ದೇವಸ್ಥಾನಗಳನ್ನು ಇಲ್ಲಿ ಪಟ್ಟಿ ಮಾಡಲಾಗಿದೆ.
# ಚೆನ್ನಕೇಶವಸ್ವಾಮಿ ದೇವಸ್ಥಾನ.
# ಕಪ್ಪೆ ಚೆನ್ನಿಗರಾಯ ದೇವಸ್ಥಾನ
# ಸೌಮ್ಯನಾಯಕಿ ಅಮ್ಮನವರ ದೇವಸ್ಥಾನ
# ಕಲ್ಯಾಣ ಮಂಟಪ
# ವೀರನಾರಾಯಣ ದೇವಸ್ಥಾನ
# ರಂಗನಾಯಕಿ ಅಮ್ಮನವರ ದೇವಸ್ಥಾನ
ಇದಲ್ಲದೆ ಗೋಪುರದ ಎಡಭಾಗದಲ್ಲಿ ಮಂಟಪ ಸಾಲನ್ನು ಮಾಡಿ ಅಲ್ಲಿ ಚಿಕ್ಕ ಗುಡಿಗಳನ್ನು ಮಾಡಿದ್ದಾರೆ. ಇದರ ನಂತರ ಶ್ರೀ ರಾಮದೇವರ ಗುಡಿ ಇದೆ. ಗೋಪುರದ ಬಲಭಾಗದಲ್ಲಿ ಪುಷ್ಕರಣಿಯನ್ನು ಮಾಡಲಾಗಿದೆ. ಪ್ರಮುಖ ದೇವಸ್ಥಾನವಾದ ಚೆನ್ನಕೇಶವ ದೇವಸ್ಥಾನದ ವಿವರಣೆಯನ್ನು ಮುಂದಿನ ಭಾಗದಲ್ಲಿ ನೀಡಲಾಗಿದೆ. ಇಲ್ಲಿ ದೇವಸ್ಥಾನದ ಮಿಕ್ಕ ಆವರಣವನ್ನು ವಿವರಿಸಲಾಗಿದೆ.
 
===ಕಪ್ಪೆ ಚೆನ್ನಿಗರಾಯ ದೇವಸ್ಥಾನ===
ಈ ಗುಡಿಯು ಮುಖ್ಯ ಗುಡಿಯ ಹಾಗೆ ನಕ್ಷತ್ರಾಕಾರವಾದ/ಶ್ರೀಚಕ್ರದ ಪೀಠದ ಮೇಲೆ ಕಟ್ಟಲ್ಪಟ್ಟಿದೆ. ಸ್ಥಳೀಯ ಕೆಲವು ಜನರಿಂದ ಇದೇ ಮೂಲವಾಗಿ ಪ್ರಧಾನ ದೇವಾಲಯವಾಗಬೇಕಿತ್ತು ಎಂದು ಕೇಳಿ ಬಂದರೂ ಈ ನಕ್ಷತ್ರಾಕಾರದ ಪೀಠವನ್ನು ಬಿಟ್ಟರೆ ಯಾವುದೇ ಸಾಕ್ಷ್ಯಾಧಾರಗಳು ಮೂಡಿ ಬಂದಿಲ್ಲ. ಈ ದೇವಸ್ಥಾನದ ಗರ್ಭಗುಡಿಯಲ್ಲಿ ಕಪ್ಪೆ ಚೆನ್ನಿಗರಾಯನ ವಿಗ್ರಹವಿದೆ. ಈ ವಿಗ್ರಹದ ಹೊಟ್ಟೆಯಲ್ಲಿ ಕಪ್ಪೆಯನ್ನು ಕೆತ್ತಲಾಗಿದೆ. ''ಅಮರಶಿಲ್ಪಿ [[ಜಕ್ಕಣಾಚಾರ್ಯ]]ರ ದಂತಕಥೆಯ'' ಮೂಲದಿಂದ ನಮಗೆ ಇದರ ಹಿನ್ನಲೆ ತಿಳಿದುಬರುತ್ತದೆ. ಹಿಂದೆ ಜಕ್ಕಣಾಚಾರ್ಯರಿಗೂ ಅವರ ಮಗ ಡಂಕಣಾಚಾರ್ಯರಿಗೂ ವಾದ ನಡೆದು, ಡಂಕಣನು ಚೆನ್ನಿಗರಾಯನ ವಿಗ್ರಹದಲ್ಲಿ ದೋಷವಿರುವುದಾಗಿ ಹೇಳಿ, ಅದನ್ನು ನಿರೂಪಿಸಲು ಹೊರಟಾಗ ವಿಗ್ರಹದ ಗರ್ಭದಲ್ಲಿ ಕಪ್ಪೆ ಕಂಡು ಬರಲು, ವಿಗ್ರಹಕ್ಕೆ ಈ ಹೆಸರು ಬಂದಿತೆಂದು ಹೇಳಲಾಗುತ್ತದೆ. ಇದಲ್ಲದೇ ಒಳಾಂಗಣದಲ್ಲಿ ಗೋಪಾಲಕೃಷ್ಣ, ಮಹಿಷಾಸುರಮರ್ದಿನಿ ಮತ್ತು ವಿಷ್ಣು-ಲಕ್ಷ್ಮಿಯರ ಸುಂದರ ಮೂರ್ತಿಗಳಿವೆ.
 
===ಸೌಮ್ಯನಾಯಕಿ ಅಮ್ಮನವರ ದೇವಸ್ಥಾನ===
"https://kn.wikipedia.org/wiki/ಬೇಲೂರು" ಇಂದ ಪಡೆಯಲ್ಪಟ್ಟಿದೆ